AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಜಸ್ಪ್ರಿತ್ ಬುಮ್ರಾ ಆರೋಗ್ಯ ಹದಗೆಟ್ಟಿದೆ ಎಂದು ಆಸ್ಪತ್ರೆಯಲ್ಲಿ ಮಲಗಿರುವ ಫೋಟೋ ವೈರಲ್

ನಿಜಾಂಶವನ್ನು ತಿಳಿಯಲು ನಾವು ಮೊದಲು ಜಸ್ಪ್ರಿತ್ ಬುಮ್ರಾ ಆಸ್ಪತ್ರೆಗೆ ದಾಖಲಾಗಿದ್ದಾರ ಅಥವಾ ವೈರಲ್ ಫೋಟೋದಲ್ಲಿ ಇರುವಂತೆ ಬೆಡ್ ಮೇಲೆ ಮಲಗಿದ್ದಾರ ಎಂಬ ಕುರಿತು ಹುಡುಕಿದ್ದೇವೆ. ಆದರೆ, ಇದಕ್ಕೆ ಸಂಬಂಧಿಸಿದ ಯಾವುದೇ ವಿಶ್ವಾಸಾರ್ಹ ವರದಿ ನಮಗೆ ಕಂಡುಬಂದಿಲ್ಲ. ಬಳಿಕ ಈ ಫೋಟೋಗಳನ್ನು ಎಚ್ಚರಿಕೆಯಿಂದ ನೋಡಿದ್ದೇವೆ

Fact Check: ಜಸ್ಪ್ರಿತ್ ಬುಮ್ರಾ ಆರೋಗ್ಯ ಹದಗೆಟ್ಟಿದೆ ಎಂದು ಆಸ್ಪತ್ರೆಯಲ್ಲಿ ಮಲಗಿರುವ ಫೋಟೋ ವೈರಲ್
Jasprit Bumrah Fact Check
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 13, 2025 | 3:54 PM

Share

ಇತ್ತೀಚೆಗಷ್ಟೆ ಮುಕ್ತಾಯಗೊಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯ ಸಿಡ್ನಿ ಟೆಸ್ಟ್ ಪಂದ್ಯದ ವೇಳೆ ಭಾರತದ ಸ್ಟಾರ್ ವೇಗಿ ಜಸ್​ಪ್ರಿತ್ ಬುಮ್ರಾ ಬೆನ್ನಿಗೆ ಗಾಯ ಮಾಡಿಕೊಂಡರು. ಅಂದಿನಿಂದ ಅವರು ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಅಲ್ಲದೆ ಮುಂಬರುವ ಬಹುನಿರೀಕ್ಷಿತ ಚಾಂಪಿಯನ್ ಟ್ರೋಫಿಯಿಂದ ಕೂಡ ಔಟ್ ಆಗಿದ್ದಾರೆ. ಏತನ್ಮಧ್ಯೆ, ಅವರ ಆರೋಗ್ಯಕ್ಕೆ ಸಂಬಂಧಿಸಿದ ಎರಡು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಅದರಲ್ಲಿ ಅವರು ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವುದನ್ನು ಕಾಣಬಹುದಾಗಿದೆ. ಅನೇಕ ಜನರು ಚಿತ್ರಗಳನ್ನು ನಿಜವೆಂದು ಭಾವಿಸಿ ಹಂಚಿಕೊಳ್ಳುತ್ತಿದ್ದಾರೆ.

ಏನು ವೈರಲ್ ಆಗುತ್ತಿರುವುದೇನು?:

ಫೇಸ್‌ಬುಕ್ ಬಳಕೆದಾರರೊಬ್ಬರು ಈ ಫೋಟೋವನ್ನು ಹಂಚಿಕೊಂಡು, “ಜಸ್ಪ್ರೀತ್ ಬುಮ್ರಾ ಅವರ ಸ್ಥಿತಿ ಹದಗೆಟ್ಟಿದೆ. ಅವರನ್ನು ನಿಜವಾದ ದೇಶಭಕ್ತರನ್ನಾಗಿ ಮಾಡಿ ಮತ್ತು ಅವರಿಗೆ ಒಂದು ಲೈಕ್ ನೀಡುವ ಮೂಲಕ ಆಶೀರ್ವದಿಸಿ. ಅವರಿಗೆ ಪ್ರೀತಿಯನ್ನು ನೀಡಿ. ಅವರು ನಮ್ಮ ಭಾರತದ ಹೆಮ್ಮೆ” ಎಂಬ ಶೀರ್ಷಿಕೆಯಲ್ಲಿ ಬರೆದಿದ್ದಾರೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ಫೋಟೋ ವೈರಲ್ ಮಾಡಲಾಗುತ್ತಿದೆ ಎಂದು ಕಂಡುಬಂದಿದೆ. ವಾಸ್ತವವಾಗಿ ವೈರಲ್ ಚಿತ್ರವನ್ನು ಕೃತಕ ಬುದ್ದಿಮತ್ತೆ ಸಹಾಯದಿಂದ ರಚಿಸಲಾಗಿದೆ. ನಿಜಾಂಶವನ್ನು ತಿಳಿಯಲು ನಾವು ಮೊದಲು ಜಸ್​ಪ್ರಿತ್ ಬುಮ್ರಾ ಆಸ್ಪತ್ರೆಗೆ ದಾಖಲಾಗಿದ್ದಾರ ಅಥವಾ ವೈರಲ್ ಫೋಟೋದಲ್ಲಿ ಇರುವಂತೆ ಬೆಡ್ ಮೇಲೆ ಮಲಗಿದ್ದಾರ ಎಂಬ ಕುರಿತು ಹುಡುಕಿದ್ದೇವೆ. ಆದರೆ, ಇದಕ್ಕೆ ಸಂಬಂಧಿಸಿದ ಯಾವುದೇ ವಿಶ್ವಾಸಾರ್ಹ ವರದಿ ನಮಗೆ ಕಂಡುಬಂದಿಲ್ಲ. ಬಳಿಕ ಈ ಫೋಟೋಗಳನ್ನು ಎಚ್ಚರಿಕೆಯಿಂದ ನೋಡಿದ್ದೇವೆ. ಎರಡೂ ಫೋಟೋಗಳಲ್ಲಿ, ಮುಖವು ತುಂಬಾ ಮೃದುವಾಗಿ ಕಾಣುತ್ತದೆ ಮತ್ತು ಬ್ಯಾಕ್​ಗ್ರೌಂಡ್ ಮಸುಕಾಗಿದ್ದು, ಕೃತಕವಾಗಿ ಕಾಣುತ್ತದೆ.

Fact Check: ಉದ್ಯೋಗಾವಕಾಶ ಇದೆಯೆಂದು ಸರ್ವ ಶಿಕ್ಷಣ ಅಭಿಯಾನ ವೆಬ್‌ಸೈಟ್ ತೆರೆಯುವ ಮುನ್ನ ಎಚ್ಚರ

ಈ ಫೋಟೋ ನೈಜ್ಯಕ್ಕೆ ಹತ್ತಿರವಾಗಿಲ್ಲ ಎಂಬುದು ಸ್ಪಷ್ಟವಾಯಿತು. ಹೀಗಾಗಿ ನಾವು ಈ ಫೋಟೋಗಳನ್ನು AI ಇಮೇಜ್ ಪತ್ತೆ ಪರಿಕರಗಳೊಂದಿಗೆ ಪರೀಕ್ಷಿಸಿದ್ದೇವೆ. AI ಇಮೇಜ್ ಡಿಟೆಕ್ಷನ್ ಟೂಲ್ ಹೈವ್ ಮಾಡರೇಶನ್ ಅಂದಾಜಿನ ಪ್ರಕಾರ ಈ ಚಿತ್ರಗಳು 97 ರಿಂದ 99 ಪ್ರತಿಶತದಷ್ಟು AI- ರಚಿತವಾಗಿರುವ ಸಾಧ್ಯತೆಯಿದೆ ಎಂದು ಹೇಳಿದೆ. ಮತ್ತೊಂದು AI ಇಮೇಜ್ ಡಿಟೆಕ್ಷನ್ ಟೂಲ್, ಸೈಟ್ ಎಂಜಿನ್‌ನೊಂದಿಗೆ ಪರಿಶೀಲಿಸಿದಾಗ, ಈ ಚಿತ್ರಗಳು 99 ಪ್ರತಿಶತ AI- ರಚಿತವಾಗಿರುವ ಸಾಧ್ಯತೆ ಇದೆ ಎಂದು ತಿಳಿಸಿತು. ಹೀಗಾಗಿ ಇದು ನಿಜವಾದ ಫೋಟೋ ಅಲ್ಲ. ಕೃತಕ ಬುದ್ದಿಮತ್ತೆ ಸಹಾಯದಿಂದ ರಚಿಸಲಾಗಿದೆ ಎಂಬುದು ಖಚಿತವಾಯಿತು.

ಚಾಂಪಿಯನ್ಸ್ ಟ್ರೋಫಿಯಿಂದ ಜಸ್​ಪ್ರೀತ್ ಬುಮ್ರಾ ಔಟ್:

ಜಸ್​ಪ್ರೀತ್ ಬುಮ್ರಾ ಫಿಟ್​ನೆಸ್ ಸಮಸ್ಯೆಯ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಬೆನ್ನು ನೋವಿನ ಸಮಸ್ಯೆಯ ಕಾರಣ ಬುಮ್ರಾ ಇಂಗ್ಲೆಂಡ್ ವಿರುದ್ಧದ ಸರಣಿಗೆ ಕೂಡ ಅಲಭ್ಯರಾಗಿದ್ದರು. ಇದಾಗ್ಯೂ ಅವರು ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೀಗ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಲು ಕನಿಷ್ಠ ಮೂರು ವಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಜಸ್​ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ. ಬುಮ್ರಾ ಅಲಭ್ಯರಾಗಿರುವ ಕಾರಣ ಅವರ ಸ್ಥಾನದಲ್ಲಿ ಹರ್ಷಿತ್ ರಾಣಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ.

ಇನ್ನಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್