ನಾವೇನು ದೂರು ನೀಡಲ್ಲ: ಟೀಮ್ ಇಂಡಿಯಾ ವಿರುದ್ಧ ವಾಕ್ಸಮರ ಶುರು ಮಾಡಿದ ಇಂಗ್ಲೆಂಡ್..!
India vs England: ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜನವರಿ 25 ರಿಂದ ಆರಂಭವಾಗಲಿದೆ. ಮೊದಲ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್ಆರ್ ಸ್ಟೇಡಿಯಂ ಆತಿಥ್ಯವಹಿಸಲಿದೆ. 3ನೇ ಪಂದ್ಯವು ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ಜರುಗಲಿದೆ.

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಪ್ರತಿಷ್ಠಿತ ಟೆಸ್ಟ್ ಸರಣಿ ಜನವರಿ 25 ರಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಗಾಗಿ ಇಂಗ್ಲೆಂಡ್ ತಂಡ ಭಾರತಕ್ಕೆ ಬರಲಿದೆ. ಇತ್ತ ಈ ಪಂದ್ಯವು ತವರಿನಲ್ಲಿ ನಡೆಯುತ್ತಿರುವುದು ಟೀಮ್ ಇಂಡಿಯಾ ಪಾಲಿಗೆ ಪ್ಲಸ್ ಪಾಯಿಂಟ್. ಆದರೆ ಇದನ್ನೇ ಮುಂದಿಟ್ಟುಕೊಂಡು ಇಂಗ್ಲೆಂಡ್ ತಂಡ ವಾಕ್ಸಮರ ಶುರು ಮಾಡಿದೆ.
ಈ ಬಾರಿ ಭಾರತದಲ್ಲಿ ಸರಣಿ ನಡೆಯುತ್ತಿದೆ. ಹೀಗಾಗಿ ಅವರು ಸ್ಪಿನ್ ಬೌಲರ್ಗಳಿಗೆ ಸಹಕಾರಿಯಾಗುವ ಪಿಚ್‌ಗಳನ್ನು ರೂಪಿಸಲಿದ್ದಾರೆ. ಮೊದಲ ದಿನದಿಂದಲೇ ಚೆಂಡು ತಿರುಗಿದರೂ ನಾವು ಆ ಬಗ್ಗೆ ಭಾರತದ ವಿರುದ್ಧ ದೂರು ನೀಡುವುದಿಲ್ಲ ಎಂದು ಇಂಗ್ಲೆಂಡ್ ತಂಡದ ಉಪನಾಯಕ ಒಲಿ ಪೋಪ್ ತಿಳಿಸಿದ್ದಾರೆ.
ಇಂಗ್ಲೆಂಡ್‌ನಲ್ಲಿ, ಸೀಮರ್‌ಗಳಿಗೆ ಸಹಾಯಕವಾಗುವ ಪಿಚ್‌ಗಳನ್ನು ಹೊಂದಿದ್ದೇವೆ. ಇದೀಗ ಭಾರತವು ಅವರ ಸ್ಪಿನ್ನರ್‌ಗಳಿಗೆ ಸಹಾಯ ಮಾಡುವ ಟ್ರ್ಯಾಕ್‌ಗಳೊಂದಿಗೆ ಮುಂದುವರಿಯುವುದರಲ್ಲಿ ಆಶ್ಚರ್ಯವಿಲ್ಲ. ಹೀಗಾಗಿ ನಾವಂತು ಈ ಬಗ್ಗೆ ದೂರು ನೀಡುವುದಿಲ್ಲ ಎಂದು ಪೋಪ್ ಹೇಳಿದ್ದಾರೆ.
ಸ್ಪಿನ್ನಿಂಗ್ ಪಿಚ್‌ಗಳಿಗಳಿಂದಾಗಿ ಭಾರತದಲ್ಲಿ ರನ್ಗಳು ಕಡಿಮೆ ಬರಬಹುದು. ಈ ಬಗ್ಗೆಯೂ ನಮಗೆ ಯಾವುದೇ ಆಕ್ಷೇಪವಿಲ್ಲ. ಅಂತಹ ಟ್ರ್ಯಾಕ್‌ನಲ್ಲಿ ರನ್ ಗಳಿಸಲು ನಾವು ಮಾರ್ಗವನ್ನು ಕಂಡುಕೊಳ್ಳಲಿದ್ದೇವೆ ಎಂದು ಇಂಗ್ಲೆಂಡ್ ತಂಡದ ಉಪನಾಯಕ ತಿಳಿಸಿದ್ದಾರೆ.
ಒಟ್ಟಿನಲ್ಲಿ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಒಲಿ ಪೋಪ್ ಭಾರತದ ಪಿಚ್ಗಳ ಬಗ್ಗೆ ನಾವು ಯಾವುದೇ ದೂರು ನೀಡುವುದಿಲ್ಲ ಎನ್ನುವ ಮೂಲಕ ಹೊಸ ತಗಾದೆ ತೆಗೆದುಕೊಂಡಿದ್ದಾರಾ ಎಂಬ ಪ್ರಶ್ನೆ ಮೂಡುವುದು ಸಹಜ. ಹೀಗಾಗಿ ಈ ಬಾರಿ ಕೂಡ ಇಂಗ್ಲೆಂಡ್-ಭಾರತ ನಡುವೆ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.
ಭಾರತ – ಇಂಗ್ಲೆಂಡ್ ಟೆಸ್ಟ್ ಯಾವಾಗ ಶುರು?
ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜನವರಿ 25 ರಿಂದ ಆರಂಭವಾಗಲಿದೆ. ಮೊದಲ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್ಆರ್ ಸ್ಟೇಡಿಯಂ ಆತಿಥ್ಯವಹಿಸಲಿದೆ. 3ನೇ ಪಂದ್ಯವು ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ಜರುಗಲಿದೆ. ನಾಲ್ಕನೇ ಟೆಸ್ಟ್ ಪಂದವು ರಾಂಚಿಯ ಜೆಎಸ್ಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಪಂದ್ಯಕ್ಕೆ ಧರ್ಮಶಾಲಾದ ಹೆಚ್ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:
- ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
- ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
- ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್ಕೋಟ್)
- ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
- ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)
ಇದನ್ನೂ ಓದಿ: ಶಿವಂ ದುಬೆ ಅಲ್ಲ, ನನ್ನಂತೆ ಆಡುತ್ತಿರುವ ಆಟಗಾರ ಯಾರೆಂದು ತಿಳಿಸಿದ ಯುವರಾಜ್ ಸಿಂಗ್
ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.




