ಏಕದಿನ ವಿಶ್ವಕಪ್ನ 36ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 49.3 ಓವರ್ಗಳಲ್ಲಿ 286 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 48.1 ಓವರ್ಗಳಲ್ಲಿ 253 ರನ್ಗಳಿಗೆ ಆಲೌಟ್ ಆಗಿದೆ.
ಇದರೊಂದಿಗೆ ಈ ಬಾರಿಯ ವಿಶ್ವಕಪ್ನಲ್ಲಿ ಆಡಿರುವ 7 ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡವು 6ನೇ ಸೋಲುಂಡಂತಾಗಿದೆ. ಅಲ್ಲದೆ ಏಕದಿನ ವಿಶ್ವಕಪ್ ಸೆಮಿಫೈನಲ್ ರೇಸ್ನಿಂದ ಅಧಿಕೃತವಾಗಿ ಹೊರಬಿದ್ದಿದೆ.
ಏಕದಿನ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಇದುವರೆಗೆ 156 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆಸ್ಟ್ರೇಲಿಯಾ 87 ಬಾರಿ ಗೆದ್ದರೆ, ಇಂಗ್ಲೆಂಡ್ 63 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 3 ಪಂದ್ಯಗಳು ಕಾರಣಾಂತರಗಳಿಂದ ರದ್ದಾದರೆ, 2 ಮ್ಯಾಚ್ಗಳು ಟೈನಲ್ಲಿ ಅಂತ್ಯ ಕಂಡಿತ್ತು.
ಇಂಗ್ಲೆಂಡ್ (ಪ್ಲೇಯಿಂಗ್ XI): ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಮಾರ್ಕ್ ವುಡ್.
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಮಾರ್ನಸ್ ಲಾಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಕ್ಯಾಮರೋನ್ ಗ್ರೀನ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ, ಜೋಶ್ ಹ್ಯಾಝಲ್‌ವುಡ್.
ಇಂಗ್ಲೆಂಡ್ ವಿರುದ್ಧ 33 ರನ್ಗಳ ಜಯ ಸಾಧಿಸಿದ ಆಸ್ಟ್ರೇಲಿಯಾ.
ಸತತ ಸೋಲುಗಳೊಂದಿಗೆ ಏಕದಿನ ವಿಶ್ವಕಪ್ ಸೆಮಿಫೈನಲ್ ರೇಸ್ನಿಂದ ಹೊರಬಿದ್ದ ಹಾಲಿ ಚಾಂಪಿಯನ್ ಇಂಗ್ಲೆಂಡ್.
45 ಓವರ್ಗಳ ಮುಕ್ತಾಯದ ವೇಳೆಗೆ 227 ರನ್ ಕಲೆಹಾಕಿರುವ ಇಂಗ್ಲೆಂಡ್
8 ವಿಕೆಟ್ ಕಬಳಿಸಿ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ಆಸ್ಟ್ರೇಲಿಯಾ.
ಕ್ರೀಸ್ನಲ್ಲಿ ಕ್ರಿಸ್ ವೋಕ್ಸ್ ಹಾಗೂ ಆದಿಲ್ ರಶೀದ್ ಬ್ಯಾಟಿಂಗ್.
ಜೋಶ್ ಹ್ಯಾಝಲ್‌ವುಡ್ ಎಸೆದ 35ನೇ ಓವರ್ನ ಕೊನೆಯ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಮೊಯೀನ್ ಅಲಿ.
35 ಓವರ್ಗಳ ಮುಕ್ತಾಯದ ವೇಳೆಗೆ ಇಂಗ್ಲೆಂಡ್ ತಂಡದ ಸ್ಕೋರ್ 169 ರನ್ಗಳು.
ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 90 ಎಸೆತಗಳಲ್ಲಿ 118 ರನ್ಗಳ ಅವಶ್ಯಕತೆ.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಮೊಯೀನ್ ಅಲಿ ಬ್ಯಾಟಿಂಗ್.
ಮಾರ್ಕಸ್ ಸ್ಟೋಯಿನಿಸ್ ಎಸೆದ 34ನೇ ಓವರ್ನ 3ನೇ ಮತ್ತು 4ನೇ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಫೋರ್ ಬಾರಿಸಿದ ಮೊಯೀನ್ ಅಲಿ.
ಈ ಫೋರ್ನೊಂದಿಗೆ ಬೆನ್ ಸ್ಟೋಕ್ಸ್ ಜೊತೆ ಅರ್ಧಶತಕದ ಜೊತೆಯಾಟ ಪೂರೈಸಿದ ಮೊಯೀನ್.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಮೊಯೀನ್ ಅಲಿ ಬ್ಯಾಟಿಂಗ್.
ಟ್ರಾವಿಸ್ ಹೆಡ್ ಎಸೆದ 32ನೇ ಓವರ್ನ 2ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಸಿಕ್ಸ್ ಸಿಡಿಸಿದ ಬೆನ್ ಸ್ಟೋಕ್ಸ್.
ಅರ್ಧಶತಕ ಪೂರೈಸುವುದರೊಂದಿಗೆ ಬಿರುಸಿನ ಆಟಕ್ಕೆ ಒತ್ತು ನೀಡಿರುವ ಸ್ಟೋಕ್ಸ್.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಮೊಯೀನ್ ಅಲಿ ಬ್ಯಾಟಿಂಗ್
30 ಓವರ್ಗಳ ಮುಕ್ತಾಯದ ವೇಳೆಗೆ 128 ರನ್ ಕಲೆಹಾಕಿದ ಇಂಗ್ಲೆಂಡ್.
4 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಆಸ್ಟ್ರೇಲಿಯಾ.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಮೊಯೀನ್ ಅಲಿ ಬ್ಯಾಟಿಂಗ್
ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 120 ಎಸೆತಗಳಲ್ಲಿ 159 ರನ್ಗಳ ಅವಶ್ಯಕತೆ.
ಆ್ಯಡಂ ಝಂಪಾ ಎಸೆದ 26ನೇ ಓವರ್ನ ಮೊದಲ ಎಸೆತದಲ್ಲೇ ಕ್ಯಾಚ್ ನೀಡಿದ ಜೋಸ್ ಬಟ್ಲರ್.
7 ಎಸೆತಗಳಲ್ಲಿ ಕೇವಲ 1 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಇಂಗ್ಲೆಂಡ್ ತಂಡದ ನಾಯಕ.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಮೊಯೀನ್ ಅಲಿ ಬ್ಯಾಟಿಂಗ್.
ಪ್ಯಾಟ್ ಕಮಿನ್ಸ್ ಎಸೆದ 23ನೇ ಓವರ್ನ 3ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದ ಡೇವಿಡ್ ಮಲಾನ್.
64 ಎಸೆತಗಳಲ್ಲಿ 50 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಮಲಾನ್.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಜೋಸ್ ಬಟ್ಲರ್ ಬ್ಯಾಟಿಂಗ್.
ಟ್ರಾವಿಸ್ ಹೆಡ್ ಎಸೆದ 22ನೇ ಓವರ್ನ 5ನೇ ಎಸೆತದಲ್ಲಿ ಲಾಂಗ್ ಆನ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಬೆನ್ ಸ್ಟೋಕ್ಸ್.
ಈ ಸಿಕ್ಸ್ನೊಂದಿಗೆ ಶತಕ ಪೂರೈಸಿದ ಇಂಗ್ಲೆಂಡ್.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಡೇವಿಡ್ ಮಲಾನ್ ಬ್ಯಾಟಿಂಗ್.
20 ಓವರ್ಗಳ ಮುಕ್ತಾಯದ ವೇಳೆಗೆ 82 ರನ್ ಕಲೆಹಾಕಿದ ಇಂಗ್ಲೆಂಡ್ ಬ್ಯಾಟರ್ಗಳು.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಡೇವಿಡ್ ಮಲಾನ್ ಬ್ಯಾಟಿಂಗ್.
ಜಾನಿ ಬೈರ್‌ಸ್ಟೋವ್ (0) ಹಾಗೂ ಜೋ ರೂಟ್ (13) ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರುವ ಮಿಚೆಲ್ ಸ್ಟಾರ್ಕ್.
15 ಓವರ್ಗಳ ಮುಕ್ತಾಯದ ವೇಳೆಗೆ ಕೇವಲ 58 ರನ್ ಕಲೆಹಾಕಿದ ಇಂಗ್ಲೆಂಡ್ ಬ್ಯಾಟರ್ಗಳು.
2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರುವ ಆಸ್ಟ್ರೇಲಿಯಾ ಬೌಲರ್ಗಳು.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಡೇವಿಡ್ ಮಲಾನ್ ಬ್ಯಾಟಿಂಗ್.
ಇಂಗ್ಲೆಂಡ್ ತಂಡಕ್ಕೆ 287 ರನ್ಗಳ ಗುರಿ ನೀಡಿರುವ ಆಸ್ಟ್ರೇಲಿಯಾ.
ಜೋಶ್ ಹ್ಯಾಝಲ್‌ವುಡ್ ಎಸೆದ 10ನೇ ಓವರ್ನ ಕೊನೆಯ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಡೇವಿಡ್ ಮಲಾನ್.
10 ಓವರ್ಗಳ ಮುಕ್ತಾಯದ ವೇಳೆಗೆ ಇಂಗ್ಲೆಂಡ್ ತಂಡದ ಸ್ಕೋರ್ 38 ರನ್ಗಳು.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಡೇವಿಡ್ ಮಲಾನ್ ಬ್ಯಾಟಿಂಗ್.
8 ಓವರ್ಗಳಲ್ಲಿ ಕೇವಲ 29 ರನ್ ನೀಡಿ 2 ವಿಕೆಟ್ ಕಬಳಿಸಿದ ಆಸ್ಟ್ರೇಲಿಯಾ.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಡೇವಿಡ್ ಮಲಾನ್ ಬ್ಯಾಟಿಂಗ್
ಜಾನಿ ಬೈರ್‌ಸ್ಟೋವ್ (0) ಹಾಗೂ ಜೋ ರೂಟ್ (13) ಔಟ್.
ಮಿಚೆಲ್ ಸ್ಟಾರ್ಕ್ ಎಸೆದ 5ನೇ ಓವರ್ನ 3ನೇ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಜೋ ರೂಟ್.
17 ಎಸೆತಗಳಲ್ಲಿ 13 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಜೋ ರೂಟ್.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಡೇವಿಡ್ ಮಲಾನ್ ಬ್ಯಾಟಿಂಗ್
ಮಿಚೆಲ್ ಸ್ಟಾರ್ಕ್ ಎಸೆದ ಮೊದಲ ಓವರ್ನ ಮೊದಲ ಎಸೆತದಲ್ಲೇ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಜಾನಿ ಬೈರ್‌ಸ್ಟೋವ್.
ಆಸ್ಟ್ರೇಲಿಯಾ ತಂಡಕ್ಕೆ ಮೊದಲ ಯಶಸ್ಸು.
ಕ್ರೀಸ್ನಲ್ಲಿ ಜೋ ರೂಟ್ ಹಾಗೂ ಡೇವಿಡ್ ಮಲಾನ್ ಬ್ಯಾಟಿಂಗ್.
ಕೊನೆಯ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ 2 ವಿಕೆಟ್ ಕಬಳಿಸಿದ ಕ್ರಿಸ್ ವೋಕ್ಸ್.
49.3 ಓವರ್ಗಳಲ್ಲಿ 286 ರನ್ಗಳಿಗೆ ಆಲೌಟ್ ಆದ ಆಸ್ಟ್ರೇಲಿಯಾ ತಂಡ.
ಇಂಗ್ಲೆಂಡ್ ತಂಡಕ್ಕೆ 287 ರನ್ಗಳ ಗುರಿ ನೀಡಿದ ಆಸೀಸ್ ಪಡೆ.
ಡೇವಿಡ್ ವಿಲ್ಲಿ ಎಸೆದ 49ನೇ ಓವರ್ನ 5ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಫೋರ್ ಬಾರಿಸಿದ ಆ್ಯಡಂ ಝಂಪಾ.
ಕೊನೆಯ ಓವರ್ ಮಾತ್ರ ಬಾಕಿ.
ಕ್ರೀಸ್ನಲ್ಲಿ ಆ್ಯಡಂ ಝಂಪಾ ಹಾಗೂ ಮಿಚೆಲ್ ಸ್ಟಾರ್ಕ್ ಬ್ಯಾಟಿಂಗ್.
ಉತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಆ್ಯಡಂ ಝಂಪಾ.
14 ಎಸೆತಗಳಲ್ಲಿ 23 ರನ್ ಬಾರಿಸಿರುವ ಝಂಪಾ ಹಾಗೂ ಮಿಚೆಲ್ ಸ್ಟಾರ್ಕ್ ಬ್ಯಾಟಿಂಗ್.
48 ಓವರ್ಗಳ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡದ ಸ್ಕೋರ್ 276 ರನ್ಗಳು.
ಮಾರ್ಕ್ ವುಡ್ ಎಸೆದ 45ನೇ ಓವರ್ನ 2ನೇ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿದ ಪ್ಯಾಟ್ ಕಮಿನ್ಸ್ (10).
45 ಓವರ್ಗಳ ಮುಕ್ತಾಯದ ವೇಳೆಗೆ 250 ರನ್ ಕಲೆಹಾಕಿದ ಆಸ್ಟ್ರೇಲಿಯಾ.
ಕ್ರೀಸ್ನಲ್ಲಿ ಆ್ಯಡಂ ಝಂಪಾ ಹಾಗೂ ಮಿಚೆಲ್ ಸ್ಟಾರ್ಕ್ ಬ್ಯಾಟಿಂಗ್.
ಲಿಯಾಮ್ ಲಿವಿಂಗ್‌ಸ್ಟೋನ್ ಎಸೆದ 44ನೇ ಓವರ್ನ 2ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಸ್ಟೋಯಿನಿಸ್.
3ನೇ ಎಸೆತದಲ್ಲಿ ಸ್ಟೋಯಿನಿಸ್ ಬ್ಯಾಟ್ನಿಂದ ಮತ್ತೊಂದು ಫೋರ್.
4ನೇ ಎಸೆತದಲ್ಲಿ ಬೌಂಡರಿ ಲೈನ್ನಲ್ಲಿ ಜಾನಿ ಬೈರ್‌ಸ್ಟೋವ್ ಉತ್ತಮ ಕ್ಯಾಚ್…ಮಾರ್ಕಸ್ ಸ್ಟೋಯಿನಿಸ್ (35) ಔಟ್.
ಡೇವಿಡ್ ವಿಲ್ಲಿ ಎಸೆದ 41ನೇ ಓವರ್ನ 4ನೇ ಎಸೆತದಲ್ಲಿ ಕ್ಯಾಮರೋನ್ ಗ್ರೀನ್ ಕ್ಲೀನ್ ಬೌಲ್ಡ್.
52 ಎಸೆತಗಳಲ್ಲಿ 47 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಕ್ಯಾಮರೋನ್ ಗ್ರೀನ್.
ಕ್ರೀಸ್ನಲ್ಲಿ ಪ್ಯಾಟ್ ಕಮಿನ್ಸ್ ಹಾಗೂ ಮಾರ್ಕಸ್ ಸ್ಟೋಯಿನಿಸ್ ಬ್ಯಾಟಿಂಗ್
ಕ್ರಿಸ್ ವೋಕ್ಸ್ ಎಸೆದ 40ನೇ ಓವರ್ನ 4ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಫೋರ್ ಬಾರಿಸಿದ ಮಾರ್ಕಸ್ ಸ್ಟೋಯಿನಿಸ್.
40 ಓವರ್ಗಳ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡದ ಸ್ಕೋರ್ 220 ರನ್ಗಳು.
ಕ್ರೀಸ್ನಲ್ಲಿ ಕ್ಯಾಮರೋನ್ ಗ್ರೀನ್ ಹಾಗೂ ಮಾರ್ಕಸ್ ಸ್ಟೋಯಿನಿಸ್ ಬ್ಯಾಟಿಂಗ್.
ಟ್ರಾವಿಸ್ ಹೆಡ್ (11), ಡೇವಿಡ್ ವಾರ್ನರ್ (15), ಸ್ಟೀವ್ ಸ್ಮಿತ್ (44), ಮಾರ್ನಸ್ ಲಾಬುಶೇನ್ (71) ಹಾಗೂ ಜೋಶ್ ಇಂಗ್ಲಿಸ್ (3) ಔಟ್.
37 ಓವರ್ಗಳಲ್ಲಿ ದ್ವಿಶತಕ ಪೂರೈಸಿದ ಆಸ್ಟ್ರೇಲಿಯಾ ತಂಡ.
5 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಇಂಗ್ಲೆಂಡ್.
ಕ್ರೀಸ್ನಲ್ಲಿ ಕ್ಯಾಮರೋನ್ ಗ್ರೀನ್ ಹಾಗೂ ಮಾರ್ಕಸ್ ಸ್ಟೋಯಿನಿಸ್ ಬ್ಯಾಟಿಂಗ್
ಮಾರ್ಕ್ ವುಡ್ ಎಸೆದ 35ನೇ ಓವರ್ನ 5ನೇ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಕ್ಯಾಮರೋನ್ ಗ್ರೀನ್.
35 ಓವರ್ಗಳ ಮುಕ್ತಾಯದ ವೇಳೆಗೆ ಇಂಗ್ಲೆಂಡ್ ತಂಡದ ಸ್ಕೋರ್ 190 ರನ್ಗಳು.
ಕ್ರೀಸ್ನಲ್ಲಿ ಕ್ಯಾಮರೋನ್ ಗ್ರೀನ್ ಹಾಗೂ ಮಾರ್ಕಸ್ ಸ್ಟೋಯಿನಿಸ್ ಬ್ಯಾಟಿಂಗ್.
ಮಾರ್ಕ್ ವುಡ್ ಎಸೆದ 33ನೇ ಓವರ್ನ 5ನೇ ಎಸೆತದಲ್ಲಿ ಸ್ಕ್ವೇರ್ ಕಟ್ ಮೂಲಕ ಫೋರ್ ಬಾರಿಸಿದ ಮಾರ್ನಸ್ ಲಾಬುಶೇನ್.
ಕೊನೆಯ ಎಸೆತದಲ್ಲಿ ಮಾರ್ನಸ್ ಲಾಬುಶೇನ್ ಎಲ್ಬಿಡಬ್ಲ್ಯೂ…ಅಂಪೈರ್ ತೀರ್ಪು ಔಟ್.
83 ಎಸೆತಗಳಲ್ಲಿ 71 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಮಾರ್ನಸ್ ಲಾಬುಶೇನ್.
30 ಓವರ್ಗಳ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡದ ಸ್ಕೋರ್ 153 ರನ್ಗಳು.
4 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಇಂಗ್ಲೆಂಡ್ ಬೌಲರ್ಗಳು.
ಕ್ರೀಸ್ನಲ್ಲಿ ಕ್ಯಾಮರೋನ್ ಗ್ರೀನ್ ಹಾಗೂ ಮಾರ್ನಸ್ ಲಾಬುಶೇನ್ ಬ್ಯಾಟಿಂಗ್
ಟ್ರಾವಿಸ್ ಹೆಡ್ (11), ಡೇವಿಡ್ ವಾರ್ನರ್ (15), ಸ್ಟೀವ್ ಸ್ಮಿತ್ (44) ಹಾಗೂ ಜೋಶ್ ಇಂಗ್ಲಿಸ್ (3) ಔಟ್.
ಆದಿಲ್ ರಶೀದ್ ಎಸೆದ 28ನೇ ಓವರ್ನ ಕೊನೆಯ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಮಾರ್ನಸ್ ಲಾಬುಶೇನ್.
70 ಎಸೆತಗಳಲ್ಲಿ 59 ರನ್ಗಳೊಂದಿಗೆ ಉತ್ತಮ ಬ್ಯಾಟಿಂಗ್ ಮುಂದುವರೆಸಿರುವ ಲಾಬುಶೇನ್.
ಕ್ರೀಸ್ನಲ್ಲಿ ಕ್ಯಾಮರೋನ್ ಗ್ರೀನ್ ಹಾಗೂ ಮಾರ್ನಸ್ ಲಾಬುಶೇನ್ ಬ್ಯಾಟಿಂಗ್.
ಮೊಯೀನ್ ಅಲಿ ಎಸೆದ 25ನೇ ಓವರ್ನ ಮೊದಲ ಎಸೆತದಲ್ಲಿ ಆಕರ್ಷಕ ಬೌಂಡರಿ ಬಾರಿಸಿದ ಮಾರ್ನಸ್ ಲಾಬುಶೇನ್.
25 ಓವರ್ಗಳ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡದ ಸ್ಕೋರ್ 124 ರನ್ಗಳು.
ಕ್ರೀಸ್ನಲ್ಲಿ ಕ್ಯಾಮರೋನ್ ಗ್ರೀನ್ ಹಾಗೂ ಮಾರ್ನಸ್ ಲಾಬುಶೇನ್ ಬ್ಯಾಟಿಂಗ್
ಟ್ರಾವಿಸ್ ಹೆಡ್ (11), ಡೇವಿಡ್ ವಾರ್ನರ್ (15), ಸ್ಟೀವ್ ಸ್ಮಿತ್ (44) ಹಾಗೂ ಜೋಶ್ ಇಂಗ್ಲಿಸ್ (3) ಔಟ್.
ಆದಿಲ್ ರಶೀದ್ ಎಸೆದ 24ನೇ ಓವರ್ನ ಮೊದಲ ಎಸೆತದಲ್ಲಿ ಸ್ವಿಚ್ ಹಿಟ್ ಶಾಟ್ಗೆ ಯತ್ನಿಸಿ ಕ್ಯಾಚ್ ನೀಡಿದ ಜೋಶ್ ಇಂಗ್ಲಿಸ್.
ಕೇವಲ 3 ರನ್ಗಳಿಸಿ ವಿಕೆಟ್ ಒಪ್ಪಿಸಿದ ಜೋಶ್ ಇಂಗ್ಲಿಸ್.
ಆಸ್ಟ್ರೇಲಿಯಾ ತಂಡದ ನಾಲ್ಕನೇ ವಿಕೆಟ್ ಕಬಳಿಸಿದ ಆದಿಲ್ ರಶೀದ್.
ಆದಿಲ್ ರಶೀದ್ ಎಸೆದ 22ನೇ ಓವರ್ನ 4ನೇ ಎಸೆತದಲ್ಲಿ ಮೊಯೀನ್ ಅಲಿಗೆ ಕ್ಯಾಚ್ ನೀಡಿದ ಸ್ಟೀವ್ ಸ್ಮಿತ್.
52 ಎಸೆತಗಳಲ್ಲಿ 44 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಸ್ಟೀವ್ ಸ್ಮಿತ್.
ಕ್ರೀಸ್ನಲ್ಲಿ ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್ ಲಾಬುಶೇನ್ ಬ್ಯಾಟಿಂಗ್.
20 ಓವರ್ಗಳ ಮುಕ್ತಾಯದ ವೇಳೆಗೆ 101 ರನ್ ಕಲೆಹಾಕಿದ ಆಸ್ಟ್ರೇಲಿಯಾ ತಂಡ.
ಕ್ರೀಸ್ನಲ್ಲಿ ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್ ಲಾಬುಶೇನ್ ಬ್ಯಾಟಿಂಗ್.
3ನೇ ವಿಕೆಟ್ಗೆ 86 ಎಸೆತಗಳಲ್ಲಿ 63 ರನ್ಗಳ ಜೊತೆಯಾಟವಾಡಿದ ಸ್ಮಿತ್-ಮಾರ್ನಸ್.
ಆಸ್ಟ್ರೇಲಿಯಾ ಆರಂಭಿಕರಾದ ಡೇವಿಡ್ ವಾರ್ನರ್ (15) ಹಾಗೂ ಟ್ರಾವಿಸ್ ಹೆಡ್ (11) ಔಟ್.
ಮಾರ್ಕ್ ವುಡ್ ಎಸೆದ 17ನೇ ಓವರ್ನ 3ನೇ ಎಸೆತದಲ್ಲಿ ಆಕರ್ಷಕ ಫೋರ್ ಬಾರಿಸಿದ ಮಾರ್ನಸ್ ಲಾಬುಶೇನ್.
17 ಓವರ್ಗಳಲ್ಲಿ ಆಸ್ಟ್ರೇಲಿಯಾ ತಂಡದ ಸ್ಕೋರ್ 82 ರನ್ಗಳು.
ಕ್ರೀಸ್ನಲ್ಲಿ ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್ ಲಾಬುಶೇನ್ ಬ್ಯಾಟಿಂಗ್
15 ಓವರ್ಗಳ ಮುಕ್ತಾಯದ ವೇಳೆಗೆ 70 ರನ್ ಕಲೆಹಾಕಿದ ಆಸ್ಟ್ರೇಲಿಯಾ ತಂಡ.
ಕ್ರೀಸ್ನಲ್ಲಿ ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್ ಲಾಬುಶೇನ್ ಬ್ಯಾಟಿಂಗ್.
ಆಸ್ಟ್ರೇಲಿಯಾ ಆರಂಭಿಕರಾದ ಡೇವಿಡ್ ವಾರ್ನರ್ (15) ಹಾಗೂ ಟ್ರಾವಿಸ್ ಹೆಡ್ (11) ಔಟ್.
11ನೇ ಓವರ್ನಲ್ಲಿ ಅರ್ಧಶತಕ ಪೂರೈಸಿದ ಆಸ್ಟ್ರೇಲಿಯಾ ತಂಡ.
ಇಂಗ್ಲೆಂಡ್ ತಂಡದಿಂದ ಉತ್ತಮ ಬೌಲಿಂಗ್.
ಕ್ರೀಸ್ನಲ್ಲಿ ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್ ಲಾಬುಶೇನ್ ಬ್ಯಾಟಿಂಗ್.
ಡೇವಿಡ್ ವಾರ್ನರ್ (15) ಹಾಗೂ ಟ್ರಾವಿಸ್ ಹೆಡ್ (11) ಔಟ್.
10 ಓವರ್ಗಳ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡದ ಸ್ಕೋರ್ 48 ರನ್ಗಳು.
ಮೊದಲ ಪವರ್ಪ್ಲೇನಲ್ಲಿ 2 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಇಂಗ್ಲೆಂಡ್ ಬೌಲರ್ಗಳು.
ಕ್ರೀಸ್ನಲ್ಲಿ ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್ ಲಾಬುಶೇನ್ ಬ್ಯಾಟಿಂಗ್
ಆಸ್ಟ್ರೇಲಿಯಾ ಆರಂಭಿಕರಾದ ಡೇವಿಡ್ ವಾರ್ನರ್ (15) ಹಾಗೂ ಟ್ರಾವಿಸ್ ಹೆಡ್ (11) ಔಟ್.
ಡೇವಿಡ್ ವಿಲ್ಲಿ ಎಸೆದ 9ನೇ ಓವರ್ನ ಮೊದಲ ಎಸೆತದಲ್ಲೇ ಆಫ್ ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ಮಾರ್ನಸ್ ಲಾಬುಶೇನ್.
ಕ್ರೀಸ್ನಲ್ಲಿ ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್ ಲಾಬುಶೇನ್ ಬ್ಯಾಟಿಂಗ್
8 ಓವರ್ಗಳಲ್ಲಿ 41 ರನ್ ನೀಡಿದ 2 ವಿಕೆಟ್ ಕಬಳಿಸಿದ ಇಂಗ್ಲೆಂಡ್ ಬೌಲರ್ಗಳು.
ಟ್ರಾವಿಸ್ ಹೆಡ್ (11) ಹಾಗೂ ಡೇವಿಡ್ ವಾರ್ನರ್ (15) ಔಟ್.
ಕ್ರೀಸ್ನಲ್ಲಿ ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್ ಲಾಬುಶೇನ್ ಬ್ಯಾಟಿಂಗ್.
ಈ ಪಂದ್ಯದಲ್ಲಿ ಟಾಸ್ ಗೆದ್ದ ಬೌಲಿಂಗ್ ಮಾಡುತ್ತಿರುವ ಇಂಗ್ಲೆಂಡ್.
ಕ್ರಿಸ್ ವೋಕ್ಸ್ ಎಸೆದ 6ನೇ ಓವರ್ನ 2ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಬಾರಿಸಿದ ಡೇವಿಡ್ ವಾರ್ನರ್.
ನಾಲ್ಕನೇ ಎಸೆತದಲ್ಲಿ ಡೇವಿಡ್ ವಿಲ್ಲಿಗೆ ಕ್ಯಾಚ್…ಡೇವಿಡ್ ವಾರ್ನರ್ ಔಟ್.
16 ಎಸೆತಗಳಲ್ಲಿ 15 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ.
ಡೇವಿಡ್ ವಿಲ್ಲಿ ಎಸೆದ 5ನೇ ಓವರ್ನ ಕೊನೆಯ ಎಸೆತದಲ್ಲಿ ಫೈನ್ ಲೆಗ್ನತ್ತ ಫೋರ್ ಬಾರಿಸಿದ ಸ್ಟೀವ್ ಸ್ಮಿತ್.
5 ಓವರ್ಗಳ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡದ ಸ್ಕೋರ್ 32 ರನ್ಗಳು.
ಕ್ರೀಸ್ನಲ್ಲಿ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಬ್ಯಾಟಿಂಗ್
ಆಸ್ಟ್ರೇಲಿಯಾ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ (11) ಔಟ್.
ಕ್ರಿಸ್ ವೋಕ್ಸ್ ಎಸೆದ 4ನೇ ಓವರ್ನ 3ನೇ ಎಸೆತದಲ್ಲಿ ಆನ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಡೇವಿಡ್ ವಾರ್ನರ್.
ಕ್ರೀಸ್ನಲ್ಲಿ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಬ್ಯಾಟಿಂಗ್.
ಕ್ರಿಸ್ ವೋಕ್ಸ್ ಎಸೆದ 2ನೇ ಓವರ್ನ 4ನೇ ಎಸೆತದಲ್ಲಿ ಜೋ ರೂಟ್ಗೆ ಕ್ಯಾಚ್ ನೀಡಿದ ಟ್ರಾವಿಸ್ ಹೆಡ್.
10 ಎಸೆತಗಳಲ್ಲಿ 11 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಎಡಗೈ ದಾಂಡಿಗ ಟ್ರಾವಿಸ್ ಹೆಡ್.
ಆಸ್ಟ್ರೇಲಿಯಾ ತಂಡದ ಮೊದಲ ವಿಕೆಟ್ ಪತನ…ಇಂಗ್ಲೆಂಡ್ಗೆ ಮೊದಲ ಯಶಸ್ಸು.
ಡೇವಿಡ್ ವಿಲ್ಲಿ ಎಸೆದ ಮೊದಲ ಓವರ್ನ 5ನೇ ಎಸೆತದಲ್ಲಿ ಆಕರ್ಷಕ ಕವರ್ ಡ್ರೈವ್ ಫೋರ್ ಬಾರಿಸಿದ ಟ್ರಾವಿಸ್ ಹೆಡ್.
ಇದು ಆಸ್ಟ್ರೇಲಿಯಾ ಇನಿಂಗ್ಸ್ನ ಮೊದಲ ಬೌಂಡರಿ.
ಕ್ರೀಸ್ನಲ್ಲಿ ಟ್ರಾವಿಸ್ ಹೆಡ್ ಹಾಗೂ ಡೇವಿಡ್ ವಾರ್ನರ್ ಬ್ಯಾಟಿಂಗ್.
ಸಚಿವರು, ಕಾಂಗ್ರೆಸ್ ಶಾಸಕರಿಂದ ಬಹಿರಂಗ ಹೇಳಿಕೆ ವಿಚಾರ ಸಂಬಂಧ ಬಹಿರಂಗ ಹೇಳಿಕೆ ನೀಡಿ ಭವಿಷ್ಯ ಹಾಳು ಮಾಡಿಕೊಳ್ಳೋದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ಪಕ್ಷದ ಭವಿಷ್ಯ ಹಾಳು ಮಾಡುವುದು ಬೇಡ. ಬಹಿರಂಗ ಹೇಳಿಕೆ ನೀಡದಂತೆ ಎಲ್ಲರಿಗೂ ವಾರ್ನ್ ಮಾಡಿದ್ದೇವೆ. ಉಸ್ತುವಾರಿ ಸಚಿವರಿಗೆ ಅವರವರ ಜವಾಬ್ದಾರಿಯನ್ನು ನೀಡಿದ್ದೇವೆ. ಲೋಕಸಭೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ನೀಡಲು ಸೂಚಿಸಿದ್ದೇವೆ. ಮೂರ್ನಾಲ್ಕು ದಿನದಲ್ಲಿ ವರದಿ ನೀಡಲು ವೀಕ್ಷಕರಿಗೆ ಸೂಚಿಸಿದ್ದೇವೆ. ಈ ಹಿಂದೆ ನಾವೆಲ್ಲ ಬರ ಪ್ರವಾಸ ಮಾಡಿ ಸರ್ಕಾರಕ್ಕೆ ವರದಿ ನೀಡಿದ್ದೆವು. ಬಿಜೆಪಿ ಬರ ಅಧ್ಯಯನ ಬದಲು ಕೇಂದ್ರದಿಂದ ಹಣ ಕೊಡಿಸಲಿ ಎಂದರು.
ನಾನು, ನನ್ನ ಹೆಂಡತಿ ಅಕೌಂಟ್ ಜನರ ಮುಂದಿದೆ, ಟ್ಯಾಕ್ಸ್ ಕಟ್ಟುತ್ತೇವೆ. ಐಟಿ, ಇಡಿ, ಸಿಬಿಐ ಕೇಸ್ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಐಟಿ, ಇಡಿ, ಸಿಬಿಐ ಕೇಸ್ ಬಗ್ಗೆ ನಾನು ಭಯಪಡುವುದಿಲ್ಲ ಎಂದು ಸಿಎಂ ಕಾವೇರಿ ನಿವಾಸದ ಬಳಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದರು.
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಮಾರ್ನಸ್ ಲಾಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಕ್ಯಾಮರೋನ್ ಗ್ರೀನ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ, ಜೋಶ್ ಹ್ಯಾಝಲ್‌ವುಡ್.
ಇಂಗ್ಲೆಂಡ್ (ಪ್ಲೇಯಿಂಗ್ XI): ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಮಾರ್ಕ್ ವುಡ್
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
Published On - 1:33 pm, Sat, 4 November 23