Asian Games: ಫೈನಲ್ ಪಂದ್ಯ ರದ್ದು: ಟೀಮ್ ಇಂಡಿಯಾಗೆ ಚಿನ್ನದ ಪದಕ
Asian Games: ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 18.2 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112 ರನ್ ಕಲೆಹಾಕಿದಾಗ ಮಳೆ ಬರಲಾರಂಭಿಸಿತು.
ಭಾರತ – ಅಫ್ಘಾನಿಸ್ತಾನ್ ನಡುವಣ ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ ಟೂರ್ನಿಯುದ್ದಕೂ ಉತ್ತಮ ಪ್ರದರ್ಶನದೊಂದಿಗೆ ಫೈನಲ್ಗೆ ಪ್ರವೇಶಿಸಿದ ಟೀಮ್ ಇಂಡಿಯಾಗೆ ಚಿನ್ನದ ಪದಕ ಒಲಿದಿದೆ. ಇನ್ನು ಅಫ್ಘಾನಿಸ್ತಾನ್ ಬೆಳ್ಳಿ ಪದಕ ಗೆದ್ದರೆ, ಬಾಂಗ್ಲಾದೇಶ್ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.
ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 18.2 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112 ರನ್ ಕಲೆಹಾಕಿದಾಗ ಮಳೆ ಬರಲಾರಂಭಿಸಿತು.
ಧಾರಾಕಾರ ಸುರಿದ ಮಳೆಯಿಂದ ಮೈದಾನವು ಸಂಪೂರ್ಣ ಒದ್ದೆಯಾಗಿದ್ದು, ಹೀಗಾಗಿ ಪಂದ್ಯವನ್ನು ರದ್ದುಗೊಳಿಸಲು ಅಂಪೈರ್ಗಳು ನಿರ್ಧರಿಸಿದರು. ಅದರಂತೆ ಅಂತಿಮ ಹಣಾಹಣಿಯು ಮಳೆಗೆ ಅಹುತಿಯಾಯಿತು. ಇದಾಗ್ಯೂ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದ ಟೀಮ್ ಇಂಡಿಯಾವನ್ನು ವಿಜಯಿ ಎಂದು ಘೋಷಿಸಲಾಯಿತು. ಈ ಮೂಲಕ ಏಷ್ಯನ್ ಗೇಮ್ಸ್ ಕ್ರಿಕೆಟ್ನಲ್ಲಿ ಭಾರತ ತಂಡವು ಸ್ವರ್ಣ ಪದಕವನ್ನು ಗೆದ್ದುಕೊಂಡಿದೆ. ಇನ್ನು ರನ್ನರ್ ಅಪ್ ತಂಡ ಅಫ್ಘಾನಿಸ್ತಾನ್ ತಂಡವು ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದೆ.
ಭಾರತ ತಂಡ: ಯಶಸ್ವಿ ಜೈಸ್ವಾಲ್ , ರುತುರಾಜ್ ಗಾಯಕ್ವಾಡ್ (ನಾಯಕ) , ತಿಲಕ್ ವರ್ಮಾ , ವಾಷಿಂಗ್ಟನ್ ಸುಂದರ್ , ಶಿವಂ ದುಬೆ , ರಿಂಕು ಸಿಂಗ್ , ಜಿತೇಶ್ ಶರ್ಮಾ (ವಿಕೆಟ್ ಕೀಪರ್) , ಶಹಬಾಝ್ ಅಹ್ಮದ್ , ರವಿ ಬಿಷ್ಣೋಯ್ , ಸಾಯಿ ಕಿಶೋರ್ , ಅರ್ಶ್ದೀಪ್ ಸಿಂಗ್, ರಾಹುಲ್ ತ್ರಿಪಾಠಿ , ಅವೇಶ್ ಖಾನ್ , ಮುಖೇಶ್ ಕುಮಾರ್ , ಪ್ರಭ್ಸಿಮ್ರಾನ್ ಸಿಂಗ್ , ಆಕಾಶ್ ದೀಪ್.
ಇದನ್ನೂ ಓದಿ: ಟೀಮ್ ಇಂಡಿಯಾ ಪಾಲಿಗೆ ನ್ಯೂಝಿಲೆಂಡ್ ಡೇಂಜರಸ್..!
ಅಫ್ಘಾನಿಸ್ತಾನ್ ತಂಡ: ಝುಬೈದ್ ಅಕ್ಬರಿ , ಮೊಹಮ್ಮದ್ ಶಹಜಾದ್ (ವಿಕೆಟ್ ಕೀಪರ್) , ನೂರ್ ಅಲಿ ಜದ್ರಾನ್ , ಅಫ್ಸರ್ ಝಜೈ , ಶಾಹಿದುಲ್ಲಾ ಕಮಾಲ್ , ಕರೀಂ ಜನತ್ , ಗುಲ್ಬದಿನ್ ನೈಬ್ (ನಾಯಕ) , ಶರಫುದ್ದೀನ್ ಅಶ್ರಫ್ , ಖೈಸ್ ಅಹ್ಮದ್ , ಫರೀದ್ ಅಹ್ಮದ್ ಮಲಿಕ್ , ಝಹೀರ್ ಖಾನ್, ಸೇದಿಕುಲ್ಲಾ ಅಟಲ್ , ಸೈಯದ್ ಶಿರ್ಜಾದ್ , ನಿಜತ್ ಮಸೂದ್ , ವಫಿವುಲ್ಲಾ ತಾರಖಿಲ್.
Published On - 2:49 pm, Sat, 7 October 23