Finn Allen: 6,6,6,6,6.. ಐದು ಎಸೆತಗಳಲ್ಲಿ 5 ಸಿಕ್ಸರ್ ಬಾರಿಸಿದ ಮಾಜಿ ಆರ್​ಸಿಬಿ ಆಟಗಾರ; ವಿಡಿಯೋ ನೋಡಿ

Finn Allen: ಮೇಜರ್ ಲೀಗ್ ಕ್ರಿಕೆಟ್‌ನಲ್ಲಿ ಸ್ಯಾನ್ ಫ್ರಾನ್ಸಿಸ್ಕೊ ​​​​ಯುನಿಕಾರ್ನ್ಸ್ ಪರ ಆಡುತ್ತಿರುವ ಫಿನ್ ಅಲೆನ್, ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದರು. ಆರ್​ಸಿಬಿ, 2021 ರಲ್ಲಿ ಅಲೆನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿತ್ತು. ಆದರೆ, ಅಲೆನ್‌ಗೆ ಐಪಿಎಲ್‌ನಲ್ಲಿ ಒಂದೇ ಒಂದು ಪಂದ್ಯವನ್ನು ಆಡುವ ಅವಕಾಶ ಸಿಗಲಿಲ್ಲ.

Finn Allen: 6,6,6,6,6.. ಐದು ಎಸೆತಗಳಲ್ಲಿ 5 ಸಿಕ್ಸರ್ ಬಾರಿಸಿದ ಮಾಜಿ ಆರ್​ಸಿಬಿ ಆಟಗಾರ; ವಿಡಿಯೋ ನೋಡಿ
ಫಿನ್ ಅಲೆನ್
Follow us
ಪೃಥ್ವಿಶಂಕರ
|

Updated on:Jul 08, 2024 | 6:30 PM

ಟಿ20 ವಿಶ್ವಕಪ್ ಮುಕ್ತಾಯದ ಬಳಿಕ ಇದೀಗ ಅಮೆರಿಕದಲ್ಲಿ ಮೇಜರ್ ಲೀಗ್ ಕ್ರಿಕೆಟ್ ಪ್ರಾರಂಭವಾಗಿದೆ. ಪ್ರತಿ ದಿನವೂ ಲೀಗ್‌ನಲ್ಲಿ ರೋಚಕ ಪಂದ್ಯಗಳು ನಡೆಯುತ್ತಿವೆ. ಲೀಗ್​ನಲ್ಲಿ ಇಂದು ಲಾಸ್ ಏಂಜಲೀಸ್ ನೈಟ್ ರೈಡರ್ಸ್ ಹಾಗೂ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡಗಳ ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ತಂಡವನ್ನು 6 ವಿಕೆಟ್​​ಗಳಿಂದ ಮಣಿಸುವಲ್ಲಿ ಯಶಸ್ವಿಯಾಯಿತು. ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ಪರ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್‌ನ ಸ್ಫೋಟಕ ಬ್ಯಾಟ್ಸ್‌ಮನ್ ಫಿನ್ ಅಲೆನ್ ತಂಡದ ಗೆಲುವಿನ ಪ್ರಮುಖ ರೂವಾರಿ ಎನಿಸಿಕೊಂಡರು. ಈ ಪಂದ್ಯದಲ್ಲಿ ಫಿನ್ ಅಲೆನ್ ತಾವು ಎದುರಿಸಿದ ಸತತ ಐದು ಎಸೆತಗಳಲ್ಲಿ 5 ಸಿಕ್ಸರ್ ಬಾರಿಸಿದರು.

ಸತತ ಐದು ಎಸೆತಗಳಲ್ಲಿ 5 ಸಿಕ್ಸರ್

ಮೊದಲು, ಲಾಸ್ ಏಂಜಲೀಸ್ ನೈಟ್ ರೈಡರ್ಸ್ ತಂಡದ ಆಂಡ್ರೆ ರಸೆಲ್ ಬೌಲ್ ಮಾಡಿದ ಐದನೇ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ ಅಲೆನ್ ಸತತ ಎರಡು ಸಿಕ್ಸರ್‌ಗಳನ್ನು ಬಾರಿಸಿದರು. ರಸೆಲ್ ಅವರ ಐದನೇ ಎಸೆತವನ್ನು ಮಿಡ್-ವಿಕೆಟ್ ಮೇಲೆ ಸಿಕ್ಸರ್ ಬಾರಿಸಿದ ಅಲೆನ್ ನಂತರ, ಕೊನೆಯ ಎಸೆತದಲ್ಲಿ ಬ್ಯಾಕ್‌ವರ್ಡ್ ಸ್ಕ್ವೇರ್ ಲೆಗ್ ಓವರ್‌ನಲ್ಲಿ ಸಿಕ್ಸರ್ ಬಾರಿಸಿದರು.

ಆ ನಂತರ ಆರನೇ ಓವರ್‌ನಲ್ಲಿ ಸಿಕ್ಸರ್ ಬಾರಿಸುವ ತಮ್ಮ ಸರಣಿಯನ್ನು ಮುಂದುವರೆಸಿದ ಅಲೆನ್, ಶಕೀಬ್ ಅಲ್ ಹಸನ್ ಎಸೆದ ಈ ಓವರ್‌ನ ಎರಡನೇ ಎಸೆತವನ್ನು ವೈಡ್ ಲಾಂಗ್ ಆನ್‌ನಲ್ಲಿ ಸಿಕ್ಸರ್ ಬಾರಿಸಿದರು. ಮೂರನೇ ಎಸೆತವನ್ನೂ ಲಾಂಗ್ ಆನ್ ಮೇಲೆ ಸಿಕ್ಸರ್ ಬಾರಿಸಿದ ಅವರು, ನಾಲ್ಕನೇ ಎಸೆತದಲ್ಲಿಯೂ ಚೆಂಡನ್ನು ಬೌಂಡರಿ ಗೆರೆ ದಾಟಿಸುವಲ್ಲಿ ಯಶಸ್ವಿಯಾದರು. ಅಲೆನ್‌ಗೆ ಸತತ 6 ಎಸೆತಗಳಲ್ಲಿ 6 ಸಿಕ್ಸರ್‌ಗಳನ್ನು ಬಾರಿಸುವ ಅವಕಾಶವಿತ್ತು ಆದರೆ ಅದರಲ್ಲಿ ಯಶಸ್ವಿಯಾಗಲಿಲ್ಲ. ಈ ಪಂದ್ಯದಲ್ಲಿ ಅಲೆನ್ 37 ಎಸೆತಗಳಲ್ಲಿ 4 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 63 ರನ್ ಗಳಿಸಿ ಬಿರುಸಿನ ಆಟವಾಡಿದರು. ಅವರ ಇನ್ನಿಂಗ್ಸ್‌ನ ಆಧಾರದ ಮೇಲೆ, ಸ್ಯಾನ್ ಫ್ರಾನ್ಸಿಸ್ಕೋ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ಅನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಇದೀಗ ಅಲೆನ್ ಸತತ 5 ಸಿಕ್ಸರ್ ಬಾರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಆರ್​ಸಿಬಿ ಸೇರಿದ್ದ ಅಲೆನ್

ಮೇಜರ್ ಲೀಗ್ ಕ್ರಿಕೆಟ್‌ನಲ್ಲಿ ಸ್ಯಾನ್ ಫ್ರಾನ್ಸಿಸ್ಕೊ ​​​​ಯುನಿಕಾರ್ನ್ಸ್ ಪರ ಆಡುತ್ತಿರುವ ಫಿನ್ ಅಲೆನ್, ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದರು. ಆರ್​ಸಿಬಿ, 2021 ರಲ್ಲಿ ಅಲೆನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿತ್ತು. ಆದರೆ, ಅಲೆನ್‌ಗೆ ಐಪಿಎಲ್‌ನಲ್ಲಿ ಒಂದೇ ಒಂದು ಪಂದ್ಯವನ್ನು ಆಡುವ ಅವಕಾಶ ಸಿಗಲಿಲ್ಲ. ಈಗ ಅಲೆನ್ ಅವರ ಸ್ಫೋಟಕ ಬ್ಯಾಟಿಂಗ್ ನೋಡಿ, ಐಪಿಎಲ್ 2025 ಕ್ಕಿಂತ ಮೊದಲು ನಡೆಯಲಿರುವ ಮೆಗಾ ಹರಾಜಿನಲ್ಲಿ ಎಲ್ಲಾ ತಂಡಗಳು ಅವರ ಮೇಲೆ ಹಣದ ಮಳೆ ಹರಿಸುವುದಂತೂ ಖಚಿತವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:27 pm, Mon, 8 July 24

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ