ವಿಶ್ವಕಪ್ ಉದ್ಘಾಟನಾ ಪಂದ್ಯಕ್ಕಿದೆಯಾ ಮಳೆಯ ಆತಂಕ? ಇಲ್ಲಿದೆ ಅಹಮದಾಬಾದ್‌ ಹವಾಮಾನ ವರದಿ

Ahmedabad Weather Forecast Report in Kannada: ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಮಧ್ಯಾಹ್ನ 1:30 ಕ್ಕೆ ಟಾಸ್ ನಡೆಯಲ್ಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಭರ್ಜರಿ ತಯಾರಿ ನಡೆಸಿದ್ದು, ಎಲ್ಲಾ ಆಟಗಾರರು ನೆಟ್ಸ್‌ನಲ್ಲಿ ಸಾಕಷ್ಟು ಬೆವರು ಹರಿಸಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದ ವೇಳೆ ಹವಾಮಾನ ಹೇಗಿರುತ್ತದೆ ಎಂಬುದರ ವಿವರ ಇಲ್ಲಿದೆ.

ವಿಶ್ವಕಪ್ ಉದ್ಘಾಟನಾ ಪಂದ್ಯಕ್ಕಿದೆಯಾ ಮಳೆಯ ಆತಂಕ? ಇಲ್ಲಿದೆ ಅಹಮದಾಬಾದ್‌ ಹವಾಮಾನ ವರದಿ
ಅಹಮದಾಬಾದ್‌ ಹವಾಮಾನ ವರದಿ
Follow us
ಪೃಥ್ವಿಶಂಕರ
|

Updated on: Oct 05, 2023 | 9:00 AM

ಗುರುವಾರದಿಂದ ಭಾರತದ ನೆಲದಲ್ಲಿ ಏಕದಿನ ವಿಶ್ವಕಪ್ (ICC World Cup 2023) ಆರಂಭವಾಗುತ್ತಿದೆ. ಪ್ರಸ್ತುತ ವಿಜೇತ ಇಂಗ್ಲೆಂಡ್, ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Ahmedabad’s Narendra Modi Stadium) ನ್ಯೂಜಿಲೆಂಡ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಇಂಗ್ಲೆಂಡ್‌ನಲ್ಲಿ ನಡೆದ ಕೊನೆಯ ವಿಶ್ವಕಪ್‌ನಲ್ಲಿ ಈ ಎರಡು ತಂಡಗಳ ನಡುವೆ ಫೈನಲ್ ಪಂದ್ಯ ನಡೆದಿತ್ತು. ಇದರಲ್ಲಿ ಇಂಗ್ಲೆಂಡ್, ನ್ಯೂಜಿಲೆಂಡ್ (England vs New Zealand) ತಂಡವನ್ನು ಬೌಂಡರಿ ಎಣಿಕೆ ನಿಯಮದಡಿಯಲ್ಲಿ ಸೋಲಿಸಿ ವಿಶ್ವ ಚಾಂಪಿಯನ್ ಪಟ್ಟಕ್ಕೇರಿತ್ತು. ಹೀಗಾಗಿ ಹಾಲಿ ಚಾಂಪಿಯನ್ನರು ತಮ್ಮ ಗೆಲುವಿನ ಸರಣಿಯನ್ನು ಮುಂದುವರೆಸಲು ಪ್ರಯತ್ನಿಸಿದರೆ, ಇತ್ತ ನ್ಯೂಜಿಲೆಂಡ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಮಧ್ಯಾಹ್ನ 1:30 ಕ್ಕೆ ಟಾಸ್ ನಡೆಯಲ್ಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಭರ್ಜರಿ ತಯಾರಿ ನಡೆಸಿದ್ದು, ಎಲ್ಲಾ ಆಟಗಾರರು ನೆಟ್ಸ್‌ನಲ್ಲಿ ಸಾಕಷ್ಟು ಬೆವರು ಹರಿಸಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದ ವೇಳೆ ಹವಾಮಾನ (Weather Forecast Report) ಹೇಗಿರುತ್ತದೆ ಎಂಬುದರ ವಿವರ ಇಲ್ಲಿದೆ.

ಹವಾಮಾನ ಹೇಗಿರುತ್ತದೆ?

ವಾಸ್ತವವಾಗಿ ಈ ಹಿಂದೆ ನಡೆದ ಏಷ್ಯಾಕಪ್ ಟೂರ್ನಿಯಲ್ಲಿ ಮಳೆಯಿಂದಾಗಿ ಹಲವು ಪಂದ್ಯಗಳನ್ನು ರದ್ದುಗೊಳಿಸದರೆ ಇನ್ನು ಕೆಲವು ಪಂದ್ಯಗಳು ಕಡಿಮೆ ಓವರ್‌ಗಳಲ್ಲಿ ನಡೆದವು. ಇದಲ್ಲದೆ ಏಕದಿನ ವಿಶ್ವಕಪ್‌ನ ಅಭ್ಯಾಸ ಪಂದ್ಯಗಳಿಗೂ ಮಳೆ ಅಡ್ಡಿಪಡಿಸಿತು. ಹೀಗಾಗಿ ಟೀಂ ಇಂಡಿಯಾದ ಎರಡೂ ಅಭ್ಯಾಸ ಪಂದ್ಯಗಳು ಟಾಸ್ ಇಲ್ಲದೇ ರದ್ದಾಗಿತ್ತು. ಆದ್ದರಿಂದ ವಿಶ್ವಕಪ್ ಮೊದಲ ಪಂದ್ಯದಲ್ಲೂ ಮಳೆರಾಯ ಎಂಟ್ರಿ ಕೊಡುತ್ತಾರಾ ಎಂಬ ಪ್ರಶ್ನೆ ಇದೀಗ ಕ್ರಿಕೆಟ್ ಅಭಿಮಾನಿಗಳಿಂದ ಮೂಡಿದೆ.

ಇಂಗ್ಲೆಂಡ್-ನ್ಯೂಜಿಲೆಂಡ್ ನಡುವಿನ ವಿಶ್ವಕಪ್‌ ಮೊದಲ ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಪೂರ್ಣ ವಿವರ

ಮಳೆಯ ಆತಂಕವಿಲ್ಲ

ಹವಾಮಾನ ಇಲಾಖೆ ಪ್ರಕಾರ ಮಧ್ಯಾಹ್ನದ ವೇಳೆಗೆ ವಾತಾವರಣ ಶುಭ್ರವಾಗಿರುತ್ತದೆ. ಆಕಾಶವು ಸ್ಪಷ್ಟವಾಗಿರುತ್ತದೆ. ಅಲ್ಲದೆ, ಅಹಮದಾಬಾದ್‌ನಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲ್ಲಿದ್ದು, 22 ಕಿ.ಮೀ ವೇಗದಲ್ಲಿ ಗಾಳಿಯೂ ಬೀಸಲಿದೆ. ಆದರೆ ಈ ಪಂದ್ಯದಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ. ಹೀಗಾಗಿ ಕ್ರಿಕೆಟ್ ಅಭಿಮಾನಿಗಳು ಇಡೀ ಪಂದ್ಯವನ್ನು ಯಾವುದೇ ಮಳೆಯ ಆತಂಕವಿಲ್ಲದೆ ವೀಕ್ಷಿಸಬಹುದಾಗಿದೆ.

ಉಭಯ ತಂಡಗಳು

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟಾಪ್ಲೆ, ಡೇವಿಡ್ ವಿಲ್ಲಿ, ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್.

ಮೊದಲ ಪಂದ್ಯಕ್ಕೆ ನ್ಯೂಜಿಲೆಂಡ್ ತಂಡ: ಟಾಮ್ ಲೇಥಮ್ (ನಾಯಕ ಮತ್ತು ವಿಕೆಟ್ ಕೀಪರ್), ಡೆವೊನ್ ಕಾನ್ವೆ, ವಿಲ್ ಯಂಗ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಇಶ್ ಸೋಧಿ, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್, ಲಾಕಿ ಫರ್ಗುಸನ್, ಟಿಮ್ ಸೌಥಿ, ಮಿಚೆಲ್ ಸ್ಯಾಂಟ್ನರ್ ಮತ್ತು ಜೇಮ್ಸ್ ನೀಶಮ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ