ENG vs NED: 498 ರನ್, 3 ಶತಕ, 26 ಸಿಕ್ಸರ್! ನೆದರ್ಲೆಂಡ್ಸ್ ವಿರುದ್ಧ ಇಂಗ್ಲೆಂಡ್ ನಿರ್ಮಿಸಿದ 5 ವಿಶ್ವ ದಾಖಲೆಗಳಿವು

ENG vs NED: ತಂಡದ ಪರ ಮೂವರು ಬ್ಯಾಟ್ಸ್‌ಮನ್‌ಗಳು ಶತಕ ಸಿಡಿಸಿದರೆ, ಒಬ್ಬ ಬ್ಯಾಟ್ಸ್‌ಮನ್ ಐವತ್ತು ರನ್ ಗಳಿಸಿದರು. ಇದರೊಂದಿಗೆ ಈ ಪಂದ್ಯದಲ್ಲಿ ಹಲವು ಬೃಹತ್ ದಾಖಲೆಗಳು ನಿರ್ಮಾಣವಾದವು.

ENG vs NED: 498 ರನ್, 3 ಶತಕ, 26 ಸಿಕ್ಸರ್! ನೆದರ್ಲೆಂಡ್ಸ್ ವಿರುದ್ಧ ಇಂಗ್ಲೆಂಡ್ ನಿರ್ಮಿಸಿದ 5 ವಿಶ್ವ ದಾಖಲೆಗಳಿವು
Eng Vs Ned
Follow us
| Updated By: ಪೃಥ್ವಿಶಂಕರ

Updated on: Jun 18, 2022 | 8:05 AM

498 ರನ್, 3 ಶತಕ, 2 ಡಜನ್‌ಗೂ ಅಧಿಕ ಸಿಕ್ಸರ್‌ಗಳು.. ನೆದರ್ಲೆಂಡ್ಸ್ ವಿರುದ್ಧದ ಏಕದಿನ ಸರಣಿಯ (ODI series against the Netherlands) ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಅಮೋಘ ಬ್ಯಾಟಿಂಗ್ ಮಾಡಿದೆ. ಹಾಲಿ ವಿಶ್ವ ಚಾಂಪಿಯನ್ ನೆದರ್ಲೆಂಡ್ಸ್‌ಗೆ ಯಾವುದೇ ಅವಕಾಶ ನೀಡದೆ ಮೊದಲ ಇನಿಂಗ್ಸ್‌ನಲ್ಲಿ 498 ರನ್ ಗಳಿಸಿತು. ತಂಡದ ಪರ ಮೂವರು ಬ್ಯಾಟ್ಸ್‌ಮನ್‌ಗಳು ಶತಕ ಸಿಡಿಸಿದರೆ, ಒಬ್ಬ ಬ್ಯಾಟ್ಸ್‌ಮನ್ ಐವತ್ತು ರನ್ ಗಳಿಸಿದರು. ಇದರೊಂದಿಗೆ ಈ ಪಂದ್ಯದಲ್ಲಿ ಹಲವು ಬೃಹತ್ ದಾಖಲೆಗಳು ನಿರ್ಮಾಣವಾದವು.

  1. ಏಕದಿನ ಪಂದ್ಯದಲ್ಲಿ ತಂಡದ ಗರಿಷ್ಠ ಸ್ಕೋರ್; ಇಂಗ್ಲೆಂಡ್ 4 ವಿಕೆಟ್ ನಷ್ಟಕ್ಕೆ 498 ರನ್ ಗಳಿಸಿತು. ಇದು ಏಕದಿನ ಕ್ರಿಕೆಟ್‌ನಲ್ಲಿ ತಂಡದ ಗರಿಷ್ಠ ಸ್ಕೋರ್ ಆಗಿದೆ. 481 ರನ್‌ಗಳ ಹಿಂದಿನ ದಾಖಲೆಯನ್ನು ಇಂಗ್ಲೆಂಡ್ ನಿರ್ಮಿಸಿತ್ತು. ಅಗ್ರ-3 ಅತ್ಯಧಿಕ ಸ್ಕೋರ್‌ಗಳನ್ನು ಇಂಗ್ಲಿಷ್ ತಂಡ ದಾಖಲಿಸಿದೆ.
  2. ಏಕದಿನ ಪಂದ್ಯದಲ್ಲಿ ಎರಡನೇ ವೇಗದ 150 ರನ್; ಜೋಸ್ ಬಟ್ಲರ್ 65 ಎಸೆತಗಳಲ್ಲಿ 150 ಪೂರೈಸಿದರು. ಇದು ಏಕದಿನ ಕ್ರಿಕೆಟ್‌ನಲ್ಲಿ ಎರಡನೇ ಅತಿ ವೇಗದ 150 ರನ್ ಆಗಿದೆ. ಎಬಿ ಡಿವಿಲಿಯರ್ಸ್ 2015ರಲ್ಲಿ 64 ಎಸೆತಗಳಲ್ಲಿ 150 ರನ್ ಗಳಿಸಿದ್ದರು.
  3. ಲಿವಿಂಗ್‌ಸ್ಟೋನ್ ಏಕದಿನ ಪಂದ್ಯದಲ್ಲಿ ಎರಡನೇ ವೇಗದ ಅರ್ಧಶತಕ: ಇಂಗ್ಲೆಂಡ್ ಪರ ಲಿಯಾಮ್ ಲಿವಿಂಗ್‌ಸ್ಟೋನ್ 17 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಇದು ಏಕದಿನ ಕ್ರಿಕೆಟ್‌ನಲ್ಲಿ ಎರಡನೇ ಅತಿ ವೇಗದ ಅರ್ಧಶತಕವಾಗಿದೆ. 14 ಎಸೆತಗಳಲ್ಲಿ 48 ರನ್ ಗಳಿಸಿದ ನಂತರ, ಅವರು ಎರಡು ಡಾಟ್ ಬಾಲ್‌ಗಳನ್ನು ಆಡಿದರು. ಡಿವಿಲಿಯರ್ಸ್‌ಗೆ ಅತಿವೇಗದ ಅರ್ಧಶತಕ (16 ಎಸೆತ) ದಾಖಲೆ ಮುರಿಯಲು ಸಾಧ್ಯವಾಗಲಿಲ್ಲ.
  4. ಒಂದು ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳು; ಈ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು 26 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ. ಈ ಹಿಂದೆ ಈ ದಾಖಲೆ ಆಂಗ್ಲ ತಂಡದ ಹೆಸರಲ್ಲಿತ್ತು. 2019ರ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ತಂಡ 25 ಸಿಕ್ಸರ್‌ಗಳನ್ನು ಬಾರಿಸಿತ್ತು.
  5. ಇದನ್ನೂ ಓದಿ
    Image
    IND vs SA: ಕಾರ್ತಿಕ್- ಹಾರ್ದಿಕ್ ಅಬ್ಬರ.. ಅವೇಶ್- ಹರ್ಷಲ್ ಮಾರಕ ದಾಳಿ; ಭಾರತಕ್ಕೆ 82 ರನ್ ಜಯ
    Image
    ಅಬ್ಬರ ಸಿಡಿಲಬ್ಬರ: ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್
  6. ಮೂರು ಮಾದರಿಗಳಲ್ಲಿ ಮಲಾನ್ ಶತಕ: ಡೇವಿಡ್ ಮಲಾನ್ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಮಾದರಿಗಳಲ್ಲಿ ಶತಕ ಸಿಡಿಸಿದ ಎರಡನೇ ಇಂಗ್ಲೆಂಡ್ ಪುರುಷ ಆಟಗಾರ ಎನಿಸಿಕೊಂಡರು. ಇವರನ್ನು ಬಿಟ್ಟರೆ ಜೋಸ್ ಬಟ್ಲರ್ ಮಾತ್ರ ಈ ಸಾಧನೆ ಮಾಡಲು ಸಾಧ್ಯವಾಯಿತು. ಅವರು ಈ ಸಾಧನೆ ಮಾಡಿದ ಪುರುಷರ ಕ್ರಿಕೆಟ್‌ನಲ್ಲಿ 19 ನೇ ಆಟಗಾರರಾದರು.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ