AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ruturaj Gaikwad: ನಮ್ಮ ಆಟ ನೋಡಿ ಫಾಫ್ ಡುಪ್ಲೆಸಿಸ್​ಗೆ​ ಹೊಟ್ಟೆಕಿಚ್ಚು ಆಗಿರುತ್ತೆ ಎಂದ ರುತುರಾಜ್

IPL 2022: ಸಿಎಸ್​ಕೆ ಪರ ಆಡಿದ್ದ ಫಾಫ್ ಡುಪ್ಲೆಸಿಸ್​ ರುತುರಾಜ್ ಗಾಯಕ್ವಾಡ್ ಜೊತೆ ಇನಿಂಗ್ಸ್ ಆರಂಭಿಸುತ್ತಿದ್ದರು. ಅಲ್ಲದೆ ಈ ಜೋಡಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಅನೇಕ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದರು.

Ruturaj Gaikwad: ನಮ್ಮ ಆಟ ನೋಡಿ ಫಾಫ್ ಡುಪ್ಲೆಸಿಸ್​ಗೆ​ ಹೊಟ್ಟೆಕಿಚ್ಚು ಆಗಿರುತ್ತೆ ಎಂದ ರುತುರಾಜ್
Faf du Plessis - Ruturaj Gaikwad
TV9 Web
| Edited By: |

Updated on: May 02, 2022 | 3:15 PM

Share

ಬರೋಬ್ಬರಿ 182 ರನ್​​ಗಳು…ಸನ್​ರೈಸರ್ಸ್​ ಹೈದರಾಬಾದ್ ವಿರುದ್ದದ ಪಂದ್ಯದಲ್ಲಿ ಸಿಎಸ್​ಕೆ ಆರಂಭಿಕರು ಮಾತ್ರ ಕಲೆಹಾಕಿದ ಸ್ಕೋರ್ ಇದು. ಅಂದರೆ ಐಪಿಎಲ್​ ಇತಿಹಾಸದಲ್ಲೇ ಸಿಎಸ್​ಕೆ ಪರ ಮೊದಲ ವಿಕೆಟ್​ಗೆ ಅತ್ಯಧಿಕ ರನ್​ಗಳಿಸಿದ ಜೋಡಿ ಎಂಬ ದಾಖಲೆ ರುತುರಾಜ್ ಗಾಯಕ್ವಾಡ್ ಹಾಗೂ ಡೆವೊನ್ ಕಾನ್ವೇ ಪಾಲಾಗಿದೆ. ಈ ಹಿಂದೆ 2020 ರಲ್ಲಿ ಫಾಫ್ ಡುಪ್ಲೆಸಿಸ್ ಹಾಗೂ ಶೇನ್ ವಾಟ್ಸನ್ 181 ರನ್​ಗಳ ಜೊತೆಯಾಟವಾಡುವ ಮೂಲಕ ದಾಖಲೆ ಬರೆದಿದ್ದರು. ಇದೀಗ ಒಂದು ರನ್ ಹೆಚ್ಚು ಗಳಿಸುವ ಮೂಲಕ ಕಾನ್ವೇ-ರುತುರಾಜ್ ಜೋಡಿ ಹೊಸ ಇತಿಹಾಸ ಬರೆದಿದ್ದಾರೆ. ಅದರಲ್ಲೂ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ರುತುರಾಜ್ 6 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ 57 ಎಸೆತಗಳಲ್ಲಿ 99 ರನ್ ಬಾರಿಸಿ ಅಬ್ಬರಿಸಿದ್ದರು. ಮತ್ತೊಂದೆಡೆ ಕಾನ್ವೆ 55 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 85 ರನ್​ ಬಾರಿಸಿದ್ದರು.

ಈ ದಾಖಲೆಯ ಇನಿಂಗ್ಸ್ ಬಗ್ಗೆ ಮಾತನಾಡಿದ ರುತುರಾಜ್ ಗಾಯಕ್ವಾಡ್, ನಮ್ಮ ಈ ಭರ್ಜರಿ ಇನಿಂಗ್ಸ್​ ನೋಡಿ ಫಾಫ್ ಡು ಪ್ಲೆಸಿಸ್ ಸ್ವಲ್ಪ ಅಸೂಯೆ ಪಟ್ಟಿರಬಹುದು ಎಂದಿದ್ದಾರೆ. ಏಕೆಂದರೆ ಕಳೆದ ಸೀಸನ್​ನಲ್ಲಿ ನಾವಿಬ್ಬರೂ ಸಿಎಸ್​ಕೆ ಪರ ಇನಿಂಗ್ಸ್ ಆಡಿದ್ದೆವು. ಇದೀಗ ಅವರ ಇನಿಂಗ್ಸ್ ದಾಖಲೆಯನ್ನು ಕಾನ್ವೇ ಜೊತೆ ಮುರಿದಿರುವುದರಿಂದ ಅವರಿಗೂ ಹೊಟ್ಟೆಕಿಚ್ಚು ಆಗಿರುತ್ತೆ ಎಂದು ರುತುರಾಜ್ ತಮಾಷೆಯಾಗಿ ಹೇಳಿದ್ದಾರೆ.

ಕಳೆದ ಸೀಸನ್​ನಲ್ಲಿ ಸಿಎಸ್​ಕೆ ಪರ ಆಡಿದ್ದ ಫಾಫ್ ಡುಪ್ಲೆಸಿಸ್​ ರುತುರಾಜ್ ಗಾಯಕ್ವಾಡ್ ಜೊತೆ ಇನಿಂಗ್ಸ್ ಆರಂಭಿಸುತ್ತಿದ್ದರು. ಅಲ್ಲದೆ ಈ ಜೋಡಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಅನೇಕ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದರು. ಅಲ್ಲದೆ ಕಳೆದ ಸೀಸನ್​ನಲ್ಲಿ ಗಾಯಕ್ವಾಡ್ 635 ರನ್ ಗಳಿಸಿ ಆರೆಂಜ್ ಕ್ಯಾಪ್ ಪಡೆದರೆ, 2ನೇ ಅತೀ ಹೆಚ್ಚು ರನ್​ಗಳಿಸಿದ್ದು ಫಾಫ್ ಡುಪ್ಲೆಸಿಸ್ (633) ಆಗಿತ್ತು ಎಂಬುದು ವಿಶೇಷ. ಆದರೆ ಈ ಬಾರಿ ಫಾಫ್ ಡುಪ್ಲೆಸಿಸ್ ಆರ್​ಸಿಬಿ ತಂಡದ ನಾಯಕರಾಗಿದ್ದು, ಹೀಗಾಗಿ ಕಾನ್ವೇ ಜೊತೆ ಹೊಸ ದಾಖಲೆ ಬರೆದ ಬೆನ್ನಲ್ಲೇ ರುತುರಾಜ್ ಗಾಯಕ್ವಾಡ್ ಡುಪ್ಲೆಸಿಸ್ ಹೆಸರು ಪ್ರಸ್ತಾಪಿಸಿ ಕಿಚಾಯಿಸಿದ್ದಾರೆ.

ಇನ್ನು ಎಸ್​ಆರ್​​ಹೆಚ್ ವಿರುದ್ದದ ಈ ಪಂದ್ಯದಲ್ಲಿ ಮೊದಲ ವಿಕೆಟ್​ಗೆ 182 ರನ್​ಗಳ ಜೊತೆಯಾಟವಾಡುವ ಮೂಲಕ ಡೆವೊನ್ ಕಾನ್ವೇ ಹಾಗೂ ರುತುರಾಜ್ ಗಾಯಕ್ವಾಡ್ ತಂಡದ ಆರಂಭಿಕ ಸಮಸ್ಯೆಯನ್ನು ದೂರ ಮಾಡಿದರು. ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 202 ರನ್​ ಕಲೆಹಾಕಿತು.

203 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಎಸ್​ಆರ್​ಹೆಚ್ ತಂಡವು ನಿಗದಿತ 20 ಓವರ್‌ನಲ್ಲಿ 6 ವಿಕೆಟ್ ಕಳೆದುಕೊಂಡು 189 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಸಿಎಸ್‌ಕೆ ತಂಡವು 13 ರನ್‌ಗಳ ಗೆಲುವು ದಾಖಲಿಸಿತು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು