Virat Kohli: ವಿರಾಟ್ ಕೊಹ್ಲಿ 103m ಸಿಕ್ಸ್ ಸಿಡಿಸಿದ್ದನ್ನು ಕಂಡು ಫಾಫ್ ಡುಪ್ಲೆಸಿಸ್ ಏನು ಮಾಡಿದ್ರು ಗೊತ್ತೇ?

|

Updated on: May 19, 2023 | 10:36 AM

Faf Duplessis, SRH vs RCB IPL 2023: ಹೈದರಾಬಾದ್ ವಿರುದ್ಧ ವಿರಾಟ್ ಕೊಹ್ಲಿ ಕೇವಲ 63 ಎಸೆತಗಳಲ್ಲಿ 12 ಫೋರ್, 4 ಸಿಕ್ಸರ್ ಸಿಡಿಸಿ 100 ರನ್ ಚಚ್ಚಿದರು. ಕೊಹ್ಲಿಯ ಈ ಇನ್ನಿಂಗ್ಸ್​ನಲ್ಲಿ ಅವರು ಸಿಡಿಸಿದ ಒಂದು ಸಿಕ್ಸ್​ಗೆ ಇಡೀ ಸ್ಟೇಡಿಯಂ ಒಂದು ಕ್ಷಣ ಸ್ತಬ್ಧವಾಯಿತು.

Virat Kohli: ವಿರಾಟ್ ಕೊಹ್ಲಿ 103m ಸಿಕ್ಸ್ ಸಿಡಿಸಿದ್ದನ್ನು ಕಂಡು ಫಾಫ್ ಡುಪ್ಲೆಸಿಸ್ ಏನು ಮಾಡಿದ್ರು ಗೊತ್ತೇ?
Virat Kohli Six and Faf Duplessis
Follow us on

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2023) ಗುರುವಾರ ನಡೆದ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (SRH vs RCB) ನಡುವಣ ಪಂದ್ಯ ತುದಿಗಾಲಿನಲ್ಲಿ ನಿಲ್ಲಿಸಿತ್ತು. ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಅಂತಿಮವಾಗಿ ಆರ್​ಸಿಬಿ 8 ವಿಕೆಟ್​ಗಳ ಅಮೋಘ ಗೆಲುವು ಕಂಡಿತು. ಜೊತೆಗೆ ಐಪಿಎಲ್ 2023 ರಲ್ಲಿ ಆರ್​ಸಿಬಿ ತನ್ನ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ. ವಿರಾಟ್ ಕೊಹ್ಲಿ (Virat Kohli) ನಾಲ್ಕು ವರ್ಷಗಳ ಬಳಿಕ ಐಪಿಎಲ್​ನಲ್ಲಿ ಚೊಚ್ಚಲ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದರು.

ಕೊಹ್ಲಿ ಕೇವಲ 63 ಎಸೆತಗಳಲ್ಲಿ 12 ಫೋರ್, 4 ಸಿಕ್ಸರ್ ಸಿಡಿಸಿ 100 ರನ್ ಚಚ್ಚಿದರು. ಕೊಹ್ಲಿಯ ಈ ಇನ್ನಿಂಗ್ಸ್​ನಲ್ಲಿ ಅವರು ಸಿಡಿಸಿದ ಒಂದು ಸಿಕ್ಸ್​ಗೆ ಇಡೀ ಸ್ಟೇಡಿಯಂ ಒಂದು ಕ್ಷಣ ಸ್ತಬ್ಧವಾಯಿತು. ಒಂಬತ್ತನೇ ಓವರ್​ನ ನಿತಿಶ್ ರೆಡ್ಡಿ ಬೌಲಿಂಗ್​ನ ಮೊದಲ ಎಸೆತದಲ್ಲಿ ಕೊಹ್ಲಿ ಮನಮೋಹಕ ಸಿಕ್ಸ್ ಸಿಡಿಸಿದರು. ಈ 103 ಮೀಟರ್ ದೂರದ ಸಿಕ್ಸ್ ಕಂಡು ಕೇವಲ ಅಭಿಮಾನಿಗಳು ಮಾತ್ರವಲ್ಲದೆ ನಾನ್​ಸ್ಟ್ರೈಕ್​ನಲ್ಲಿದ್ದ ನಾಯಕ ಫಾಫ್ ಡುಪ್ಲೆಸಿಸ್ ಕೂಡ  ದಂಗಾದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ
Faf Duplessis: ಹೈದರಾಬಾದ್ ವಿರುದ್ಧದ ಗೆಲುವಿನ ಬಳಿಕ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದೇನು ನೋಡಿ
PBKS vs RR, IPL 2023: ಐಪಿಎಲ್​ನಲ್ಲಿಂದು ಪಂಜಾಬ್-ರಾಜಸ್ಥಾನ್ ಮುಖಾಮುಖಿ: ಯಾವ ತಂಡ ಗೆದ್ದರೆ ಆರ್​ಸಿಬಿಗೆ ಸಹಕಾರಿ?
IPL 2023 Points Table: ಭರ್ಜರಿ ಜಯದೊಂದಿಗೆ ಟಾಪ್-4 ಗೆ RCB ಎಂಟ್ರಿ
LSG New Jersey: LSG ಮಾಸ್ಟರ್ ​ಪ್ಲ್ಯಾನ್: ಹೊಸ ಜೆರ್ಸಿ ಅನಾವರಣ

 

Virat Kohli: ಕಿಂಗ್ ಕೊಹ್ಲಿಯ ಸಿಡಿಲಬ್ಬರದ ಸೆಂಚುರಿಗೆ ಹಳೆಯ ದಾಖಲೆಗಳು ಧೂಳೀಪಟ

ದಾಖಲೆ ಬರೆದ ವಿರಾಟ್ ಕೊಹ್ಲಿ:

ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಶತಕ ಗಳಿಸುವ ಮೂಲಕ ಕೊಹ್ಲಿ ಐಪಿಎಲ್​ನಲ್ಲಿ 6ನೇ ಶತಕ ಬಾರಿಸಿದರು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಅಗ್ರಸ್ಥಾನದಲ್ಲಿ ಕ್ರಿಸ್ ಗೇಲ್ ಇದ್ದರು. ಗೇಲ್ ಒಟ್ಟು 6 ಶತಕ ಬಾರಿಸಿದ್ದರೂ, ಸದ್ಯ ಸಕ್ರೀಯರಾಗಿರುವ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ಐಪಿಎಲ್​ ಇತಿಹಾಸದಲ್ಲೇ ಅತೀ ಹೆಚ್ಚು ಶತಕ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈ ಶತಕದೊಂದಿಗೆ ಐಪಿಎಲ್​ನಲ್ಲಿ 7500 ರನ್ ಕೂಡ ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ 7 ಸಾವಿರದ ಐನೂರು ರನ್​ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್​ರೈಸರ್ಸ್ ಹೆನ್ರಿಚ್ ಕ್ಲಾಸೆನ್ ಅವರ 104 ರನ್​ಗಳ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಕಲೆಹಾಕಿತು. ಆರ್​ಸಿಬಿ ಪರ ಮಿಚೆಲ್ ಬ್ರೆಸ್​ವೆಲ್ 2 ವಿಕೆಟ್ ಪಡೆದರೆ, ಸಿರಾಜ್, ಶಹ್ಬಾಜ್ ಅಹ್ಮದ್ ಮತ್ತು ಹರ್ಷಲ್ ತಲಾ 1 ವಿಕೆಟ್ ಪಡೆದರು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಪವರ್​ಪ್ಲೇನಲ್ಲಿ 64 ರನ್​ ಬಾರಿಸಿದ ಈ ಜೋಡಿ 12ನೇ ಓವರ್​ ವೇಳೆಗೆ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು. ವಿರಾಟ್ ಕೊಹ್ಲಿ 100 ರನ್ ಚಚ್ಚಿದರೆ, ಡುಪ್ಲೆಸಿಸ್ 71 ರನ್ ಸಿಡಿಸಿದರು. ಆರ್​ಸಿಬಿ 19.2 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 187 ರನ್ ಸಿಡಿಸಿ ಜಯ ಸಾಧಿಸಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ