India vs England: ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್: ಇಲ್ಲಿದೆ ಭಾರತದ ಪ್ಲೇಯಿಂಗ್ XI

India Playing XI vs England: ಭಾರತ- ಇಂಗ್ಲೆಂಡ್ ನಡುವಣ ಪಂದ್ಯದಲ್ಲಿ ಗೆಲ್ಲುವ ಟೀಮ್ ಎರಡನೇ ತಂಡವಾಗಿ ಫೈನಲ್ ತಲುಪಿ ಪಾಕ್ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಈಗಾಗಲೇ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

India vs England: ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್: ಇಲ್ಲಿದೆ ಭಾರತದ ಪ್ಲೇಯಿಂಗ್ XI
India vs England Semi Final
Follow us
TV9 Web
| Updated By: Vinay Bhat

Updated on:Nov 10, 2022 | 1:05 PM

ಐಸಿಸಿ ಟಿ20 ವಿಶ್ವಕಪ್ 2022 (T20 World Cup) ಟೂರ್ನಿ ಅಂತಿಮ ಹಂತಕ್ಕೆ ಬಂದು ನಿಂತಿದೆ. ಇಂದು ಅಡಿಲೇಡ್​ನ ಓವಲ್​ನಲ್ಲಿ ದ್ವಿತೀಯ ಸೆಮಿ ಫೈನಲ್ ಪಂದ್ಯ ಆಯೋಜಿಸಲಾಗಿದ್ದು ಭಾರತ ಹಾಗೂ ಇಂಗ್ಲೆಂಡ್ (India vs England) ತಂಡಗಳು ಮುಖಾಮುಖಿ ಆಗುತ್ತಿದೆ. ಈಗಾಗಲೇ ಮೊದಲ ಸೆಮಿ ಫೈನಲ್ ಪಂದ್ಯ ನಡೆದಿದ್ದು ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿರುವ ಪಾಕಿಸ್ತಾನ (New Zealand vs Pakistan) ತಂಡ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇಂದಿನ ಪಂದ್ಯದಲ್ಲಿ ಗೆಲ್ಲುವ ಟೀಮ್ ಎರಡನೇ ತಂಡವಾಗಿ ಫೈನಲ್ ತಲುಪಿ ಪಾಕ್ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಈಗಾಗಲೇ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡದೆ ಹಿಂದಿನ ಪಂದ್ಯದಲ್ಲಿ ಆಡಿದ ಆಟಗಾರರೇ ಕಣಕ್ಕಿಳಿಯುತ್ತಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.

ಇದನ್ನೂ ಓದಿ
Image
IND vs ENG: ಭಾರತ- ಇಂಗ್ಲೆಂಡ್ ಸೆಮೀಸ್ ಕದನಕ್ಕೆ ಕ್ಷಣಗಣನೆ: ರೋಹಿತ್ ಪಡೆಯಿಂದ ಭರ್ಜರಿ ಅಭ್ಯಾಸ
Image
Danushka Gunathilaka: ಧನುಷ್ಕಾ ಗುಣತಿಲಕ ಲೈಂಗಿಕ ದೌರ್ಜನ್ಯ ಕೇಸ್​ನಲ್ಲಿ ದೊಡ್ಡ ತಿರುವು: ಮಹಿಳೆಯಿಂದ ಮತ್ತೊಂದು ಆರೋಪ
Image
India vs England: ಹೈವೋಲ್ಟೇಜ್ ಸೆಮೀಸ್ ಪಂದ್ಯಕ್ಕೆ 1 ದೊಡ್ಡ ಬದಲಾವಣೆ: ಇಲ್ಲಿದೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
Image
Adelaide Weather: ಭಾರತ ಇಂಗ್ಲೆಂಡ್ ಸೆಮಿ ಫೈನಲ್ ಪಂದ್ಯಕ್ಕೆ ಮಳೆಯ ಕಾಟ?: ಇಲ್ಲಿದೆ ನೋಡಿ ಹವಾಮಾನ ವರದಿ

ಇಂಗ್ಲೆಂಡ್ ತಂಡ: ಅಲೆಕ್ಸ್ ಹೇಲ್ಸ್, ಜೋಸ್ ಬಟ್ಲರ್ (ನಾಯಕ/ವಿಕೆಟ್‌ಕೀಪರ್), ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೋಯಿನ್ ಅಲಿ, ಸ್ಯಾಮ್ ಕರನ್, ಕ್ರಿಸ್ ಜೋರ್ಡನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್.

ಭಾರತ ತಂಡ ಅಡಿಲೇಡ್​ನ ಓವಲ್​ ಮೈದಾನದಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಗೆದ್ದಿದೆ. ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶಕ್ಕೆ ಸೋಲುಣಿಸಿವೆ. ಆದರೆ, ಈ ವಿಶ್ವಕಪ್​ನಲ್ಲಿ ಮೊದಲ ಬಾರಿಗೆ ಎದುರಾಗಿರುವ ಉಭಯ ತಂಡಗಳಿಗೆ ಅಡಿಲೇಡ್​ ಮೈದಾನ ಯಾರಿಗೆ ವರವಾಗಲಿದೆ ಎಂಬುದು ರೋಚಕತೆ ಸೃಷ್ಟಿಸಿದೆ. 2014ರ ವಿಶ್ವಕಪ್ ಟೂರ್ನಿಯ ನಂತರ ಭಾರತ ತಂಡವು ಫೈನಲ್‌ ಪ್ರವೇಶಿಸಿಲ್ಲ. ಅಲ್ಲದೇ 2013ರ ನಂತರ ಯಾವುದೇ ಐಸಿಸಿ ಟ್ರೋಫಿಯನ್ನೂ ಜಯಿಸಿಲ್ಲ. ಹೀಗಾಗಿ ರೋಹಿತ್ ನಾಯಕತ್ವಕ್ಕೆ ಇದೊಂದು ಉತ್ತಮ ಅವಕಾಶ ಕೂಡ.

ಅಡಿಲೇಡ್ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಅಚ್ಚುಮೆಚ್ಚು. ಬ್ಯಾಟ್​ಗೆ ಚೆಂಡು ನೇರವಾಗಿ ಸುಲಭವಾಗಿ ಬರುವ ಕಾರಣ ದೊಡ್ಡ ಮೊತ್ತದ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ. ಬೌಲರ್‌ಗಳು ಇಲ್ಲಿ ಕಠಿಣ ಸವಾಲನ್ನು ಎದುರಿಸಲಿದ್ದಾರೆ. ಭಾರತ- ಇಂಗ್ಲೆಂಡ್ ತಂಡಗಳು ಟಿ20 ವಿಶ್ವಕಪ್‌ನಲ್ಲಿ ಮೂರು ಬಾರಿ ಮುಖಾಮುಖಿಯಾಗಿವೆ. 2007, 2009 ಮತ್ತು 2012ರಲ್ಲಿ ಪರಸ್ಪರ ವಿರುದ್ಧ ಆಡಿವೆ. ಗುರುವಾರ ಆಡಿದರೆ ನಾಲ್ಕು ಬಾರಿ ಮುಖಾಮುಖಿಯಾದಂತಾಗುತ್ತದೆ. ಈವರೆಗಿನ ವಿಶ್ವಕಪ್‌ನ ಮೂರು ಪಂದ್ಯಗಳಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಎರಡು ಬಾರಿ ಜಯ ಸಾಧಿಸಿದೆ ಮತ್ತು ಇಂಗ್ಲೆಂಡ್ ತಂಡ ಭಾರತದ ವಿರುದ್ಧ ಒಂದು ಬಾರಿ ಗೆಲುವು ಕಂಡಿದೆ.

Published On - 1:05 pm, Thu, 10 November 22

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ