AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಸ್​ಕೆ ಕೋಚ್ ಹುದ್ದೆ ಆಫರ್​: 20 ಕೋಟಿ ರೂ.ಗೆ ಬೇಡಿಕೆ!

ಐಪಿಎಲ್ 2027ರ ಮೆಗಾ ಹರಾಜಿಗೂ ಮುನ್ನವೇ ಕ್ರಿಕೆಟ್ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ಬರೋಬ್ಬರಿ 17 ವರ್ಷಗಳ ಕಾಲ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯಶಸ್ಸಿನ ಸಾರಥಿಯಾಗಿದ್ದ ಸ್ಟೀಫನ್ ಫ್ಲೆಮಿಂಗ್ ನಿರ್ಗಮನದ ಬೆನ್ನಲ್ಲೇ, ತಂಡದ ನೂತನ ಹೆಡ್ ಕೋಚ್ ಯಾರು ಎಂಬ ಕುತೂಹಲಕ್ಕೆ ಈಗ ಹೊಸ ತಿರುವು ಸಿಕ್ಕಿದೆ. 

ಸಿಎಸ್​ಕೆ ಕೋಚ್ ಹುದ್ದೆ ಆಫರ್​: 20 ಕೋಟಿ ರೂ.ಗೆ ಬೇಡಿಕೆ!
ಇಯಾನ್ ಮೋರ್ಗನ್Image Credit source: x.com
ಝಾಹಿರ್ ಯೂಸುಫ್
|

Updated on: Sep 10, 2026 | 12:28 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-20 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಯಾರಾಗಲಿದ್ದಾರೆ? ಈ ಪ್ರಶ್ನೆಗೆ ಸದ್ಯ ಕೇಳಿ ಬರುತ್ತಿರುವ ಉತ್ತರ ಇಯಾನ್ ಮೋರ್ಗನ್. ಇಂಗ್ಲೆಂಡ್ ತಂಡದ ಮಾಜಿ ನಾಯಕನನ್ನು ಸಿಎಸ್​ಕೆ ತಂಡದ ಮುಖ್ಯ ಕೋಚ್ ಆಗಿಸಲು ತೆರೆಮರೆಯ ಪ್ರಯತ್ನ ನಡೆಯುತ್ತಿದೆ ಎಂದು ವರದಿಯಾಗಿದೆ.

ಇಂಗ್ಲೆಂಡ್ ತಂಡಕ್ಕೆ 2019 ರ ಏಕದಿನ ವಿಶ್ವಕಪ್ ಗೆದ್ದುಕೊಟ್ಟ ಈ ಯಶಸ್ವಿ ನಾಯಕ ಇಯಾನ್ ಮೋರ್ಗನ್ ಅವರನ್ನು ಸಿಎಸ್​ಕೆ ಫ್ರಾಂಚೈಸಿ ಸಂಪರ್ಕಿಸಿದ್ದು, ಈ ವೇಳೆ ಅವರು ₹20 ಕೋಟಿ ಸಂಭಾವನೆ ಬೇಡಿಕೆ ಇಟ್ಟಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

₹20 ಕೋಟಿ ಬೇಡಿಕೆ!

ಬರೋಬ್ಬರಿ 20 ಕೋಟಿ ರೂ… ಒಬ್ಬ ಕೋಚ್‌ಗೆ ಇಷ್ಟೊಂದು ದೊಡ್ಡ ಮೊತ್ತವೇ? ಎಂದು ಹಲವರು ಆಶ್ಚರ್ಯಪಡುತ್ತಿದ್ದಾರೆ. ಆದರೆ ಇನ್​ಸೈಡ್ ಮಾಹಿತಿ ಪ್ರಕಾರ, ಇಯಾನ್ ಮೋರ್ಗನ್ ಕೇಳುತ್ತಿರುವುದು ಕೇವಲ ತಮ್ಮ ವೈಯಕ್ತಿಕ ವೇತನವಲ್ಲ. ಬದಲಾಗಿ ತಮ್ಮ ಕೋಚಿಂಗ್ ತಂಡಕ್ಕಾಗಿ. ಅಂದರೆ ಮೋರ್ಗನ್ ತಮ್ಮೊಂದಿಗೆ ಕೋಚಿಂಗ್ ತಂಡವನ್ನೂ ಕೂಡ ಕರೆತರಲಿದ್ದಾರೆ. ಅವರೆಲ್ಲರ ವೇತನವನ್ನು ಸೇರಿಸಿ 20 ಕೋಟಿ ರೂ. ಬೇಡಿಕೆಯಿಟ್ಟಿದ್ದಾರೆ ಎನ್ನಲಾಗಿದೆ.

  • ಇಯಾನ್ ಮೋರ್ಗನ್ ತಮ್ಮದೇ ಆದ ಹೈ-ಪರ್ಫಾರ್ಮೆನ್ಸ್ ಕೋಚಿಂಗ್ ತಂಡ ಮತ್ತು ವಿಶ್ವವಿಖ್ಯಾತ ಡೇಟಾ ಅನಾಲಿಟಿಕ್ಸ್ ತಜ್ಞ ನಾಥನ್ ಲೀಮನ್ ಅವರನ್ನೊಳಗೊಂಡ ಸಂಪೂರ್ಣ ವ್ಯವಸ್ಥೆಯನ್ನೇ ಸಿಎಸ್‌ಕೆಗೆ ತರಲು ಬಯಸಿದ್ದಾರೆ.
  • ಸಿಎಸ್‌ಕೆ ತಂಡದ ಹಳೆಯ ಶೈಲಿಯನ್ನು ಬದಲಾಯಿಸಿ, ಸಂಪೂರ್ಣವಾಗಿ ಡೇಟಾ ಮತ್ತು ತಂತ್ರಜ್ಞಾನ ಆಧಾರಿತ ಹೊಸ ಕ್ರಿಕೆಟ್ ಮಾದರಿಯನ್ನು ರೂಪಿಸಲು ಪ್ಲ್ಯಾನ್ ರೂಪಿಸಿದ್ದಾರೆ.

ಇದಕ್ಕಾಗಿಯೇ ಇಯಾನ್ ಮೋರ್ಗನ್ ಇಷ್ಟು ಬೃಹತ್ ಮೊತ್ತದ ಸಂಭಾವನೆಗೆ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಈ ಮಾತುಕತೆ ಯಶಸ್ವಿಯಾದರೆ, ಚೆನ್ನೈ ಸೂಪರ್ ಕಿಂಗ್ಸ್  ತಂಡದ ನೂತನ ಮುಖ್ಯ ಕೋಚ್ ಆಗಿ ಇಂಗ್ಲೆಂಡ್‌ನ ಈ ಮಾಜಿ ನಾಯಕ ಕಾಣಿಸಿಕೊಳ್ಳುವುದು ಖಚಿತವಾಗಲಿದೆ.

ಇದನ್ನೂ ಓದಿ: ಫಿಟ್​ನೆಸ್ ಟೆಸ್ಟ್​ನಲ್ಲಿ ಫೇಲ್: ಟೀಮ್ ಇಂಡಿಯಾದಿಂದ ಯುವ ವೇಗಿ ಔಟ್!

ಅಶ್ವಿನ್ ಮೊದಲ ಸುಳಿವು:

ಭಾರತದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದರು. ಇಯಾನ್ ಮೋರ್ಗನ್ ಅವರ ತಾಂತ್ರಿಕ ಜ್ಞಾನ ಮತ್ತು ನಾಯಕತ್ವದ ಶೈಲಿ ಸಿಎಸ್‌ಕೆ ತಂಡಕ್ಕೆ ಹೇಗೆ ಹೊಸ ಶಕ್ತಿ ತುಂಬಬಲ್ಲದು ಎಂಬುದನ್ನು ಅವರು ವಿವರಿಸಿದ್ದರು. ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್‌ಮೆಂಟ್ ಅಥವಾ ಇಯಾನ್ ಮಾರ್ಗನ್ ಕಡೆಯಿಂದ ಅಧಿಕೃತ ಮುದ್ರೆ ಬೀಳಬೇಕಾಗಿದೆಯಾದರೂ, ಈ ಸುದ್ದಿ ಐಪಿಎಲ್ 2027 ರ ಮೆಗಾ ಹರಾಜಿಗೂ ಮುನ್ನ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿರುವುದಂತೂ ನಿಜ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!