ಏಕದಿನ ವಿಶ್ವಕಪ್ನ 40ನೇ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಬೆನ್ ಸ್ಟೋಕ್ಸ್ (108) ಭರ್ಜರಿ ಶತಕ ಸಿಡಿಸಿದರು. ಈ ಶತಕದ ನೆರವಿನಿಂದ ಇಂಗ್ಲೆಂಡ್ ತಂಡವು 50 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 339 ರನ್ ಕಲೆಹಾಕಿತು. 340 ರನ್ಗಳ ಬೃಹತ್ ಗುರಿ ಪಡೆದ ನೆದರ್ಲೆಂಡ್ಸ್ ತಂಡವು 37.2 ಓವರ್ಗಳಲ್ಲಿ 179 ರನ್ಗಳಿಸಿ ಆಲೌಟ್ ಆಯಿತು. ಈ ಮೂಲಕ ಇಂಗ್ಲೆಂಡ್ ತಂಡವು 160 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಏಕದಿನ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ಹಾಗೂ ನೆದರ್ಲೆಂಡ್ಸ್ ತಂಡಗಳು 7 ಬಾರಿ ಮುಖಾಮುಖಿಯಾಗಿವೆ. ಈ 7 ಪಂದ್ಯಗಳಲ್ಲೂ ಇಂಗ್ಲೆಂಡ್ ತಂಡವೇ ಗೆದ್ದಿರುವುದು ವಿಶೇಷ. ಇನ್ನು ಇಂದಿನ ಪಂದ್ಯದ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಅಂಕಪಟ್ಟಿಯಲ್ಲಿ 7ನೇ ಸ್ಥಾನಕ್ಕೇರಿದೆ.
ಇಂಗ್ಲೆಂಡ್ (ಪ್ಲೇಯಿಂಗ್ XI): ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಗಸ್ ಅಟ್ಕಿನ್ಸನ್, ಆದಿಲ್ ರಶೀದ್.
ನೆದರ್ಲೆಂಡ್ಸ್ (ಪ್ಲೇಯಿಂಗ್ XI): ವೆಸ್ಲಿ ಬ್ಯಾರೆಸಿ, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್ಮನ್, ಸೈಬ್ರಾಂಡ್ ಎಂಗೆಲ್ಬ್ರೆಕ್ಟ್, ಸ್ಕಾಟ್ ಎಡ್ವರ್ಡ್ಸ್ (ನಾಯಕ), ಬಾಸ್ ಡಿ ಲೀಡೆ, ತೇಜ ನಿಡಮನೂರು, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್ತ್, ಪಾಲ್ ವ್ಯಾನ್ ಮೀಕೆರೆನ್.
ಮೊಯೀನ್ ಅಲಿ ಎಸೆದ 38ನೇ ಓವರ್ನ 2ನೇ ಎಸೆತದಲ್ಲಿ ವ್ಯಾನ್ ಮೀಕೆರೆನ್ ಸ್ಟಂಪ್ ಔಟ್.
37.2 ಓವರ್ಗಳಲ್ಲಿ 179 ರನ್ಗಳಿಸಿ ಆಲೌಟ್ ಆದ ನೆದರ್ಲೆಂಡ್ಸ್ ತಂಡ.
______________________________________________
ಮೊಯೀನ್ ಅಲಿ ಎಸೆದ 36ನೇ ಓವರ್ನ 4ನೇ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದ ರೋಲೋಫ್ ವ್ಯಾನ್ ಡೆರ್ ಮೆರ್ವೆ.
ಕ್ರೀಸ್ನಲ್ಲಿ ಆರ್ಯನ್ ದತ್ ಹಾಗೂ ತೇಜ ನಿಡಮನೂರು ಬ್ಯಾಟಿಂಗ್.
ಗೆಲುವಿನತ್ತ ಮುನ್ನಡೆಯುತ್ತಿರುವ ಇಂಗ್ಲೆಂಡ್.
ಮೊಯೀನ್ ಅಲಿ ಎಸೆದ 34ನೇ ಓವರ್ನ 5ನೇ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ಹೊರ ನಡೆದ ಸ್ಕಾಟ್ ಎಡ್ವರ್ಡ್ಸ್.
42 ಎಸೆತಗಳಲ್ಲಿ 38 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ನೆದರ್ಲೆಂಡ್ಸ್ ತಂಡದ ನಾಯಕ ಸ್ಕಾಟ್ ಎಡ್ವರ್ಡ್ಸ್.
ಕ್ರೀಸ್ನಲ್ಲಿ ಲೋಗನ್ ವ್ಯಾನ್ ಬೀಕ್ ಹಾಗೂ ತೇಜ ನಿಡಮನೂರು ಬ್ಯಾಟಿಂಗ್.
30 ಓವರ್ಗಳ ಮುಕ್ತಾಯದ ವೇಳೆಗೆ 140 ರನ್ ಕಲೆಹಾಕಿದ ನೆದರ್ಲೆಂಡ್ಸ್.
ಕ್ರೀಸ್ನಲ್ಲಿ ಸ್ಕಾಟ್ ಎಡ್ವರ್ಡ್ಸ್ ಹಾಗೂ ತೇಜ ನಿಡಮನೂರು ಬ್ಯಾಟಿಂಗ್.
ಇನ್ನು ನೆದರ್ಲೆಂಡ್ಸ್ ತಂಡಕ್ಕೆ 20 ಓವರ್ಗಳಲ್ಲಿ 200 ರನ್ಗಳ ಅವಶ್ಯಕತೆ.
ಆದಿಲ್ ರಶೀದ್ ಎಸೆದ 26ನೇ ಓವರ್ನ 3ನೇ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆದ ಬಾಸ್ ಡಿ ಲೀಡೆ.
12 ಎಸೆತಗಳಲ್ಲಿ 10 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಬಾಸ್ ಡಿ ಲೀಡೆ.
ಕ್ರೀಸ್ನಲ್ಲಿ ಸ್ಕಾಟ್ ಎಡ್ವರ್ಡ್ಸ್ ಹಾಗೂ ತೇಜ ನಿಡಮನೂರು ಬ್ಯಾಟಿಂಗ್.
25 ಓವರ್ಗಳಲ್ಲಿ 99 ರನ್ ಕಲೆಹಾಕಿದ ನೆದರ್ಲೆಂಡ್ಸ್ ಬ್ಯಾಟರ್ಗಳು.
4 ಪ್ರಮುಖ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಇಂಗ್ಲೆಂಡ್ ಬೌಲರ್ಗಳು.
ಕ್ರೀಸ್ನಲ್ಲಿ ಸ್ಕಾಟ್ ಎಡ್ವರ್ಡ್ಸ್ ಹಾಗೂ ಬಾಸ್ ಡಿ ಲೀಡೆ ಬ್ಯಾಟಿಂಗ್.
ಇನ್ನು 15 ಓವರ್ಗಳಲ್ಲಿ ನೆದರ್ಲೆಂಡ್ಸ್ ತಂಡಕ್ಕೆ 241 ರನ್ಗಳ ಅವಶ್ಯಕತೆ.
ಡೇವಿಡ್ ವಿಲ್ಲಿ ಎಸೆದ 23ನೇ ಓವರ್ನ 4ನೇ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ಹೊರ ನಡೆದ ಸೈಬ್ರಾಂಡ್ ಎಂಗೆಲ್ಬ್ರೆಕ್ಟ್ .
49 ಎಸೆತಗಳಲ್ಲಿ 33 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಸೈಬ್ರಾಂಡ್ ಎಂಗೆಲ್ಬ್ರೆಕ್ಟ್. ಇಂಗ್ಲೆಂಡ್ ತಂಡಕ್ಕೆ 4ನೇ ಯಶಸ್ಸು.
ಕ್ರೀಸ್ನಲ್ಲಿ ಸ್ಕಾಟ್ ಎಡ್ವರ್ಡ್ಸ್ ಹಾಗೂ ಬಾಸ್ ಡಿ ಲೀಡೆ ಬ್ಯಾಟಿಂಗ್.
20 ಓವರ್ಗಳ ಮುಕ್ತಾಯದ ವೇಳೆಗೆ ನೆದರ್ಲೆಂಡ್ಸ್ ತಂಡದ ಸ್ಕೋರ್ 77 ರನ್ಗಳು.
3 ವಿಕೆಟ್ ಕಬಳಿಸಿ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ಇಂಗ್ಲೆಂಡ್ ಬೌಲರ್ಗಳು.
ಕ್ರೀಸ್ನಲ್ಲಿ ಸ್ಕಾಟ್ ಎಡ್ವರ್ಡ್ಸ್ ಹಾಗೂ ಸೈಬ್ರಾಂಡ್ ಎಂಗೆಲ್ಬ್ರೆಕ್ಟ್ ಬ್ಯಾಟಿಂಗ್.
ನೆದರ್ಲೆಂಡ್ಸ್ಗೆ 340 ರನ್ಗಳ ಗುರಿ ನೀಡಿರುವ ಇಂಗ್ಲೆಂಡ್.
17ನೇ ಓವರ್ನ 3ನೇ ಎಸೆತದಲ್ಲಿ 2 ರನ್ ಓಡುವ ಯತ್ನದಲ್ಲಿ ರನೌಟ್ ಆದ ವೆಸ್ಲಿ ಬ್ಯಾರೆಸಿ.
62 ಎಸೆತಗಳಲ್ಲಿ 37 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ವೆಸ್ಲಿ ಬ್ಯಾರೆಸಿ.
ಕ್ರೀಸ್ನಲ್ಲಿ ಸ್ಕಾಟ್ ಎಡ್ವರ್ಡ್ಸ್ ಹಾಗೂ ಸೈಬ್ರಾಂಡ್ ಎಂಗೆಲ್ಬ್ರೆಕ್ಟ್ ಬ್ಯಾಟಿಂಗ್.
ಗಸ್ ಅಟ್ಕಿನ್ಸನ್ ಎಸೆದ 15ನೇ ಓವರ್ನ ಮೊದಲ ಎಸೆತದಲ್ಲೇ ಆಫ್ ಸೈಡ್ನತ್ತ ಫೋರ್ ಬಾರಿಸಿದ ವೆಸ್ಲಿ ಬ್ಯಾರೆಸಿ.
15 ಓವರ್ಗಳ ಮುಕ್ತಾಯದ ವೇಳೆಗೆ 57 ರನ್ ಕಲೆಹಾಕಿದ ನೆದರ್ಲೆಂಡ್ಸ್ ತಂಡ.
ಕ್ರೀಸ್ನಲ್ಲಿ ವೆಸ್ಲಿ ಬ್ಯಾರೆಸಿ ಹಾಗೂ ಸೈಬ್ರಾಂಡ್ ಎಂಗೆಲ್ಬ್ರೆಕ್ಟ್ ಬ್ಯಾಟಿಂಗ್.
ಮೊಯೀನ್ ಅಲಿ ಎಸೆದ 14ನೇ ಓವರ್ನ 4ನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ವೆಸ್ಲಿ ಬ್ಯಾರೆಸಿ.
5ನೇ ಎಸೆತದಲ್ಲಿ ಬ್ಯಾರೆಸಿ ಬ್ಯಾಟ್ನಿಂದ ಮತ್ತೊಂದು ಫೋರ್.
ಈ ಫೋರ್ನೊಂದಿಗೆ ಅರ್ಧಶತಕ ಪೂರೈಸಿದ ನೆದರ್ಲೆಂಡ್ಸ್.
10 ಓವರ್ಗಳ ಮುಕ್ತಾಯದ ವೇಳೆಗೆ ಕೇವಲ 23 ರನ್ ಕಲೆಹಾಕಿದ ನೆದರ್ಲೆಂಡ್ಸ್.
ಮೊದಲ ಪವರ್ಪ್ಲೇನಲ್ಲೇ 2 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಇಂಗ್ಲೆಂಡ್.
ಕ್ರೀಸ್ನಲ್ಲಿ ವೆಸ್ಲಿ ಬ್ಯಾರೆಸಿ ಹಾಗೂ ಸೈಬ್ರಾಂಡ್ ಎಂಗೆಲ್ಬ್ರೆಕ್ಟ್ ಬ್ಯಾಟಿಂಗ್.
ನೆದರ್ಲೆಂಡ್ಸ್ಗೆ 340 ರನ್ಗಳ ಗುರಿ ನೀಡಿರುವ ಇಂಗ್ಲೆಂಡ್.
ಡೇವಿಡ್ ವಿಲ್ಲಿ ಎಸೆದ 6ನೇ ಓವರ್ನ 4ನೇ ಎಸೆತದಲ್ಲಿ ವಿಕೆಟ್ ಕೀಪರ್ ಜೋಸ್ ಬಟ್ಲರ್ಗೆ ಕ್ಯಾಚ್ ನೀಡಿದ ಕಾಲಿನ್ ಅಕರ್ಮನ್ (0).
ಇಂಗ್ಲೆಂಡ್ ತಂಡಕ್ಕೆ 2ನೇ ಯಶಸ್ಸು ತಂದುಕೊಟ್ಟ ಡೇವಿಡ್ ವಿಲ್ಲಿ.
ಕ್ರೀಸ್ನಲ್ಲಿ ವೆಸ್ಲಿ ಬ್ಯಾರೆಸಿ ಹಾಗೂ ಸೈಬ್ರಾಂಡ್ ಎಂಗೆಲ್ಬ್ರೆಕ್ಟ್ ಬ್ಯಾಟಿಂಗ್.
ಕ್ರಿಸ್ ವೋಕ್ಸ್ ಎಸೆದ 5ನೇ ಓವರ್ನ 5ನೇ ಎಸೆತದಲ್ಲಿ ಮೊಯೀನ್ ಅಲಿಗೆ ಕ್ಯಾಚ್ ನೀಡಿದ ಮ್ಯಾಕ್ಸ್ ಒಡೌಡ್ (5).
5 ಓವರ್ಗಳ ಮುಕ್ತಾಯದ ವೇಳೆಗೆ ನೆದರ್ಲೆಂಡ್ಸ್ ತಂಡದ ಸ್ಕೋರ್ 12 ರನ್ಗಳು.
ಕ್ರೀಸ್ನಲ್ಲಿ ವೆಸ್ಲಿ ಬ್ಯಾರೆಸಿ ಹಾಗೂ ಕಾಲಿನ್ ಅಕರ್ಮನ್ ಬ್ಯಾಟಿಂಗ್.
ಡೇವಿಡ್ ವಿಲ್ಲಿ ಎಸೆದ 4ನೇ ಓವರ್ನ 3ನೇ ಎಸೆತದಲ್ಲಿ ಆಕರ್ಷಕ ಫೋರ್ ಬಾರಿಸಿದ ವೆಸ್ಲಿ ಬ್ಯಾರೆಸಿ.
ಇದು ನೆದರ್ಲೆಂಡ್ಸ್ ಇನಿಂಗ್ಸ್ನ ಮೊದಲ ಬೌಂಡರಿ.
ಕ್ರೀಸ್ನಲ್ಲಿ ವೆಸ್ಲಿ ಬ್ಯಾರೆಸಿ ಹಾಗೂ ಮ್ಯಾಕ್ಸ್ ಒಡೌಡ್ ಬ್ಯಾಟಿಂಗ್.
ಮೊದಲ ಓವರ್ನಲ್ಲಿ ಕೇವಲ 2 ರನ್ ನೀಡಿದ ವೇಗಿ ಕ್ರಿಸ್ ವೋಕ್ಸ್.
ಕ್ರೀಸ್ನಲ್ಲಿ ವೆಸ್ಲಿ ಬ್ಯಾರೆಸಿ ಹಾಗೂ ಮ್ಯಾಕ್ಸ್ ಒಡೌಡ್ ಬ್ಯಾಟಿಂಗ್.
ನೆದರ್ಲೆಂಡ್ಸ್ಗೆ 340 ರನ್ಗಳ ಗುರಿ ನೀಡಿರುವ ಇಂಗ್ಲೆಂಡ್
50 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 339 ರನ್ ಕಲೆಹಾಕಿದ ಇಂಗ್ಲೆಂಡ್
ಇಂಗ್ಲೆಂಡ್ ಪರ 84 ಎಸೆತಗಳಲ್ಲಿ 108 ರನ್ ಬಾರಿಸಿ ಮಿಂಚಿದ ಅನುಭವಿ ಆಲ್ ರೌಂಡರ್ ಬೆನ್ ಸ್ಟೋಕ್ಸ್.
ನೆದರ್ಲೆಂಡ್ಸ್ ತಂಡಕ್ಕೆ 340 ರನ್ಗಳ ಕಠಿಣ ಗುರಿ ನೀಡಿದ ಇಂಗ್ಲೆಂಡ್.
ಬಾಸ್ ಲೀಡೆ ಎಸೆದ 49ನೇ ಓವರ್ನ 4ನೇ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ಔಟಾದ ಕ್ರಿಸ್ ವೋಕ್ಸ್.
45 ಎಸೆತಗಳಲ್ಲಿ 51 ರನ್ ಬಾರಿಸಿ ಮಿಂಚಿದ ಕ್ರಿಸ್ ವೋಕ್ಸ್.
ಕೊನೆಯ ಎಸೆತದಲ್ಲಿ ಡೇವಿಡ್ ವಿಲ್ಲಿ (6) ಕೂಡ ಔಟ್.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಗಸ್ ಅಟ್ಕಿಸನ್ ಬ್ಯಾಟಿಂಗ್.
ಪಾಲ್ ವ್ಯಾನ್ ಮೀಕೆರೆನ್ ಎಸೆದ 48ನೇ ಓವರ್ನ 5ನೇ ಎಸೆತದಲ್ಲಿ ರಿವರ್ಸ್ ಸ್ವೀಪ್ ಫೋರ್ ಬಾರಿಸಿದ ಬೆನ್ ಸ್ಟೋಕ್ಸ್.
ಈ ಫೋರ್ನೊಂದಿಗೆ 78 ಎಸೆತಗಳಲ್ಲಿ ಶತಕ ಪೂರೈಸಿದ ಬೆನ್ ಸ್ಟೋಕ್ಸ್.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಕ್ರಿಸ್ ವೋಕ್ಸ್ ಬ್ಯಾಟಿಂಗ್.
ಬಾಸ್ ಡಿ ಲೀಡೆ ಎಸೆದ 47ನೇ ಓವರ್ನ 3ನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ಬೆನ್ ಸ್ಟೋಕ್ಸ್.
4ನೇ ಎಸೆತದಲ್ಲಿ ಸ್ಟೋಕ್ಸ್ ಬ್ಯಾಟ್ನಿಂದ ಮತ್ತೊಂದು ಸ್ಟ್ರೈಟ್ ಹಿಟ್ ಫೋರ್.
95 ರನ್ ಬಾರಿಸಿ ಶತಕದತ್ತ ಮುನ್ನುಗ್ಗುತ್ತಿರುವ ಬೆನ್ ಸ್ಟೋಕ್ಸ್.
ಆರ್ಯನ್ ದತ್ ಎಸೆದ 45ನೇ ಓವರ್ನಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 1 ಫೋರ್ನೊಂದಿಗೆ 24 ರನ್ ಚಚ್ಚಿದ ಬೆನ್ ಸ್ಟೋಕ್ಸ್.
45 ಓವರ್ಗಳ ಮುಕ್ತಾಯದ ವೇಳೆಗೆ 270 ರನ್ ಕಲೆಹಾಕಿದ ಇಂಗ್ಲೆಂಡ್.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಕ್ರಿಸ್ ವೋಕ್ಸ್ ಬ್ಯಾಟಿಂಗ್.
ಬಾಸ್ ಡಿ ಲೀಡೆ ಎಸೆದ 43ನೇ ಓವರ್ನ 2ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಬೆನ್ ಸ್ಟೋಕ್ಸ್.
ಈ ಸಿಕ್ಸ್ನೊಂದಿಗೆ 58 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸ್ಟೋಕ್ಸ್.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಕ್ರಿಸ್ ವೋಕ್ಸ್ ಬ್ಯಾಟಿಂಗ್.
ಕಾಲಿನ್ ಅಕರ್ಮನ್ ಎಸೆದ 40ನೇ ಓವರ್ನ 2ನೇ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ಕ್ರಿಸ್ ವೋಕ್ಸ್.
40 ಓವರ್ಗಳ ಮುಕ್ತಾಯದ ವೇಳೆಗೆ ಇಂಗ್ಲೆಂಡ್ ತಂಡದ ಸ್ಕೋರ್ 215 ರನ್ಗಳು.
6 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ನೆದರ್ಲೆಂಡ್ಸ್ ಬೌಲರ್ಗಳು.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ (44) ಹಾಗೂ ಕ್ರಿಸ್ ವೋಕ್ಸ್ (15) ಬ್ಯಾಟಿಂಗ್.
ಆರ್ಯನ್ ದತ್ ಎಸೆದ 36ನೇ ಓವರ್ನ 2ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದ ಮೊಯೀನ್ ಅಲಿ.
15 ಎಸೆತಗಳಲ್ಲಿ ಕೇವಲ 4 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಎಡಗೈ ದಾಂಡಿಗ ಮೊಯೀನ್ ಅಲಿ.
35 ಓವರ್ಗಳ ಮುಕ್ತಾಯದ ವೇಳೆಗೆ ಇಂಗ್ಲೆಂಡ್ ತಂಡದ ಸ್ಕೋರ್ 191 ರನ್ಗಳು.
ಇದುವರೆಗೆ 5 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ನೆದರ್ಲೆಂಡ್ಸ್.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ (35) ಹಾಗೂ ಜೋಸ್ ಬಟ್ಲರ್ (4) ಬ್ಯಾಟಿಂಗ್.
ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ ಹಾಗೂ ಜೋ ರೂಟ್..ಔಟ್.
ಪಾಲ್ ವ್ಯಾನ್ ಮೀಕೆರನ್ ಎಸೆದ 31ನೇ ಓವರ್ನ ಮೊದಲ ಎಸೆತದಲ್ಲೇ ಮಿಡ್ ಲಾಂಗ್ ಆಫ್ನಲ್ಲಿ ಕ್ಯಾಚ್ ನೀಡಿದ ಜೋಸ್ ಬಟ್ಲರ್.
11 ಎಸೆತಗಳಲ್ಲಿ ಕೇವಲ 5 ರನ್ ಬಾರಿಸಿ ನಿರ್ಗಮಿಸಿದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್.
30 ಓವರ್ಗಳ ಮುಕ್ತಾಯದ ವೇಳೆಗೆ ಇಂಗ್ಲೆಂಡ್ ತಂಡದ ಸ್ಕೋರ್ 178 ರನ್ಗಳು.
4 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ನೆದರ್ಲೆಂಡ್ಸ್ ಬೌಲರ್ಗಳು.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ (27) ಹಾಗೂ ಜೋಸ್ ಬಟ್ಲರ್ (5) ಬ್ಯಾಟಿಂಗ್.
ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಹ್ಯಾರಿ ಬ್ರೂಕ್ ಹಾಗೂ ಜೋ ರೂಟ್..ಔಟ್.
ಬಾಸ್ ಡಿ ಲೀಡೆ ಎಸೆದ 25ನೇ ಓವರ್ನ ಮೊದಲ ಎಸೆತದಲ್ಲೇ ಆಫ್ ಸೈಡ್ನತ್ತ ಫೋರ್ ಬಾರಿಸಿದ ಬೆನ್ ಸ್ಟೋಕ್ಸ್.
25 ಓವರ್ಗಳ ಮುಕ್ತಾಯದ ವೇಳೆಗೆ ಇಂಗ್ಲೆಂಡ್ ತಂಡದ ಸ್ಕೋರ್ 155 ರನ್ಗಳು.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಹ್ಯಾರಿ ಬ್ರೂಕ್ ಬ್ಯಾಟಿಂಗ್.
ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್ ಹಾಗೂ ಜೋ ರೂಟ್..ಔಟ್.
22ನೇ ಓವರ್ನ ಕೊನೆಯ ಎಸೆತದಲ್ಲಿ ವ್ಯಾನ್ ಬೀಕ್ ಮಾಡಿದ ಅತ್ಯುತ್ತಮ ಫೀಲ್ಡಿಂಗ್ನಿಂದ ರನೌಟ್ ಆಗಿ ಹೊರ ನಡೆದ ಡೇವಿಡ್ ಮಲಾನ್.
74 ಎಸೆತಗಳಲ್ಲಿ 87 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಡೇವಿಡ್ ಮಲಾನ್.
ಲೋಗನ್ ವ್ಯಾನ್ ಬೀಕ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದ ಜೋ ರೂಟ್.
35 ಎಸೆತಗಳಲ್ಲಿ 28 ರನ್ ಬಾರಿಸಿ ಇನಿಂಗ್ಸ್ ಅಂತ್ಯಗೊಳಿಸಿದ ಇಂಗ್ಲೆಂಡ್ ತಂಡದ ಅನುಭವಿ ಬ್ಯಾಟರ್ ಜೋ ರೂಟ್.
ಕ್ರೀಸ್ನಲ್ಲಿ ಬೆನ್ ಸ್ಟೋಕ್ಸ್ ಹಾಗೂ ಡೇವಿಡ್ ಮಲಾನ್ ಬ್ಯಾಟಿಂಗ್.
20 ಓವರ್ಗಳಲ್ಲಿ 132 ರನ್ ಕಲೆಹಾಕಿದ ಇಂಗ್ಲೆಂಡ್ ಬ್ಯಾಟರ್ಗಳು.
34 ಎಸೆತಗಳಲ್ಲಿ 28 ರನ್ ಬಾರಿಸಿರುವ ಜೋ ರೂಟ್.
69 ಎಸೆತಗಳಲ್ಲಿ 84 ರನ್ಗಳೊಂದಿಗೆ ಶತಕದತ್ತ ಮುನ್ನುಗ್ಗುತ್ತಿರುವ ಜೋ ರೂಟ್.
ಜಾನಿ ಬೈರ್‌ಸ್ಟೋವ್ (15) ವಿಕೆಟ್ ಪಡೆಯಲು ಮಾತ್ರ ಯಶಸ್ವಿಯಾಗಿರುವ ನೆದರ್ಲೆಂಡ್ಸ್ ತಂಡ.
18 ಓವರ್ಗಳಲ್ಲಿ 117 ರನ್ ಬಾರಿಸಿರುವ ಇಂಗ್ಲೆಂಡ್ ಬ್ಯಾಟರ್ಗಳು.
75 ರನ್ಗಳೊಂದಿಗೆ ಭರ್ಜರಿ ಬ್ಯಾಟಿಂಗ್ ಮುಂದುವರೆಸಿರುವ ಆರಂಭಿಕ ಆಟಗಾರ ಡೇವಿಡ್ ಮಲಾನ್.
ಕ್ರೀಸ್ನಲ್ಲಿ ಜೋ ರೂಟ್ ಹಾಗೂ ಡೇವಿಡ್ ಮಲಾನ್ ಬ್ಯಾಟಿಂಗ್.
13 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 82 ರನ್ ಕಲೆಹಾಕಿದ ಇಂಗ್ಲೆಂಡ್.
ಅರ್ಧಶತಕ ಬಾರಿಸಿ ಭರ್ಜರಿ ಬ್ಯಾಟಿಂಗ್ ಮುಂದುವರೆಸಿರುವ ಎಡಗೈ ದಾಂಡಿಗ ಡೇವಿಡ್ ಮಲಾನ್.
ಇಂಗ್ಲೆಂಡ್ ಪರ ಕ್ರೀಸ್ನಲ್ಲಿ ಜೋ ರೂಟ್ ಹಾಗೂ ಡೇವಿಡ್ ಮಲಾನ್ ಬ್ಯಾಟಿಂಗ್.
10 ಓವರ್ಗಳ ಮುಕ್ತಾಯದ ವೇಳೆಗೆ ಇಂಗ್ಲೆಂಡ್ ತಂಡದ ಸ್ಕೋರ್ 70 ರನ್ಗಳು.
ಜಾನಿ ಬೈರ್‌ಸ್ಟೋವ್ (15) ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರುವ ನೆದರ್ಲೆಂಡ್ಸ್.
ಕ್ರೀಸ್ನಲ್ಲಿ ಬಲಗೈ ಬ್ಯಾಟರ್ ಜೋ ರೂಟ್ ಹಾಗೂ ಎಡಗೈ ದಾಂಡಿಗ ಡೇವಿಡ್ ಮಲಾನ್ ಬ್ಯಾಟಿಂಗ್.
ಲೋಗನ್ ವ್ಯಾನ್ ಬೀಕ್ ಎಸೆದ 8ನೇ ಓವರ್ನಲ್ಲಿ ಮೂರು ಫೋರ್ಗಳನ್ನು ಬಾರಿಸಿ ಅಬ್ಬರಿಸಿದ ಡೇವಿಡ್ ಮಲಾನ್.
ಈಗಾಗಲೇ 9 ಫೋರ್ಗಳೊಂದಿಗೆ 45 ರನ್ ಕಲೆಹಾಕಿರುವ ಮಲಾನ್.
ಕ್ರೀಸ್ನಲ್ಲಿ ಜೋ ರೂಟ್ ಹಾಗೂ ಡೇವಿಡ್ ಮಲಾನ್ ಬ್ಯಾಟಿಂಗ್.
ಆರ್ಯನ್ ದತ್ ಎಸೆದ 7ನೇ ಓವರ್ನ ಕೊನೆಯ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿದ ಜಾನಿ ಬೈರ್‌ಸ್ಟೋವ್.
17 ಎಸೆತಗಳಲ್ಲಿ 15 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಜಾನಿ ಬೈರ್‌ಸ್ಟೋವ್.
ನೆದರ್ಲೆಂಡ್ಸ್ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟ ಆರ್ಯನ್ ದತ್.
5 ಓವರ್ಗಳ ಮುಕ್ತಾಯದ ವೇಳೆಗೆ 42 ರನ್ ಕಲೆಹಾಕಿದ ಇಂಗ್ಲೆಂಡ್.
ಮೊದಲ ಐದು ಓವರ್ಗಳಲ್ಲಿ ದುಬಾರಿಯಾದ ನೆದರ್ಲೆಂಡ್ಸ್ ಬೌಲರ್ಗಳು.
ಕ್ರೀಸ್ನಲ್ಲಿ ಬಲಗೈ ಬ್ಯಾಟರ್ ಜಾನಿ ಬೈರ್‌ಸ್ಟೋವ್ ಹಾಗೂ ಎಡಗೈ ದಾಂಡಿಗ ಡೇವಿಡ್ ಮಲಾನ್ ಬ್ಯಾಟಿಂಗ್.
ಆರ್ಯನ್ ದತ್ ಎಸೆದ 3ನೇ ಓವರ್ನಲ್ಲೂ ಬ್ಯಾಕ್ ಟು ಬ್ಯಾಕ್ 2 ಫೋರ್ ಬಾರಿಸಿದ ಡೇವಿಡ್ ಮಲಾನ್.
ಕ್ರೀಸ್ನಲ್ಲಿ ಜಾನಿ ಬೈರ್‌ಸ್ಟೋವ್ ಹಾಗೂ ಡೇವಿಡ್ ಮಲಾನ್ ಬ್ಯಾಟಿಂಗ್.
ಲೋಗನ್ ವ್ಯಾನ್ ಬೀಕ್ ಎಸೆದ 2ನೇ ಓವರ್ನಲ್ಲಿ ಹ್ಯಾಟ್ರಿಕ್ ಫೋರ್ ಬಾರಿಸಿದ ಡೇವಿಡ್ ಮಲಾನ್.
2ನೇ ಓವರ್ನಲ್ಲಿ ಒಟ್ಟು 16 ರನ್ ನೀಡಿದ ವ್ಯಾನ್ ಬೀಕ್.
ಕ್ರೀಸ್ನಲ್ಲಿ ಜಾನಿ ಬೈರ್‌ಸ್ಟೋವ್ ಹಾಗೂ ಡೇವಿಡ್ ಮಲಾನ್ ಬ್ಯಾಟಿಂಗ್.
ಆರ್ಯನ್ ದತ್ ಎಸೆದ ಮೊದಲ ಓವರ್ನ 4ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಫೋರ್ ಬಾರಿಸಿದ ಜಾನಿ ಬೈರ್‌ಸ್ಟೋವ್.
ಕ್ರೀಸ್ನಲ್ಲಿ ಜಾನಿ ಬೈರ್‌ಸ್ಟೋವ್ ಹಾಗೂ ಡೇವಿಡ್ ಮಲಾನ್ ಬ್ಯಾಟಿಂಗ್.
ನೆದರ್ಲೆಂಡ್ಸ್ (ಪ್ಲೇಯಿಂಗ್ XI): ವೆಸ್ಲಿ ಬ್ಯಾರೆಸಿ, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್ಮನ್, ಸೈಬ್ರಾಂಡ್ ಎಂಗೆಲ್ಬ್ರೆಕ್ಟ್, ಸ್ಕಾಟ್ ಎಡ್ವರ್ಡ್ಸ್ (ನಾಯಕ), ಬಾಸ್ ಡಿ ಲೀಡೆ, ತೇಜಾ ನಿಡಮನೂರು, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್ತ್, ಪಾಲ್ ವ್ಯಾನ್ ಮೀಕೆರೆನ್.
ಇಂಗ್ಲೆಂಡ್ (ಪ್ಲೇಯಿಂಗ್ XI): ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಗಸ್ ಅಟ್ಕಿನ್ಸನ್, ಆದಿಲ್ ರಶೀದ್.
ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
Published On - 1:33 pm, Wed, 8 November 23