VIDEO: ಕ್ಯಾಚ್ ಹಿಡಿಯಲು ಹೋಗಿ ತಲೆ ಕೆಳಗಾಗಿ ಬಿದ್ದ ಪ್ರೇಕ್ಷಕ

T20 World Cup 2022: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 19.2 ಓವರ್​ಗಳಲ್ಲಿ 157 ರನ್​ಗಳಿಗೆ ಆಲೌಟ್ ಆಯಿತು. 158 ರನ್​ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು 14.3 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 105 ರನ್​ ಕಲೆಹಾಕಿದ್ದ ವೇಳೆ ಮಳೆ ಸುರಿಯಲಾರಂಭಿಸಿತು.

VIDEO: ಕ್ಯಾಚ್ ಹಿಡಿಯಲು ಹೋಗಿ ತಲೆ ಕೆಳಗಾಗಿ ಬಿದ್ದ ಪ್ರೇಕ್ಷಕ
england team
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 26, 2022 | 6:54 PM

T20 World Cup 2022: ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್​ನ 20ನೇ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಐರ್ಲೆಂಡ್ (England vs Ireland) ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಬೌಲಿಂಗ್ ಮಾಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಐರ್ಲೆಂಡ್ ತಂಡಕ್ಕೆ ನಾಯಕ ಆಂಡ್ರ್ಯೂ ಬಲ್ಬಿರ್ನಿ ಉತ್ತಮ ಆರಂಭ ಒದಗಿಸಿದ್ದರು. 47 ಎಸೆತಗಳನ್ನು ಎದುರಿಸಿದ ಬಲ್ಬಿರ್ನಿ 2 ಸಿಕ್ಸ್ ಹಾಗೂ 5 ಫೋರ್​ನೊಂದಿಗೆ 62 ರನ್​ ಬಾರಿಸಿ ಮಿಂಚಿದ್ದರು. ಈ ಇನಿಂಗ್ಸ್​ ನಡುವೆ ಬಲ್ಬಿರ್ನಿ ಬಾರಿಸಿದ ಸಿಕ್ಸ್​ವೊಂದು ಎಲ್ಲರನ್ನು ನಗೆಗಡಲಲ್ಲಿ ತೇಲಿಸಿತ್ತು. ಪಂದ್ಯದ 15ನೇ ಓವರ್​ನ 4ನೇ ಎಸೆತದಲ್ಲಿ ಬಲ್ಬಿರ್ನಿ ಲೆಗ್​ ಸೈಡ್​ನತ್ತ ಭರ್ಜರಿ ಸಿಕ್ಸ್ ಸಿಡಿಸಿದ್ದರು.

ಚೆಂಡು ಗ್ಯಾಲರಿ ಸ್ಟ್ಯಾಂಡ್​ನತ್ತ ಹೋಗುತ್ತಿದ್ದಂತೆ ಪ್ರೇಕ್ಷಕರೊಬ್ಬರು ಕ್ಯಾಚ್ ಹಿಡಿಯಲು ಮುಂದಾಗಿದ್ದರು. ಆದರೆ ಕ್ಯಾಚ್ ಹಿಡಿಯುವ ಯತ್ನದಲ್ಲಿ ಆಯಾ ತಪ್ಪಿ ಕುರ್ಚಿಗಳ ಎಡೆಯಲ್ಲಿ ಬಿದ್ದುಬಿಟ್ಟರು. ಇತ್ತ ಕ್ಯಾಮೆರಾಮ್ಯಾನ್ ಈ ಫನ್ನಿ ವಿಡಿಯೋವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯುವ ಮೂಲಕ ಎಲ್ಲರಿಗೂ ಬಿಟ್ಟಿ ಮನರಂಜನೆ ಒದಗಿಸಿದರು. ಇದೀಗ ಈ ವಿಡಿಯೋವನ್ನು ಐಸಿಸಿ ಕೂಡ ತನ್ನ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಭಾರೀ ವೈರಲ್ ಆಗಿದೆ.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್
View this post on Instagram

A post shared by ICC (@icc)

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 19.2 ಓವರ್​ಗಳಲ್ಲಿ 157 ರನ್​ಗಳಿಗೆ ಆಲೌಟ್ ಆಯಿತು. 158 ರನ್​ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು 14.3 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 105 ರನ್​ ಕಲೆಹಾಕಿದ್ದ ವೇಳೆ ಮಳೆ ಸುರಿಯಲಾರಂಭಿಸಿತು.

ಇದಾದ ಬಳಿಕ ಪಂದ್ಯವನ್ನು ಮುಂದುವರೆಸಲು ಸಾಧ್ಯವಾಗದ ಕಾರಣ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶವನ್ನು ನಿರ್ಧರಿಸಲಾಯಿತು. ಅದರಂತೆ ಇಂಗ್ಲೆಂಡ್​ಗಿಂತ 5 ರನ್​ಗಳ ಮುನ್ನಡೆ ಹೊಂದಿದ್ದ ಐರ್ಲೆಂಡ್ ತಂಡವನ್ನು ವಿಜಯಿ ಎಂದು ಘೋಷಿಸಲಾಗಿದೆ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ