
ಫೆಬ್ರವರಿ 15, 2026 ರ ಭಾನುವಾರದಂದು ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಬಹುನಿರೀಕ್ಷಿತ ಪಂದ್ಯ ನಡೆಯಲಿದೆ. ಈ ದಿನಾಂಕದಂದು, ಭಾರತ ಮತ್ತು ಪಾಕಿಸ್ತಾನ (India vs Pakistan) ಕ್ರಿಕೆಟ್ ತಂಡಗಳು ಮೈದಾನದಲ್ಲಿ ಪರಸ್ಪರ ಮುಖಾಮುಖಿಯಾಗುತ್ತವೆ. ಆದರೆ ವಿಶೇಷವೆಂದರೆ ಕ್ರಿಕೆಟ್ ಅಭಿಮಾನಿಗಳು ಈ ದೇಶಗಳ ನಡುವೆ ಒಂದೇ ದಿನ ಒಂದಲ್ಲ ಎರಡು ಪಂದ್ಯಗಳನ್ನು ನೋಡುವ ಅವಕಾಶ ಪಡೆದಿದ್ದಾರೆ. ಒಂದೆಡೆ 2026 ರ ಐಸಿಸಿ ಪುರುಷರ ಟಿ 20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನದ ಹಿರಿಯ ತಂಡಗಳು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿದ್ದು, ಇನ್ನೊಂದೆಡೆ ಎರಡೂ ದೇಶಗಳ ಯುವ ಮಹಿಳಾ ತಂಡಗಳು ಅದೇ ದಿನ ಮತ್ತೊಂದು ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಆಯೋಜಿಸಿರುವ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026 ರಲ್ಲಿ ಭಾರತ ಎ ಮತ್ತು ಪಾಕಿಸ್ತಾನ ಎ ತಂಡಗಳು ಫೆಬ್ರವರಿ 15 ರಂದು ಮುಖಾಮುಖಿಯಾಗಲಿವೆ. ಈ ಪಂದ್ಯಾವಳಿ ಯುವ ಆಟಗಾರರಿಗೆ ಪ್ರಮುಖ ವೇದಿಕೆಯಾಗಿದೆ. ಈ ಪಂದ್ಯವು ಬ್ಯಾಂಕಾಕ್‌ನ ಟೆರ್ಡ್‌ಥೈ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 12:30 ಕ್ಕೆ ಪ್ರಾರಂಭವಾಗಲಿದೆ. ಐಸಿಸಿ ಪುರುಷರ ಟಿ20 ವಿಶ್ವಕಪ್ 2026 ಪಂದ್ಯವು ಸಂಜೆ 7 ಗಂಟೆಗೆ ಶುರುವಾಗಲಿದೆ.
ಟಿ20 ವಿಶ್ವಕಪ್‌ನಲ್ಲಿ ಉಭಯ ತಂಡಗಳು ಇದುವರೆಗೆ ತಲಾ ಎರಡು ಪಂದಗಳನ್ನು ಆಡಿವೆ. ಆಡಿರುವ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು 29 ರನ್ಗಳಿಂದ ಮಣಿಸಿದರೆ, ಎರಡನೇ ಪಂದ್ಯದಲ್ಲಿ ನಮೀಬಿಯಾವನ್ನು ಬರೋಬ್ಬರಿ 93 ರನ್ಗಳಿಂದ ಮಣಿಸಿದೆ. ಹೀಗಾಗಿ ಪಾಯಿಂಟ್ ಪಟ್ಟಿಯಲ್ಲಿ 4 ಅಂಕ ಹಾಗೂ +3.050 ನೆಟ ರನ್ ರೇಟ್ನೊಂದಿಗೆ ಅಗ್ರಸ್ಥಾನದಲ್ಲಿದೆ.
ಇತ್ತ ಪಾಕಿಸ್ತಾನ ಕೂಡ ತನ್ನ ಮೊದಲ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಕೊನೆಯ ಓವರ್ನಲ್ಲಿ ಸೋಲಿಸಿ ರೋಚಕ ಗೆಲುವು ದಾಖಲಿಸಿತು. ಆ ಬಳಿಕ ತನ್ನ ಎರಡನೇ ಪಂದ್ಯದಲ್ಲಿ ಯುಎಸ್ಎ ತಂಡವನ್ನು 32 ರನ್ಗಳಿಂದ ಸೋಲಿಸಿತು. ಈ ಎರಡು ಗೆಲುವುಗಳಿಂದ 4 ಅಂಕ ಕಲೆಹಾಕಿರುವ ಪಾಕ್ ತಂಡ +0.932 ನೆಟ್ ರನ್ ರೇಟ್ ಹೊಂದಿದ್ದು ಎರಡನೇ ಸ್ಥಾನದಲ್ಲಿದೆ.
IND vs PAK: ಟಿ20 ವಿಶ್ವಕಪ್‌ನಲ್ಲಿ ಭಾರತ- ಪಾಕ್ ಮುಖಾಮುಖಿ ದಾಖಲೆ ಹೇಗಿದೆ?
ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್‌ನಲ್ಲಿ ಒಟ್ಟು ಎಂಟು ತಂಡಗಳು ಭಾಗವಹಿಸುತ್ತಿವೆ. ಭಾರತ ಎ, ಪಾಕಿಸ್ತಾನ ಎ, ಬಾಂಗ್ಲಾದೇಶ ಎ, ಶ್ರೀಲಂಕಾ ಎ, ಯುಎಇ, ನೇಪಾಳ, ಮಲೇಷ್ಯಾ ಮತ್ತು ಥೈಲ್ಯಾಂಡ್ ಟ್ರೋಫಿಗಾಗಿ ಸ್ಪರ್ಧಿಸುತ್ತಿವೆ. ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ, ಪ್ರತಿ ಗುಂಪಿನಲ್ಲಿ ನಾಲ್ಕು ತಂಡಗಳಿವೆ. ಗ್ರೂಪ್ ಎ ನಲ್ಲಿ ಭಾರತ ಎ ಪಾಕಿಸ್ತಾನ ಎ, ಯುಎಇ ಮತ್ತು ನೇಪಾಳವನ್ನು ಎದುರಿಸಲಿದೆ. ಪ್ರತಿ ತಂಡವು ಗುಂಪು ಹಂತದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಮುನ್ನಡೆಯಲಿವೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:15 pm, Sat, 14 February 26