ಐಸಿಸಿ ಏಕದಿನ ವಿಶ್ವಕಪ್ನಲ್ಲಿಂದು (ICC ODI World Cup) ಎರಡು ಮಹತ್ವದ ಪಂದ್ಯಗಳನ್ನು ಆಯೋಜಿಸಲಾಗಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡ ಶಕಿಬ್ ಅಲ್ ಹಸನ್ ಅವರ ಬಾಂಗ್ಲಾದೇಶವನ್ನು ಎದುರಿಸುತ್ತಿದೆ. ಈಗಾಗಲೇ ಟಾಸ್ ಗೆದ್ದ ಬಾಂಗ್ಲಾ ತಂಡದ ನಾಯಕ ಶಕಿಬ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇಂಗ್ಲೆಂಡ್ ತಂಡದಲ್ಲಿ ಇಂದಿನ ಪಂದ್ಯಕ್ಕೆ ಒಂದು ಬದಲಾವಣೆ ಮಾಡಲಾಗಿದೆ. ಮೊಯಿನ್ ಅಲಿ ಬದಲು ರೀಸ್ ಟೋಪ್ಲಿ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇತ್ತ ಬಾಂಗ್ಲಾ ತಂಡದಲ್ಲಿ ಕೂಡ ಒಂದು ಬದಲಾವಣೆ ಇದೆ.
ICC Men’s Cricket World Cup 2023
Bangladesh 🆚England 🏏Bangladesh won the toss and decided to bowl first#BCB | #ENGvBAN | #CWC23 pic.twitter.com/mZVBU9migh
— Bangladesh Cricket (@BCBtigers) October 10, 2023
ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಇಂಗ್ಲೆಂಡ್ಗೆ ಇಂದಿನ ಪಂದ್ಯ ಬಹುಮುಖ್ಯವಾಗಿದೆ. ಆದರೆ, ಬೌಲಿಂಗ್ನಲ್ಲಿ ಲಯಕಂಡುಕೊಳ್ಳಬೇಕಿದೆ. ಕಳೆದ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟರ್ಗಳಿ 282 ರನ್ ಕಲೆಹಾಕಿದ್ದರೂ ನ್ಯೂಜಿಲೆಂಡ್ ಇದನ್ನು ಕೇವಲ 1 ವಿಕೆಟ್ ಕಳೆದುಕೊಂಡು 36 ಓವರ್ಗಳಲ್ಲಿ ಗುರಿ ಮುಟ್ಟಿತ್ತು. ಮಾರ್ಕ್ ವುಡ್, ಸ್ಯಾಮ್ ಕುರ್ರನ್, ಕ್ರಿಸ್ ವೋಕ್ಸ್, ಮೊಯಿನ್ ಅಲಿ ಮಾರಕವಾಗಬೇಕಿದೆ.
ಟೀಮ್ ಇಂಡಿಯಾದ 2ನೇ ಪಂದ್ಯಕ್ಕೂ ಶುಭ್ಮನ್ ಗಿಲ್ ಅಲಭ್ಯ
ಇತ್ತ ಬಾಂಗ್ಲಾದೇಶ ತಂಡ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಗೆದ್ದು ಆತ್ಮವಿಶ್ವಾಸದಲ್ಲಿದೆ. ಆದರೆ, ಆಂಗ್ಲರ ವಿರುದ್ಧ ಯಾವ ರೀತಿ ಪ್ರದರ್ಶನ ತೋರುತ್ತೆ ನೋಡಬೇಕಿದೆ.
ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಜೋಸ್ ಬಟ್ಲರ್ (ನಾಯಕ), ಜಾನಿ ಬೈರ್‌ಸ್ಟೋ, ಜೋ ರೂಟ್, ಡೇವಿಡ್ ಮಲನ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರನ್, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲಿ, ಕ್ರಿಸ್ ವೋಕ್ಸ್.
ಬಾಂಗ್ಲಾದೇಶ ಪ್ಲೇಯಿಂಗ್ ಇಲೆವೆನ್: ತಂಝಿದ್ ಹಸನ್, ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್(ನಾಯಕ), ಮೆಹಿದಿ ಹಸನ್, ಮುಶ್ಫಿಕರ್ ರಹೀಮ್, ತೌಹಿದ್ ಹೃದಯ್, ಮಹೇದಿ ಹಸನ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್, ಶೋರಿಫುಲ್ ಇಸ್ಲಾಂ.
ಇನ್ನು ಇಂದು ಮಧ್ಯಾಹ್ನ 2 ಗಂಟೆಗೆ ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಯೋಜಿಸಿರುವ ದ್ವಿತೀಯ ಪಂದ್ಯದಲ್ಲಿ ಬಾಬರ್ ಅಝಂ ನೇತೃತ್ವದ ಪಾಕಿಸ್ತಾನ ಮತ್ತು ದಸುನ್ ಶನಕಾ ಅವರ ಶ್ರೀಲಂಕಾ ಮುಖಾಮುಖಿ ಆಗಲಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ