ಏಕದಿನ ವಿಶ್ವಕಪ್ನ 25ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಶ್ರೀಲಂಕಾ ಭರ್ಜರಿ ಜಯ ಸಾಧಿಸಿದೆ . ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 33.2 ಓವರ್ಗಳಲ್ಲಿ 156 ರನ್ಗಳಿಗೆ ಆಲೌಟ್ ಆಯಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವು 25.4 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 160 ರನ್ ಬಾರಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಏಕದಿನ ಕ್ರಿಕೆಟ್ನಲ್ಲಿ ಉಭಯ ತಂಡಗಳು ಇದುವರೆಗೆ 79 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಇಂಗ್ಲೆಂಡ್ ತಂಡವು 38 ಬಾರಿ ಜಯ ಸಾಧಿಸಿದರೆ, ಶ್ರೀಲಂಕಾ ತಂಡ 37 ಬಾರಿ ಗೆಲುವು ದಾಖಲಿಸಿದೆ. ಇನ್ನು ಮೂರು ಪಂದ್ಯಗಳು ರದ್ದಾದರೆ, ಒಂದು ಮ್ಯಾಚ್ ಟೈನಲ್ಲಿ ಅಂತ್ಯ ಕಂಡಿತ್ತು.
ಇಂಗ್ಲೆಂಡ್ (ಪ್ಲೇಯಿಂಗ್ XI): ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಮಾರ್ಕ್ ವುಡ್.
ಶ್ರೀಲಂಕಾ (ಪ್ಲೇಯಿಂಗ್ XI): ಪಾತುಮ್ ನಿಸ್ಸಾಂಕ, ಕುಸಾಲ್ ಪೆರೇರಾ, ಕುಸಲ್ ಮೆಂಡಿಸ್ (ನಾಯಕ), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಏಂಜೆಲೊ ಮ್ಯಾಥ್ಯೂಸ್, ಮಹೇಶ್ ತೀಕ್ಷಣ, ಕಸುನ್ ರಜಿತ, ಲಹಿರು ಕುಮಾರ, ದಿಲ್ಶನ್ ಮಧುಶಂಕ.
ಆದಿಲ್ ರಶೀದ್ ಎಸೆದ 26ನೇ ಓವರ್ನ 4ನೇ ಎಸೆತದಲ್ಲಿ ಲಾಂಗ್ ಆನ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಪಾತುಮ್ ನಿಸ್ಸಂಕಾ.
ಈ ಸಿಕ್ಸ್ನೊಂದಿಗೆ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಶ್ರೀಲಂಕಾ ತಂಡ.
25 ಓವರ್ಗಳ ಮುಕ್ತಾಯದ ವೇಳೆಗೆ 152 ರನ್ ಕಲೆಹಾಕಿದ ಇಂಗ್ಲೆಂಡ್.
ಕ್ರೀಸ್ನಲ್ಲಿ ಪಾತುಮ್ ನಿಸ್ಸಂಕಾ ಹಾಗೂ ಸದೀರ ಸಮರವಿಕ್ರಮ ಬ್ಯಾಟಿಂಗ್.
ಶ್ರೀಲಂಕಾ ತಂಡಕ್ಕೆ ಗೆಲ್ಲಲು ಕೇವಲ 5 ರನ್ಗಳ ಅವಶ್ಯಕತೆ
20 ಓವರ್ಗಳ ಮುಕ್ತಾಯದ ವೇಳೆಗೆ 118 ರನ್ ಕಲೆಹಾಕಿದ ಶ್ರೀಲಂಕಾ.
ಕ್ರೀಸ್ನಲ್ಲಿ ಪಾತುಮ್ ನಿಸ್ಸಂಕಾ ಹಾಗೂ ಸದೀರ ಸಮರವಿಕ್ರಮ ಬ್ಯಾಟಿಂಗ್.
ಶ್ರೀಲಂಕಾ ತಂಡಕ್ಕೆ ಗೆಲ್ಲಲು ಇನ್ನು ಕೇವಲ 39 ರನ್ಗಳ ಅವಶ್ಯಕತೆ
ಮಾರ್ಕ್ ವುಡ್ ಎಸೆದ 18ನೇ ಓವರ್ನ 3ನೇ ಎಸೆತದಲ್ಲಿ ಲಾಂಗ್ ಆಫ್ನತ್ತ ಫೋರ್ ಬಾರಿಸಿದ ಪಾತುಮ್.
ಈ ಫೋರ್ನೊಂದಿಗೆ 54 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಶ್ರೀಲಂಕಾ ತಂಡದ ಆರಂಭಿಕ ಆಟಗಾರ ಪಾತುಮ್ ನಿಸ್ಸಂಕಾ.
ಕ್ರೀಸ್ನಲ್ಲಿ ಪಾತುಮ್ ನಿಸ್ಸಂಕಾ ಹಾಗೂ ಸದೀರ ಸಮರವಿಕ್ರಮ ಬ್ಯಾಟಿಂಗ್.
ಆದಿಲ್ ರಶೀದ್ ಎಸೆದ 15ನೇ ಓವರ್ನ 5ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಸದೀರ ಸಮರವಿಕ್ರಮ.
15 ಓವರ್ಗಳ ಮುಕ್ತಾಯದ ವೇಳೆಗೆ ಶ್ರೀಲಂಕಾ ತಂಡದ ಸ್ಕೋರ್ 87 ರನ್ಗಳು.
ಕ್ರೀಸ್ನಲ್ಲಿ ಪಾತುಮ್ ನಿಸ್ಸಂಕಾ (36) ಹಾಗೂ ಸದೀರ ಸಮರವಿಕ್ರಮ (34) ಬ್ಯಾಟಿಂಗ್.
ಮಾರ್ಕ್ ವುಡ್ ಎಸೆದ 12ನೇ ಓವರ್ನ ಮೊದಲ ಎಸೆತದಲ್ಲಿ ಸ್ಕ್ವೇರ್ ಕಟ್ ಫೋರ್ ಬಾರಿಸಿದ ಸದೀರ ಸಮರವಿಕ್ರಮ.
ಕ್ರೀಸ್ನಲ್ಲಿ ಪಾತುಮ್ ನಿಸ್ಸಂಕಾ ಹಾಗೂ ಸದೀರ ಸಮರವಿಕ್ರಮ ಬ್ಯಾಟಿಂಗ್.
ಡೇವಿಡ್ ವಿಲ್ಲಿ ಎಸೆದ 10ನೇ ಓವರ್ನ 5ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಫೋರ್ ಬಾರಿಸಿದ ಸದೀರ ಸಮರವಿಕ್ರಮ.
10 ಓವರ್ಗಳ ಮುಕ್ತಾಯದ ವೇಳೆಗೆ ಶ್ರೀಲಂಕಾ ತಂಡದ ಸ್ಕೋರ್ 56 ರನ್ಗಳು.
ಕ್ರೀಸ್ನಲ್ಲಿ ಪಾತುಮ್ ನಿಸ್ಸಂಕಾ ಹಾಗೂ ಸದೀರ ಸಮರವಿಕ್ರಮ ಬ್ಯಾಟಿಂಗ್.
8 ಓವರ್ಗಳ ಮುಕ್ತಾಯದ ವೇಳೆಗೆ 43 ರನ್ ಕಲೆಹಾಕಿದ ಶ್ರೀಲಂಕಾ.
2 ವಿಕೆಟ್ ಕಬಳಿಸಿರುವ ಇಂಗ್ಲೆಂಡ್ ಬೌಲರ್ಗಳು,
ಕ್ರೀಸ್ನಲ್ಲಿ ಪಾತುಮ್ ನಿಸ್ಸಂಕಾ ಹಾಗೂ ಸದೀರ ಸಮರವಿಕ್ರಮ ಬ್ಯಾಟಿಂಗ್.
ಶ್ರೀಲಂಕಾ ತಂಡಕ್ಕೆ ಗೆಲ್ಲಲು ಇನ್ನು ಕೇವಲ 114 ರನ್ಗಳ ಅವಶ್ಯಕತೆ.
ಡೇವಿಡ್ ವಿಲ್ಲಿ ಎಸೆದ 6ನೇ ಓವರ್ನ 2ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ವಿಕೆಟ್ ಕೀಪರ್ ಜೋಸ್ ಬಟ್ಲರ್ಗೆ ಕ್ಯಾಚ್ ನೀಡಿದ ಕುಸಾಲ್ ಮೆಂಡಿಸ್. ಇಂಗ್ಲೆಂಡ್ ತಂಡಕ್ಕೆ 2ನೇ ಯಶಸ್ಸು.
ಕ್ರೀಸ್ನಲ್ಲಿ ಪಾತುಮ್ ನಿಸ್ಸಂಕಾ ಹಾಗೂ ಸದೀರ ಸಮರವಿಕ್ರಮ ಬ್ಯಾಟಿಂಗ್.
5 ಓವರ್ಗಳ ಮುಕ್ತಾಯದ ವೇಳೆಗೆ 23 ರನ್ ಕಲೆಹಾಕಿದ ಶ್ರೀಲಂಕಾ.
ಕುಸಾಲ್ ಪೆರೇರಾ (4) ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರುವ ಇಂಗ್ಲೆಂಡ್.
ಕ್ರೀಸ್ನಲ್ಲಿ ಪಾತುಮ್ ನಿಸ್ಸಂಕಾ ಹಾಗೂ ಕುಸಾಲ್ ಮೆಂಡಿಸ್ ಬ್ಯಾಟಿಂಗ್.
ಡೇವಿಡ್ ವಿಲ್ಲಿ ಎಸೆದ 2ನೇ ಓವರ್ನ 5ನೇ ಎಸೆತದಲ್ಲಿ ಬೆನ್ ಸ್ಟೋಕ್ಸ್ಗೆ ಕ್ಯಾಚ್ ನೀಡಿದ ಕುಸಾಲ್ ಪೆರೇರಾ.
ಇಂಗ್ಲೆಂಡ್ ತಂಡಕ್ಕೆ ಮೊದಲ ಯಶಸ್ಸು.
ಕ್ರೀಸ್ನಲ್ಲಿ ಪಾತುಮ್ ನಿಸ್ಸಂಕಾ ಹಾಗೂ ಕುಸಾಲ್ ಮೆಂಡಿಸ್ ಬ್ಯಾಟಿಂಗ್.
ಕ್ರಿಸ್ ವೋಕ್ಸ್ ಎಸೆದ ಮೊದಲ ಓವರ್ನ 2ನೇ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಪಾತುಮ್ ನಿಸ್ಸಂಕಾ.
ಕ್ರೀಸ್ನಲ್ಲಿ ಕುಸಾಲ್ ಪೆರೇರಾ ಹಾಗೂ ಪಾತುಮ್ ನಿಸ್ಸಂಕಾ ಬ್ಯಾಟಿಂಗ್.
ಮಹೀಶ್ ತೀಕ್ಷಣ ಎಸೆದ 34ನೇ ಓವರ್ನ 2ನೇ ಎಸೆತದಲ್ಲಿ ಮಾರ್ಕ್ ವುಡ್ (5) ಸ್ಟಂಪ್ ಔಟ್.
156 ರನ್ಗಳಿಗೆ ಆಲೌಟ್ ಆದ ಇಂಗ್ಲೆಂಡ್ ತಂಡ.
ಶ್ರೀಲಂಕಾ ತಂಡಕ್ಕೆ 157 ರನ್ಗಳ ಅಲ್ಪ ಮೊತ್ತದ ಗುರಿ.
ಲಹಿರು ಕುಮಾರ ಎಸೆದ 32ನೇ ಓವರ್ನ 5ನೇ ಎಸೆತದಲ್ಲಿ ಡೀಪ್ ಎಕ್ಸ್ಟ್ರಾ ಕವರ್ನತ್ತ ಫೋರ್ ಬಾರಿಸಿದ ಡೇವಿಡ್ ವಿಲ್ಲಿ.
150 ರನ್ಗಳ ಗಡಿದಾಟಿದ ಇಂಗ್ಲೆಂಡ್ ತಂಡದ ಸ್ಕೋರ್.
ಕ್ರೀಸ್ನಲ್ಲಿ ಡೇವಿಡ್ ವಿಲ್ಲಿ ಹಾಗೂ ಮಾರ್ಕ್ ವುಡ್ ಬ್ಯಾಟಿಂಗ್.
ಆದಿಲ್ ರಶೀದ್ (2) ರನ್ನು ರನೌಟ್ ಮಾಡಿದ ವಿಕೆಟ್ ಕೀಪರ್ ಕುಸಾಲ್ ಮೆಂಡಿಸ್.
ಇಂಗ್ಲೆಂಡ್ ತಂಡದ 9ನೇ ವಿಕೆಟ್ ಪತನ.
ಕ್ರೀಸ್ನಲ್ಲಿ ಡೇವಿಡ್ ವಿಲ್ಲಿ ಹಾಗೂ ಮಾರ್ಕ್ ವುಡ್ ಬ್ಯಾಟಿಂಗ್.
ಲಹಿರು ಕುಮಾರ ಎಸೆದ 31ನೇ ಓವರ್ನ ಮೊದಲ ಎಸೆತದಲ್ಲೇ ಡೀಪ್ ಮಿಡ್ ವಿಕೆಟ್ ಬೌಂಡರಿಯಲ್ಲಿ ಕ್ಯಾಚ್ ನೀಡಿದ ಬೆನ್ ಸ್ಟೋಕ್ಸ್.
73 ಎಸೆತಗಳಲ್ಲಿ 43 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಬೆನ್ ಸ್ಟೋಕ್ಸ್.
ಕ್ರೀಸ್ನಲ್ಲಿ ಡೇವಿಡ್ ವಿಲ್ಲಿ ಹಾಗೂ ಆದಿಲ್ ರಶೀದ್ ಬ್ಯಾಟಿಂಗ್.
30 ಓವರ್ಗಳ ಮುಕ್ತಾಯದ ವೇಳೆಗೆ 137 ರನ್ ಕಲೆಹಾಕಿದ ಇಂಗ್ಲೆಂಡ್.
7 ವಿಕೆಟ್ ಕಬಳಿಸಿ ಇಡೀ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ಶ್ರೀಲಂಕಾ ಬೌಲರ್ಗಳು.
ಕ್ರೀಸ್ನಲ್ಲಿ ಡೇವಿಡ್ ವಿಲ್ಲಿ ಹಾಗೂ ಬೆನ್ ಸ್ಟೋಕ್ಸ್ ಬ್ಯಾಟಿಂಗ್.
ಕಸುನ್ ರಜಿತ ಎಸೆದ 26ನೇ ಓವರ್ನ 5ನೇ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಕ್ರಿಸ್ ವೋಕ್ಸ್.
ಶ್ರೀಲಂಕಾ ತಂಡದಿಂದ ಭರ್ಜರಿ ಬೌಲಿಂಗ್.
ಕ್ರೀಸ್ನಲ್ಲಿ ಡೇವಿಡ್ ವಿಲ್ಲಿ ಹಾಗೂ ಬೆನ್ ಸ್ಟೋಕ್ಸ್ ಬ್ಯಾಟಿಂಗ್.
ಏಂಜೆಲೊ ಮ್ಯಾಥ್ಯೂಸ್ ಎಸೆದ 25ನೇ ಓವರ್ನ 4ನೇ ಎಸೆತದಲ್ಲಿ ಕ್ಯಾಚ್ ನೀಡಿದ ಮೊಯೀನ್ ಅಲಿ.
15 ಎಸೆತಗಳಲ್ಲಿ 15 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಎಡಗೈ ದಾಂಡಿಗ ಮೊಯೀನ್ ಅಲಿ.
25 ಓವರ್ಗಳ ಮುಕ್ತಾಯದ ವೇಳೆಗೆ 6 ವಿಕೆಟ್ ಕಳೆದುಕೊಂಡು 122 ರನ್ ಕಲೆಹಾಕಿದ ಇಂಗ್ಲೆಂಡ್.
ಧನಂಜಯ ಡಿಸಿಲ್ವಾ ಎಸೆದ 22ನೇ ಓವರ್ನ ಮೊದಲ ಎಸೆತದಲ್ಲೇ ಡೀಪ್ ಮಿಡ್ ವಿಕೆಟ್ನತ್ತ ಫೋರ್ ಬಾರಿಸಿದ ಮೊಯೀನ್ ಅಲಿ.
ಈ ಫೋರ್ನೊಂದಿಗೆ ಶತಕ ಪೂರೈಸಿದ ಇಂಗ್ಲೆಂಡ್.
3ನೇ ಎಸೆತದಲ್ಲಿ ಆಕರ್ಷಕ ಫೋರ್ ಬಾರಿಸಿದ ಬೆನ್ ಸ್ಟೋಕ್ಸ್.
ಕ್ರೀಸ್ನಲ್ಲಿ ಲಿಯಾಮ್ ಮೊಯೀನ್ ಅಲಿ ಹಾಗೂ ಬೆನ್ ಸ್ಟೋಕ್ಸ್ ಬ್ಯಾಟಿಂಗ್.
20 ಓವರ್ಗಳ ಮುಕ್ತಾಯದ ವೇಳೆಗೆ 89 ರನ್ ಕಲೆಹಾಕಿದ ಇಂಗ್ಲೆಂಡ್.
5 ವಿಕೆಟ್ ಕಬಳಿಸಿ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ಶ್ರೀಲಂಕಾ ತಂಡ.
ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಜೋಸ್ ಬಟ್ಲರ್ ಹಾಗೂ ಲಿಯಾಮ್ ಲಿವಿಂಗ್‌ಸ್ಟೋನ್ ಔಟ್.
ಲಹಿರು ಕುಮಾರ ಎಸೆದ 15ನೇ ಓವರ್ನ 5ನೇ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಜೋಸ್ ಬಟ್ಲರ್.
6 ಎಸೆತಗಳಲ್ಲಿ 8 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಇಂಗ್ಲೆಂಡ್ ತಂಡದ ನಾಯಕ.
ಕ್ರೀಸ್ನಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್ ಹಾಗೂ ಬೆನ್ ಸ್ಟೋಕ್ಸ್ ಬ್ಯಾಟಿಂಗ್.
ಕಸುನ್ ರಜಿತ ಎಸೆದ 14ನೇ ಓವರ್ನ 2ನೇ ಎಸೆತದಲ್ಲಿ ಕ್ಯಾಚ್ ನೀಡಿದ ಜಾನಿ ಬೈರ್‌ಸ್ಟೋವ್.
31 ಎಸೆತಗಳಲ್ಲಿ 30 ರನ್ ಬಾರಿಸಿ ಔಟಾದ ಜಾನಿ ಬೈರ್‌ಸ್ಟೋವ್.
ಕ್ರೀಸ್ನಲ್ಲಿ ಜೋಸ್ ಬಟ್ಲರ್ ಹಾಗೂ ಬೆನ್ ಸ್ಟೋಕ್ಸ್ ಬ್ಯಾಟಿಂಗ್.
13 ಓವರ್ಗಳ ಮುಕ್ತಾಯದ ವೇಳೆಗೆ 68 ರನ್ ಕಲೆಹಾಕಿದ ಇಂಗ್ಲೆಂಡ್ ಬ್ಯಾಟರ್ಗಳು.
ಕ್ರೀಸ್ನಲ್ಲಿ ಜಾನಿ ಬೈರ್‌ಸ್ಟೋವ್ ಹಾಗೂ ಬೆನ್ ಸ್ಟೋಕ್ಸ್ ಬ್ಯಾಟಿಂಗ್.
ಡೇವಿಡ್ ಮಲಾನ್ (28) ಹಾಗೂ ಜೋ ರೂಟ್ (2) ಔಟ್.
ಏಂಜೆಲೊ ಮ್ಯಾಥ್ಯೂಸ್ ಅತ್ಯುತ್ತಮ ಫೀಲ್ಡಿಂಗ್…ಜೋ ರೂಟ್ (2) ರನೌಟ್. ಇಂಗ್ಲೆಂಡ್ ತಂಡದ 2ನೇ ವಿಕೆಟ್ ಪತನ.
10 ಓವರ್ಗಳ ಮುಕ್ತಾಯದ ವೇಳೆಗೆ 59 ರನ್ ಕಲೆಹಾಕಿದ ಇಂಗ್ಲೆಂಡ್.
2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರುವ ಶ್ರೀಲಂಕಾ.
ಕ್ರೀಸ್ನಲ್ಲಿ ಜಾನಿ ಬೈರ್‌ಸ್ಟೋವ್ ಹಾಗೂ ಬೆನ್ ಸ್ಟೋಕ್ಸ್ ಬ್ಯಾಟಿಂಗ್.
8 ಓವರ್ಗಳ ಮುಕ್ತಾಯದ ವೇಳೆಗೆ ಅರ್ಧಶತಕ ಪೂರೈಸಿದ ಇಂಗ್ಲೆಂಡ್.
ಡೇವಿಡ್ ಮಲಾನ್ (28) ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರುವ ಶ್ರೀಲಂಕಾ.
ಕ್ರೀಸ್ನಲ್ಲಿ ಜಾನಿ ಬೈರ್‌ಸ್ಟೋವ್ ಹಾಗೂ ಜೋ ರೂಟ್ ಬ್ಯಾಟಿಂಗ್.
ಏಂಜೆಲೊ ಮ್ಯಾಥ್ಯೂಸ್ ಎಸೆದ 7ನೇ ಓವರ್ನ 3ನೇ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಡೇವಿಡ್ ಮಲಾನ್.
ಶ್ರೀಲಂಕಾ ತಂಡಕ್ಕೆ ಮೊದಲ ಯಶಸ್ಸು.
25 ಎಸೆತಗಳಲ್ಲಿ 28 ರನ್ ಬಾರಿಸಿದ ವಿಕೆಟ್ ಒಪ್ಪಿಸಿದ ಇಂಗ್ಲೆಂಡ್ ತಂಡದ ಎಡಗೈ ದಾಂಡಿಗ ಮಲಾನ್.
ದಿಲ್ಶನ್ ಮಧುಶಂಕ ಎಸೆದ 5ನೇ ಓವರ್ನಲ್ಲಿ ಮೂರು ಫೋರ್ಗಳನ್ನು ಬಾರಿಸಿದ ಡೇವಿಡ್ ಮಲಾನ್.
5 ಓವರ್ಗಳ ಮುಕ್ತಾಯದ ವೇಳೆಗೆ ಇಂಗ್ಲೆಂಡ್ ತಂಡದ ಸ್ಕೋರ್ 39 ರನ್ಗಳು.
ಕ್ರೀಸ್ನಲ್ಲಿ ಜಾನಿ ಬೈರ್‌ಸ್ಟೋವ್ (11) ಹಾಗೂ ಡೇವಿಡ್ ಮಲಾನ್ (28) ಬ್ಯಾಟಿಂಗ್.
ಕಸುನ್ ರಜಿತ ಎಸೆದ 4ನೇ ಓವರ್ನ 3ನೇ ಮತ್ತು 4ನೇ ಎಸೆತಗಳಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಎಡಗೈ ಬ್ಯಾಟರ್ ಡೇವಿಡ್ ಮಲಾನ್.
ಕೊನೆಯ ಎಸೆತದಲ್ಲಿ ಮತ್ತೊಂದು ಫೋರ್ ಬಾರಿಸಿದ ಜಾನಿ ಬೈರ್‌ಸ್ಟೋವ್.
ಕಸುನ್ ರಜಿತ ಎಸೆದ 2ನೇ ಓವರ್ನ 3ನೇ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ಜಾನಿ ಬೈರ್‌ಸ್ಟೋವ್.
ಕ್ರೀಸ್ನಲ್ಲಿ ಜಾನಿ ಬೈರ್‌ಸ್ಟೋವ್ ಹಾಗೂ ಡೇವಿಡ್ ಮಲಾನ್ ಬ್ಯಾಟಿಂಗ್.
ಅ.20ರಂದು ಡೆತ್ನೋಟ್ ಬರೆದು ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಮಾರುತಿ ನಾಯ್ಕ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಇನ್ಸ್ಪೆಕ್ಟರ್, ಪಿಎಸ್ಐ, ಪೊಲೀಸ್ ಸಿಬ್ಬಂದಿ ಅಮಾನತುಗೊಳಿಸಲಾಗಿದೆ. ಮೂವರನ್ನು ಅಮಾನತುಗೊಳಿಸಿ ಉ.ಕ. ಎಸ್ಪಿ ವಿಷ್ಣುವರ್ಧನ್ ಆದೇಶ ನೀಡಿದ್ದಾರೆ. ಕಾರವಾರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಕೆ.ಕುಸುಮಾಧರ, ಪಿಎಸ್ಐ ಶಾಂತಿನಾಥ, ಕಾನ್ಸ್ಟೇಬಲ್ ದೇವರಾಜ್ ಅಮಾನತು. ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ.
ಮೊದಲ ಓವರ್ನಲ್ಲೇ ಅತ್ಯುತ್ತಮ ದಾಳಿ ಸಂಘಟಿಸಿದ ಎಡಗೈ ವೇಗಿ ದಿಲ್ಶನ್ ಮಧುಶಂಕ.
ಕ್ರೀಸ್ನಲ್ಲಿ ಜಾನಿ ಬೈರ್‌ಸ್ಟೋವ್ ಹಾಗೂ ಡೇವಿಡ್ ಮಲಾನ್ ಬ್ಯಾಟಿಂಗ್.
ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಇಂಗ್ಲೆಂಡ್.
ಶ್ರೀಲಂಕಾ (ಪ್ಲೇಯಿಂಗ್ XI): ಪಾತುಮ್ ನಿಸ್ಸಾಂಕ, ಕುಸಾಲ್ ಪೆರೇರಾ, ಕುಸಲ್ ಮೆಂಡಿಸ್ (ನಾಯಕ), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಏಂಜೆಲೊ ಮ್ಯಾಥ್ಯೂಸ್, ಮಹೇಶ್ ತೀಕ್ಷಣ, ಕಸುನ್ ರಜಿತ, ಲಹಿರು ಕುಮಾರ, ದಿಲ್ಶನ್ ಮಧುಶಂಕ.
ಇಂಗ್ಲೆಂಡ್ (ಪ್ಲೇಯಿಂಗ್ XI): ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಮಾರ್ಕ್ ವುಡ್.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
Published On - 1:33 pm, Thu, 26 October 23