AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಫೆಂಟಾಸ್ಟಿಕ್ ಫಾಫ್: ಅತ್ಯುತ್ತಮ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಡುಪ್ಲೆಸಿಸ್

SA20 2024: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಂಐ ಕೇಪ್​ಟೌನ್ ತಂಡದ ಪರ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ 50 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 104 ರನ್ ಬಾರಿಸಿದ್ದರು. ಈ ಭರ್ಜರಿ ಶತಕದ ನೆರವಿನಿಂದ ಎಂಐ ಕೇಪ್​ಟೌನ್ ತಂಡವು 5 ವಿಕೆಟ್ ಕಳೆದುಕೊಂಡು 243 ರನ್ ಕಲೆಹಾಕಿತು.

VIDEO: ಫೆಂಟಾಸ್ಟಿಕ್ ಫಾಫ್: ಅತ್ಯುತ್ತಮ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಡುಪ್ಲೆಸಿಸ್
Faf du Plessis
TV9 Web
| Edited By: |

Updated on: Jan 14, 2024 | 1:15 PM

Share

ವಯಸ್ಸು ಕೇವಲ ನಂಬರ್ ಅಷ್ಟೇ…ಇದನ್ನು ಮತ್ತೊಮ್ಮೆ ನಿರೂಪಿಸಿದ್ದಾರೆ ಫಾಫ್ ಡುಪ್ಲೆಸಿಸ್ (Faf du Plessis). ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ SA20 ಲೀಗ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿಯುವ ಮೂಲಕ 39 ವರ್ಷದ ಡುಪ್ಲೆಸಿಸ್ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಜೋಹಾನ್ಸ್​ಬರ್ಗ್​ನ ದಿ ವಾಂಡರರ್ಸ್​ ಸ್ಟೇಡಿಯಂನಲ್ಲಿ ನಡೆದ 4ನೇ ಪಂದ್ಯದಲ್ಲಿ ಜೋಬರ್ಗ್ ಸೂಪರ್ ಕಿಂಗ್ಸ್ ಹಾಗೂ ಎಂಐ ಕೇಪ್​ಟೌನ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಜೋಬರ್ಗ್​ ಸೂಪರ್ ಕಿಂಗ್ಸ್ ತಂಡವು ಎಂಐ ಕೇಪ್​ಟೌನ್ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್​ ಆರಂಭಿಸಿದ ಕೇಪ್​ಟೌನ್ ತಂಡಕ್ಕೆ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಹಾಗೂ ರಯಾನ್ ರಿಕೆಲ್ಟನ್ ಸ್ಪೋಟಕ ಆರಂಭ ಒದಗಿಸಿದರು. ಮೊದಲ ವಿಕೆಟ್​ಗೆ 200 ರನ್​ಗಳ ಜೊತೆಯಾಟವಾಡಿದ ಬಳಿಕ ರಯಾನ್ ರಿಕೆಲ್ಟನ್ (98) ಔಟಾದರು. ಈ ಹಂತದಲ್ಲಿ 3ನೇ ಕ್ರಮಾಂಕದಲ್ಲಿ ಡೆವಾಲ್ಡ್ ಬ್ರೆವಿಸ್ ಕಣಕ್ಕಿಳಿದರು.

ಲಿಝಾಡ್ ವಿಲಿಯಮ್ಸ್ ಎಸೆದ ಪಂದ್ಯದ 17ನೇ ಓವರ್​ನ ನಾಲ್ಕನೇ ಎಸೆತದಲ್ಲಿ ಬ್ರೆವಿಸ್ ಭರ್ಜರಿ ಹೊಡೆತಕ್ಕೆ ಯತ್ನಿಸಿದ್ದರು. ಮಿಡ್ ಆಫ್​ನತ್ತ ಚಿಮ್ಮಿದ ಚೆಂಡನ್ನು ಫಾಫ್ ಡುಪ್ಲೆಸಿಸ್ ಚೇಸ್ ಮಾಡಿದರು. ಅಲ್ಲದೆ ಅದ್ಭುತ ಡೈವಿಂಗ್ ಮೂಲಕ ಒಂದೇ ಕೈಯಲ್ಲಿ ಚೆಂಡನ್ನು ಹಿಡಿದರು.

ಇದೀಗ ಫಾಫ್ ಡುಪ್ಲೆಸಿಸ್ ಅವರ ಅತ್ಯದ್ಭುತ ಡೈವಿಂಗ್ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕ್ಯಾಚ್​ನೊಂದಿಗೆ ವಯಸ್ಸು ಕೇವಲ ನಂಬರ್ ಅಷ್ಟೇ ಎಂಬುದನ್ನು ಫಾಫ್ ಡುಪ್ಲೆಸಿಸ್​ ಮತ್ತೊಮ್ಮೆ ನಿರೂಪಿಸಿದ್ದಾರೆ.

ಕೇಪ್​ಟೌನ್ ತಂಡಕ್ಕೆ ಭರ್ಜರಿ ಜಯ:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಂಐ ಕೇಪ್​ಟೌನ್ ತಂಡದ ಪರ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ 50 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 104 ರನ್ ಬಾರಿಸಿದ್ದರು. ಈ ಭರ್ಜರಿ ಶತಕದ ನೆರವಿನಿಂದ ಎಂಐ ಕೇಪ್​ಟೌನ್ ತಂಡವು 5 ವಿಕೆಟ್ ಕಳೆದುಕೊಂಡು 243 ರನ್ ಕಲೆಹಾಕಿತು. 244 ರನ್​ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಜೋಬರ್ಗ್​ ಸೂಪರ್ ಕಿಂಗ್ಸ್ ತಂಡವು 17.5 ಓವರ್​ಗಳಲ್ಲಿ 145 ರನ್​ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಎಂಐ ಕೇಪ್​ಟೌನ್ ತಂಡವು 98 ರನ್​ಗಳ ಭರ್ಜರಿ ಜಯ ಸಾಧಿಸಿತು.

ಜೋಬರ್ಗ್​ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11​: ಫಾಫ್ ಡು ಪ್ಲೆಸಿಸ್ (ನಾಯಕ) , ರೀಝ ಹೆಂಡ್ರಿಕ್ಸ್ , ರೊನಾನ್ ಹರ್ಮನ್ (ವಿಕೆಟ್ ಕೀಪರ್) , ಲೆಯುಸ್ ಡು ಪ್ಲೂಯ್ , ಮೊಯೀನ್ ಅಲಿ , ಡೊನೊವನ್ ಫೆರೀರಾ , ರೊಮಾರಿಯೊ ಶೆಫರ್ಡ್ , ನಾಂಡ್ರೆ ಬರ್ಗರ್ , ಲಿಝಾರ್ಡ್ ವಿಲಿಯಮ್ಸ್ , ಝಹೀರ್ ಖಾನ್ , ಇಮ್ರಾನ್ ತಾಹಿರ್.

ಇದನ್ನೂ ಓದಿ: Kieron Pollard: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಪೊಲಾರ್ಡ್​

ಎಂಐ ಕೇಪ್​ಟೌನ್ ಪ್ಲೇಯಿಂಗ್ 11: ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ , ರಿಯಾನ್ ರಿಕೆಲ್ಟನ್ (ವಿಕೆಟ್ ಕೀಪರ್) , ಡೆವಾಲ್ಡ್ ಬ್ರೆವಿಸ್ , ಕಾನರ್ ಎಸ್ಟರ್ಹ್ಯೂಜೆನ್ , ಲಿಯಾಮ್ ಲಿವಿಂಗ್​ಸ್ಟೋನ್ , ಕೀರನ್ ಪೊಲಾರ್ಡ್ (ನಾಯಕ) , ಸ್ಯಾಮ್ ಕರನ್ , ಜಾರ್ಜ್ ಲಿಂಡೆ , ಕಗಿಸೊ ರಬಾಡಾ , ಬ್ಯೂರಾನ್ ಹೆಂಡ್ರಿಕ್ಸ್ , ಒಲ್ಲಿ ಸ್ಟೋನ್.

Follow Us
Web contact
Web contact

TV9 Kannada

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು