IND vs ENG: ಅನಾನುಭವಿ ಬಳಗದೊಂದಿಗೆ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 15 ರಿಂದ ಶುರುವಾಗಲಿದೆ. ಈ ಪಂದ್ಯಕ್ಕೆ ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ಆತಿಥ್ಯವಹಿಸಲಿದೆ. ಇನ್ನು 4ನೇ ಟೆಸ್ಟ್ ಪಂದ್ಯವು ಫೆಬ್ರವರಿ 23 ರಿಂದ ರಾಂಚಿಯಲ್ಲಿ ಶುರುವಾಗಲಿದೆ. ಹಾಗೆಯೇ ಮಾರ್ಚ್ 7 ರಿಂದ ಶುರುವಾಗಲಿರುವ 5ನೇ ಪಂದ್ಯವು ಧರ್ಮಶಾಲಾದ HPCA ಮೈದಾನದಲ್ಲಿ ನಡೆಯಲಿದೆ.

IND vs ENG: ಅನಾನುಭವಿ ಬಳಗದೊಂದಿಗೆ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ
Team India
Edited By:

Updated on: Feb 13, 2024 | 7:04 AM

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮ್ಯಾಚ್ ಗುರುವಾರದಿಂದ (ಫೆ.15) ಶುರುವಾಗಲಿದೆ. ಈ ಪಂದ್ಯದಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಸಂಪೂರ್ಣ ಸರಣಿಯಿಂದ ಹಿಂದೆ ಸರಿದಿದ್ದಾರೆ. ಇನ್ನು ತೊಡೆಸಂಧು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕೆಎಲ್ ರಾಹುಲ್ ಕೂಡ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಹಾಗೆಯೇ ಮೊದಲೆರಡು ಪಂದ್ಯಗಳಲ್ಲಿ ವಿಫಲರಾಗಿದ್ದ ಶ್ರೇಯಸ್ ಅಯ್ಯರ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಇನ್ನು ಚೇತೇಶ್ವರ ಪೂಜಾರಾ ಹಾಗೂ ಅಜಿಂಕ್ಯ ರಹಾನೆಯನ್ನು ಆಯ್ಕೆಗೆ ಪರಿಗಣಿಸಿಲ್ಲ. ಹೀಗಾಗಿ ಟೀಮ್ ಇಂಡಿಯಾ ಯುವ ಬಳಗದೊಂದಿಗೆ ಕಣಕ್ಕಿಳಿಯಲಿದೆ.

ಅಂದರೆ ಪ್ರಸ್ತುತ ತಂಡದಲ್ಲಿರುವ ಬ್ಯಾಟರ್​ಗಳನ್ನು ಗಮನಿಸಿದರೆ ರೋಹಿತ್ ಶರ್ಮಾ ಅವರನ್ನು ಹೊರತುಪಡಿಸಿ ಯಾವುದೇ ಬ್ಯಾಟ್ಸ್​​ಮನ್ 50 ಟೆಸ್ಟ್ ಪಂದ್ಯಗಳನ್ನಾಡಿಲ್ಲ. ವಿಶೇಷ ಎಂದರೆ ಹಿಟ್​ಮ್ಯಾನ್ ಅವರನ್ನು ಹೊರತುಪಡಿಸಿ ಉಳಿದ ಬ್ಯಾಟರ್​ಗಳು ಕನಿಷ್ಠ 30 ಟೆಸ್ಟ್ ಪಂದ್ಯಗಳನ್ನು ಆಡಿದ ಅನುಭವ ಹೊಂದಿಲ್ಲ.

ಇಲ್ಲಿ ರೋಹಿತ್ ಶರ್ಮಾ 56 ಟೆಸ್ಟ್ ಪಂದ್ಯಗಳನ್ನಾಡಿದ ಅನುಭವ ಹೊಂದಿದ್ದರೆ, ಯಶಸ್ವಿ ಜೈಸ್ವಾಲ್​ ಕೇವಲ 6 ಟೆಸ್ಟ್​ ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದಾರೆ. ಹಾಗೆಯೇ ಶುಭ್​ಮನ್ ಗಿಲ್​ಗೆ 22 ಟೆಸ್ಟ್ ಪಂದ್ಯಗಳನ್ನಾಡಿದ ಅನುಭವಿದೆ. ಇದರ ಹೊರತಾಗಿ ರಜತ್ ಪಾಟಿದಾರ್ ಏಕೈಕ ಟೆಸ್ಟ್ ಪಂದ್ಯವಾಡಿದ್ದರೆ, ವಿಕೆಟ್ ಕೀಪರ್ ಬ್ಯಾಟರ್ ಕೆಎಸ್ ಭರತ್ ಅನುಭವ ಕೇವಲ 7 ಪಂದ್ಯಗಳಿಗೆ ಸೀಮಿತ.

ಮತ್ತೊಂದು ಇಂಟ್ರೆಸ್ಟಿಂಗ್ ವಿಷಯ ಎಂದರೆ ತಂಡದಲ್ಲಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ ಮೂವರು ಇನ್ನೂ ಕೂಡ ಟೆಸ್ಟ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿಲ್ಲ. ಹೀಗಾಗಿ ಸರ್ಫರಾಝ್ ಖಾನ್, ಧ್ರುವ್ ಜುರೇಲ್ ಹಾಗೂ ದೇವದತ್ ಪಡಿಕ್ಕಲ್ ರಾಜ್​ಕೋಟ್​ ಟೆಸ್ಟ್​ನಲ್ಲಿ ಚೊಚ್ಚಲ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

ಅಂದರೆ 3ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಲೈನಪ್​ ರೋಹಿತ್ ಶರ್ಮಾ ಅವರ ಅನುಭವವನ್ನು ಅವಲಂಭಿಸಿರುವುದು ಸ್ಪಷ್ಟ. ಅವರ ಜೊತೆಗೆ ಒಂದಷ್ಟು ಪಂದ್ಯಗಳನ್ನಾಡಿರುವ ಯಶಸ್ವಿ ಜೈಸ್ವಾಲ್ ಹಾಗೂ ಶುಭ್​ಮನ್ ಗಿಲ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಬೇಕಾದ ಅನಿವಾರ್ಯತೆ ಇದೆ.

ಇದನ್ನೂ ಓದಿ: PSL ನಿಂದ RCB ವೇಗಿ ಔಟ್: ಐಪಿಎಲ್​ಗೆ ಡೌಟ್..!

ಟೀಮ್ ಇಂಡಿಯಾ ಬ್ಯಾಟರ್​ಗಳ ಟೆಸ್ಟ್​ ಅನುಭವ:

  • ರೋಹಿತ್ ಶರ್ಮಾ – 56 ಟೆಸ್ಟ್​ಗಳು
  • ಯಶಸ್ವಿ ಜೈಸ್ವಾಲ್ – 6 ಟೆಸ್ಟ್​ಗಳು
  • ಶುಭ್​​​ಮನ್ ಗಿಲ್ – 22 ಟೆಸ್ಟ್​ಗಳು
  • ರಜತ್ ಪಾಟಿದಾರ್ – 1 ಟೆಸ್ಟ್​
  • ಕೆಎಸ್ ಭರತ್ – 7 ಟೆಸ್ಟ್​ಗಳು
  • ಸರ್ಫರಾಝ್ ಖಾನ್ – 0
  • ದೇವದತ್ ಪಡಿಕ್ಕಲ್ – 0
  • ಧ್ರುವ್ ಜುರೇಲ್ – 0

ಭಾರತ ಟೆಸ್ಟ್​ ತಂಡ:

ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

 

Follow Us