IND vs ENG: ಬಲಿಷ್ಠ ಪ್ಲೇಯಿಂಗ್ 11 ಹೆಸರಿಸಿದ ಇಂಗ್ಲೆಂಡ್!
India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಪಂದ್ಯಗಳು ಮುಗಿದಿವೆ. ಮೊದಲ ಮ್ಯಾಚ್ ಮಳೆಗೆ ಆಹುತಿಯಾದರೆ, ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಮೂರನೇ ಪಂದ್ಯಕ್ಕಾಗಿ ಸಜ್ಜಾಗಿ ನಿಂತಿದೆ.

ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ಮಂಗಳವಾರ (ಜುಲೈ 7, 2026) ನಡೆಯಲಿರುವ ಭಾರತದ ವಿರುದ್ಧದ ಮೂರನೇ ಟಿ20 ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡ ಪ್ಲೇಯಿಂಗ್ ಇಲೆವೆನ್ ಹೆಸರಿಸಿದೆ. ಕಳೆದ ಮ್ಯಾಚ್ನಲ್ಲಿ ಕಣಕ್ಕಿಳಿದ ಬಲಿಷ್ಠ ಪಡೆಯನ್ನೇ ಈ ಪಂದ್ಯಕ್ಕಾಗಿ ಮುಂದುವರೆಸಿದ್ದಾರೆ.
5 ಪಂದ್ಯಗಳ ಈ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ ಈಗಾಗಲೇ 1-0 ಮುನ್ನಡೆ ಸಾಧಿಸಿದೆ. ಹೀಗಾಗಿ ಇಂದಿನ ಮ್ಯಾಚ್ನಲ್ಲಿ ಇಂಗ್ಲೆಂಡ್ ತಂಡ ಗೆದ್ದರೆ ಸರಣಿ ಸೋಲನ್ನು ತಪ್ಪಿಸಿಕೊಳ್ಳಬಹುದು. ಏಕೆಂದರೆ ಈ ಸರಣಿಯ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿದ್ದು, ಹೀಗಾಗಿ ಒಟ್ಟು 4 ತಂಡಗಳು ಪಂದ್ಯ ಮಾತ್ರ ನಡೆಯಲಿದೆ.
ಈ ನಾಲ್ಕು ಮ್ಯಾಚ್ಗಳಲ್ಲಿ ಈಗಾಗಲೇ ಇಂಗ್ಲೆಂಡ್ ದ್ವಿತೀಯ ಪಂದ್ಯವನ್ನು ಗೆದ್ದುಕೊಂಡಿದ್ದಾರೆ. ಹೀಗಾಗಿ ಸರಣಿ ಜೀವಂತವಾಗಿರಿಸಲು ಭಾರತ ತಂಡಕ್ಕೆ ಈ ಪಂದ್ಯ ಅತ್ಯಂತ ನಿರ್ಣಾಯಕವಾಗಿದೆ.
ಒಂದು ದಿನ ಮೊದಲೇ ಪ್ರಕಟ:
ಕಳೆದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ ಬಲದೊಂದಿಗೆ ಕಣಕ್ಕಿಳಿಯುತ್ತಿರುವ ಇಂಗ್ಲೆಂಡ್ ತಂಡ, ಪಂದ್ಯ ಆರಂಭಕ್ಕೂ 24 ಗಂಟೆಗಳ ಮುಂಚಿತವಾಗಿಯೇ ತನ್ನ ಆಡುವ ಬಳಗವನ್ನು ಪ್ರಕಟಿಸಿದೆ. ನಾಯಕ ಹ್ಯಾರಿ ಬ್ರೂಕ್ ಯಾವುದೇ ಬದಲಾವಣೆ ಮಾಡದೆ ಹಳೆಯ ಗೆಲುವಿನ ಸಂಯೋಜನೆಯನ್ನೇ ಮುಂದುವರಿಸಿದ್ದಾರೆ.
ಇಂಗ್ಲೆಂಡ್ ಪ್ಲೇಯಿಂಗ್ 11: ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜೇಕಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಲಿಯಾಮ್ ಡಾಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಜೋಶ್ ಟಂಗ್.
ಇದನ್ನೂ ಓದಿ: ಭಾರತ ಟಿ20 ತಂಡ ಪ್ರಕಟ: ಮೂವರ ಹೊಸ ಎಂಟ್ರಿ!
ಹೇಗಿರಲಿದೆ ಟೀಮ್ ಇಂಡಿಯಾ?
ಕಳೆದ ಪಂದ್ಯದಲ್ಲಿ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರ ಪಾದಾರ್ಪಣೆಯ ಹೊರತಾಗಿಯೂ ಭಾರತ ತಂಡ 191 ರನ್‌ಗಳ ಗುರಿಯನ್ನು ರಕ್ಷಿಸಿಕೊಳ್ಳಲು ವಿಫಲವಾಗಿತ್ತು. ಹೀಗಾಗಿ ನಾಯಕ ಶ್ರೇಯಸ್ ಅಯ್ಯರ್ ಮತ್ತು ಕೋಚ್ ಗೌತಮ್ ಗಂಭೀರ್ ಈ ಪಂದ್ಯದಲ್ಲಿ ಬಲಿಷ್ಠ ತಂತ್ರದೊಂದಿಗೆ ಕಣಕ್ಕಿಳಿಯಬೇಕಿದೆ.
ಇದಕ್ಕಾಗಿ ಒಂದು ಬದಲಾವಣೆ ಮಾಡುವ ಸಾಧ್ಯತೆಯಿದೆ. ಅದರಂತೆ ರವಿ ಬಿಷ್ಣೋಯ್ನ್ನು ಹೊರಗಿಟ್ಟು, ಪ್ರಿನ್ಸ್ ಯಾದವ್ಗೆ ಚಾನ್ಸ್ ನೀಡುವ ಸಾಧ್ಯತೆಯಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ.
ಭಾರತ ಸಂಭಾವ್ಯ ಪ್ಲೇಯಿಂಗ್ 11: ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಹರ್ಷಿತ್ ರಾಣಾ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ವರುಣ್ ಚಕ್ರವರ್ತಿ.
Published On - 9:19 am, Tue, 7 July 26




