AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ‘ವಿರಾಟ್ ಭಯದಿಂದ ನಿವೃತ್ತಿ ಘೋಷಿಸಿದ್ದಾರೆ’; ಇಂಗ್ಲೆಂಡ್‌ ಕ್ರಿಕೆಟಿಗನ ವಿಚಿತ್ರ ಹೇಳಿಕೆ

Virat Kohli's Test Retirement: ಇಂಗ್ಲೆಂಡ್​ನ ಮಾಜಿ ಆಟಗಾರ ಮಾಂಟಿ ಪನೇಸರ್ ಅವರು ಕೊಹ್ಲಿ ವೈಫಲ್ಯದ ಭಯದಿಂದ ನಿವೃತ್ತರಾಗಿದ್ದಾರೆ ಎಂಬ ವಿಚಿತ್ರ ಹೇಳಿಕೆ ನೀಡಿದ್ದಾರೆ. ಈ ನಿವೃತ್ತಿಯಿಂದಾಗಿ ಯುವ ಆಟಗಾರರಿಗೆ ಅವಕಾಶ ದೊರೆತಿದ್ದು, ಅವರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಇಂಗ್ಲೆಂಡ್ ಪ್ರವಾಸ ಸುವರ್ಣಾವಕಾಶವಾಗಿದೆ. ಶುಭ್‌ಮನ್ ಗಿಲ್ ನೇತೃತ್ವದ ಯುವ ತಂಡ ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಸವಾಲನ್ನು ಎದುರಿಸಲಿದೆ.

Virat Kohli: ‘ವಿರಾಟ್ ಭಯದಿಂದ ನಿವೃತ್ತಿ ಘೋಷಿಸಿದ್ದಾರೆ’; ಇಂಗ್ಲೆಂಡ್‌ ಕ್ರಿಕೆಟಿಗನ ವಿಚಿತ್ರ ಹೇಳಿಕೆ
Virat Kohli
ಪೃಥ್ವಿಶಂಕರ
|

Updated on:Jun 01, 2025 | 8:03 PM

Share

ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಟೀಂ ಇಂಡಿಯಾದ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ (Virat Kohli) ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಹೊಂದುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು. ಹೀಗಾಗಿ ಈ ಇಬ್ಬರು ದಿಗ್ಗಜರ ಅನುಪಸ್ಥಿತಿಯಲ್ಲಿ ಶುಭ್​ಮನ್ ಗಿಲ್ ನೇತೃತ್ವದ ಯುವ ತಂಡವನ್ನು ಇಂಗ್ಲೆಂಡ್ ವಿರುದ್ಧ (IND vs ENG) ಐದು ಟೆಸ್ಟ್ ಸರಣಿ ಆಡಲು ಕಳುಹಿಸಲಾಗುತ್ತಿದೆ. ಮೊದಲ ಟೆಸ್ಟ್ ಪಂದ್ಯ ಜೂನ್ 20 ರಿಂದ ಆರಂಭವಾಗಲಿದೆ. ಆದರೆ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಕೆಲವು ಆಟಗಾರರು ಪ್ರಸ್ತುತ ಇಂಗ್ಲೆಂಡ್‌ನಲ್ಲಿ ಭಾರತ-ಎ ಪರ ಅನಧಿಕೃತ ಪಂದ್ಯಗಳನ್ನು ಆಡುತ್ತಿದ್ದಾರೆ. ಈ ಸಂದರ್ಭದಲ್ಲಿ, ಇಂಗ್ಲೆಂಡ್‌ನ ಮಾಜಿ ಆಟಗಾರ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆ ವಿಚಿತ್ರವಾದ ಹೇಳಿಕೆ ನೀಡಿದ್ದಾರೆ. ವೈಫಲ್ಯದ ಭಯದಿಂದಾಗಿ ವಿರಾಟ್ ಕೊಹ್ಲಿ ಈ ಸ್ವರೂಪದಿಂದ ನಿವೃತ್ತರಾಗಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ

ವೈಫಲ್ಯದ ಭಯದಿಂದ ಕೊಹ್ಲಿ ನಿವೃತ್ತಿ

ಇಂಗ್ಲೆಂಡ್‌ನ ಮಾಜಿ ಸ್ಪಿನ್ನರ್ ಮಾಂಟಿ ಪನೇಸರ್, ‘ವಿರಾಟ್ ಕೊಹ್ಲಿ ವೈಫಲ್ಯದ ಭಯದಿಂದ ನಿವೃತ್ತರಾಗಿರಬಹುದು ಎಂದು ನಾನು ಭಾವಿಸುತ್ತೇನೆ. ವಿರಾಟ್ ಕೊಹ್ಲಿ ಇಂಗ್ಲೆಂಡ್‌ನಲ್ಲಿ ಆಡಬೇಕೆಂದು ನಾವು ಕಾಯುತ್ತಿದ್ದೆವು, ಆದರೆ ಅವರು ನಿವೃತ್ತಿ ಹೊಂದುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು. ವಿರಾಟ್ ಈ ರೀತಿ ನಿವೃತ್ತಿ ಹೊಂದುತ್ತಾರೆ ಎಂದು ನಾನು ಅಂದುಕೊಂಡಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಆಫ್ ಸ್ಟಂಪ್‌ನ ಹೊರಗೆ ಹೋಗುವ ಚೆಂಡುಗಳನ್ನು ಆಡುವುದು ವಿರಾಟ್​ಗೆ ಕಷ್ಟಕರವಾಗಿತ್ತು. ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿ ಕೊಹ್ಲಿ ಈ ಎಸೆತಗಳಲ್ಲಿ ಔಟಾಗುತ್ತಿರುವುದು ಕಂಡುಬಂದಿತು. ಬಹುಶಃ ಅದಕ್ಕಾಗಿಯೇ ಕೊಹ್ಲಿ ಟೆಸ್ಟ್​ಗೆ ನಿವೃತ್ತಿ ಹೊಂದಿರಬಹುದು. ಇದಲ್ಲದೆ ವಿರಾಟ್, ಯುವಕರಿಗೆ ಅವಕಾಶ ನೀಡುವ ಸಲುವಾಗಿಯೂ ಈ ನಿರ್ಧಾರ ತೆಗೆದುಕೊಂಡಿರಬಹುದು’ ಎಂದಿದ್ದಾರೆ.

ಫೋಟೋ ಶೂಟ್​ನಲ್ಲೂ ಕೊಹ್ಲಿಯನ್ನು ಬಿಡದ ಸ್ವಸ್ತಿಕ್; ದೂರ ತಳ್ಳಿದ ಡೇವಿಡ್, ಲಿವಿಂಗ್​ಸ್ಟೋನ್! ವಿಡಿಯೋ

ಯುವಕರಿಗೆ ಸುವರ್ಣ ಅವಕಾಶ

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಿವೃತ್ತಿಯ ನಂತರ, ಯುವಕರಿಗೆ ತಮ್ಮನ್ನು ತಾವು ಸಾಬೀತುಪಡಿಸಲು ಉತ್ತಮ ಅವಕಾಶವಿದೆ ಎಂದು ಮಾಂಟಿ ಪನೇಸರ್ ಅಭಿಪ್ರಾಯಪಟ್ಟಿದ್ದಾರೆ. ಕರುಣ್ ನಾಯರ್ ಅವರನ್ನು ಉಲ್ಲೇಖಿಸಿ ಅವರು, ‘ಕರುಣ್ ನಾಯರ್ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದರ ಮೇಲೆ ಅದು ಅವಲಂಬಿತವಾಗಿರುತ್ತದೆ, ಅವರು ಇಂಗ್ಲೆಂಡ್ ಲಯನ್ಸ್ ವಿರುದ್ಧ ದ್ವಿಶತಕ ಬಾರಿಸಿದ್ದಾರೆ. ಭಾರತ ಯುವ ತಂಡವು ಇಂಗ್ಲೆಂಡ್‌ನಲ್ಲಿ ಅದ್ಭುತಗಳನ್ನು ಮಾಡಬಲ್ಲ ಅನೇಕ ಅತ್ಯುತ್ತಮ ಆಟಗಾರರನ್ನು ಹೊಂದಿದೆ. ಇದರ ಹೊರತಾಗಿ, ಶುಭ್​ಮನ್ ಗಿಲ್ ಕೂಡ ಇಂಗ್ಲಿಷ್ ನೆಲದಲ್ಲಿ ಇತಿಹಾಸ ಸೃಷ್ಟಿಸುವ ಅವಕಾಶವನ್ನು ಹೊಂದಿದ್ದಾರೆ’ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Sun, 1 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ