AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಮರವೇರಿ ಕೂತಿದ್ದ ಅಭಿಮಾನಿ ಕಂಡು ವಿರಾಟ್ ಕೊಹ್ಲಿಗೆ ನಗುವೇ ನಗು

T20 World Cup 2024: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 176 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿ ವಿಶ್ವಕಪ್ ಮುಡಿಗೇರಿಸಿಕೊಂಡಿದೆ.

VIDEO: ಮರವೇರಿ ಕೂತಿದ್ದ ಅಭಿಮಾನಿ ಕಂಡು ವಿರಾಟ್ ಕೊಹ್ಲಿಗೆ ನಗುವೇ ನಗು
ಝಾಹಿರ್ ಯೂಸುಫ್
|

Updated on:Jul 06, 2024 | 8:57 AM

Share

2024 ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡವನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ಬಾರ್ಬಡೋಸ್​ನಿಂದ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ (Team India) ಆಟಗಾರರನ್ನು ನೋಡಲು ಮುಂಜಾನೆಯೇ ಅಭಿಮಾನಿಗಳು ಜಮಾಯಿಸಿದ್ದರು. ಇದಾದ ಬಳಿಕ ಮುಂಬೈಗೆ ತೆರಳಿದ್ದ ಭಾರತ ತಂಡಕ್ಕೆ ಭವ್ಯ ಸ್ವಾಗತ ಕೋರಲಾಯಿತು. ಅಲ್ಲದೆ ಮುಂಬೈನಲ್ಲಿ ಟೀಮ್ ಇಂಡಿಯಾ ಆಟಗಾರರು ತೆರೆದ ಬಸ್‌ನಲ್ಲಿ ವಿಜಯೋತ್ಸವದ ಮೆರವಣಿಗೆ ನಡೆಸಿದರು. ಈ ವೇಳೆ ಸಾವಿರಾರು ಅಭಿಮಾನಿಗಳು ನೆರೆದಿದ್ದರು.

ಹೀಗೆ ನೆರೆದಿದ್ದ ಅಭಿಮಾನಿಗಳಲ್ಲಿ ಒಬ್ಬ ಅಭಿಮಾನಿಯು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಗಮನ ಸೆಳೆದಿದ್ದು ವಿಶೇಷ. ವಿಜಯಯಾತ್ರೆಯೊಂದಿಗೆ ಆಗಮಿಸಿದ್ದ ಟೀಮ್ ಇಂಡಿಯಾ ಆಟಗಾರರನ್ನು ನೋಡಲು ಈ ಅಭಿಮಾನಿ ಮರ ಹತ್ತಿ ಕೂತಿದ್ದ. ಅಲ್ಲದೆ ಮರದಲ್ಲೇ ಕೂತು ಟೀಮ್ ಇಂಡಿಯಾ ಆಟಗಾರರಿಗೆ ಕೈ ಬೀಸುತ್ತಿದ್ದ.

ಇದನ್ನು ಗಮನಿಸಿದ ವಿರಾಟ್ ಕೊಹ್ಲಿಗೆ ನಗು ತಡೆಯಲಾಗಲಿಲ್ಲ. ಅಲ್ಲದೆ ರವೀಂದ್ರ ಜಡೇಜಾ ಹಾಗೂ ರೋಹಿತ್ ಶರ್ಮಾ ಅವರನ್ನು ಕರೆದು ಮರದಲ್ಲಿರುವ ಅಭಿಮಾನಿಯನ್ನು ತೋರಿಸಿದ್ದಾರೆ. ಈ ವೇಳೆ ರೋಹಿತ್ ಶರ್ಮಾ ಮರದಿಂದ ಕೆಳಗಿಳಿಯುವಂತೆ ಹೇಳಿರುತ್ತಿರುವುದು ಕಾಣಬಹುದು.

ಮರದಲ್ಲಿ ಕೂತಿರುವ ಅಭಿಮಾನಿಯನ್ನು ತೋರಿಸುತ್ತಿರುವ ವಿರಾಟ್ ಕೊಹ್ಲಿ:

ವಿಶೇಷ ಎಂದರೆ ಅಭಿಮಾನಿಯು ಮರದಲ್ಲೇ ಕೂತು ಇವೆಲ್ಲವನ್ನು ಮೊಬೈಲ್​ ಕ್ಯಾಮೆರಾದಲ್ಲಿ ಚಿತ್ರಿಸಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಭಾರತ ತಂಡಕ್ಕೆ 125 ಕೋಟಿ ರೂ:

ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು 7 ರನ್​ಗಳಿಂದ ಮಣಿಸಿದ ಟೀಮ್ ಇಂಡಿಯಾಗೆ ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತ ನೀಡಿದೆ. ಗುರುವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ವಿಜಯೋತ್ಸವದ ಸಮಾರಂಭದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ 125 ಕೋಟಿ ರೂ.ಗಳ ಚೆಕ್​ ಅನ್ನು ಭಾರತ ತಂಡಕ್ಕೆ ಹಸ್ತಾಂತರಿಸಿದ್ದಾರೆ.

ಝಿಂಬಾಬ್ವೆಗೆ ತೆರಳಿದ ಯಂಗ್ ಇಂಡಿಯಾ:

ಟಿ20 ವಿಶ್ವಕಪ್​ ಗೆದ್ದ ಟೀಮ್ ಇಂಡಿಯಾದ ಆಗಮನದ ಬೆನ್ನಲ್ಲೇ, ಝಿಂಬಾಬ್ವೆ ವಿರುದ್ಧದ ಸರಣಿಗಾಗಿ ಭಾರತದ ಯುವ ಪಡೆ ತೆರಳಿದೆ. ಜುಲೈ 6 ರಿಂದ  ಶುರುವಾಗಲಿರುವ 5 ಪಂದ್ಯಗಳ ಟಿ20 ಸರಣಿಗಾಗಿ ಭಾರತ ಟಿ20 ತಂಡ ಹರಾರೆಗೆ ಬಂದಿಳಿದಿದೆ. ಈ ಸರಣಿಯಿಂದ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡ ಬಹುತೇಕ ಆಟಗಾರರು ಹೊರಗುಳಿದಿದ್ದಾರೆ. ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಗೆ ಯುವ ಪಡೆಯನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: IND vs ZIM: ಟೀಮ್ ಇಂಡಿಯಾಗೆ ಸ್ಪೋಟಕ ಆರಂಭಿಕ ಎಂಟ್ರಿ

15 ಸದಸ್ಯರ ಈ ತಂಡವನ್ನು ಶುಭ್​ಮನ್ ಗಿಲ್ ಮುನ್ನಡೆಸಲಿದ್ದು, ಮೊದಲೆರಡು ಪಂದ್ಯಗಳಿಗೆ ಟಿ20 ವಿಶ್ವಕಪ್​ ಬಳಗದಲ್ಲಿ ಕಾಣಿಸಿಕೊಂಡಿರುವ ಶಿವಂ ದುಬೆ, ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಜೈಸ್ವಾಲ್ ಅಲಭ್ಯರಾಗಲಿದ್ದಾರೆ. ಇನ್ನು ಈ ಮೂವರು ಆಟಗಾರರು 3ನೇ ಪಂದ್ಯದ ವೇಳೆಗೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.

Published On - 8:56 am, Sat, 6 July 24

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು