ನಾವೇನು ದೂರು ನೀಡಲ್ಲ: ಟೀಮ್ ಇಂಡಿಯಾ ವಿರುದ್ಧ ವಾಕ್ಸಮರ ಶುರು ಮಾಡಿದ ಇಂಗ್ಲೆಂಡ್..!

India vs England: ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್​ ಸರಣಿಯು ಜನವರಿ 25 ರಿಂದ ಆರಂಭವಾಗಲಿದೆ. ಮೊದಲ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್​ಆರ್​ ಸ್ಟೇಡಿಯಂ ಆತಿಥ್ಯವಹಿಸಲಿದೆ. 3ನೇ ಪಂದ್ಯವು ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ಜರುಗಲಿದೆ.

ನಾವೇನು ದೂರು ನೀಡಲ್ಲ: ಟೀಮ್ ಇಂಡಿಯಾ ವಿರುದ್ಧ ವಾಕ್ಸಮರ ಶುರು ಮಾಡಿದ ಇಂಗ್ಲೆಂಡ್..!
Ollie pope
Edited By:

Updated on: Jan 16, 2024 | 9:01 AM

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಪ್ರತಿಷ್ಠಿತ ಟೆಸ್ಟ್ ಸರಣಿ ಜನವರಿ 25 ರಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಗಾಗಿ ಇಂಗ್ಲೆಂಡ್ ತಂಡ ಭಾರತಕ್ಕೆ ಬರಲಿದೆ. ಇತ್ತ ಈ ಪಂದ್ಯವು ತವರಿನಲ್ಲಿ ನಡೆಯುತ್ತಿರುವುದು ಟೀಮ್ ಇಂಡಿಯಾ ಪಾಲಿಗೆ ಪ್ಲಸ್ ಪಾಯಿಂಟ್. ಆದರೆ ಇದನ್ನೇ ಮುಂದಿಟ್ಟುಕೊಂಡು ಇಂಗ್ಲೆಂಡ್ ತಂಡ ವಾಕ್ಸಮರ ಶುರು ಮಾಡಿದೆ.

ಈ ಬಾರಿ ಭಾರತದಲ್ಲಿ ಸರಣಿ ನಡೆಯುತ್ತಿದೆ. ಹೀಗಾಗಿ ಅವರು ಸ್ಪಿನ್​ ಬೌಲರ್​ಗಳಿಗೆ ಸಹಕಾರಿಯಾಗುವ ಪಿಚ್​ಗಳನ್ನು ರೂಪಿಸಲಿದ್ದಾರೆ. ಮೊದಲ ದಿನದಿಂದಲೇ ಚೆಂಡು ತಿರುಗಿದರೂ ನಾವು ಆ ಬಗ್ಗೆ ಭಾರತದ ವಿರುದ್ಧ ದೂರು ನೀಡುವುದಿಲ್ಲ ಎಂದು ಇಂಗ್ಲೆಂಡ್ ತಂಡದ ಉಪನಾಯಕ ಒಲಿ ಪೋಪ್ ತಿಳಿಸಿದ್ದಾರೆ.

ಇಂಗ್ಲೆಂಡ್‌ನಲ್ಲಿ, ಸೀಮರ್‌ಗಳಿಗೆ ಸಹಾಯಕವಾಗುವ ಪಿಚ್‌ಗಳನ್ನು ಹೊಂದಿದ್ದೇವೆ. ಇದೀಗ ಭಾರತವು ಅವರ ಸ್ಪಿನ್ನರ್‌ಗಳಿಗೆ ಸಹಾಯ ಮಾಡುವ ಟ್ರ್ಯಾಕ್‌ಗಳೊಂದಿಗೆ ಮುಂದುವರಿಯುವುದರಲ್ಲಿ ಆಶ್ಚರ್ಯವಿಲ್ಲ. ಹೀಗಾಗಿ ನಾವಂತು ಈ ಬಗ್ಗೆ ದೂರು ನೀಡುವುದಿಲ್ಲ ಎಂದು ಪೋಪ್ ಹೇಳಿದ್ದಾರೆ.

ಸ್ಪಿನ್ನಿಂಗ್ ಪಿಚ್‌ಗಳಿಗಳಿಂದಾಗಿ ಭಾರತದಲ್ಲಿ ರನ್​ಗಳು ಕಡಿಮೆ ಬರಬಹುದು. ಈ ಬಗ್ಗೆಯೂ ನಮಗೆ ಯಾವುದೇ ಆಕ್ಷೇಪವಿಲ್ಲ. ಅಂತಹ ಟ್ರ್ಯಾಕ್‌ನಲ್ಲಿ ರನ್ ಗಳಿಸಲು ನಾವು ಮಾರ್ಗವನ್ನು ಕಂಡುಕೊಳ್ಳಲಿದ್ದೇವೆ ಎಂದು ಇಂಗ್ಲೆಂಡ್ ತಂಡದ ಉಪನಾಯಕ ತಿಳಿಸಿದ್ದಾರೆ.

ಒಟ್ಟಿನಲ್ಲಿ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಒಲಿ ಪೋಪ್ ಭಾರತದ ಪಿಚ್​ಗಳ ಬಗ್ಗೆ ನಾವು ಯಾವುದೇ ದೂರು ನೀಡುವುದಿಲ್ಲ ಎನ್ನುವ ಮೂಲಕ ಹೊಸ ತಗಾದೆ ತೆಗೆದುಕೊಂಡಿದ್ದಾರಾ ಎಂಬ ಪ್ರಶ್ನೆ ಮೂಡುವುದು ಸಹಜ. ಹೀಗಾಗಿ ಈ ಬಾರಿ ಕೂಡ ಇಂಗ್ಲೆಂಡ್-ಭಾರತ ನಡುವೆ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಭಾರತ – ಇಂಗ್ಲೆಂಡ್ ಟೆಸ್ಟ್ ಯಾವಾಗ ಶುರು?

ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್​ ಸರಣಿಯು ಜನವರಿ 25 ರಿಂದ ಆರಂಭವಾಗಲಿದೆ. ಮೊದಲ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್​ಆರ್​ ಸ್ಟೇಡಿಯಂ ಆತಿಥ್ಯವಹಿಸಲಿದೆ. 3ನೇ ಪಂದ್ಯವು ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ಜರುಗಲಿದೆ. ನಾಲ್ಕನೇ ಟೆಸ್ಟ್ ಪಂದವು ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಪಂದ್ಯಕ್ಕೆ ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:

  1. ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
  2. ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
  3. ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್​ಕೋಟ್)
  4. ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
  5. ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)

ಇದನ್ನೂ ಓದಿ: ಶಿವಂ ದುಬೆ ಅಲ್ಲ, ನನ್ನಂತೆ ಆಡುತ್ತಿರುವ ಆಟಗಾರ ಯಾರೆಂದು ತಿಳಿಸಿದ ಯುವರಾಜ್ ಸಿಂಗ್

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

 

Web contact

TV9 Kannada

Read More
Follow Us