ಬರೋಬ್ಬರಿ 18 ಸಿಕ್ಸರ್; 27 ಎಸೆತಗಳಲ್ಲಿ ಶತಕ ಸಿಡಿಸಿ ವಿಶ್ವದಾಖಲೆ ಬರೆದ ಸಾಹಿಲ್ ಚೌಹಾಣ್..!

Fastest Century in T20I: ಮೊದಲು 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸಾಹಿಲ್ ಚೌಹಾಣ್ ನಂತರ 27 ಎಸೆತಗಳಲ್ಲಿ ಶತಕ ಪೂರೈಸಿ ಇತಿಹಾಸ ನಿರ್ಮಿಸಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತಿ ವೇಗದ ಶತಕ ಸಿಡಿಸಿದ ಕ್ರಿಸ್ ಗೇಲ್ (30 ಎಸೆತ) ದಾಖಲೆ ಮುರಿದರು.

ಬರೋಬ್ಬರಿ 18 ಸಿಕ್ಸರ್; 27 ಎಸೆತಗಳಲ್ಲಿ ಶತಕ ಸಿಡಿಸಿ ವಿಶ್ವದಾಖಲೆ ಬರೆದ ಸಾಹಿಲ್ ಚೌಹಾಣ್..!
ಸಾಹಿಲ್ ಚೌಹಾಣ್
Follow us
|

Updated on: Jun 17, 2024 | 10:09 PM

ಸದ್ಯ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ ಟಿ20 ವಿಶ್ವಕಪ್ (T20 World Cup 2024) ನಡೆಯುತ್ತಿದೆ. ಹೀಗಾಗಿ ವಿಶ್ವ ಕ್ರಿಕೆಟ್​ನ ಕಣ್ಣು ಈ ಮಿನಿ ವಿಶ್ವಸಮರದ ಮೇಲಿದೆ. ಆದರೆ ಈ ನಡುವೆ ಕ್ರಿಕೆಟ್ ಶಿಶು ದೇಶಗಳ ನಡುವೆ ಟಿ20 ಸರಣಿ ನಡೆಯುತ್ತಿದ್ದು, ಸರಣಿಯ 2ನೇ ಪಂದ್ಯದಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತಿ ವೇಗದ ಶತಕ ಸಿಡಿಸಿದ ದಾಖಲೆ ಸೃಷ್ಟಿಯಾಗಿದೆ. ವಾಸ್ತವವಾಗಿ ನಮೀಬಿಯಾದ ಜಾನ್ ನಿಕೋಲ್ ಲಾಫ್ಟಿ-ಈಟನ್ ಈ ವರ್ಷದ ಫೆಬ್ರವರಿಯಲ್ಲಿ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ 33 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಆದರೆ ಈಗ ಅವರಿಗಿಂತ 6 ಕಡಿಮೆ ಎಸೆತಗಳಲ್ಲಿ ಎಸ್ಟೋನಿಯಾ ತಂಡದ ಸಾಹಿಲ್ ಚೌಹಾಣ್ (Sahil Chauhan) ಶತಕ ಬಾರಿಸಿದ್ದಾರೆ. ಇದು ಅಂತಾರಾಷ್ಟ್ರೀಯ ಕ್ರಿಕೆಟ್ ಹಾಗೂ ಯಾವುದೇ ವೃತ್ತಿಪರ ಕ್ರಿಕೆಟ್‌ನಲ್ಲಿ ಅತಿ ವೇಗದ ಶತಕ ಎಂಬ ದಾಖಲೆ ಬರೆದಿದೆ.

27 ಎಸೆತಗಳಲ್ಲಿ ಶತಕ

ವಾಸ್ತವವಾಗಿ ಸೈಪ್ರಸ್ ಮತ್ತು ಎಸ್ಟೋನಿಯಾ ತಂಡಗಳ ನಡುವೆ ನಡೆದ ಎರಡನೇ ಟಿ20 ಪಂದ್ಯದಲ್ಲಿ ಎಸ್ಟೋನಿಯಾ ತಂಡದ ಸ್ಟಾರ್ ಬ್ಯಾಟರ್ ಸಾಹಿಲ್ ಚೌಹಾಣ್ ಕೇವಲ 27 ಎಸೆತಗಳಲ್ಲಿ ಶತಕ ಸಿಡಿಸಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತಿ ವೇಗದ ಶತಕ ಸಿಡಿಸಿದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು ಮುಂದಿನ 13 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿದರು. 192 ರನ್‌ಗಳ ಗುರಿ ಬೆನ್ನತ್ತಿದ ಎಸ್ಟೋನಿಯಾ ತಂಡ 9 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಅವರು ಸಿಕ್ಸರ್‌ನೊಂದಿಗೆ ತಮ್ಮ ಖಾತೆ ತೆರೆದರು. ಇದಾದ ನಂತರ ಮುಂದಿನ ಎರಡು ಎಸೆತಗಳಲ್ಲಿ 10 ರನ್ ಕಲೆಹಾಕಿದರು.

41 ಎಸೆತಗಳಲ್ಲಿ 144 ರನ್

ಸಾಹಿಲ್ ಚೌಹಾಣ್ ತಮ್ಮ ಈ ಸ್ಫೋಟಕ ಇನ್ನಿಂಗ್ಸ್​ನಲ್ಲಿ 41 ಎಸೆತಗಳನ್ನು ಎದುರಿಸಿ 18 ಸಿಕ್ಸರ್‌ ಹಾಗೂ 6 ಬೌಂಡರಿಗಳ ಸಹಾಯದಿಂದ 144 ರನ್ ಚಚ್ಚಿದರು. ಈ ಪಂದ್ಯದಲ್ಲಿ ಸಾಹಿಲ್ 18 ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ಟಿ20 ಅಂತಾರಾಷ್ಟ್ರೀಯ ಇನ್ನಿಂಗ್ಸ್‌ನಲ್ಲಿ ಗರಿಷ್ಠ ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನೂ ಬರೆದರು. ಇಂದು ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಅವರು ಖಾತೆಯನ್ನೂ ತೆರೆಯಲಿಲ್ಲ. ಆದರೆ ಎರಡನೇ ಪಂದ್ಯದಲ್ಲಿ ಬೌಲರ್​ಗಳ ಬೆವರಿಳಿಸಿ ವಿಶ್ವ ದಾಖಲೆ ನಿರ್ಮಿಸಿದರು. ಸಾಹಿಲ್ ಅವರ ಸ್ಫೋಟಕ ಬ್ಯಾಟಿಂಗ್​ನ ಆಧಾರದ ಮೇಲೆ ಎಸ್ಟೋನಿಯಾ ತಂಡ 13ನೇ ಓವರ್‌ನಲ್ಲಿಯೇ 194 ರನ್ ಗುರಿ ಬೆನ್ನಟ್ಟಿ ಸೈಪ್ರಸ್ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿತು.

ಗೇಲ್‌ ದಾಖಲೆ ಉಡೀಸ್

ಮೊದಲು 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸಾಹಿಲ್ ನಂತರ 27 ಎಸೆತಗಳಲ್ಲಿ ಶತಕ ಪೂರೈಸಿ ಇತಿಹಾಸ ನಿರ್ಮಿಸಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತಿ ವೇಗದ ಶತಕ ಸಿಡಿಸಿದ ಕ್ರಿಸ್ ಗೇಲ್ (30 ಎಸೆತ) ದಾಖಲೆಯನ್ನು ಪುಡಿಗಟ್ಟಿದರು. ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ 32 ವರ್ಷದ ಸಾಹಿಲ್ ಇದಕ್ಕೂ ಮುನ್ನ ಮೇ ತಿಂಗಳಿನಲ್ಲಿ ಓವರ್ ಒಂದರಲ್ಲಿ ಸತತ 6 ಸಿಕ್ಸರ್ ಬಾರಿಸಿ ಸಂಚಲನ ಮೂಡಿಸಿ ಎಲ್ಲರ ಗಮನ ಸೆಳೆದಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ