
ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಸದ್ಯ ಚಾಂಪಿಯನ್ ಟ್ರೋಫಿ ಟೂರ್ನಿಯಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯದಲ್ಲಿ ಕೊಹ್ಲಿ ಬ್ಯಾಟ್ನಿಂದ ದೊಡ್ಡ ರನ್ ಬಂದಿಲ್ಲವಾದರೂ ನಾಳೆ (ಫೆ. 23) ನಡೆಯಲಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಬ್ಯಾಟ್ನಿಂದ ರನ್ ಮಳೆ ನಿರೀಕ್ಷಿಸಲಾಗಿದೆ. ಇದರ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಕಾರು ಅಪಘಾತದ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಹಂಚಿಕೊಳ್ಳುವಾಗ, ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರು ಅಪಘಾತದಲ್ಲಿ ನಿಧನರಾದರು ಎಂದು ಹಂಚಿಕೊಳ್ಳುತ್ತಿದ್ದಾರೆ.
ಯೂಟ್ಯೂಬ್ನಲ್ಲಿ ಹಾಗೂ ಇನ್ಸ್ಟಾಗ್ರಾಮ್ನಲ್ಲಿ ಈ ಕುರಿತ ವಿಡಿಯೋ ವೈರಲ್ ಆಗುತ್ತಿದ್ದು, “ವಿರಾಟ್ ಕೊಹ್ಲಿ ವಾಹನ ಚಾನನೆ ಮಾಡುತ್ತಿರುವಾಗ ಅಪಘಾತವಾಗಿದೆ” ಎಂದು ಬರೆದುಕೊಂಡಿದ್ದಾರೆ. “ಫೆಬ್ರವರಿ 19 ರಂದು ವಿರಾಟ್ ಕೊಹ್ಲಿ ನಿನ್ನೆ ರಾತ್ರಿ ಅಪಘಾತದಲ್ಲಿ ಸಾವನ್ನಿಪ್ಪಿದ್ದಾರೆ” ಎಂದು ವಿಡಿಯೋದ ಮೇಲೆ ಬರೆಯಲಾಗಿದೆ.
Fact Check:
ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ವೀವ್ಸ್, ಲೈಕ್ಸ್ ಮತ್ತು ಕಾಮೆಂಟ್‌ಗಳು ಬರಬೇಕೆಂಬ ದುರಾಸೆಯಲ್ಲಿ ಈ ಆಕ್ಷೇಪಾರ್ಹ ಮತ್ತು ನಕಲಿ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇಂತಹ ಹೇಳಿಕೆಗಳು ಈ ಹಿಂದೆಯೂ ವೈರಲ್ ಆಗಿವೆ.
Fact Check: ಜೊತೆಯಾಗಿ ಕುಳಿತು ಊಟ ಮಾಡಿದ ಮೋದಿ -ಕೇಜ್ರಿವಾಲ್?: ವೈರಲ್ ಫೋಟೋದ ಸತ್ಯಾಂಶ ಇಲ್ಲಿದೆ
ವೈರಲ್ ಆದ ಈ ಹಕ್ಕಿನ ಸತ್ಯಾಸತ್ಯತೆಯನ್ನು ತಿಳಿಯಲು, ಮೊದಲಿಗೆ ನಾವು ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ಗೂಗಲ್ನಲ್ಲಿ ಹುಡುಕಿದೆವು. ಆದರೆ, ವಿರಾಟ್ ಕೊಹ್ಲಿ ಅಪಘಾತದ ಕುರಿತು ಯಾವುದೇ ಮಾಧ್ಯಮ ಸುದ್ದಿ ಮಾಡಿರುವುದು ನಮಗೆ ಸಿಕ್ಕಿಲ್ಲ. ಟೀಮ್ ಇಂಡಿಯಾದ ಶ್ರೇಷ್ಠಾ ಆಟಗಾರನೊಬ್ಬ ಅಪಘಾತದಲ್ಲಿ ನಿಧನರಾದರು ಎಂದರೆ ಅದು ಬ್ರೇಕಿಂಗ್ ನ್ಯೂಸ್ ಆಗಿರುತ್ತಿತ್ತು. ಆದರೆ, ಈ ಕುರಿತು ಒಂದೇ ಒಂದು ವರದಿಯಿಲ್ಲ.
ಅಲ್ಲದೆ ಫೆಬ್ರವರಿ 20 ರಂದು ಭಾರತ ಮತ್ತು ಬಾಂಗ್ಲಾದೇಶ ನಡುವಿನ ಚಾಂಪಿಯನ್ಸ್ ಟ್ರೋಫಿ ಪಂದ್ಯ ನಡೆದಿದೆ. ಇದರಲ್ಲಿ ವಿರಾಟ್ ಕೊಹ್ಲಿ ತಂಡದ ಪ್ರಮುಖ ಆಟಗಾರನಾಗಿದ್ದರು. ಆದರೆ, ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ. 38 ಎಸೆತಗಳಲ್ಲಿ 22 ರನ್ ಬಾರಿಸಿ ಔಟ್ ಆದರು. ವಿರಾಟ್ ಕೊಹ್ಲಿ ಮಾತ್ರವಲ್ಲ, ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ನಟರಾದ ಅಮಿತಾಬ್ ಬಚ್ಚನ್, ಸಲ್ಮಾನ್ ಖಾನ್ ಮತ್ತು ಹಿನಾ ಖಾನ್ ಅವರಂತಹ ತಾರೆಯರ ನಕಲಿ ಸಾವಿನ ಸುದ್ದಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಬಾರಿ ವೈರಲ್ ಆಗಿವೆ. ಈ ಮೂಲಕ ಟಿವಿ9 ಕನ್ನಡ ತನ್ನ ತನಿಖೆಯಲ್ಲಿ ವಿರಾಟ್ ಕೊಹ್ಲಿ ಸಾವಿನ ಬಗ್ಗೆ ವೈರಲ್ ಆಗಿರುವ ಹೇಳಿಕೆ ಸುಳ್ಳು ಎಂದು ಕಂಡುಹಿಡಿದಿದೆ.
ಇನ್ನು ವೈರಲ್ ಆಗಿರುವ ವಿಡಿಯೋ ಎಲ್ಲಿಯದ್ದು ಎಂದು ತನಿಖೆ ನಡೆಸಿದಾಗ, ಇದು ಜುಲೈ 11, 2024 ರಂದು ರಾಜಸ್ಥಾನದ ಮಾನಸಿಂಗ್‌ನಲ್ಲಿ ಟ್ಯಾಂಕರ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದ್ದಾಗಿದೆ. ಇಂಧನ ಟ್ಯಾಂಕರ್ ಕ್ರೆಟಾ ಕಾರನ್ನು ಓವರ್‌ಟೇಕ್ ಮಾಡುವ ಪ್ರಯತ್ನದಲ್ಲಿ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದರು.
ಚಾಂಪಿಯನ್ಸ್ ಟ್ರೋಫಿಯ ಅತ್ಯಂತ ಮಹತ್ವದ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಲು ಟೀಮ್ ಇಂಡಿಯಾ ಸಿದ್ಧವಾಗಿದೆ. ಈ ಪಂದ್ಯ ಭಾನುವಾರ ದುಬೈನಲ್ಲಿ ನಡೆಯಲಿದೆ. ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದರೆ, ಪಾಕಿಸ್ತಾನ ತಂಡವು ನ್ಯೂಜಿಲೆಂಡ್ ವಿರುದ್ಧ 60 ರನ್‌ಗಳಿಂದ ಸೋಲನ್ನು ಅನುಭವಿಸಿತು. ಸೆಮಿಫೈನಲ್ ರೇಸ್‌ನಲ್ಲಿ ಉಳಿಯಲು ಪಾಕಿಸ್ತಾನಕ್ಕೆ ಟೀಮ್ ಇಂಡಿಯಾ ವಿರುದ್ಧ ಗೆಲುವು ಸಾಧಿಸುವುದು ಬಹಳ ಮುಖ್ಯ. ಅದೇ ಸಮಯದಲ್ಲಿ, ಟೀಮ್ ಇಂಡಿಯಾ ಕೂಡ ತನ್ನ ವಿಜಯ ರಥವನ್ನು ಮುಂದುವರಿಸಲು ಎದುರು ನೋಡುತ್ತಿದೆ. ಹೀಗಾಗಿ ನಾಳೆ ಹೈವೋಲ್ಟೇಜ್ ಪಂದ್ಯ ಆಗುವುದರಲ್ಲಿ ಅನುಮಾನವಿಲ್ಲ.
ಇನ್ನಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ