AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಮ್ ಇಂಡಿಯಾಗೆ ಸೋಲುಣಿಸಿದ ಇಂಗ್ಲೆಂಡ್

India Women vs England Women: 198 ರನ್​ಗಳ ಕಠಿಣ ಗುರಿ ಪಡೆದ ಟೀಮ್ ಇಂಡಿಯಾಗೆ ಉತ್ತಮ ಆರಂಭ ಒದಗಿಸುವಲ್ಲಿ ಸ್ಮೃತಿ ಮಂಧಾನ ವಿಫಲರಾದರು. ಕೇವಲ 6 ರನ್​ಗಳಿಸಿದ ಮಂಧಾನ ಮೊದಲಿಗರಾಗಿ ಹೊರನಡೆದರೆ, ಆ ಬಳಿಕ ಬಂದ ಜೆಮಿಮಾ ರೊಡ್ರಿಗಸ್ 4 ರನ್​ಗಳಿಸಲಷ್ಟೇ ಶಕ್ತರಾದರು.

IND vs ENG: ಟೀಮ್ ಇಂಡಿಯಾಗೆ ಸೋಲುಣಿಸಿದ ಇಂಗ್ಲೆಂಡ್
IND vs ENG
TV9 Web
| Edited By: |

Updated on: Dec 06, 2023 | 10:11 PM

Share

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ (Harmanpreet Kaur) ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದರು.

ಈ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ರೇಣುಕಾ ಸಿಂಗ್ ಮೊದಲ ಓವರ್​ನ 4ನೇ ಎಸೆತದಲ್ಲಿ ಸೋಫಿಯಾ ಡಂಕ್ಲಿ (1) ವಿಕೆಟ್ ಪಡೆದರು. ಇದರ ಬೆನ್ನಲ್ಲೇ ಅಲೀಸ್ ಕ್ಯಾಪ್ಸಿ (0) ಗೂ ಪೆವಿಲಿಯನ್ ಹಾದಿ ತೋರಿಸಿದರು. ಆದರೆ ಮತ್ತೊಂದೆಡೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಡೇನಿಯಲ್ ವ್ಯಾಟ್ ಇಂಗ್ಲೆಂಡ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡುವಲ್ಲಿ ಯಶಸ್ವಿಯಾದರು.

ಕೇವಲ 2 ರನ್​ಗಳಿಗೆ 2 ವಿಕೆಟ್ ಕಬಳಿಸಿದ ಟೀಮ್ ಇಂಡಿಯಾ ಬೌಲರ್​ಗಳನ್ನು ಹಿಗ್ಗಾಮುಗ್ಗಾ ದಂಡಿಸಿದ ವ್ಯಾಟ್ 47 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 75 ರನ್ ಬಾರಿಸಿ ಔಟಾದರು. ಈ ವೇಳೆಗೆ ಇಂಗ್ಲೆಂಡ್ ತಂಡದ ಮೊತ್ತ 140 ಕ್ಕೆ ತಲುಪಿತ್ತು.

ಆ ಬಳಿಕ ನ್ಯಾಟ್ ಸ್ಕಿವರ್-ಬ್ರಂಟ್ ಬಿರುಸಿನ ಬ್ಯಾಟಿಂಗ್ ಶುರು ಮಾಡಿದರು. 53 ಎಸೆತಗಳನ್ನು ಎದುರಿಸಿದ ಬ್ರಂಟ್ 13 ಫೋರ್​ಗಳೊಂದಿಗೆ 77 ರನ್ ಬಾರಿಸಿದರು. ಪರಿಣಾಮ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಇಂಗ್ಲೆಂಡ್ ತಂಡವು 197 ರನ್ ಕಲೆಹಾಕಿತು.

198 ರನ್​ಗಳ ಕಠಿಣ ಗುರಿ ಪಡೆದ ಟೀಮ್ ಇಂಡಿಯಾಗೆ ಉತ್ತಮ ಆರಂಭ ಒದಗಿಸುವಲ್ಲಿ ಸ್ಮೃತಿ ಮಂಧಾನ ವಿಫಲರಾದರು. ಕೇವಲ 6 ರನ್​ಗಳಿಸಿದ ಮಂಧಾನ ಮೊದಲಿಗರಾಗಿ ಹೊರನಡೆದರೆ, ಆ ಬಳಿಕ ಬಂದ ಜೆಮಿಮಾ ರೊಡ್ರಿಗಸ್ 4 ರನ್​ಗಳಿಸಲಷ್ಟೇ ಶಕ್ತರಾದರು.

ಇನ್ನು ನಾಯಕಿ ಹರ್ಮನ್​ಪ್ರೀತ್ ಕೌರ್ 26 ರನ್​ಗಳಿಸಿ ಕ್ಲೀನ್ ಬೌಲ್ಡ್​ ಆದರು. ಇದಾಗ್ಯೂ ಮತ್ತೊಂದೆಡೆ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಉತ್ತಮ ಬ್ಯಾಟಿಂಗ್ ಮುಂದುವರೆಸಿದರು. ಎಚ್ಚರಿಕೆಯೊಂದಿಗೆ ಇನಿಂಗ್ಸ್ ಕಟ್ಟಿದ ಶಫಾಲಿ 37 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಇನ್ನೊಂದೆಡೆ ರಿಚಾ ಘೋಷ್ 16 ಎಸೆತಗಳಲ್ಲಿ 21 ರನ್ ಬಾರಿಸಿದರು. ಪರಿಣಾಮ ಕೊನೆಯ 5 ಓವರ್​ಗಳಲ್ಲಿ ಟೀಮ್ ಇಂಡಿಯಾಗೆ 74 ರನ್​ಗಳ ಅವಶ್ಯಕತೆಯಿತ್ತು. ಆದರೆ ಈ ಹಂತದಲ್ಲಿ 52 ರನ್ ಬಾರಿಸಿದ್ದ ಶಫಾಲಿ ವರ್ಮಾ ಎಕ್ಲೆಸ್ಟೋನ್ ಎಸೆತದಲ್ಲಿ ಕ್ಯಾಚ್ ನೀಡಿದರು.

ಇದರೊಂದಿಗೆ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಇಂಗ್ಲೆಂಡ್ ಬೌಲರ್​ಗಳು ಅಂತಿಮ ಓವರ್​ಗಳಲ್ಲಿ ರನ್​ ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಅಂತಿಮವಾಗಿ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಟೀಮ್ ಇಂಡಿಯಾ 159 ರನ್​ಗಳಿಸಿ 38 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಇಂಗ್ಲೆಂಡ್ ಮಹಿಳಾ ತಂಡ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಸ್ಮೃತಿ ಮಂಧಾನ , ಶಫಾಲಿ ವರ್ಮಾ , ಜೆಮಿಮಾ ರೊಡ್ರಿಗಸ್ , ಹರ್ಮನ್‌ಪ್ರೀತ್ ಕೌರ್ (ನಾಯಕಿ) , ದೀಪ್ತಿ ಶರ್ಮಾ , ರಿಚಾ ಘೋಷ್ ( ವಿಕೆಟ್ ಕೀಪರ್ ) , ಶ್ರೇಯಾಂಕಾ ಪಾಟೀಲ್ , ಕನಿಕಾ ಅಹುಜಾ , ಪೂಜಾ ವಸ್ತ್ರಾಕರ್ , ರೇಣುಕಾ ಠಾಕೂರ್ ಸಿಂಗ್ , ಸೈಕಾ ಇಶಾಕ್.

ಇದನ್ನೂ ಓದಿ: 4,4,4,4,4,4,4: ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ಹರ್ಮನ್​ಪ್ರೀತ್ ಕೌರ್

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಡೇನಿಯಲ್ ವ್ಯಾಟ್ , ಸೋಫಿಯಾ ಡಂಕ್ಲಿ , ಆಲಿಸ್ ಕ್ಯಾಪ್ಸೆ , ನ್ಯಾಟ್ ಸ್ಕೈವರ್-ಬ್ರಂಟ್ , ಹೀದರ್ ನೈಟ್ (ನಾಯಕಿ) , ಆಮಿ ಜೋನ್ಸ್ (ವಿಕೆಟ್ ಕೀಪರ್) , ಫ್ರೇಯಾ ಕೆಂಪ್ , ಸೋಫಿ ಎಕ್ಲೆಸ್ಟೋನ್ , ಸಾರಾ ಗ್ಲೆನ್ , ಲಾರೆನ್ ಬೆಲ್ , ಮಹಿಕಾ ಗೌರ್.

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ