ENG vs NZ: ಇಂಗ್ಲೆಂಡ್ vs ನ್ಯೂಝಿಲೆಂಡ್ ಬಲಾಬಲದಲ್ಲಿ ಸಮಬಲ..!

England vs New Zealand: ಇಂಗ್ಲೆಂಡ್-ನ್ಯೂಝಿಲೆಂಡ್ ಏಕದಿನ ಕ್ರಿಕೆಟ್​ನಲ್ಲಿ 95 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಇಂಗ್ಲೆಂಡ್ 45 ಬಾರಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 44 ಮ್ಯಾಚ್​ಗಳಲ್ಲಿ ಗೆಲುವು ಸಾಧಿಸಿದೆ. ಇನ್ನು 2 ಪಂದ್ಯ ಟೈ ಆದರೆ, 4 ಮ್ಯಾಚ್​ಗಳು ರದ್ದಾಗಿದೆ.

ENG vs NZ: ಇಂಗ್ಲೆಂಡ್ vs ನ್ಯೂಝಿಲೆಂಡ್ ಬಲಾಬಲದಲ್ಲಿ ಸಮಬಲ..!
England vs New Zealand
Follow us
| Updated By: ಝಾಹಿರ್ ಯೂಸುಫ್

Updated on: Oct 04, 2023 | 11:02 PM

ಏಕದಿನ ವಿಶ್ವಕಪ್​ ಕ್ರಿಕೆಟ್ ಮಹಾಸಮರಕ್ಕೆ ವೇದಿಕೆ ಸಿದ್ಧವಾಗಿದೆ. ಅಕ್ಟೋಬರ್ 5 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ವರ್ಲ್ಡ್​ಕಪ್​ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಕಳೆದ ಬಾರಿಯ ರನ್ನರ್ಸ್ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಹೀಗಾಗಿಯೇ ಮೊದಲ ಪಂದ್ಯದಲ್ಲೇ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಇಲ್ಲಿ ಉಭಯ ತಂಡಗಳು ಬಲಿಷ್ಠ ಆಟಗಾರರನ್ನು ಒಳಗೊಂಡಿರುವುದು ಇದೀಗ ಕದನ ಕುತೂಹಲವನ್ನು ಹೆಚ್ಚಿಸಿದೆ. ಏಕೆಂದರೆ ಎರಡೂ ತಂಡಗಳಲ್ಲೂ ಆಲ್​ರೌಂಡರ್​ಗಳ ದಂಡೇ ಇದ್ದು, ಹೀಗಾಗಿ ರಣರೋಚಕ ಹೋರಾಟವನ್ನು ಎದುರು ನೋಡಬಹುದು.

ಯಾರು ಬಲಿಷ್ಠ?

ಇಂಗ್ಲೆಂಡ್-ನ್ಯೂಝಿಲೆಂಡ್ ಏಕದಿನ ಕ್ರಿಕೆಟ್​ನಲ್ಲಿ 95 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಇಂಗ್ಲೆಂಡ್ 45 ಬಾರಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 44 ಮ್ಯಾಚ್​ಗಳಲ್ಲಿ ಗೆಲುವು ಸಾಧಿಸಿದೆ. ಇನ್ನು 2 ಪಂದ್ಯ ಟೈ ಆದರೆ, 4 ಮ್ಯಾಚ್​ಗಳು ರದ್ದಾಗಿದೆ. ಅಂದರೆ ಇಲ್ಲಿ ಉಭಯ ತಂಡಗಳು ಸಮಬಲ ಹೊಂದಿದೆ ಎನ್ನಬಹುದು.

ಇನ್ನು ಏಕದಿನ ವಿಶ್ವಕಪ್​ನಲ್ಲಿ ಉಭಯ ತಂಡಗಳು 10 ಪಂದ್ಯಗಳಲ್ಲಿ ಎದುರು ಬದುರಾಗಿದ್ದು, ಈ ವೇಳೆ ತಲಾ 5 ಪಂದ್ಯಗಳಲ್ಲಿ ಎರಡೂ ತಂಡಗಳು ಜಯ ಸಾಧಿಸಿದೆ. ಇಲ್ಲೂ ಕೂಡ ಸಮಬಲವನ್ನು ಹೊಂದಿದೆ. ಇದಾಗ್ಯೂ ಈ ವರ್ಷ ಉಭಯ ತಂಡಗಳು ಇಂಗ್ಲೆಂಡ್​ನಲ್ಲಿ 4 ಏಕದಿನ ಪಂದ್ಯಗಳನ್ನಾಡಿದೆ. ಈ ವೇಳೆ ಇಂಗ್ಲೆಂಡ್ 3 ರಲ್ಲಿ ಗೆದ್ದರೆ, ನ್ಯೂಝಿಲೆಂಡ್ 1 ಪಂದ್ಯ ಜಯಿಸಿದೆ. ಆದರೆ ಈ ಬಾರಿ ಉಭಯ ತಂಡಗಳು ತಟಸ್ಥ ಸ್ಥಳದಲ್ಲಿ ಆಡುತ್ತಿರುವುದು ವಿಶೇಷ.

ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿ:

ಈ ಬಾರಿ ಉಭಯ ತಂಡಗಳು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗುತ್ತಿದೆ. ಈ ಮೈದಾನದಲ್ಲಿ ಇಂಗ್ಲೆಂಡ್ 2 ಪಂದ್ಯಗಳನ್ನಾಡಿದೆ. ಇದರಲ್ಲಿ ಗೆದ್ದಿರುವುದು 1 ಮ್ಯಾಚ್ ಮಾತ್ರ.

ಇನ್ನು ಇದೇ ಮೈದಾನದಲ್ಲಿ ನ್ಯೂಝಿಲೆಂಡ್ ಆಡಿದ 2 ಪಂದ್ಯಗಳನ್ನೂ ಕೂಡ ಗೆದ್ದುಕೊಂಡಿದೆ. ಹೀಗಾಗಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೂರನೇ ಬಾರಿ ಗೆಲ್ಲುವ ವಿಶ್ವಾಸದಲ್ಲಿದೆ.

ಇಲ್ಲಿ ಅಂಕಿ ಅಂಶಗಳ ಪ್ರಕಾರ ಉಭಯ ತಂಡಗಳು ಸಮಬಲ ಹೊಂದಿರುವುದು ಸ್ಪಷ್ಟ. ಇದಾಗ್ಯೂ ನ್ಯೂಝಿಲೆಂಡ್ ತಂಡ ಕಳೆದ ಬಾರಿಯ ಫೈನಲ್ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದ್ದರೆ, ಇತ್ತ ಇಂಗ್ಲೆಂಡ್ ತಂಡವು ಚಾಂಪಿಯನ್​ ಪಟ್ಟದೊಂದಿಗೆ ಶುಭಾರಂಭ ಮಾಡುವ ಇರಾದೆಯಲ್ಲಿದೆ. ಹೀಗಾಗಿ ಮೊದಲ ಪಂದ್ಯದಲ್ಲೇ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್.

ಇದನ್ನೂ ಓದಿ: ಏಕದಿನ ವಿಶ್ವಕಪ್​ನ​ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ನ್ಯೂಝಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು