ಇಂಗ್ಲೆಂಡ್-ನ್ಯೂಜಿಲೆಂಡ್ ನಡುವಿನ ವಿಶ್ವಕಪ್‌ ಮೊದಲ ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಪೂರ್ಣ ವಿವರ

England vs New Zealand Live Streaming Details in Kannada: ಇಂಗ್ಲೆಂಡ್ ಏಕದಿನ ಮತ್ತು ಟಿ20 ಎರಡೂ ಮಾದರಿಯಲ್ಲೂ ಹಾಲಿ ಚಾಂಪಿಯನ್ ಆಗಿದೆ. ಹೀಗಾಗಿ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡ ಗೆಲ್ಲುವ ಫೆವರೆಟ್ ಎನಿಸಿಕೊಂಡಿದೆ. ಇತ್ತ ಕಳೆದ ಬಾರಿಯ ಫೈನಲ್ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿರುವ ಕಿವೀಸ್ ಕೂಡ ಬಲಿಷ್ಠ ಪಡೆಯನ್ನು ಕಟ್ಟಿಕೊಂಡು ಭಾರತಕ್ಕೆ ಬಂದಿಳಿದಿದೆ.

ಇಂಗ್ಲೆಂಡ್-ನ್ಯೂಜಿಲೆಂಡ್ ನಡುವಿನ ವಿಶ್ವಕಪ್‌ ಮೊದಲ ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಪೂರ್ಣ ವಿವರ
ಇಂಗ್ಲೆಂಡ್-ನ್ಯೂಜಿಲೆಂಡ್
Follow us
|

Updated on: Oct 05, 2023 | 7:31 AM

ಇನ್ನು ಕೆಲವೇ ಗಂಟೆಗಳಲ್ಲಿ ಏಕದಿನ ವಿಶ್ವಕಪ್​ಗೆ (ICC World Cup 2023) ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯಕ್ಕೆ ಆತಿಥ್ಯವಹಿಸಲು ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನ (Ahmedabad’s Narendra Modi Stadium ) ಸಜ್ಜಾಗಿದೆ. ಈ ಬಾರಿಯ ವಿಶ್ವಕಪ್ ಭಾರತದಲ್ಲೇ ನಡೆಯುತ್ತಿರುವುದರಿಂದ ಟೀಂ ಇಂಡಿಯಾಕ್ಕೆ (Team India) ಐಸಿಸಿ ಪ್ರಶಸ್ತಿಯ 13 ವರ್ಷಗಳ ಬರವನ್ನು ನೀಗಿಸಿಕೊಳ್ಳಲು ಉತ್ತಮ ಅವಕಾಶವಿದೆ. ಇದಕ್ಕೆ ಪೂರಕವಾಗಿ ರೋಹಿತ್ ಶರ್ಮಾ (Rohit Sharma) ನೇತೃತ್ವದ ಬಲಿಷ್ಠ ಪಡೆ ಕಣಕ್ಕಿಳಿಯುತ್ತಿದೆ. ಆದರೆ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಟೀಂ ಇಂಡಿಯಾ ಕಣಕ್ಕಿಳಿಯುತ್ತಿಲ್ಲ. ಬದಲಿಗೆ ಕಳೆದ ವಿಶ್ವಕಪ್​ನ ಫೈನಲಿಸ್ಟ್​ ತಂಡಗಳಾದ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ (England vs New Zealand) ಈ ಮಹಾಯುದ್ಧದ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಇಂಗ್ಲೆಂಡ್ ಏಕದಿನ ಮತ್ತು ಟಿ20 ಎರಡೂ ಮಾದರಿಯಲ್ಲೂ ಹಾಲಿ ಚಾಂಪಿಯನ್ ಆಗಿದೆ. ಹೀಗಾಗಿ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡ ಗೆಲ್ಲುವ ಫೆವರೆಟ್ ಎನಿಸಿಕೊಂಡಿದೆ. ಇತ್ತ ಕಳೆದ ಬಾರಿಯ ಫೈನಲ್ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿರುವ ಕಿವೀಸ್ ಕೂಡ ಬಲಿಷ್ಠ ಪಡೆಯನ್ನು ಕಟ್ಟಿಕೊಂಡು ಭಾರತಕ್ಕೆ ಬಂದಿಳಿದಿದೆ. ನ್ಯೂಜಿಲೆಂಡ್‌ನ ನಿಯಮಿತ ನಾಯಕ ಕೇನ್ ವಿಲಿಯಮ್ಸನ್ ಮೊದಲ ಪಂದ್ಯದಲ್ಲಿ ಆಡದಿರುವುದು ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ. ಹೀಗಾಗಿ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ಟಾಮ್ ಲ್ಯಾಥಮ್ ತಂಡದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಇಂಗ್ಲೆಂಡ್ ತಂಡವನ್ನು ಜೋಸ್ ಬಟ್ಲರ್ ಮುನ್ನಡೆಸುತ್ತಿದ್ದಾರೆ. ಇನ್ನು ಮೊದಲ ಪಂದ್ಯ ಎಲ್ಲಿ ನಡೆಯಲ್ಲಿದೆ? ಲೈವ್ ಸ್ಟ್ರೀಮಿಂಗ್ ಅಥವಾ ಎಲ್ಲಿ ವೀಕ್ಷಿಸಬೇಕು? ಎಂಬುದರ ವಿವರವನ್ನು ನೋಡುವುದಾದರೆ..

ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್; ಸ್ಟಾರ್ ಆಲ್​ರೌಂಡರ್​ಗೆ ಇಂಜುರಿ! ಉದ್ಘಾಟನಾ ಪಂದ್ಯಕ್ಕೆ ಅಲಭ್ಯ?

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ.

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಮೊದಲ ವಿಶ್ವಕಪ್ ಪಂದ್ಯ ಯಾವಾಗ ನಡೆಯಲ್ಲಿದೆ?

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಮೊದಲ ವಿಶ್ವಕಪ್ ಪಂದ್ಯ ಇಂದು ಅಂದರೆ ಅಕ್ಟೋಬರ್ 5 ರ ಗುರುವಾರ ನಡೆಯಲಿದೆ.

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಮೊದಲ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲ್ಲಿದೆ?

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಮೊದಲ ವಿಶ್ವಕಪ್ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಮೊದಲ ವಿಶ್ವಕಪ್ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಪಂದ್ಯಕ್ಕೂ ಮುನ್ನ ಮಧ್ಯಾಹ್ನ 1.30ಕ್ಕೆ ಟಾಸ್‌ ನಡೆಯಲಿದೆ.

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಮೊದಲ ವಿಶ್ವಕಪ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಮೊದಲ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೋಡಬಹುದು. ಇದಲ್ಲದೆ, ಇದನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಮೊಬೈಲ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?