IND vs ENG: 2ನೇ ಟೆಸ್ಟ್‌ಗೆ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್; ಇದ್ದಕ್ಕಿದ್ದಂತೆ ತಂಡದಿಂದ ಹೊರಬಿದ್ದ ಸ್ಟಾರ್ ವೇಗಿ
England's 2nd Test XI vs India: ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಇನ್ನೇರಡು ದಿನಗಳಿರುವ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಕುಟುಂಬದ ತುರ್ತು ಪರಿಸ್ಥಿತಿಯಿಂದಾಗಿ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಇಂಗ್ಲೆಂಡ್ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಬೇರೆ ಯಾವುದೇ ಬದಲಾವಣೆಗಳಿಲ್ಲ. ಅಂದರೆ ಮೊದಲ ಟೆಸ್ಟ್‌ನಲ್ಲಿ ಆಡಿದ ಅದೇ ಹನ್ನೊಂದು ಆಟಗಾರರು ಎರಡನೇ ಪಂದ್ಯದಲ್ಲಿಯೂ ಆಡಲಿದ್ದಾರೆ

ಭಾರತ ಮತ್ತು ಇಂಗ್ಲೆಂಡ್ (India vs England) ನಡುವೆ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳಿಂದ ಭರ್ಜರಿ ತಯಾರಿ ನಡೆಯುತ್ತಿದೆ. ಟೆಸ್ಟ್ ಪಂದ್ಯ ಆರಂಭಕ್ಕೆ ಇನ್ನು 2 ದಿನಗಳು ಬಾಕಿ ಉಳಿದಿದ್ದು, ಎಂದಿನಂತೆ ಆತಿಥೇಯ ಇಂಗ್ಲೆಂಡ್ ತಂಡ ಎರಡನೇ ಟೆಸ್ಟ್ ಪಂದ್ಯಕ್ಕೆ ತನ್ನ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದೆ. ಅಚ್ಚರಿಯ ಸಂಗತಿಯೆಂದರೆ ಕೆಲವೇ ದಿನಗಳ ಹಿಂದೆ ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಸೇರ್ಪಡೆಗೊಂಡಿದ್ದ ಅನುಭವಿ ವೇಗಿ ಜೋಫ್ರಾ ಆರ್ಚರ್ (Jofra Archer), ಇದ್ದಕ್ಕಿದ್ದಂತೆ ತಂಡದಿಂದ ಹೊರಬಿದ್ದಿದ್ದಾರೆ.
ಇದ್ದಕ್ಕಿದ್ದಂತೆ ತಂಡದಿಂದ ಹೊರಬಿದ್ದ ಆರ್ಚರ್
ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲ್ಲಿರುವ ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಕೆಲವೇ ದಿನಗಳ ಹಿಂದೆ ಇಂಗ್ಲೆಂಡ್ ಆಯ್ಕೆ ಮಂಡಳಿ 15 ಸದಸ್ಯರ ತಂಡವನ್ನು ಪ್ರಕಟಿಸಿತ್ತು. ಈ ತಂಡದಲ್ಲಿ ವೇಗಿ ಜೋಫ್ರಾ ಆರ್ಚರ್ಗೂ ಅವಕಾಶ ನೀಡಲಾಗಿತ್ತು. ಆರ್ಚರ್ ಆಗಮನದಿಂದ ಇಂಗ್ಲೆಂಡ್ ಬೌಲಿಂಗ್ ವಿಭಾಗಕ್ಕೆ ಆನೆಬಲ ಬಂದಂತ್ತಾಗಿತ್ತು. ಏಕೆಂದರೆ ಮೊದಲ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿತ್ತಾದರೂ, ತಂಡದ ವೇಗಿಗಳು ಪರಿಣಾಮಕಾರಿಯಾಗಿರಲಿಲ್ಲ. ಇದರ ಲಾಭ ಪಡೆದಿದ್ದ ಟೀಂ ಇಂಡಿಯಾ ಬ್ಯಾಟರ್ಗಳಿಂದ ಐದು ಶತಕಗಳು ಸಿಡಿದಿದ್ದವು. ಆದರೆ ಎರಡನೇ ಟೆಸ್ಟ್ ಆರಂಭಕ್ಕೆ 2 ದಿನಗಳು ಬಾಕಿ ಇರುವಾಗ ಆರ್ಚರ್ ತಂಡದಿಂದ ಬೇರ್ಪಟ್ಟಿದ್ದಾರೆ.
View this post on Instagram
ವಾಸ್ತವವಾಗಿ ಆರ್ಚರ್ ತಂಡದಿಂದ ಹೊರನಡೆಯಲು ಕಾರಣವೂ ಇದ್ದು, ಕೌಟುಂಬಿಕ ತುರ್ತು ಪರಿಸ್ಥಿತಿಯಿಂದಾಗಿ ಆರ್ಚರ್ ಈ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಆರ್ಚರ್ ತಂಡದ ಅಭ್ಯಾಸ ಅವಧಿಯಲ್ಲಿಯೂ ಭಾಗವಹಿಸಿಲ್ಲ. ಈಗಾಗಲೇ ತಂಡದಿಂದ ಬೇರ್ಪಟ್ಟಿರುವ ಆರ್ಚರ ಎರಡನೇ ಟೆಸ್ಟ್ ಪಂದ್ಯವನ್ನು ಆಡಲು ಸಾಧ್ಯವಾಗುವುದಿಲ್ಲ. ಜೋಫ್ರಾ ಆರ್ಚರ್ ಸುಮಾರು 4 ವರ್ಷಗಳ ನಂತರ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದರು. ವಿವಿಧ ಗಾಯದ ಸಮಸ್ಯೆಗಳಿಂದಾಗಿ, ಅವರು ದೀರ್ಘಕಾಲದವರೆಗೆ ಇಂಗ್ಲೆಂಡ್‌ನ ಟೆಸ್ಟ್ ತಂಡದ ಭಾಗವಾಗಲು ಸಾಧ್ಯವಾಗಲಿಲ್ಲ.
IND vs ENG: ಮೊದಲ ಟೆಸ್ಟ್‌ನಲ್ಲಿ 4 ಕ್ಯಾಚ್ ಕೈಚೆಲ್ಲಿದ ಯಶಸ್ವಿ ಜೈಸ್ವಾಲ್ಗೆ ಬಿಗ್ ರಿಲೀಫ್
ಪ್ಲೇಯಿಂಗ್ 11ನಲ್ಲಿ ಯಾವುದೇ ಬದಲಾವಣೆ ಇಲ್ಲ
ಭಾರತ ವಿರುದ್ಧ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದ ಆರ್ಚರ್, ಇದೀಗ ಅದೇ ತಂಡದ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕ್ರಿಕೆಟ್ಗೆ ಮರಳಲು ಸಿದ್ಧರಾಗಿದ್ದರು. ಆದರೆ ಕುಟುಂಬದ ತುರ್ತು ಪರಿಸ್ಥಿತಿಯಿಂದಾಗಿ, ಅವರು ಈ ಪಂದ್ಯದಲ್ಲಿ ಆಡುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಇಂಗ್ಲೆಂಡ್ ತನ್ನ ಆಡುವ 11 ರ ಬಳಗದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಅಂದರೆ ಲೀಡ್ಸ್ನಲ್ಲಿ ನಡೆದಿದ್ದ ಮೊದಲ ಟೆಸ್ಟ್‌ನಲ್ಲಿ ಯಾವ 11 ಆಟಗಾರರು ತಂಡದಲ್ಲಿದ್ದರೋ ಅದೇ 11 ಆಟಗಾರರು ಎರಡನೇ ಟೆಸ್ಟ್‌ನಲ್ಲಿ ಆಡಲಿದ್ದಾರೆ.
ಎರಡನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಂಗ್, ಶೋಯೆಬ್ ಬಶೀರ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:09 pm, Mon, 30 June 25
