AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs SL: ಇಂಗ್ಲೆಂಡ್ ವಿರುದ್ಧ ಪುಟಿದೆದ್ದ ಶ್ರೀಲಂಕಾ

England vs Sri Lanka, 1st Test: ಆ ಬಳಿಕ ಬಂದ ಅನುಭವಿ ಏಂಜೆಲೊ ಮ್ಯಾಥ್ಯೂಸ್ (0) ಸೊನ್ನೆ ಸುತ್ತಿ ಹಿಂತಿರುಗಿದ್ದರು. ಇದರ ನಡುವೆ ಕುಸಾಲ್ ಮೆಂಡಿಸ್ 24 ರನ್​ ಬಾರಿಸಿದರೆ, ಚಂಡಿಮಲ್ 17 ರನ್​ಗಳ ಕೊಡುಗೆ ನೀಡಿದರು. ಅತ್ತ 92 ರನ್​ಗಳಿಗೆ 6 ವಿಕೆಟ್ ಉರುಳಿಸಿ ಇಂಗ್ಲೆಂಡ್ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು. ಈ ಹಂತದಲ್ಲಿ ಜೊತೆಗೂಡಿದ ಧನಂಜಯ ಡಿಸಿಲ್ವಾ ಹಾಗೂ ಮಿಲನ್ ರತ್ನಾಯಕೆ ಅತ್ಯುತ್ತಮ ಜೊತೆಯಾಟ ಪ್ರದರ್ಶಿಸಿದರು.

ENG vs SL: ಇಂಗ್ಲೆಂಡ್ ವಿರುದ್ಧ ಪುಟಿದೆದ್ದ ಶ್ರೀಲಂಕಾ
ENG vs SL
ಝಾಹಿರ್ ಯೂಸುಫ್
|

Updated on: Aug 22, 2024 | 7:33 AM

Share

ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಶ್ರೀಲಂಕಾ 236 ರನ್​ ಕಲೆಹಾಕಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ನಿರೀಕ್ಷಿತ ಆರಂಭ ಪಡೆಯಲು ಸಾಧ್ಯವಾಗಲಿಲ್ಲ. ಆರಂಭಿಕರಾದ ನಿಶಾಂಕ್ ಮದುಷ್ಕ (4) ಹಾಗೂ ಕರುಣರತ್ನೆ (2) 6 ರನ್​ಗಳಿಸುವಷ್ಟರಲ್ಲಿ ಪೆವಿಲಿಯನ್ ಸೇರಿದರು.

ಇನ್ನು ಆ ಬಳಿಕ ಬಂದ ಅನುಭವಿ ಏಂಜೆಲೊ ಮ್ಯಾಥ್ಯೂಸ್ (0) ಸೊನ್ನೆ ಸುತ್ತಿ ಹಿಂತಿರುಗಿದ್ದರು. ಇದರ ನಡುವೆ ಕುಸಾಲ್ ಮೆಂಡಿಸ್ 24 ರನ್​ ಬಾರಿಸಿದರೆ, ಚಂಡಿಮಲ್ 17 ರನ್​ಗಳ ಕೊಡುಗೆ ನೀಡಿದರು.

ಅತ್ತ 92 ರನ್​ಗಳಿಗೆ 6 ವಿಕೆಟ್ ಉರುಳಿಸಿ ಇಂಗ್ಲೆಂಡ್ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು. ಈ ಹಂತದಲ್ಲಿ ಜೊತೆಗೂಡಿದ ಧನಂಜಯ ಡಿಸಿಲ್ವಾ ಹಾಗೂ ಮಿಲನ್ ರತ್ನಾಯಕೆ ಅತ್ಯುತ್ತಮ ಜೊತೆಯಾಟ ಪ್ರದರ್ಶಿಸಿದರು.

ಅಲ್ಪ ಮೊತ್ತಕ್ಕೆ ಕುಸಿಯುತ್ತಿದ್ದ ಶ್ರೀಲಂಕಾ ತಂಡಕ್ಕೆ ಆಸರೆಯಾಗಿ ನಿಂತ ಈ ಜೋಡಿ 63 ರನ್​ಗಳನ್ನು ಕಲೆಹಾಕಿದರು. ಆದರೆ ತಂಡದ ಮೊತ್ತ 176 ರನ್ ಆಗಿದ್ದಾಗ ಧನಂಜಯ ಡಿಸಿಲ್ವಾ (74) ಶೊಯೇಬ್ ಬಶೀರ್ ಎಸೆತದಲ್ಲಿ ಔಟಾದರು.

ಇದಾಗ್ಯೂ ಏಕಾಂಗಿ ಹೋರಾಟ ಮುಂದುವರೆಸಿದ ಮಿಲನ್ 72 ರನ್​ಗಳನ್ನು ಬಾರಿಸುವ ಮೂಲಕ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು. ಅಂತಿಮವಾಗಿ ಶ್ರೀಲಂಕಾ ತಂಡವು 236 ರನ್​ಗಳಿಸಿ ಆಲೌಟ್ ಆಯಿತು. ಇಂಗ್ಲೆಂಡ್ ಪರ ಸ್ಪಿನ್ನರ್ ಶೊಯೇಬ್ ಬಶೀರ್ 3 ವಿಕೆಟ್ ಕಬಳಿಸಿದರೆ, ವೇಗಿ ಮಾರ್ಕ್ ವುಡ್ 3 ವಿಕೆಟ್ ಉರುಳಿಸಿದರು.

ಇನ್ನು ಮೊದಲ ದಿನದಾಟದ ಅಂತ್ಯದ ವೇಳೆ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ತಂಡವು ಯಾವುದೇ ವಿಕೆಟ್ ನಷ್ಟವಿಲ್ಲದೆ 22 ರನ್​ಗಳಿಸಿದೆ. ಸದ್ಯ ಬೆನ್ ಡಕೆಟ್ (13) ಹಾಗೂ ಡೇನಿಯಲ್ ಲಾರೆನ್ಸ್ (9) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇಂಗ್ಲೆಂಡ್ ಪ್ಲೇಯಿಂಗ್ 11: ಡೇನಿಯಲ್ ಲಾರೆನ್ಸ್ , ಬೆನ್ ಡಕೆಟ್ , ಒಲೀ ಪೋಪ್ (ನಾಯಕ) , ಜೋ ರೂಟ್ , ಹ್ಯಾರಿ ಬ್ರೂಕ್ , ಜೇಮೀ ಸ್ಮಿತ್ (ವಿಕೆಟ್ ಕೀಪರ್) , ಕ್ರಿಸ್ ವೋಕ್ಸ್ , ಗಸ್ ಅಟ್ಕಿನ್ಸನ್ , ಮ್ಯಾಥ್ಯೂ ಪಾಟ್ಸ್ , ಮಾರ್ಕ್ ವುಡ್ , ಶೋಯೆಬ್ ಬಶೀರ್.

ಇದನ್ನೂ ಓದಿ: IPL 2025: ಧೋನಿ RCB ತಂಡದ ನಾಯಕರಾಗಿದ್ದರೆ 3 ಟ್ರೋಫಿ ಗೆದ್ದಿರುತ್ತಿತ್ತು..!

ಶ್ರೀಲಂಕಾ ಪ್ಲೇಯಿಂಗ್ 11: ದಿಮುತ್ ಕರುಣಾರತ್ನೆ , ನಿಶಾನ್ ಮದುಷ್ಕ , ಕುಸಲ್ ಮೆಂಡಿಸ್ , ಏಂಜೆಲೊ ಮ್ಯಾಥ್ಯೂಸ್ , ದಿನೇಶ್ ಚಂಡಿಮಲ್ (ವಿಕೆಟ್ ಕೀಪರ್) , ಧನಂಜಯ ಡಿ ಸಿಲ್ವಾ (ನಾಯಕ) , ಕಮಿಂದು ಮೆಂಡಿಸ್ , ಪ್ರಭಾತ್ ಜಯಸೂರ್ಯ , ಅಸಿತ ಫೆರ್ನಾಂಡೋ , ವಿಶ್ವ ಫೆರ್ನಾಂಡೋ , ಮಿಲನ್ ರತ್ನಾಯಕೆ.

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ