ENG vs PAK: ಪಾಕ್ ವಿರುದ್ಧದ ಪಂದ್ಯಕ್ಕೆ ಎರಡು ದಿನ ಮೊದಲೇ ಪ್ಲೇಯಿಂಗ್ XI ಘೋಷಿಸಿದ ಇಂಗ್ಲೆಂಡ್
England vs Pakistan: ಇಂಗ್ಲೆಂಡ್ ಹಾಗೂ ಪಾಕಿಸ್ತಾನ್ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಸೋಮವಾರದಿಂದ ಶುರುವಾಗಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸುತ್ತಿರುವ ಈ ಸರಣಿಯ ಮೊದಲೆರಡು ಪಂದ್ಯಗಳು ಮುಲ್ತಾನ್ನಲ್ಲಿ ನಡೆಯಲಿದೆ. ಇನ್ನು ಮೂರನೇ ಪಂದ್ಯಕ್ಕೆ ರಾವಲ್ಪಿಂಡಿಯ ಇಂಟರ್ನ್ಯಾಷನಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಪಾಕಿಸ್ತಾನ್ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಪಂದ್ಯಕ್ಕೆ ಸರಣಿಗೆ ಸಿದ್ಧವಾಗಿದೆ. ಅಕ್ಟೋಬರ್ 7 ರಿಂದ ಈ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡವು ಆಡುವ ಬಳಗವನ್ನು ಹೆಸರಿಸಿದೆ. ಅಂದರೆ ಪಂದ್ಯಕ್ಕೂ ಎರಡು ದಿನ ಮುಂಚಿತವಾಗಿ ಪ್ಲೇಯಿಂಗ್ ಇಲೆವೆನ್ ಘೋಷಿಸಿ ಆಂಗ್ಲರು ಕುತೂಹಲ ಮೂಡಿಸಿದ್ದಾರೆ. ಮುಲ್ತಾನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಇಂಗ್ಲೆಂಡ್ ಹೆಸರಿಸಿರುವ ಈ ಪ್ಲೇಯಿಂಗ್ ಇಲೆವೆನ್ನಲ್ಲಿ ನಾಯಕ ಬೆನ್ ಸ್ಟೋಕ್ಸ್ ಕಾಣಿಸಿಕೊಂಡಿಲ್ಲ. ಮಂಡಿರಜ್ಜು ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಕಾರಣ ಸ್ಟೋಕ್ಸ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ.
ಇನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದ ಆರಂಭಿಕ ಆಟಗಾರ ಝಾಕ್ ಕ್ರಾಲಿ ಈ ಪಂದ್ಯದ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಹಾಗೆಯೇ ಬೆನ್ ಸ್ಟೋಕ್ಸ್ ಅಲಭ್ಯತೆಯ ಕಾರಣ ಇಂಗ್ಲೆಂಡ್ ತಂಡವನ್ನು ಉಪನಾಯಕ ಒಲೀ ಪೋಪ್ ಮುನ್ನಡೆಸಲಿದ್ದಾರೆ.
ಇನ್ನುಳಿದಂತೆ ತಂಡದಲ್ಲಿ ಸ್ಟಾರ್ ಆಟಗಾರರಾಗಿ ಜೋ ರೂಟ್, ಬೆನ್ ಡಕೆಟ್, ಹ್ಯಾರಿ ಬ್ರೂಕ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಈ ಸರಣಿಗೂ ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೈರ್ಸ್ಟೋವ್ ಆಯ್ಕೆಯಾಗಿಲ್ಲ. ಬದಲಾಗಿ ಯಂಗ್ ವಿಕೆಟ್ ಕೀಪರ್ ಬ್ಯಾಟರ್ ಜಾಮಿ ಸ್ಮಿತ್ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಗಾಯದ ಕಾರಣ ಈ ಸರಣಿಯಿಂದ ಪ್ರಮುಖ ವೇಗಿ ಮಾರ್ಕ್ ವುಡ್ ಹೊರಗುಳಿದಿದ್ದು, ಅವರ ಬದಲಿಗೆ ತಂಡದಲ್ಲಿ ಬ್ರೈಡನ್ ಕಾರ್ಸೆ ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ಸ್ಪಿನ್ನರ್ಗಳಾಗಿ ಜ್ಯಾಕ್ ಲೀಚ್ ಹಾಗೂ ಶೊಯೆಬ್ ಬಶೀರ್ ಸಹ ಆಯ್ಕೆಯಾಗಿದ್ದಾರೆ. ಅದರಂತೆ ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಇಂಗ್ಲೆಂಡ್ ಪ್ಲೇಯಿಂಗ್ XI: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್ (ನಾಯಕ), ಜೋ ರೂಟ್, ಹ್ಯಾರಿ ಬ್ರೂಕ್, ಜಾಮಿ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಬ್ರೈಡನ್ ಕಾರ್ಸೆ, ಜ್ಯಾಕ್ ಲೀಚ್, ಶೊಯೆಬ್ ಬಶೀರ್.
ಇದನ್ನೂ ಓದಿ: IPL 2025: ಐಪಿಎಲ್ ಫ್ರಾಂಚೈಸಿಗಳ ಚಿಂತೆ ಹೆಚ್ಚಿಸಿದ ಹೊಸ ರೂಲ್ಸ್
ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಗಸ್ ಅಟ್ಕಿನ್ಸನ್, ಶೊಯೆಬ್ ಬಶೀರ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಜೋರ್ಡಾನ್ ಕಾಕ್ಸ್ (ವಿಕೆಟ್ ಕೀಪರ್), ಝಾಕ್ ಕ್ರಾಲಿ, ಬೆನ್ ಡಕೆಟ್, ಜೋಶ್ ಹಲ್, ಜ್ಯಾಕ್ ಲೀಚ್, ಒಲೀ ಪೋಪ್, ಮ್ಯಾಥ್ಯೂ ಪಾಟ್ಸ್ , ಜೋ ರೂಟ್, ಜಾಮಿ ಸ್ಮಿತ್ (ವಿಕೆಟ್ ಕೀಪರ್), ಒಲೀ ಸ್ಟೋನ್, ಕ್ರಿಸ್ ವೋಕ್ಸ್.
ಇಂಗ್ಲೆಂಡ್-ಪಾಕಿಸ್ತಾನ್ ಟೆಸ್ಟ್ ಸರಣಿ ವೇಳಾಪಟ್ಟಿ:
- ಅಕ್ಟೋಬರ್ 7 ರಿಂದ 11, ಶುಕ್ರವಾರ: ಮೊದಲ ಟೆಸ್ಟ್ – ಮುಲ್ತಾನ್ – 11 AM IST
- ಅಕ್ಟೋಬರ್ 15 ರಿಂದ 19, ಶನಿವಾರ: ಎರಡನೇ ಟೆಸ್ಟ್ – ಮುಲ್ತಾನ್ – 11 AM IST
- ಅಕ್ಟೋಬರ್ 24 ರಿಂದ 28, ಸೋಮವಾರ: ಮೂರನೇ ಟೆಸ್ಟ್ – ರಾವಲ್ಪಿಂಡಿ – 11 AM IST