ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಟಿ20 ವಿಶ್ವಕಪ್ನ (T20 World Cup) ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ (England vs Sri Lanka) ತಂಡ 26 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 6ನೇ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಸೆಮಿ ಫೈನಲ್ ಪ್ರವೇಶಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆರಂಭಿಕ ಬ್ಯಾಟರ್ ಜೋಸ್ ಬಟ್ಲರ್ (Jos Buttler) ಅವರ ದಾಖಲೆಯ ಸಿಡಿಲಬ್ಬರದ ಶತಕ ಹಾಗೂ ಬೌಲರ್‌ಗಳ ಸಂಘಟಿತ ದಾಳಿ ಫಲವಾಗಿ ಹಾಲಿ ರನ್ನರ್‌ಅಪ್ ಇಂಗ್ಲೆಂಡ್ ತಂಡ (England Cricket Team) ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ 4ನೇ ಜಯ ದಾಖಲಿಸಿತು. ಈ ಮೂಲಕ ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಇಯಾನ್ ಮಾರ್ಗನ್ (Eoin Morgan) ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ.
ನಾಯಕನಾಗಿ ಅತಿ ಹೆಚ್ಚು ಗೆಲುವು ಸಾಧಿಸಿದ ದಾಖಲೆಯನ್ನು ಇಯಾನ್ ಮಾರ್ಗನ್ ತಮ್ಮದಾಗಿಸಿಕೊಂಡಿದ್ದಾರೆ. ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಹಾಗೂ ಅಫ್ಘಾನಿಸ್ತಾನದ ಮಾಜಿ ನಾಯಕ ಅಸ್ಘರ್ ಅಫ್ಘನ್ ಹೆಸರಿನಲ್ಲಿದ್ದ ದಾಖಲೆಯನ್ನು ಮೀರಿ ನಿಂತಿದ್ದಾರೆ. ಇಯಾನ್ ಮಾರ್ಗನ್ ನಾಯಕತ್ವದಲ್ಲಿ ಇಂಗ್ಲೆಂಡ್ ತಂಡ 43 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇದು ಚುಟುಕು ಕ್ರಿಕೆಟ್‌ನಲ್ಲಿ ನಾಯಕನೋರ್ವ ಸಾಧಿಸಿದ ಅತಿ ಹೆಚ್ಚಿನ ಗೆಲುವುವಾಗಿದೆ. 68 ಪಂದ್ಯಗಳಲ್ಲಿ ಇಯಾನ್ ಮಾರ್ಗನ್ ಈ ಸಾಧನೆ ಮಾಡಿದ್ದಾರೆ.
ಇದಕ್ಕೂ ಮುನ್ನ ಈ ದಾಖಲೆಯನ್ನು ಹೊಂದಿರುವ ಅಸ್ಘರ್ ಅಫ್ಘನ್ ಹಾಗೂ ಎಂಎಸ್ ಧೋನಿ ತಲಾ 42 ಗೆಲುವುಗಳನ್ನು ಸಾಧಿಸಿದ್ದಾರೆ. ಅಸ್ಘರ್ ಅಫ್ಘನ್ 52 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರೆ ಎಂಎಸ್ ಧೋನಿ 72 ಪಂದ್ಯಗಳಲ್ಲಿ ಇದನ್ನು ಸಾಧಿಸಿದ್ದರು.
ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ತಂಡ ಅದ್ಭುತವಾದ ಪ್ರದರ್ಶನ ನೀಡುತ್ತಿದೆ. ಸೂಪರ್ 12 ಹಂತದಲ್ಲಿ ಇಯಾನ್ ಮಾರ್ಗನ್ ಬಳಗ ನಾಲ್ಕು ಪಂದ್ಯವನ್ನು ಆಡಿದ್ದು 4 ಪಂದ್ಯದಲ್ಲಿಯೂ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸೆಮಿಫೈನಲ್ ಪ್ರವೇಶವನ್ನು ಖಚಿತಪಡಿಸಿಕೊಂಡಿದೆ.
ಶ್ರೀಲಂಕಾ ವಿರುದ್ಧದ ಇಂಗ್ಲೆಂಡ್ ಗೆಲುವಿನಲ್ಲಿ ಜೋಸ್ ಬಟ್ಲರ್ ಪಾತ್ರ ಮುಖ್ಯವಾಯಿತು. ವಿಕೆಟ್ ಕೀಪರ್ ಬ್ಯಾಟರ್ ಜೋಸ್ ಬಟ್ಲರ್ ಶತಕ ಈ ಪಂದ್ಯದ ಹೈಲೈಟ್ ಆಯಿತು. ಈ ಮೂಲಕ ದಾಖಲೆ ಬರೆದ ಇವರು ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಶತಕ ದಾಖಲಿಸಿದ ಇಂಗ್ಲೆಂಡ್‌ನ ಮೊತ್ತ ಮೊದಲ ಬ್ಯಾಟರ್ ಎಂಬ ಹಿರಿಮೆಗೆ ಭಾಜನರಾದರು. ಈ ಹಿಂದೆ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲೂ ಶತಕ ಗಳಿಸಿದ್ದಾರೆ. ಅಂತೆಯೇ 2021ನೇ ಸಾಲಿನ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ದಾಖಲಾದ ಮೊದಲ ಶತಕವೂ ಇದಾಗಿದೆ.
Rohit Sharma: ಶಾಕಿಂಗ್ ನ್ಯೂಸ್: ಇನ್ನೆರಡು ದಿನಗಳಲ್ಲಿ ಟೀಮ್ ಇಂಡಿಯಾ ಏಕದಿನ-ಟಿ20ಗೆ ಹೊಸ ನಾಯಕನ ಘೋಷಣೆ
MS Dhoni: ಎಂ ಎಸ್ ಧೋನಿ ಹಾಗೂ ರವಿ ಶಾಸ್ತ್ರಿ ನಡುವೆ ಬಿರುಕು?: ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ
(Eoin Morgan surpassed India Mahendra Singh Dhoni and Afghanistan Asghar Afghan as captain with most T20I wins)