ENG vs NZ ICC WC Match Preview: ಏಕದಿವ ವಿಶ್ವಕಪ್ ಟೂರ್ನಿಗೆ ಇಂದು ಚಾಲನೆ: ಇಂಗ್ಲೆಂಡ್-ನ್ಯೂಝಿಲೆಂಡ್ ನಡುವೆ ಹೈವೋಲ್ಟೇಜ್ ಪಂದ್ಯ
England vs New Zealand ICC world Cup 2023: ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಇಂದು ಇಂಗ್ಲೆಂಡ್- ನ್ಯೂಝಿಲೆಂಡ್ ಮುಖಾಮುಖಿ ಆಗಲಿದೆ. ನ್ಯೂಝಿಲೆಂಡ್ ತಂಡಕ್ಕೆ ಇದೊಂದು ಸೇಡಿನ ಪಂದ್ಯ ಕೂಡ ಹೌದು. ಯಾಕೆಂದರೆ ಐಸಿಸಿ ವಿಶ್ವಕಪ್ 2019 ರ ಫೈನಲ್‌ನಲ್ಲಿ ಉಭಯ ತಂಡಗಳು ಮುಖಾಮುಖಿ ಆಗಿದ್ದವು. ಇದರಲ್ಲಿ ಇಂಗ್ಲೆಂಡ್ ರೋಚಕ ಗೆಲುವು ಸಾಧಿಸಿ ಟ್ರೋಫಿ ಎತ್ತಿ ಹಿಡಿದಿತ್ತು.
ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ (ICC World Cup) ಟೂರ್ನಿಗೆ ಇಂದು ಚಾಲನೆ ಸಿಗಲಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ಮತ್ತು ಟಾಮ್ ಲ್ಯಾಥಮ್ ನೇತೃತ್ವದ ನ್ಯೂಝಿಲೆಂಡ್ ಮುಖಾಮುಖಿ ಆಗಲಿದೆ. ಇದು ಹೈವೋಲ್ಟೇಜ್ ಮ್ಯಾಚ್ ಆಗುವುದು ಖಚಿತ. ಯಾಕೆಂದರೆ ಐಸಿಸಿ ವಿಶ್ವಕಪ್ 2019 ರ ಫೈನಲ್‌ನಲ್ಲಿ ಉಭಯ ತಂಡಗಳು ಮುಖಾಮುಖಿ ಆಗಿದ್ದವು. ಇದರಲ್ಲಿ ಇಂಗ್ಲೆಂಡ್ ರೋಚಕ ಗೆಲುವು ಸಾಧಿಸಿ ಟ್ರೋಫಿ ಎತ್ತಿ ಹಿಡಿದಿತ್ತು.
ನ್ಯೂಝಿಲೆಂಡ್ ತಂಡಕ್ಕೆ ಇದೊಂದು ಸೇಡಿನ ಪಂದ್ಯ ಕೂಡ ಹೌದು. ಆದರೆ, ಟೀಮ್ಗೆ ದೊಡ್ಡ ಹಿನ್ನಡೆ ಎಂದರೆ ನಾಯಕ ಕೇನ್ ವಿಲಿಯಮ್ಸನ್ ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಇವರು ಆರಂಭಿಕ ಪಂದ್ಯವನ್ನು ಕಳೆದುಕೊಳ್ಳಲಿದ್ದಾರೆ. ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ಟಾಮ್ ಲ್ಯಾಥಮ್ ಕಿವೀಸ್ ಪಡೆಯನ್ನು ಮುನ್ನಡೆಸುತ್ತಿದ್ದಾರೆ. ಡೆವೊನ್ ಕಾನ್ವೇ, ವಿಲ್ ಯಂಗ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್ರಂತೆ ಅಪಾಯಕಾರಿ ಆಟಗಾರರನ್ನು ಹೊಂದಿದೆ. ಟ್ರೆಂಟ್ ಬೌಲ್ಟ್, ಟಿಮ್ ಸೌಥಿ, ಮಿಚೆಲ್ ಸ್ಯಾಂಟ್ನರ್, ಜಿಮ್ಮಿ ನೀಶಮ್ರಂತಹ ಮಾರಕ ಬೌಲರ್ಗಳಿದ್ದಾರೆ.
‘ಎಂದಿಗೂ ಮುಗಿಯದ ಪ್ರೇಮಕಥೆ’; ಪಾಕ್ ಆಟಗಾರರ ಕಾಲೆಳೆದ ಶಿಖರ್ ಧವನ್
ಇತ್ತ ಆಂಗ್ಲರ ಪಡೆ ಬಲಿಷ್ಠವಾಗಿದೆ. ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ಜೋ ರೂಟ್ ಮತ್ತು ಜೋಸ್ ಬಟ್ಲರ್ ಅವರನ್ನೊಳಗೊಂಡ ಇಂಗ್ಲೆಂಡ್ ಆಕ್ರಮಣಕಾರಿ ಬ್ಯಾಟಿಂಗ್ ವಿಭಾಗವನ್ನು ಹೊಂದಿದೆ. ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ ಹಾಗೂ ಸ್ಯಾಮ್ ಕರನ್ರಂತಹ ಆಲ್ರೌಂಡರ್ ಕೂಡ ತಂಡದಲ್ಲಿದ್ದಾರೆ. ಮಾರ್ಕ್ ವುಡ್, ಡೇವಿಡ್ ವಿಲ್ಲಿ, ಆದಿಲ್ ರಶೀದ್ರಂತಹ ಮಾರಕ ಬೌಲರ್ಗಳಿದ್ದಾರೆ.
ಪಿಚ್ ವರದಿ:
ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಸರು ಪಡೆದುಕೊಂಡಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ. ಪಂದ್ಯದ ಆರಂಭದಲ್ಲಿ ಬ್ಯಾಟಿಂಗ್‌ಗೆ ಯೋಗ್ಯವಾಗಿದ್ದರೆ, ಪಂದ್ಯ ಸಾಗುತ್ತಿದ್ದಂತೆ ಇಲ್ಲಿನ ವಿಕೆಟ್ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಲಿದ್ದಾರೆ. ಇಲ್ಲಿರುವ ಕಪ್ಪು ಮಣ್ಣಿನ ಪಿಚ್‌ಗಳು ಉತ್ತಮ ಬೌನ್ಸ್‌ನೊಂದಿಗೆ ಬೌಲರ್‌ಗಳಿಗೆ ಯೋಗ್ಯವಾಗಿದೆ. ಬ್ಯಾಟರ್‌ಗಳಿಗೆ ಆರಂಭಿಕ ಓವರ್‌ಗಳು ಸವಾಲಾಗಿರಬಹುದು. ಆಟಗಾರರು ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವುದರಿಂದ, ಪಿಚ್ ಸ್ವಲ್ಪಮಟ್ಟಿಗೆ ಬ್ಯಾಟಿಂಗ್ ಸ್ವರ್ಗವಾಗಿ ಬದಲಾಗುತ್ತದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಪರಿಸ್ಥಿತಿಗಳನ್ನು ಹೆಚ್ಚಿಸಲು ಇಬ್ಬನಿ ಅಂಶವು ಸಹ ಸಹಾಯ ಮಾಡುತ್ತದೆ.
ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜಾನಿ ಬೈರ್‌ಸ್ಟೋ, ಜೋ ರೂಟ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲಿ, ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಡೇವಿಡ್ ವಿಲ್ಲಿ, ಸ್ಯಾಮ್ ಕರನ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ