ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ (IPL 2023) ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ (DC vs SRH) ನಡುವಣ ಪಂದ್ಯ ರಣರೋಚಕವಾಗಿತ್ತು. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ (Delhi Stadium) ನಡೆದ ಈ ಹೈವೋಲ್ಟೇಜ್ ಪಂದ್ಯದಲ್ಲಿ ಆ್ಯಡಂ ಮರ್ಕ್ರಮ್ ನಾಯಕತ್ವದ ಎಸ್ಆರ್ಹೆಚ್ 9 ರನ್ಗಳ ರೋಚಕ ಗೆಲುವು ಸಾಧಿಸಿತು. ಈ ಕುತೂಹಲಕಾರಿ ಪಂದ್ಯ ವೀಕ್ಷಿಸಲು ಸ್ಟೇಡಿಯಂ ಸಂಪೂರ್ಣ ಭರ್ತಿ ಆಗಿತ್ತು. ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದರು. ಇದರ ನಡುವೆ ಸ್ಟೇಡಿಯಂನಲ್ಲಿ ನಾಚಿಕೆಗೇಡಿನ ಘಟನೆ ನಡೆದಿದೆ. ಡೆಲ್ಲಿ ಹಾಗೂ ಹೈದರಾಬಾದ್ ತಂಡದ ಅಭಿಮಾನಿಗಳು ಪಂದ್ಯದ ಮಧ್ಯೆ ಸ್ಟೇಡಿಯಂನಲ್ಲೇ ಹೊಡೆದಾಡಿಕೊಂಡಿದ್ದಾರೆ.
ಮೈದಾನದಲ್ಲಿ ಡೆಲ್ಲಿ ಮತ್ತು ಎಸ್ಆರ್ಹೆಚ್ ಪಂದ್ಯ ನಡೆಯುತ್ತಿದ್ದರೆ ಇತ್ತ ಗ್ಯಾಲರಿಯಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಯಾವ ಕಾರಣಕ್ಕೆ ಜಗಳ ಆಗಿದೆ ಎಂಬ ಬಗ್ಗೆ ವರದಿ ಆಗಿಲ್ಲ. ಆದರೆ, ಕೈ-ಕೈ ಮಿಲಾಯಿಸಿಕೊಂಡು ಜಗಳವಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ದೆಹಲಿಯ ಕ್ರೀಡಾಂಗಣದಲ್ಲಿ ಪಂದ್ಯದ ಮಧ್ಯೆ ಈರೀತಿ ಜಗಳ ಆಗುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ನಡೆದ ಭಾರತ- ದಕ್ಷಿಣ ಆಫ್ರಿಕಾ ನಡುವಣ ಮೊದಲ ಟಿ20 ಪಂದ್ಯದ ವೇಳೆಯೂ ಅಭಿಮಾನಿಗಳು ಹೊಡೆದಾಡಿಕೊಂಡಿದ್ದರು.
@gharkekalesh pic.twitter.com/QmnDyYgUvY
— Arhant Shelby (@Arhantt_pvt) April 29, 2023
IPL 2023: ಡಾಟ್ ಬಾಲ್ನಲ್ಲಿ ಶತಕ ಪೂರೈಸಿದ ಮೊಹಮ್ಮದ್ ಸಿರಾಜ್
ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಸನ್ರೈಸರ್ಸ್ ಹೈದರಾಬಾದ್ ತಂಡ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದತು. ಆದರೆ, ಅಭಿಷೇಕ್ ಶರ್ಮಾ ಬಿರುಸಿನ ಬ್ಯಾಟಿಂಗ್ ತಂಡದ ರನ್ಗತಿಯನ್ನು ಏರಿಸಿತು. ಮಯಾಂಕ್ ಅಗರ್ವಾಲ್ 5, ರಾಹುಲ್ ತ್ರಿಪಾಠಿ 10, ಆ್ಯಡಂ ಮರ್ಕ್ರಮ್ 8 ಹಾಗೂ ಹ್ಯಾರಿ ಬ್ರೂಕ್ ಸೊನ್ನೆ ಸುತ್ತಿದರು. ಅಭಿಷೇಕ್ 36 ಎಸೆತಗಳಲ್ಲಿ 67 ರನ್ ಬಾರಿಸಿದರು. ಅಂತಿಮ ಹಂತದಲ್ಲಿ ಹೆನ್ರಿಚ್ ಕ್ಲಾಸೆನ್ ಕೇವಲ 27 ಎಸೆತಗಳಲ್ಲಿ 2 ಫೋರ್, 4 ಸಿಕ್ಸರ್ ಸಿಡಿಸಿ ಅಜೇಯ 53 ರನ್ ಹಾಗೂ ಅಬ್ದುಲ್ ಸಮದ್ ಅಜೇಯ 28 ರನ್ ಸಿಡಿಸಿದ ಪರಿಣಾಮ ಎಸ್ಆರ್ಹೆಚ್ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 197 ರನ್ ಕಲೆಹಾಕಿತು. ಡೆಲ್ಲಿ ಪರ ಮಿಚೆಲ್ ಮಾರ್ಶ್ 4 ವಿಕೆಟ್ ಪಡೆದರು.
ಟಾರ್ಗೆಟ್ ಬೆನ್ನಟ್ಟಿದ ಡೆಲ್ಲಿ ಮೊದಲ ಓವರ್ನಲ್ಲೇ ಡೇವಿಡ್ ವಾರ್ನರ್(0) ವಿಕೆಟ್ ಕಳೆದುಕೊಂಡಿತು. ಆದರೆ, 2ನೇ ವಿಕೆಟ್ಗೆ ಪಿಲಿಪ್ ಸಾಲ್ಟ್ (59) ಹಾಗೂ ಮಿಚೆಲ್ ಮಾರ್ಶ್ (63) ಶತಕದ ಜೊತೆಯಾಟ ಆಡಿ ತಂಡಕ್ಕೆ ಗೆಲುವಿನ ಆಸೆ ತಂದಿಟ್ಟರು. ಆದರೆ, ಮಧ್ಯಮ ಕ್ರಮಾಂಕದಲ್ಲಿ ದಿಢೀರ್ ಕುಸಿತ ಕಂಡಿತು. ಮನೀಶ್ ಪಾಂಡೆ 1, ಪ್ರಿಯಂ ಗರ್ಗ್ 12, ಸರ್ಫರಾಜ್ ಖಾನ್ 9 ರನ್ಗೆ ಬೇಗನೆ ಔಟಾದರು. ಅಕ್ಷರ್ ಪಟೇಲ್ ಅಜೇಯ 29 ರನ್ ಬಾರಿಸಿ ಹೋರಾಡಿದರೂ ಗೆಲುವು ಸಾಧ್ಯವಾಗಲಿಲ್ಲ. ಡೆಲ್ಲಿ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತಷ್ಟೆ. ಹೈದರಾಬಾದ್ ಪರ ಮಯಾಂಕ್ ಮಾರ್ಕಂಡೆ 2 ವಿಕೆಟ್ ಕಿತ್ತರು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:25 pm, Sun, 30 April 23