Virat Kohli: ಕೊಹ್ಲಿ ಅಲ್ಲ: ಆರ್​ಸಿಬಿ ಪರ ಫಾಫ್ ಡುಪ್ಲೆಸಿಸ್ ಜೊತೆ ಇನ್ನಿಂಗ್ಸ್ ಆರಂಭಿಸುವುದು ಯಾರು ಗೊತ್ತೇ?

IPL 2022, RCB: ಫಾಪ್ ಡುಪ್ಲೆಸಿಸ್ ಆರ್​ಸಿಬಿ ತಂಡದ ನೂತನ ನಾಯಕನಾಗಿದ್ದು ಈ ಬಾರಿ ಆದರೂ ಕಪ್ ಗೆಲ್ಲುತ್ತಾ ಎಂಬುದು ನೋಡಬೇಕಿದೆ. ಇದರ ನಡುವೆ ಐಪಿಎಲ್ 2022 ರಲ್ಲಿ ಬೆಂಗಳೂರು ಪರ ಇನ್ನಿಂಗ್ಸ್ ಆರಂಭಿಸುವವರು ಯಾರು ಎಂಬ ಪ್ರಶ್ನೆ ಎದ್ದಿದೆ. ಇದಕ್ಕೆ ಉತ್ತರ ಕೂಡ ಸಿಕ್ಕಿದೆ.

Virat Kohli: ಕೊಹ್ಲಿ ಅಲ್ಲ: ಆರ್​ಸಿಬಿ ಪರ ಫಾಫ್ ಡುಪ್ಲೆಸಿಸ್ ಜೊತೆ ಇನ್ನಿಂಗ್ಸ್ ಆರಂಭಿಸುವುದು ಯಾರು ಗೊತ್ತೇ?
Follow us
TV9 Web
| Updated By: Vinay Bhat

Updated on: Mar 20, 2022 | 10:29 AM

2022ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಇದೇ ಮಾರ್ಚ್ 26ಕ್ಕೆ ಶುರುವಾಗಲಿದೆ. ಎಂ ಎಸ್ ಧೋನಿ (MS DHoni) ನಾಯಕತ್ವದ ಸಿಎಸ್​ಕೆ ಮತ್ತು ನೂತನ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಅವರ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮೊದಲು ಪಂದ್ಯದಲ್ಲಿ ಮುಖಾಮುಖಿ ಆಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಅಭಿಯಾನವನ್ನು ಮಾರ್ಚ್ 27 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಆಡುವ ಮೂಲಕ ಶುರು ಮಾಡಲಿದೆ. ಮೂರು ಆಟಗಾರರನ್ನು ಬಿಟ್ಟು ಉಳಿದೆಲ್ಲ ಪ್ಲೇಯರ್ಸ್ ಅನ್ನು ಆರ್​ಸಿಬಿ ಐಪಿಎಲ್ 2022 (IPL 2022) ಹರಾಜಿನಲ್ಲಿ ಖರೀದಿ ಮಾಡಿದ್ದು ಇದೀಗ ಬಲಿಷ್ಠವಾಗಿದೆ. ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟರ್ ಫಾಪ್ ಡುಪ್ಲೆಸಿಸ್ ಬೆಂಗಳೂರು ತಂಡದ ನೂತನ ನಾಯಕನಾಗಿದ್ದು ಈ ಬಾರಿ ಆದರೂ ಕಪ್ ಗೆಲ್ಲುತ್ತಾ ಎಂಬುದು ನೋಡಬೇಕಿದೆ. ಇದರ ನಡುವೆ ಐಪಿಎಲ್ 2022 ರಲ್ಲಿ ಆರ್​​ಸಿಬಿ (RCB) ಪರ ಇನ್ನಿಂಗ್ಸ್ ಆರಂಭಿಸುವವರು ಯಾರು ಎಂಬ ಪ್ರಶ್ನೆ ಎದ್ದಿದೆ.

ಹೌದು, ಕಳೆದ ಸೀಸನ್​ನಲ್ಲೆಲ್ಲ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಓಪನರ್ ಆಗಿ ಕಣಕ್ಕಿಳಿಯುತ್ತಿದ್ದರು. ಈ ಬಾರಿ ಪಡಿಕ್ಕಲ್ ಇಲ್ಲ. ಕೊಹ್ಲಿ ಓಪನರ್ ಆಗಿ ಆಡಿದರೂ ದೊಡ್ಡ ಮಟ್ಟದ ಯಶಸ್ಸು ತಂಡಕ್ಕೆ ಸಿಗಲಿಲ್ಲ. ಹೀಗಾಗಿ ಡುಪ್ಲೆಸಿಸ್ ಓಪನರ್ ಆಗಿ ಆಡುವುದು ಖಚಿತ. ಆದರೆ, ಮತ್ತೊಬ್ಬ ಆರಂಭಿಕ ಯಾರು ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದಕ್ಕೆ ಭಾರತದ ಮಾಜಿ ಕ್ರಿಕೆಟಿಗ ವಾಸಿಮ್ ಜಾಫರ್ ಉತ್ತರ ನೀಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕ ಆಟಗಾರರಾಗಿ ಯಾರು ಕಣಕ್ಕಿಳಿಯಬೇಕು ಮತ್ತು ವಿರಾಟ್ ಕೊಹ್ಲಿ ಯಾವ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕು ಎಂಬ ಬಗ್ಗೆ ಜಾಫರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಐಪಿಎಲ್ 2022 ರಲ್ಲಿ ಆರ್​ಸಿಬಿ ತಂಡದ ಪರ ಆರಂಭಿಕರಾಗಿ ಫಾಫ್ ಡುಪ್ಲೆಸಿಸ್ ಜೊತೆ ಯುವ ಕ್ರಿಕೆಟಿಗ ಅನೂಜ್ ರಾವತ್ ಕಣಕ್ಕಿಳಿಯಬೇಕು ಎಂದು ಜಾಫರ್ ಹೇಳಿದ್ದಾರೆ. ಕಳೆದ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಆರಂಭಿಕ ಆಟಗಾರನಾಗಿ ವಿರಾಟ್ ಕೊಹ್ಲಿ ಕಣಕ್ಕಿಳಿದಿದ್ದರು. ಆದರೆ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಬಾರದು ಎಂಬುದು ವಾಸಿಮ್ ಸಲಹೆ.

ಇವರ ಪ್ರಕಾರ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಬ್ಯಾಟ್ ಬೀಸಬೇಕು. ಇದಕ್ಕೆ ಕಾರಣವನ್ನು ತಿಳಿಸಿರುವ ಇವರು, ತಂಡದಲ್ಲಿ ಈ ಬಾರಿ ಎಬಿ ಡಿ ವಿಲಿಯರ್ಸ್ ಇಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಂಡು ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡಬೇಕು. ಹೀಗಿದ್ದರೆ ಮಾತ್ರ 14 ಹಾಗೂ 15ನೇ ಓವರ್ ತನಕ ಕೊಹ್ಲಿ ಕ್ರೀಸ್​ನಲ್ಲಿ ಉಳಿಯಲಿದ್ದಾರೆ ಹಾಗೂ ತಂಡಕ್ಕೆ ರನ್ ಬರಲಿದೆ ಎಂಬುದು ವಾಸಿಮ್ ಜಾಫರ್ ಲೆಕ್ಕಚಾರ.

ಮಾಜಿ ಆಟಗಾರನ ಸಲಹೆಯನ್ನು ಆರ್​ಸಿಬಿ ಯಾವರೀತಿ ತೆಗೆದುಕೊಳ್ಳುತ್ತದೆ ಎಂಬುದು ನೋಡಬೇಕಿದೆ. ಇದರ ಜೊತೆಗೆ ಆರ್​ಸಿಬಿಯ ಕೆಲ ಆರಂಭದ ಪಂದ್ಯಕ್ಕೆ ಸ್ಫೋಟಕ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಅಲಭ್ಯರಾಗಿದ್ದಾರೆ. ಎರಡು ದಿನಗಳ ಹಿಂದೆಯಷ್ಟೆ ಇವರು ಭಾರತೀಯ ಮೂಲದ ಗೆಳತಿ ವಿನಿ ರಾಮನ್ ಅವರನ್ನು ವಿವಾಹವಾಗಿದ್ದು, ಐಪಿಎಲ್‌ನ ಮೊದಲ ವಾರದಲ್ಲಿ ಆಡುವುದಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಆರ್​ಸಿಬಿಗೆ ಮಧ್ಯಮ ಕ್ರಮಾಂಕದಲ್ಲಿ ಅನುಭವಿ ಬ್ಯಾಟರ್​​ನ ಅವಶ್ಯಕತೆ ಕೂಡ ಇದೆ. ಇನ್ನು ಈಗಾಗಲೇ ಆರ್​ಸಿಬಿ ಕಠಿಣ ಅಭ್ಯಾಸದಲ್ಲಿ ನಿರತವಾಗಿದ್ದು ನಾಯಕ ಡುಪ್ಲೆಸಿಸ್ ನೆಟ್​ನಲ್ಲಿ ಬೆವರು ಹರಿಸುತ್ತಿದ್ದಾರೆ. ಆರ್​​ಸಿಬಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಆಟಗಾರರು ಪ್ರ್ಯಾಕ್ಟೀಸ್ ನಡೆಸುತ್ತಿರುವ ಫೋಟೋವನ್ನ ಹಂಚಿಕೊಂಡಿದೆ.

IPL 2022: ಐಪಿಎಲ್ 2022 ಆರಂಭಕ್ಕೂ ಮುನ್ನ ಶಾಕಿಂಗ್ ನ್ಯೂಸ್: ಅಭಿಮಾನಿಗಳಿಗೆ ಭಾರೀ ನಿರಾಸೆ

Lakshya Sen: ಫೈನಲ್ ಹಾದಿ ಸುಗಮವಾಗಿರಲಿಲ್ಲ; ಒಲಂಪಿಕ್, ವಿಶ್ವ ಚಾಂಪಿಯನ್​ಗಳಿಗೆ ಮಣ್ಣು ಮುಕ್ಕಿಸಿದ ಲಕ್ಷ್ಯ ಸೇನ್!

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ