AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಫೈನಲ್ ರೇಸ್​ನಿಂದ ಇಂಗ್ಲೆಂಡ್ ಔಟ್​..!

World Test Championship 2025-27: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಇಂಗ್ಲೆಂಡ್ ತಂಡದ ಕಳಪೆ ಪ್ರದರ್ಶನ ಮುಂದುವರೆದಿದೆ. ನ್ಯೂಝಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಜಯ ಸಾಧಿಸಿದ್ದ ಇಂಗ್ಲೆಂಡ್, ಬ್ಯಾಕ್ ಟು ಬ್ಯಾಕ್ ಎರಡು ಮ್ಯಾಚ್​ಗಳಲ್ಲಿ ಸೋತು ಇದೀಗ WTC ಫೈನಲ್ ರೇಸ್​ನಿಂದ ಹೊರಬಿದ್ದಿದೆ.

WTC ಫೈನಲ್ ರೇಸ್​ನಿಂದ ಇಂಗ್ಲೆಂಡ್ ಔಟ್​..!
England - WTCImage Credit source: AFP
ಝಾಹಿರ್ ಯೂಸುಫ್
|

Updated on:Jun 30, 2026 | 9:02 AM

Share

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC 2025-27) ಫೈನಲ್ ತಲುಪುವ ಇಂಗ್ಲೆಂಡ್ ಕ್ರಿಕೆಟ್ ತಂಡದ ಕನಸು ಕಮರಿದೆ.  ನ್ಯೂಝಿಲೆಂಡ್ ವಿರುದ್ಧ ಎದುರಿಸಿದ ಭಾರಿ ಸೋಲು ಹಾಗೂ ಐಸಿಸಿ ವಿಧಿಸಿದ ಭಾರಿ ಪೆನಾಲ್ಟಿಯಿಂದಾಗಿ ಇಂಗ್ಲೆಂಡ್ ತಂಡವು ಅಂಕ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದಿದ್ದು, ಇದರೊಂದಿಗೆ ಇಂಗ್ಲೆಂಡ್​ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ ರೇಸ್​ನಿಂದ ಹೊರಬಿದ್ದಿರುವುದು ಖಚಿತವಾಗಿದೆ.

ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯಲ್ಲಿ ಇಂಗ್ಲೆಂಡ್ ತಂಡದ ಹಿನ್ನಡೆಗೆ ಕೇವಲ ಕಳಪೆ ಪ್ರದರ್ಶನ ಕಾರಣವಲ್ಲ, ಬದಲಿಗೆ ಮಂದಗತಿಯ ಓವರ್ ರೇಟ್ ದೊಡ್ಡ ಹೊಡೆತ ನೀಡಿದೆ.  ಅಂದರೆ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಓವರ್‌ಗಳನ್ನು ಮುಗಿಸದ ಕಾರಣ ಐಸಿಸಿ ಇಂಗ್ಲೆಂಡ್ ತಂಡಕ್ಕೆ ಬರೋಬ್ಬರಿ 12 ಅಂಕಗಳ ದಂಡ ವಿಧಿಸಿದೆ. ಈ ಸರಣಿಯಲ್ಲಿ ಒಟ್ಟು 14 ಅಂಕಗಳನ್ನು ಕಳೆದುಕೊಂಡಿರುವುದು ಇಂಗ್ಲೆಂಡ್‌ಗೆ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ.

ಪ್ರಸ್ತುತ ಡಬ್ಲ್ಯೂಟಿಸಿ ಅಂಕ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡವು ಕೇವಲ 26.39% ಪಾಯಿಂಟ್ಸ್ ಶೇಕಡಾವಾರು (PCT) ಅಂಕಗಳನ್ನು ಹೊಂದಿದ್ದು,  ಹೀಗಾಗಿ ಮುಂದಿನ 9 ಪಂದ್ಯಗಳಲ್ಲಿ ಗೆದ್ದರೂ ಫೈನಲ್​ಗೇರುವುದು ಕಷ್ಟಸಾಧ್ಯ.

ಏಕೆಂದರೆ ಪ್ರಸ್ತುತ ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾ 87.50% ಪಾಯಿಂಟ್ಸ್ ಶೇಕಡಾವಾರು ಹೊಂದಿದ್ದರೆ, ದ್ವಿತೀಯ ಸ್ಥಾನದಲ್ಲಿರುವ ಸೌತ್ ಆಫ್ರಿಕಾ 75.00% ಪಾಯಿಂಟ್ಸ್ ಶೇಕಡಾವಾರು ಹೊಂದಿದೆ.

  • ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್​ ಆಡಲಿದೆ.

ಇತ್ತ ಇಂಗ್ಲೆಂಡ್ ತಂಡವು ಮುಂದಿನ ಎಲ್ಲಾ ಮ್ಯಾಚ್​ಗಳಲ್ಲೂ ಜಯ ಸಾಧಿಸಿದರೆ  57.94% ಪಾಯಿಂಟ್ಸ್ ಶೇಕಡಾವಾರು ಮಾತ್ರ ಹೊಂದಲಿದೆ. ಅಂದರೆ ಈಗ ಟಾಪ್-2 ನಲ್ಲಿರುವ ಆಸ್ಟ್ರೇಲಿಯಾ ಅಥವಾ ಸೌತ್ ಆಫ್ರಿಕಾ ತಂಡಗಳನ್ನು ಹಿಂದಿಕ್ಕಲು ಸಾಧ್ಯವಿಲ್ಲ ಎಂದೇ ಹೇಳಬಹುದು.

ಇದನ್ನೂ ಓದಿ: ಆ ತಪ್ಪನ್ನು ಮತ್ತೆ ಮಾಡ್ಬೇಡಿ… ಟೀಮ್ ಇಂಡಿಯಾ ವಿರುದ್ಧ ಗವಾಸ್ಕರ್ ಕಿಡಿ!

ಏಕೆಂದರೆ  ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಇತಿಹಾಸ ಮತ್ತು ಪ್ರಸ್ತುತ ಪೈಪೋಟಿಯ ಪ್ರಕಾರ ಫೈನಲ್ ತಲುಪಲು ಕನಿಷ್ಠ 60% ರಿಂದ 64% PCT ಅಗತ್ಯವಿರಲಿದೆ. ಆದರೆ ಇಂಗ್ಲೆಂಡ್ ತಂಡವು ಮುಂದಿನ 9 ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿದರೂ ಪಡೆಯುವುದು 57.94% PCT ಮಾತ್ರ.  ಹೀಗಾಗಿಯೇ ಇಂಗ್ಲೆಂಡ್ ತಂಡದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್  ಫೈನಲ್ ಕನಸು ಈ ಬಾರಿಯೂ ಭಗ್ನಗೊಂಡಿರುವುದು ಬಹುತೇಕ ಖಚಿತವಾಗಿದೆ.

Published On - 9:01 am, Tue, 30 June 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ