IND vs SL: ಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ತೊರೆಯಲ್ಲಿದ್ದಾರೆ ಬೌಲಿಂಗ್ ಕೋಚ್

IND vs SL: ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ತವರಿನಲ್ಲಿ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯನ್ನು ಆಡಬೇಕಿದೆ. ಈ ಸರಣಿಗೂ ಮುನ್ನ ಕೋಚಿಂಗ್ ಸಿಬ್ಬಂದಿಯಲ್ಲಿ ದೊಡ್ಡ ಬದಲಾವಣೆ ಕಾಣಲಿದೆ. ಅಂದರೆ ಹಂಗಾಮಿ ಬೌಲಿಂಗ್ ಕೋಚ್ ಆಗಿ ಭಾರತ ತಂಡದಲ್ಲಿರುವ ಸಾಯಿರಾಜ್ ಬಹುತುಲೆ ಅವರ ಬದಲು ದಕ್ಷಿಣ ಆಫ್ರಿಕಾದ ಮಾಜಿ ವೇಗದ ಬೌಲರ್ ಮೋರ್ನೆ ಮೊರ್ಕೆಲ್ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

IND vs SL: ಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ತೊರೆಯಲ್ಲಿದ್ದಾರೆ ಬೌಲಿಂಗ್ ಕೋಚ್
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Jul 29, 2024 | 9:51 PM

ಟಿ20 ವಿಶ್ವಕಪ್ ಬಳಿಕ ಭಾರತ ತಂಡದ ಕೋಚಿಂಗ್ ವಿಭಾಗದಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ರಾಹುಲ್ ದ್ರಾವಿಡ್ ಬದಲಿಗೆ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಹಾಗೆಯೇ ಸಹಾಯಕ ಕೋಚ್​ಗಳಾಗಿ ಟೀಂ ಇಂಡಿಯಾದ ಮಾಜಿ ಆಲ್‌ರೌಂಡರ್ ಅಭಿಷೇಕ್ ನಾಯಕ್ ಮತ್ತು ನೆದರ್‌ಲ್ಯಾಂಡ್‌ನ ಮಾಜಿ ಬ್ಯಾಟ್ಸ್‌ಮನ್ ರಿಯಾನ್ ಟೆನ್ ಡ್ಯೂಷ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಖಾಯಂ ಬೌಲಿಂಗ್ ಕೋಚ್ ಮಾತ್ರ ಇನ್ನು ಆಯ್ಕೆಯಾಗಿಲ್ಲ. ಶ್ರೀಲಂಕಾ ಪ್ರವಾಸಕ್ಕೆ ಭಾರತದ ಮಾಜಿ ಸ್ಪಿನ್ನರ್ ಸಾಯಿರಾಜ್ ಬಹುತುಲೆ ಅವರನ್ನು ಹಂಗಾಮಿ ಕೋಚ್ ಆಗಿ ತೆರಳಿದ್ದಾರೆ. ಆದರೆ ಅವರ ಅಧಿಕಾರಾವಧಿ ಲಂಕಾ ಪ್ರವಾಸದ ಮುಕ್ತಾಯದೊಂದಿಗೆ ಅಂತ್ಯಗೊಳ್ಳಲಿದೆ.

ಮೋರ್ನೆ ಮೊರ್ಕೆಲ್ ಬೌಲಿಂಗ್ ಕೋಚ್

ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ತವರಿನಲ್ಲಿ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯನ್ನು ಆಡಬೇಕಿದೆ. ಈ ಸರಣಿಗೂ ಮುನ್ನ ಕೋಚಿಂಗ್ ಸಿಬ್ಬಂದಿಯಲ್ಲಿ ದೊಡ್ಡ ಬದಲಾವಣೆ ಕಾಣಲಿದೆ. ಅಂದರೆ ಹಂಗಾಮಿ ಬೌಲಿಂಗ್ ಕೋಚ್ ಆಗಿ ಭಾರತ ತಂಡದಲ್ಲಿರುವ ಸಾಯಿರಾಜ್ ಬಹುತುಲೆ ಅವರ ಬದಲು ದಕ್ಷಿಣ ಆಫ್ರಿಕಾದ ಮಾಜಿ ವೇಗದ ಬೌಲರ್ ಮೋರ್ನೆ ಮೊರ್ಕೆಲ್ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಈ ಸರಣಿಯಿಂದ ಅವರು ಗಂಭೀರ್ ಅವರ ಸಹಾಯಕ ಸಿಬ್ಬಂದಿಯಲ್ಲಿ ಬೌಲಿಂಗ್ ಕೋಚ್ ಪಾತ್ರವನ್ನು ನಿರ್ವಹಿಸಲಿದ್ದಾರೆ.

ಸಹಾಯಕ ಸಿಬ್ಬಂದಿ ವರ್ಗ ಹೀಗಿದೆ

ಟೀಂ ಇಂಡಿಯಾದ ಮಾಜಿ ಆಲ್‌ರೌಂಡರ್ ಅಭಿಷೇಕ್ ನಾಯಕ್ ಮತ್ತು ನೆದರ್‌ಲ್ಯಾಂಡ್‌ನ ಮಾಜಿ ಬ್ಯಾಟ್ಸ್‌ಮನ್ ರಿಯಾನ್ ಟೆನ್ ಡ್ಯೂಷ್ ಅವರನ್ನು ಶ್ರೀಲಂಕಾ ಪ್ರವಾಸಕ್ಕೆ ಸಹಾಯಕ ಕೋಚ್‌ಗಳಾಗಿ ಕೋಚಿಂಗ್ ಸ್ಟಾಫ್‌ನಲ್ಲಿ ಸೇರಿಸಿಕೊಳ್ಳಲಾಗಿದೆ. ಆದರೆ, ರಾಹುಲ್ ದ್ರಾವಿಡ್ ಅಧಿಕಾರಾವಧಿಯಲ್ಲಿ ಟೀಂ ಇಂಡಿಯಾದ ಫೀಲ್ಡಿಂಗ್ ಕೋಚ್ ಆಗಿದ್ದ ಟಿ ದಿಲೀಪ್ ಅವರನ್ನೇ ಮುಂದುವರೆಸಲಾಗಿದೆ. ಈ ಮೂವರು ಅನುಭವಿಗಳು ತಂಡದಲ್ಲಿ ಉಳಿಯುವುದು ಬಹುತೇಕ ಖಚಿತವಾಗಿದೆ. ಮತ್ತೊಂದೆಡೆ, ತಂಡಕ್ಕೆ ಸ್ಪಿನ್ ಕೋಚ್ ಅಗತ್ಯವಿದ್ದರೆ, ಸಾಯಿರಾಜ್ ಬಹುತುಲೆ ಕೂಡ ತಂಡದಲ್ಲಿ ಉಳಿಯಬಹುದು ಎಂದು ಹೇಳಲಾಗುತ್ತಿದೆ.

ಒಟ್ಟಿಗೆ ಕೆಲಸ ಮಾಡಿದ ಅನುಭವ

ಗಂಭೀರ್ ಮತ್ತು ಮೋರ್ಕೆಲ್ ಐಪಿಎಲ್‌ನಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಈ ಇಬ್ಬರೂ ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ ತಂಡಕ್ಕಾಗಿ ಕೆಲಸ ಮಾಡಿದ್ದಾರೆ. ಅದೇ ಸಮಯದಲ್ಲಿ, ಗಂಭೀರ್ ಕಳೆದ ಸೀಸನ್​ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಸೇರಿದ ನಂತರವೂ, ಮೊರ್ಕೆಲ್ ಅದೇ ತಂಡದ ಭಾಗವಾಗಿದ್ದರು. 39 ವರ್ಷದ ಮೋರ್ನೆ ಮೊರ್ಕೆಲ್ 2018 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದರು. ಇದರ ನಂತರ, ಕಳೆದ ವರ್ಷ ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಪಾಕ್ ತಂಡದ ತರಬೇತುದಾರರಾಗಿದ್ದ ಮೊರ್ನೆ ಮೊರ್ಕೆಲ್, ತಂಡದ ಕಳಪೆ ಪ್ರದರ್ಶನದ ನಂತರ, ಒಪ್ಪಂದದ ಅವಧಿ ಮುಗಿಯುವ ಕೆಲವು ತಿಂಗಳ ಮೊದಲೇ ತಮ್ಮ ಹುದ್ದೆಯನ್ನು ತೊರೆದಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:50 pm, Mon, 29 July 24

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ