ಇಂಗ್ಲೆಂಡ್‌- ಶ್ರೀಲಂಕಾ ವಿಶ್ವಕಪ್ ಕಾಳಗಕ್ಕೆ ಮಳೆಯ ಆತಂಕ? ಇಲ್ಲಿದೆ ಬೆಂಗಳೂರಿನ ಹವಾಮಾನ ವರದಿ

Bengaluru Weather Report in Kannada: 2023ರ ಏಕದಿನ ವಿಶ್ವಕಪ್‌ನ 25ನೇ ಪಂದ್ಯದಲ್ಲಿ ಇಂದು ಅಂದರೆ, ಅಕ್ಟೋಬರ್ 26 ರ ಗುರುವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ತಂಡ ಶ್ರೀಲಂಕಾವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್‌ಗಳು ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿರುವುದರಿಂದ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದ್ದಾರೆ.

ಇಂಗ್ಲೆಂಡ್‌- ಶ್ರೀಲಂಕಾ ವಿಶ್ವಕಪ್ ಕಾಳಗಕ್ಕೆ ಮಳೆಯ ಆತಂಕ? ಇಲ್ಲಿದೆ ಬೆಂಗಳೂರಿನ ಹವಾಮಾನ ವರದಿ
ಬೆಂಗಳೂರಿನ ಹವಾಮಾನ ವರದಿ
Follow us
ಪೃಥ್ವಿಶಂಕರ
|

Updated on:Oct 26, 2023 | 7:27 AM

2023ರ ಏಕದಿನ ವಿಶ್ವಕಪ್‌ನ (ICC World Cup 2023) 25ನೇ ಪಂದ್ಯದಲ್ಲಿ ಇಂದು ಅಂದರೆ, ಅಕ್ಟೋಬರ್ 26 ರ ಗುರುವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ತಂಡ ಶ್ರೀಲಂಕಾವನ್ನು (England vs Sri Lanka) ಎದುರಿಸಲಿದೆ. ಹಾಲಿ ಚಾಂಪಿಯನ್‌ಗಳು ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿರುವುದರಿಂದ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದ್ದಾರೆ. ಬಾಂಗ್ಲಾದೇಶ ವಿರುದ್ಧ ಏಕೈಕ ಗೆಲುವು ದಾಖಲಿಸಿರುವ ಇಂಗ್ಲೆಂಡ್, ಟೂರ್ನಿಯ ಸೆಮಿಫೈನಲ್​ಗೇರಬೇಕೆಂದರೆ, ಶ್ರೀಲಂಕಾ ವಿರುದ್ಧದ ಪಂದ್ಯದೊಂದಿಗೆ ಉಳಿದ ಎಲ್ಲಾ ಲೀಗ್ ಪಂದ್ಯಗಳನ್ನು ಗೆಲ್ಲಬೇಕಿದೆ. ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡವು ಪ್ರಸ್ತುತ 10 ತಂಡಗಳ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.

ಏತನ್ಮಧ್ಯೆ, ಶ್ರೀಲಂಕಾ ತನ್ನ ಕೊನೆಯ ಮುಖಾಮುಖಿಯಲ್ಲಿ ನೆದರ್ಲೆಂಡ್ಸ್ ವಿರುದ್ಧ ಜಯಗಳಿಸುವ ಮೂಲಕ ಮೂರು ಪಂದ್ಯಗಳ ಸೋಲಿನ ಸರಣಿಯನ್ನು ಮುರಿದಿದೆ. ಇಂಗ್ಲೆಂಡ್‌ನಂತೆ, ಲಂಕಾ ಕೂಡ ನಾಲ್ಕು ಮುಖಾಮುಖಿಗಳಲ್ಲಿ ಕೇವಲ ಒಂದೇ ಒಂದು ಗೆಲುವು ಸಾಧಿಸಿದೆ. ಲಂಕಾ ಈಗಾಗಲೇ ಆಸ್ಟ್ರೇಲಿಯಾ, ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾದ ಎದುರು ಸೋಲು ಕಂಡಿದೆ. ಈ ನಡುವೆ ತಂಡದ ಅನೇಕ ಆಟಗಾರರ ಇಂಜುರಿ ಸಮಸ್ಯೆ ಲಂಕಾ ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ENG vs SL: ಬೆಂಗಳೂರಿನಲ್ಲಿ ಇಂದು 2ನೇ ವಿಶ್ವಕಪ್ ಪಂದ್ಯ; ಬಲಿಷ್ಠ ಇಂಗ್ಲೆಂಡ್​ಗೆ ಲಂಕಾ ಸವಾಲು

ಬೆಂಗಳೂರು ಹವಾಮಾನ ಹೇಗಿರಲಿದೆ?

ಗುರುವಾರದಂದು ಬೆಂಗಳೂರಿನಲ್ಲಿ ಹವಾಮಾನವು ಹೆಚ್ಚಾಗಿ ಬಿಸಿಲಿನಿಂದ ಕೂಡಿರುತ್ತದೆ ಮತ್ತು ಹಗಲಿನ ವೇಳೆಯಲ್ಲಿ ಗರಿಷ್ಠ ತಾಪಮಾನವು 31 ಡಿಗ್ರಿ ಸೆಲ್ಸಿಯಸ್‌ಗೆ ಏರುತ್ತದೆ. ಸಂಜೆ ಸಮೀಪಿಸುತ್ತಿದ್ದಂತೆ, ಬೆಂಗಳೂರಿನಂತಹ ನಗರದಲ್ಲಿ ನಿರೀಕ್ಷಿಸಿದಂತೆ ತಾಪಮಾನವು 19 ರಿಂದ 20 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುತ್ತದೆ. ಅದೃಷ್ಟವಶಾತ್, ಎರಡನೇ ಇನ್ನಿಂಗ್ಸ್‌ನಲ್ಲಿ ಬೌಲರ್‌ಗಳಿಗೆ ಅನುಕೂಲವಾಗುವಂತೆ ಮೋಡ ಕವಿದ ವಾತಾವರಣ ಇರಲಿದ್ದು, ಇದರ ಹೊರತಾಗಿ ಮಳೆಯಾಗುವ ಸಾಧ್ಯತೆಗಳಿಲ್ಲ. ಹೀಗಾಗಿ ಅಭಿಮಾನಿಗಳು ಮಳೆಯ ಆತಂಕವಿಲ್ಲದೆ ಪಂದ್ಯವನ್ನು ವೀಕ್ಷಿಸಬಹುದಾಗಿದೆ. ಎಂದಿನಂತೆ ಪಂದ್ಯವೂ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಟಾಸ್ 1:30ಕ್ಕೆ ನಡೆಯಲ್ಲಿದೆ.

ಉಭಯ ತಂಡಗಳು

ಇಂಗ್ಲೆಂಡ್ ತಂಡ: ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮೊಯಿನ್ ಅಲಿ, ಡೇವಿಡ್ ಮಲನ್, ಜೋಸ್ ಬಟ್ಲರ್, ಜೋ ರೂಟ್, ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಬ್ರೈಡನ್ ಕಾರ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜೋಫ್ರಾ ಆರ್ಚರ್, ಬ್ರೈಡನ್ ಕಾರ್ಸೆ, ಸ್ಯಾಮ್ ಕರನ್, ಹ್ಯಾರಿ ಬ್ರೂಕ್ ಮತ್ತು ಗಸ್ ಅಟ್ಕಿನ್ಸನ್.

ಶ್ರೀಲಂಕಾ ತಂಡ: ಏಂಜೆಲೊ ಮ್ಯಾಥ್ಯೂಸ್, ದಿಮುತ್ ಕರುಣಾರತ್ನೆ, ಕುಸಾಲ್ ಪೆರೆರಾ, ಧನಂಜಯ ಡಿ ಸಿಲ್ವಾ, ಕಸುನ್ ರಜಿತ, ದುಷ್ಮಂತ ಚಮೀರ, ಕುಸಲ್ ಮೆಂಡಿಸ್, ಚಮಿಕ ಕರುಣರತ್ನೆ, ಸದೀರ ಸಮರವಿಕ್ರಮ, ದುಶನ್ ಹೇಮಂತ, ಲಹಿರು ಕುಮಾರ, ಚರಿತ್ ಅಸಲಂಕ, ಪಾತುಮ್ ನಿಸ್ಸಾಂಕ, ಮಹೇಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ದಿಲ್ಶನ್ ಮಧುಶಂಕ ಮತ್ತು ಮತೀಶ ಪತಿರಾನ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:26 am, Thu, 26 October 23

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ