ENG vs NZ: ಕಿವೀಸ್ ಮಣಿಸಿದ ಆಂಗ್ಲರಿಗೆ ದಂಡದ ಬರೆ ಎಳೆದ ಐಸಿಸಿ! ಬೆನ್ ಸ್ಟೋಕ್ಸ್ ಬಳಗಕ್ಕೆ ಗೆಲುವಿನಲ್ಲೂ ನಿರಾಸೆ

ENG vs NZ: ಇಂಗ್ಲೆಂಡ್‌ಗೆ ಪಂದ್ಯ ಶುಲ್ಕದ ಶೇಕಡಾ 40ರಷ್ಟು ದಂಡ ವಿಧಿಸಲಾಗಿದ್ದು, ನಿಧಾನಗತಿಯ ಓವರ್‌ರೇಟ್‌ನಿಂದಾಗಿ ಇಂಗ್ಲೆಂಡ್‌ಗೆ ಈ ಶಿಕ್ಷೆ ವಿಧಿಸಲಾಗಿದೆ.

ENG vs NZ: ಕಿವೀಸ್ ಮಣಿಸಿದ ಆಂಗ್ಲರಿಗೆ ದಂಡದ ಬರೆ ಎಳೆದ ಐಸಿಸಿ! ಬೆನ್ ಸ್ಟೋಕ್ಸ್ ಬಳಗಕ್ಕೆ ಗೆಲುವಿನಲ್ಲೂ ನಿರಾಸೆ
England defeated New Zealand
Follow us
TV9 Web
| Updated By: ಪೃಥ್ವಿಶಂಕರ

Updated on: Jun 15, 2022 | 6:52 PM

ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿದ ಇಂಗ್ಲೆಂಡ್ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ವಶಪಡಿಸಿಕೊಂಡಿದೆ. ಬೆನ್ ಸ್ಟೋಕ್ಸ್ (Ben Stokes) ನಾಯಕನಾಗಿ ತಮ್ಮ ವೃತ್ತಿಜೀವನದ ಮೊದಲ ಟೆಸ್ಟ್ ಸರಣಿಯನ್ನು ವಶಪಡಿಸಿಕೊಂಡಿದ್ದಾರೆ. ತವರಿನಲ್ಲಿ ಅದ್ಭುತ ಜಯ ದಾಖಲಿಸಿದ ಬೆನ್ನಲ್ಲೇ ಬೆನ್ ಸ್ಟೋಕ್ಸ್ ಅಂಡ್ ಕಂಪನಿಗೆ ದೊಡ್ಡ ಹೊಡೆತ ನೀಡಿದ ಐಸಿಸಿ (ICC) ಇಂಗ್ಲೆಂಡ್ ತಂಡಕ್ಕೆ ಭಾರಿ ದಂಡ ವಿಧಿಸಿದೆ. ಇಂಗ್ಲೆಂಡ್‌ಗೆ ಪಂದ್ಯ ಶುಲ್ಕದ ಶೇಕಡಾ 40ರಷ್ಟು ದಂಡ ವಿಧಿಸಲಾಗಿದ್ದು, ನಿಧಾನಗತಿಯ ಓವರ್‌ರೇಟ್‌ನಿಂದಾಗಿ ಇಂಗ್ಲೆಂಡ್‌ಗೆ ಈ ಶಿಕ್ಷೆ ವಿಧಿಸಲಾಗಿದೆ. ಅಷ್ಟೇ ಅಲ್ಲ, ತಂಡದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (World Test Championship) ಪಾಯಿಂಟ್‌ನ 2 ಪ್ರಮುಖ ಅಂಕಗಳನ್ನು ಸಹ ಕಡಿತಗೊಳಿಸಲಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲೂ ಹಿನ್ನಡೆ

ಇದನ್ನೂ ಓದಿ
Image
IND vs SA: 69 ಬ್ಯಾಟರ್​ಗಳನ್ನು ಹಿಂದಿಕ್ಕಿ ಟಿ20 ರ‍್ಯಾಂಕಿಂಗ್​ನಲ್ಲಿ ಟಾಪ್​ 10ರೊಳಗೆ ಸ್ಥಾನ ಪಡೆದ ಇಶಾನ್ ಕಿಶನ್
Image
IND vs SA: ಯಾವ ಸಿನಿಮಾ ನಟಿಯರಿಗೂ ಕಮ್ಮಿಯಿಲ್ಲ ಸೌತ್ ಆಫ್ರಿಕಾ ಕ್ರಿಕೆಟಿಗರ ಮಡದಿಯರು; ಫೋಟೋ ನೋಡಿ
Image
Virat Kohli: ಮಡದಿ, ಮಗಳೊಂದಿಗೆ ರಜೆ ಮುಗಿಸಿ ಬಂದ ಕೊಹ್ಲಿ ಸೀದಾ ಹೋಗಿದ್ದು ಆಸ್ಪತ್ರೆಗೆ..! ಕಾರಣವೇನು?

ಆಟಗಾರರು ಮತ್ತು ಆಟಗಾರರ ಬೆಂಬಲಿಗ ಸಿಬ್ಬಂದಿಗೆ ಕನಿಷ್ಠ ಓವರ್ ರೇಟ್ ಅಪರಾಧಗಳ ಮೇಲಿನ ICC ನೀತಿ ಸಂಹಿತೆಯ ಆರ್ಟಿಕಲ್ 2.22 ರ ಅನುಸಾರವಾಗಿ ಸೂಚಿಸಲಾದ ಮಿತಿಯೊಳಗೆ ಬೌಲಿಂಗ್ ಮಾಡಲು ವಿಫಲವಾದರೆ ಪ್ರತಿ ಓವರ್‌ಗೆ ಆಟಗಾರನ ಪಂದ್ಯ ಶುಲ್ಕದ 20 ಪ್ರತಿಶತದಷ್ಟು ದಂಡವನ್ನು ಹಾಕಲಾಗುತ್ತದೆ. ಇದರೊಂದಿಗೆ, ICC ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಆಟದ ಪರಿಸ್ಥಿತಿಗಳ ಆರ್ಟಿಕಲ್ 16.11.2 ರ ಪ್ರಕಾರ, ತಂಡಕ್ಕೆ ಪ್ರತಿ ಓವರ್‌ಗೆ ಒಂದು ಅಂಕವನ್ನು ಕಡಿಮೆಗೊಳಿಸಲಾಗುತ್ತದೆ. ಈ ಕಾರಣಕ್ಕಾಗಿ, ಇಂಗ್ಲೆಂಡ್‌ನ ಒಟ್ಟು ಸ್ಕೋರ್‌ನಿಂದ 2 ಅಂಕಗಳನ್ನು ಕಡಿತಗೊಳಿಸಲಾಗಿದೆ. ಇಂಗ್ಲೆಂಡ್ ನಿಗದಿತ ಮಿತಿಗಿಂತ 2 ಓವರ್‌ಗಳನ್ನು ಕಡಿಮೆ ಹಾಕಿತ್ತು.

ಇದನ್ನೂ ಓದಿ:IND vs SA: 69 ಬ್ಯಾಟರ್​ಗಳನ್ನು ಹಿಂದಿಕ್ಕಿ ಟಿ20 ರ‍್ಯಾಂಕಿಂಗ್​ನಲ್ಲಿ ಟಾಪ್​ 10ರೊಳಗೆ ಸ್ಥಾನ ಪಡೆದ ಇಶಾನ್ ಕಿಶನ್

ಶಿಕ್ಷೆ ಸ್ವೀಕರಿಸಿದ ಕ್ಯಾಪ್ಟನ್ ಸ್ಟೋಕ್ಸ್

ಐಸಿಸಿ ಹೇಳಿಕೆ ಪ್ರಕಾರ, ಕ್ಯಾಪ್ಟನ್ ಸ್ಟೋಕ್ಸ್ ಶಿಕ್ಷೆಯನ್ನು ಒಪ್ಪಿಕೊಂಡಿದ್ದಾರೆ. ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಬಗ್ಗೆ ಮಾತನಾಡುವುದಾದರೆ, ಜಾನಿ ಬೈರ್‌ಸ್ಟೋವ್ ಇಂಗ್ಲೆಂಡ್ ಪರ ಅತಿ ವೇಗದ ಟೆಸ್ಟ್ ಶತಕ ಗಳಿಸಿದರು. ಅವರು ಕೇವಲ 77 ಎಸೆತಗಳಲ್ಲಿ ಶತಕ ಗಳಿಸಿದರು. ಬೈರ್‌ಸ್ಟೋವ್ ಅವರ ಅದ್ಭುತ ಇನ್ನಿಂಗ್ಸ್‌ನಿಂದ ಇಂಗ್ಲೆಂಡ್ ಎರಡನೇ ಟೆಸ್ಟ್ ಅನ್ನು 5 ವಿಕೆಟ್‌ಗಳಿಂದ ಗೆದ್ದು 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಇಬ್ಬರ ನಡುವಿನ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಜೂನ್ 23 ರಿಂದ ಲೀಡ್ಸ್​ನಲ್ಲಿ ನಡೆಯಲಿದೆ. ಗಾಯದ ಸಮಸ್ಯೆಯಿಂದಾಗಿ ಎರಡನೇ ಟೆಸ್ಟ್‌ನಿಂದ ಹೊರಗುಳಿದಿರುವ ನಾಯಕ ಕೇನ್ ವಿಲಿಯಮ್ಸನ್ ಮೂರನೇ ಪಂದ್ಯದಲ್ಲಿ ಆಡುತ್ತಾರೆ ಎಂದು ನ್ಯೂಜಿಲೆಂಡ್ ತಂಡ ಆಶಿಸುತ್ತಿದೆ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ