ಮಹಿಳಾ ಅಭಿಮಾನಿಯ ನಡೆಯಿಂದ ದಿಗ್ಭ್ರಮೆಗೊಂಡ ವಿರಾಟ್ ಕೊಹ್ಲಿ

ಮಹಿಳಾ ಅಭಿಮಾನಿಯ ನಡೆಯಿಂದ ದಿಗ್ಭ್ರಮೆಗೊಂಡ ವಿರಾಟ್ ಕೊಹ್ಲಿ

ಝಾಹಿರ್ ಯೂಸುಫ್
|

Updated on: Nov 09, 2024 | 2:10 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಶೀಘ್ರದಲ್ಲೇ ಕಿಂಗ್ ಕೊಹ್ಲಿ ಆಸ್ಟ್ರೇಲಿಯಾಗೆ ತೆರಳಲಿದ್ದು, ಈ ಮೂಲಕ ಮತ್ತೆ ಫಾರ್ಮ್ ಕಂಡುಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿಗೆ ಅಪಾರ ಅಭಿಮಾನಿಗಳಿರುವುದು ಗೊತ್ತೇ ಇದೆ. ಹೀಗಾಗಿಯೇ ಹೋದಲ್ಲಿ, ಬಂದಲ್ಲಿ ಕಿಂಗ್ ಕೊಹ್ಲಿಯನ್ನು ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಹೀಗೆ ಸಿಗುವ ಅಭಿಮಾನಿಗಳಿಗೆ ಆಟೋಗ್ರಾಫ್, ಸೆಲ್ಪಿ ನೀಡುವ ಮೂಲಕ ಕೊಹ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಆದರೆ ಮುಂಬೈನಲ್ಲಿ ನಡೆದ ಘಟನೆಯಿಂದಾಗಿ ಖುದ್ದು ವಿರಾಟ್ ಕೊಹ್ಲಿಯೇ ದಿಗ್ಭ್ರಮೆಗೊಂಡಿದ್ದಾರೆ.

ಮುಂಬೈನ ಪ್ರಮುಖ ಸ್ಥಳವೊಂದರಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿಗೆ ಮಹಿಳೆಯೊಬ್ಬರು ಸೆಲ್ಫಿ ಕೇಳಿದ್ದಾರೆ. ಅಷ್ಟೇ ಅಲ್ಲದೆ ಅವಸರದಲ್ಲಿದ್ದ ಕೊಹ್ಲಿಯ ಕೈ ಹಿಡಿದು ಎಳೆದು ಫೋಟೋ ಕ್ಲಿಕ್ಕಿಸಲು ಮುಂದಾಗಿದ್ದಾರೆ.  ಈ ಪರಿಸ್ಥಿತಿಯನ್ನು ನಾಜೂಕಾಗಿ ನಿಭಾಯಿಸಿದ ವಿರಾಟ್ ಕೊಹ್ಲಿ ವಿನಮ್ರವಾಗಿ ಪೋಸ್ ನೀಡಿದ್ದಾರೆ.

ಆದರೆ ಇದೇ ವೇಳೆ ಮತ್ತೊಬ್ಬರು ಕೂಡ ವಿರಾಟ್ ಕೊಹ್ಲಿಯತ್ತ ಫೋಟೋ ಕ್ಲಿಕ್ಕಿಸಲು ಮುಂದಾಗಿದ್ದು, ಆದರೆ ಅವಸರದಲ್ಲಿದ್ದ ಕೊಹ್ಲಿ ನೇರವಾಗಿ ಒಳ ಹೋಗಿದ್ದಾರೆ. ಇದಾಗ್ಯೂ ಮಹಿಳೆಯೊಬ್ಬರು ಅವರನ್ನು ಹಿಂಬಾಲಿಸಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮಹಿಳೆಯ ನಡೆಗೆ ಬಗ್ಗೆ ಕಿಂಗ್ ಕೊಹ್ಲಿ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸದ್ಯ ಮುಂಬೈನಲ್ಲಿರುವ ವಿರಾಟ್ ಕೊಹ್ಲಿ ಶೀಘ್ರದಲ್ಲೇ ಆಸ್ಟ್ರೇಲಿಯಾಗೆ ತೆರಳಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದ್ದು, ಈ ಸರಣಿಯ ಮೂಲಕ ವಿರಾಟ್ ಕೊಹ್ಲಿ ಮತ್ತೆ ಕಣಕ್ಕಿಳಿಯಲಿದ್ದಾರೆ.