Ramiz Raja: ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ಥಾನದಿಂದ ರಮೀಜ್ ರಾಜಾ ವಜಾ

2021 ರಲ್ಲಿ ಪಾಕ್ ಕ್ರಿಕೆಟ್ ಮಂಡಳಿಯ ಚುಕ್ಕಾಣಿ ಹಿಡಿದಿದ್ದ ರಮೀಜ್ ರಾಜಾ ಅವರು, ಪಾಕಿಸ್ತಾನ್ ಕ್ರಿಕೆಟ್​ನಲ್ಲಿ ಹಲವು ಮಹತ್ವದ ಬದಲಾವಣೆಗೆ ಕಾರಣರಾಗಿದ್ದರು.

Ramiz Raja: ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ಥಾನದಿಂದ ರಮೀಜ್ ರಾಜಾ ವಜಾ
Ramiz Raja
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 22, 2022 | 7:53 PM

ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಸ್ಥಾನದಿಂದ ರಮೀಜ್ ರಾಜಾ (Ramiz Raja) ಅವರನ್ನು ವಜಾ ಮಾಡಲಾಗಿದೆ. ಇಂಗ್ಲೆಂಡ್‌ ವಿರುದ್ಧ 0-3 ಅಂತರದಲ್ಲಿ ಟೆಸ್ಟ್‌ ಸರಣಿಯಲ್ಲಿ ಪಾಕ್ ತಂಡವು ವೈಟ್ ವಾಷ್ ಆದ ಬೆನ್ನಲ್ಲೇ ಪಿಸಿಬಿ ಅಧ್ಯಕ್ಷ ಸ್ಥಾನದಿಂದ ರಾಜಾ ಅವರನ್ನು ಕೆಳಗಿಳಿಸುವಂತೆ ಪಾಕ್ ಸರ್ಕಾರ ಸೂಚಿಸಿತ್ತು. ಅದರಂತೆ ಇದೀಗ ರಮೀಜಾ ಅವರಿಗೆ ಗೇಟ್ ಪಾಸ್ ನೀಡಲಾಗಿದ್ದು, ಅವರ ಸ್ಥಾನಕ್ಕೆ ನಜಾಮ್‌ ಸೇಥಿ ಅವರನ್ನು ನೇಮಿಸಲಾಗಿದೆ.

2021 ರಲ್ಲಿ ಪಾಕ್ ಕ್ರಿಕೆಟ್ ಮಂಡಳಿಯ ಚುಕ್ಕಾಣಿ ಹಿಡಿದಿದ್ದ ರಮೀಜ್ ರಾಜಾ ಅವರು, ಪಾಕಿಸ್ತಾನ್ ಕ್ರಿಕೆಟ್​ನಲ್ಲಿ ಹಲವು ಮಹತ್ವದ ಬದಲಾವಣೆಗೆ ಕಾರಣರಾಗಿದ್ದರು. ಅದರಲ್ಲೂ ತವರಿನಲ್ಲಿ ಪುನರ್ ಸರಣಿ ಆರಂಭಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಷ್ಟೇ ಅಲ್ಲದೆ ಮುಂದಿನ ಏಷ್ಯಾಕಪ್ ಆಯೋಜನೆಯ ಉಸ್ತುವಾರಿಯನ್ನು ಪಿಸಿಬಿ ವಹಿಸಿಕೊಂಡಿತ್ತು. ಇದರ ಬೆನ್ನಲ್ಲೇ ನಾನಾ ರೀತಿಯ ಹೇಳಿಕೆಗಳ ಮೂಲಕ ವಿವಾದ ಹುಟ್ಟುಹಾಕುವ ಮೂಲಕ ಭಾರೀ ಟೀಕೆಗಳಿಗೆ ಗುರಿಯಾಗಿದ್ದರು.

2023 ರ ಏಷ್ಯಾಕಪ್​ ಪಾಕಿಸ್ತಾನದಲ್ಲಿ ನಡೆದರೆ ಟೂರ್ನಿಯಿಂದ ಭಾರತ ಹಿಂದೆ ಸರಿಯುವುದಾಗಿ ತಿಳಿಸಿತ್ತು. ಇದರ ಬೆನ್ನಲ್ಲೇ ಭಾರತದಲ್ಲಿ ನಡೆಯುವ ಐಸಿಸಿ ವಿಶ್ವಕಪ್​ ಬಹಿಷ್ಕರಿಸುವ ಹೇಳಿಕೆ ನೀಡುವ ಮೂಲಕ ರಮೀಜ್ ರಾಜಾ ಅಚ್ಚರಿ ಮೂಡಿಸಿದ್ದರು.

ಇದನ್ನೂ ಓದಿ
Image
IPL 2023: ಕೋಟಿ ಮೂಲ ಬೆಲೆ ಘೋಷಿಸಿದ ಕೇದರ್ ಜಾಧವ್
Image
IPL 2023 Auction: ಐಪಿಎಲ್​ ಮಿನಿ ಹರಾಜಿನಲ್ಲಿ ಈ ಆಟಗಾರರು​ ಹರಾಜಾಗುವುದು ಡೌಟ್
Image
Rohit Sharma: ಹಿಟ್​ಮ್ಯಾನ್​ ಸಿಡಿಲಬ್ಬರಕ್ಕೆ ಕ್ರಿಸ್ ಗೇಲ್ ವಿಶ್ವ ದಾಖಲೆ ಉಡೀಸ್
Image
ICC Test Player Rankings: ಟೆಸ್ಟ್​ ರ‍್ಯಾಂಕಿಂಗ್ ಪ್ರಕಟ: ಟಾಪ್​-10 ನಲ್ಲಿ ರಿಷಭ್ ಪಂತ್..!

ಇದನ್ನೂ ಓದಿ: IPL 2023: ಹೇಗಿರಲಿದೆ ಐಪಿಎಲ್ ಮಿನಿ ಹರಾಜು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಇದರ ಬೆನ್ನಲ್ಲೇ ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್​ನಲ್ಲಿ ಪಾಕ್ ತಂಡದ ಆಯ್ಕೆ ಬಗ್ಗೆ ಕೂಡ ಅಪಸ್ವರಗಳು ಕೇಳಿ ಬಂದಿದ್ದವು. ಇವೆಲ್ಲದರ ನಡುವೆ ಸುಪ್ರೀಂ ಆಗಿ ಮೆರೆದಿದ್ದ ರಮೀಜ್ ರಾಜಾ ಅವರನ್ನು ಇದೀಗ ಪಿಸಿಬಿ ಅಧ್ಯಕ್ಷ ಸ್ಥಾನದಿಂದ ಪಾಕ್ ಪ್ರಧಾನಿ ಸೂಚನೆಯಂತೆ ತೆಗೆದು ಹಾಕಲಾಗಿದೆ.

ಅಲ್ಲದೆ ಅವರ ಸ್ಥಾನಕ್ಕೆ ನಜಾಮ್ ಸೇಥಿ ನೇತೃತ್ವದ ಹೊಸ 14 ಸದಸ್ಯರ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ವಿಶೇಷ ಎಂದರೆ ಈ 14 ಸದಸ್ಯರ ಪಟ್ಟಿಯಲ್ಲಿ ಮಾಜಿ ಪಾಕ್ ಆಟಗಾರ ಶಾಹಿದ್ ಅಫ್ರಿದಿ ಕೂಡ ಸ್ಥಾನ ಪಡೆದಿದ್ದಾರೆ.

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ