T20 World Cup 2024: ಅಮೆರಿಕಕ್ಕೆ ಹಾರಿದ ಟೀಂ ಇಂಡಿಯಾದ ಮೊದಲ ಬ್ಯಾಚ್; ವಿಡಿಯೋ

T20 World Cup 2024: ತಂಡದ ನಾಯಕ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಸೇರಿದಂತೆ ಹಲವು ಆಟಗಾರರು ವಿಶ್ವಕಪ್‌ಗೆ ತೆರಳುತ್ತಿರುವುದನ್ನು ಈ ವಿಡಿಯೋದಲ್ಲಿ ನಾವು ಕಾಣಬಹುದಾಗಿದೆ. ಆಟಗಾರರಲ್ಲದೆ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಸಹಾಯಕ ಸಿಬ್ಬಂದಿಯ ಸದಸ್ಯರು ಸಹ ಈ ಆಟಗಾರರೊಂದಿಗೆ ಪ್ರಯಾಣ ಬೆಳೆಸಿದ್ದಾರೆ.

T20 World Cup 2024: ಅಮೆರಿಕಕ್ಕೆ ಹಾರಿದ ಟೀಂ ಇಂಡಿಯಾದ ಮೊದಲ ಬ್ಯಾಚ್; ವಿಡಿಯೋ
ಟೀಂ ಇಂಡಿಯಾ
Follow us
|

Updated on:May 25, 2024 | 10:12 PM

ಜೂನ್ 2 ರಿಂದ ಆರಂಭವಾಗಲಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ಗಾಗಿ (T20 World Cup 2024) ಟೀಂ ಇಂಡಿಯಾದ ಮೊದಲ ಬ್ಯಾಚ್ ಇಂದು ಪ್ರಯಾಣ ಬೆಳೆಸಿದೆ. ಶನಿವಾರ ರಾತ್ರಿ ಮುಂಬೈ ವಿಮಾನ ನಿಲ್ದಾಣದಿಂದ ಟೀಂ ಇಂಡಿಯಾ (Team India) ಅಮೆರಿಕಕ್ಕೆ (USA) ಹಾರಿದೆ. ಮಿನಿ ವಿಶ್ವ ಸಮರಕ್ಕೆ ಟೀಂ ಇಂಡಿಯಾದ ಕೆಲವು ಆಟಗಾರರು ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅನೇಕ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ತಂಡದ ನಾಯಕ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಸೇರಿದಂತೆ ಹಲವು ಆಟಗಾರರು ವಿಶ್ವಕಪ್‌ಗೆ ತೆರಳುತ್ತಿರುವುದನ್ನು ಈ ವಿಡಿಯೋದಲ್ಲಿ ನಾವು ಕಾಣಬಹುದಾಗಿದೆ. ಆಟಗಾರರಲ್ಲದೆ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಸಹಾಯಕ ಸಿಬ್ಬಂದಿಯ ಸದಸ್ಯರು ಸಹ ಈ ಆಟಗಾರರೊಂದಿಗೆ ಪ್ರಯಾಣ ಬೆಳೆಸಿದ್ದಾರೆ.

ಮೇ 27-28 ರಂದು 2ನೇ ಬ್ಯಾಚ್ ಪ್ರಯಾಣ

ಐಪಿಎಲ್ 2024 ರ ಅಂತಿಮ ಪಂದ್ಯ ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ. ಈ ಎರಡೂ ತಂಡಗಳಿಂದ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಏಕೈಕ ಆಟಗಾರ ರಿಂಕು ಸಿಂಗ್. ಆದರೆ, ಅವರನ್ನು 15 ಸದಸ್ಯರ ತಂಡದಲ್ಲಿ ಸೇರಿಸಲಾಗಿಲ್ಲ. ಬದಲಿಗೆ ಮೀಸಲು ಆಟಗಾರರ ಪಟ್ಟಿಯಲ್ಲಿ ಸೇರಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಐಪಿಎಲ್ 2024 ರ ಫೈನಲ್ ನಂತರ, ಅವರು ವಿಶ್ವಕಪ್‌ಗಾಗಿ ಅಮೆರಿಕಕ್ಕೆ ತೆರಳಲಿದ್ದಾರೆ. ಮೇ 27-28 ರಂದು ಟೀಂ ಇಂಡಿಯಾದ ಎರಡನೇ ಬ್ಯಾಚ್ ಅಮೆರಿಕಕ್ಕೆ ತೆರಳಬಹುದು ಎಂದು ಹೇಳಲಾಗುತ್ತಿದೆ.

ಲಂಡನ್​ನಲ್ಲಿ ಪಾಂಡ್ಯ?

ಈ ಎರಡನೇ ಬ್ಯಾಚ್​ನಲ್ಲಿ ವಿರಾಟ್ ಕೊಹ್ಲಿ ಸೇರಿದಂತೆ ಉಳಿದ ಆಟಗಾರರು ಅಮೇರಿಕಕ್ಕೆ ತೆರಳಲಿದ್ದಾರೆ. ಉಳಿದಂತೆ ತಂಡದ ಉಪನಾಯಕ ಹಾರ್ದಿಕ್ ಪಾಂಡ್ಯ ಲಂಡನ್​ನಲ್ಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಅವರು ಸೀದಾ ಅಲ್ಲಿಂದ ಅಮೆರಿಕಕ್ಕೆ ಹೋಗುತ್ತಾರಾ ಅಥವಾ ಭಾರತಕ್ಕೆ ವಾಪಸ್ ಬಂದು ಆ ಬಳಿಕ ಅಲ್ಲಿಗೆ ಹೋಗುತ್ತಾರಾ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಮೀಸಲು ಆಟಗಾರರು: ಶುಭ್​ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್.

Published On - 10:09 pm, Sat, 25 May 24

ತಾಜಾ ಸುದ್ದಿ