AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತದ ವಿರುದ್ಧ ಶತಕ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಸರಿಗಟ್ಟಿದ ಜೋ ರೂಟ್

Joe Root Century: ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್‌ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಜೋ ರೂಟ್ ತಮ್ಮ 37ನೇ ಟೆಸ್ಟ್ ಶತಕ ಸಿಡಿಸಿ ಇಂಗ್ಲೆಂಡ್‌ ಇನ್ನಿಂಗ್ಸ್​ಗೆ ಜೀವ ತುಂಬಿದ್ದಾರೆ. ಮೊದಲ ದಿನದಾಟದ ಅಂತ್ಯಕ್ಕೆ 99 ರನ್‌ಗಳಲ್ಲಿ ಅಜೇಯರಾಗಿದ್ದ ರೂಟ್ ಎರಡನೇ ದಿನದ ಮೊದಲ ಎಸೆತವನ್ನೇ ಬೌಂಡರಿಗಟ್ಟಿ ಶತಕ ಪೂರ್ಣಗೊಳಿಸಿದರು. ಬೆನ್ ಸ್ಟೋಕ್ಸ್ ಜೊತೆ ಅವರು 80 ಕ್ಕೂ ಹೆಚ್ಚು ರನ್‌ಗಳ ಜೊತೆಯಾಟವನ್ನು ನಿರ್ಮಿಸಿ ಇಂಗ್ಲೆಂಡ್ ತಂಡವನ್ನು 250 ರನ್‌ಗಳ ಗಡಿ ದಾಟಿಸಿದರು.

IND vs ENG: ಭಾರತದ ವಿರುದ್ಧ ಶತಕ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಸರಿಗಟ್ಟಿದ ಜೋ ರೂಟ್
Joe Root
ಪೃಥ್ವಿಶಂಕರ
|

Updated on:Jul 11, 2025 | 4:02 PM

Share

ಭಾರತ ಮತ್ತು ಇಂಗ್ಲೆಂಡ್‌ (England vs India) ನಡುವೆ ಲಾರ್ಡ್ಸ್‌ ಮೈದಾನದಲ್ಲಿ ( Lords Test) ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಶುರುವಾಗಿದೆ. ಮೊದಲ ದಿನದಾಟದಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 251 ರನ್ ಬಾರಿಸಿದ್ದ ಇಂಗ್ಲೆಂಡ್‌ ತಂಡ ಇಲ್ಲಿಂದ ತನ್ನ ಎರಡನೇ ದಿನದಾಟವನ್ನು ಮುಂದುವರೆಸಿದೆ. ಇನ್ನು ಮೊದಲ ದಿನದಾಟದಂತ್ಯಕ್ಕೆ 99 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದ ಮಾಜಿ ನಾಯಕ ಜೋ ರೂಟ್ (Joe Root), ಎರಡನೇ ದಿನದಾಟದ ಮೊದಲ ಎಸೆತವನ್ನೇ ಬೌಂಡರಿಗಟ್ಟುವ ಮೂಲಕ ಶತಕ ಪೂರೈಸಿದರು. 192 ಎಸೆತಗಳಲ್ಲಿ 10 ಬೌಂಡರಿಗಳ ಸಹಿತ ರೂಟ್ ತಮ್ಮ ಟೆಸ್ಟ್ ವೃತ್ತಿಜೀವನದ 37 ನೇ ಶತಕವನ್ನು ಪೂರ್ಣಗೊಳಿಸಿದರು. ಅಲ್ಲದೆ ಟೀಂ ಇಂಡಿಯಾ ವಿರುದ್ಧ ರೂಟ್ ಸಿಡಿಸಿದ 11ನೇ ಟೆಸ್ಟ್ ಶತಕ ಇದಾಗಿದೆ. ಹಾಗೆಯೇ ರೂಟ್, ನಾಯಕ ಬೆನ್ ಸ್ಟೋಕ್ಸ್ ಅವರೊಂದಿಗೆ 80 ಕ್ಕೂ ಹೆಚ್ಚು ರನ್‌ಗಳ ಜೊತೆಯಾಟವನ್ನು ನಡೆಸಿದ್ದು, ಇವರಿಬ್ಬರ ಆಟದಿಂದಾಗಿ ಇಂಗ್ಲೆಂಡ್‌ನ ಸ್ಕೋರ್ ಕೂಡ 250 ರನ್​ಗಳ ಗಡಿ ದಾಟಿದೆ.

ಹಲವು ದಾಖಲೆ ಸೃಷ್ಟಿಸಿದ ರೂಟ್

ಈ ಶತಕದ ಮೂಲಕ ಹಲವು ದಾಖಲೆಗಳನ್ನು ಸೃಷ್ಟಿಸಿರುವ ಜೋ ರೂಟ್​ಗೆ ಈ ಮೈದಾನದಲ್ಲಿ ಇದು ಎಂಟನೇ ಶತಕವಾಗಿದೆ. ಈ ಟೆಸ್ಟ್ ಪಂದ್ಯದ ಮೊದಲ ದಿನದಂದು, ಭಾರತ ವಿರುದ್ಧ ಟೆಸ್ಟ್‌ನಲ್ಲಿ 3000 ರನ್‌ಗಳನ್ನು ಪೂರ್ಣಗೊಳಿಸಿದ್ದ ರೂಟ್, ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ಲಾರ್ಡ್ಸ್‌ನಲ್ಲಿ ಶತಕ ಸಿಡಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸಹ ಸರಿಗಟ್ಟಿದ್ದಾರೆ. ಇದಲ್ಲದೆ, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರ 5ನೇ ಸ್ಥಾನಕ್ಕೆ ತಲುಪಿದ್ದಾರೆ.

ಜೋ ರೂಟ್ ಶತಕ ಪೂರೈಸಿದ ಕ್ಷಣ

ತೆಂಡೂಲ್ಕರ್ ದಾಖಲೆ ಸರಿಗಟ್ಟಿದ ರೂಟ್

ಲಾರ್ಡ್ಸ್ ಮೈದಾನದಲ್ಲಿ ಶತಕ ಗಳಿಸುವ ಮೂಲಕ ಜೋ ರೂಟ್, ಒಂದು ದೇಶದ ವಿರುದ್ಧ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಆಟಗಾರರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅವರನ್ನು ಸರಿಗಟ್ಟಿದ್ದಾರೆ. ಸಚಿನ್ ತೆಂಡೂಲ್ಕರ್ ಆಸ್ಟ್ರೇಲಿಯಾ ವಿರುದ್ಧದ 39 ಟೆಸ್ಟ್ ಪಂದ್ಯಗಳ 74 ಇನ್ನಿಂಗ್ಸ್‌ಗಳಲ್ಲಿ 11 ಶತಕಗಳನ್ನು ಬಾರಿಸಿದ್ದಾರೆ. ಇದಲ್ಲದೆ, ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್, ಭಾರತದ ವಿರುದ್ಧ ಆಡಿರುವ 24 ಪಂದ್ಯಗಳ 46 ಇನ್ನಿಂಗ್ಸ್‌ಗಳಲ್ಲಿ 11 ಶತಕಗಳನ್ನು ಸಿಡಿಸಿದ್ದಾರೆ. ಇದೀಗ ಜೋ ರೂಟ್ ಭಾರತದ ವಿರುದ್ಧದ 33 ಪಂದ್ಯಗಳ 60 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಡಾನ್ ಬ್ರಾಡ್ಮನ್ ಇಂಗ್ಲೆಂಡ್ ವಿರುದ್ಧದ 37 ಪಂದ್ಯಗಳ 63 ಇನ್ನಿಂಗ್ಸ್‌ಗಳಲ್ಲಿ 19 ಶತಕಗಳನ್ನು ಗಳಿಸಿದ್ದಾರೆ.

IND vs ENG: ‘ಬೋರಿಂಗ್ ಟೆಸ್ಟ್ ಕ್ರಿಕೆಟ್​ಗೆ ಸ್ವಾಗತ’; ಆಂಗ್ಲರನ್ನು ಗೇಲಿ ಮಾಡಿದ ಯಂಗ್ ಇಂಡಿಯಾ

ದ್ರಾವಿಡ್ ದಾಖಲೆಯೂ ಉಡೀಸ್

156 ಪಂದ್ಯಗಳಲ್ಲಿ 37 ಶತಕಗಳನ್ನು ಸಿಡಿಸಿರುವ ರೂಟ್​ಗೆ ಇದು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 55ನೇ ಶತಕವಾಗಿದೆ. ಇದರೊಂದಿಗೆ ಅವರು ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಹಾಶಿಮ್ ಆಮ್ಲಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಆಮ್ಲಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 55 ಶತಕಗಳನ್ನು ಗಳಿಸಿದ್ದಾರೆ. ಇದಲ್ಲದೆ, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಜೋ ರೂಟ್ ಅಗ್ರ 5ನೇ ಸ್ಥಾನವನ್ನು ತಲುಪಿದ್ದಾರೆ. ಈ ಮೂಲಕ ಅವರು ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಮತ್ತು ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕಿದ್ದಾರೆ. ರಾಹುಲ್ ದ್ರಾವಿಡ್ ಮತ್ತು ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ 36 ಶತಕಗಳನ್ನು ಬಾರಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:48 pm, Fri, 11 July 25

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!