AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Indians: ಟಾಸ್ ಮೂಲಕ ನಿರ್ಧಾರವಾಗಲಿದೆ ಮುಂಬೈ ಇಂಡಿಯನ್ಸ್​ ಪ್ಲೇಆಫ್​ ಭವಿಷ್ಯ..!

Mumbai Indians Playoff Chances: ಸನ್​ರೈಸರ್ಸ್​ ಹೈದರಾಬಾದ್ ವಿರುದ್ದದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ 171 ರನ್​ಗಳ ಬೃಹತ್ ಅಂತರದಿಂದ ಗೆದ್ದರೆ ನೆಟ್​ ರನ್​ ರೇಟ್ ಮೂಲಕ ಪ್ಲೇಆಫ್ ಪ್ರವೇಶಿಸಬಹುದು.

Mumbai Indians: ಟಾಸ್ ಮೂಲಕ ನಿರ್ಧಾರವಾಗಲಿದೆ ಮುಂಬೈ ಇಂಡಿಯನ್ಸ್​ ಪ್ಲೇಆಫ್​ ಭವಿಷ್ಯ..!
Mi vs Srh
TV9 Web
| Edited By: |

Updated on:Oct 08, 2021 | 3:23 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 14 (IPL 2021) ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಲೀಗ್ ಹಂತ ಕೊನೆಯ ದಿನ (ಅ.08) 2 ಪಂದ್ಯಗಳು ನಡೆಯಲಿದ್ದು, ಈ ಎರಡೂ ಪಂದ್ಯಗಳು ಏಕಕಾಲಕ್ಕೆ ನಡೆಯುತ್ತಿರುವುದು ವಿಶೇಷ. ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ (DC)​, ಚೆನ್ನೈ ಸೂಪರ್ ಕಿಂಗ್ಸ್​ (CSK) ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡಗಳು ಪ್ಲೇಆಫ್ ಪ್ರವೇಶಿಸಿದೆ. ಇದೀಗ 55ನೇ ಪಂದ್ಯದ ಮೂಲಕ ಪ್ಲೇಆಫ್​ ಪ್ರವೇಶಿಸಲಿರುವ 4ನೇ ತಂಡ ಯಾವುದು ಎಂಬುದು ನಿರ್ಧಾರವಾಗಲಿದೆ. ಏಕೆಂದರೆ ಗುರುವಾರ ನಡೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್​ (KKR) ತಂಡವು ರಾಜಸ್ಥಾನ್​ ರಾಯಲ್ಸ್ (RR)​ ವಿರುದ್ದ ಭರ್ಜರಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇತ್ತ 5ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್​ಗೂ ಪ್ಲೇಆಫ್ ಪ್ರವೇಶಿಸುವ ಅವಕಾಶ ಇದೆ. ಆದರೆ ಅದು ಪವಾಡ ರೂಪದಲ್ಲಿ ಗೆಲುವು ದಾಖಲಿಸಿದರೆ ಮಾತ್ರ.

ಅಂದರೆ ಸನ್​ರೈಸರ್ಸ್​ ಹೈದರಾಬಾದ್ ವಿರುದ್ದದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ 171 ರನ್​ಗಳ ಬೃಹತ್ ಅಂತರದಿಂದ ಗೆದ್ದರೆ ನೆಟ್​ ರನ್​ ರೇಟ್ ಮೂಲಕ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲೇಬೇಕು. ಒಂದು ವೇಳೆ ಟಾಸ್ ಗೆದ್ದು ಸನ್​ರೈಸರ್ಸ್​ ಹೈದರಾಬಾದ್ ತಂಡವು ಬ್ಯಾಟಿಂಗ್ ಆಯ್ದುಕೊಂಡರೆ ಮುಂಬೈ ಪ್ಲೇಆಫ್​ ರೇಸ್​ನಿಂದ ಅಧಿಕೃತವಾಗಿ ಹೊರಬೀಳಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ಸನ್​ರೈಸರ್ಸ್​ ವಿರುದ್ದ​ ಚೇಸ್ ಮಾಡಿ ಗೆದ್ದರೂ ಕೆಕೆಆರ್ ತಂಡದ ನೆಟ್​ ರನ್​ ರೇಟ್​ ಅನ್ನು ಹಿಂದಿಕ್ಕಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿ, ಬೃಹತ್ ಮೊತ್ತ ಪೇರಿಸಿ 171 ರನ್​ಗಳ ಅಂತರದಿಂದ ರೋಹಿತ್ ಪಡೆ ಗೆಲ್ಲಲೇಬೇಕು.

ಇತ್ತ ಸನ್​ರೈಸರ್ಸ್​ ಹೈದರಾಬಾದ್ ತಂಡವು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡರೆ ಮುಂಬೈ ಇಂಡಿಯನ್ಸ್​ ತಂಡದ ಪ್ಲೇಆಫ್​ ಕನಸು ನುಚ್ಚು ನೂರಾಗಲಿದೆ. ಹೀಗಾಗಿ ಟಾಸ್ ಪ್ರಕ್ರಿಯೆ ಮುಂಬೈ ಇಂಡಿಯನ್ಸ್​ ಪ್ಲೇಆಫ್​ ಭವಿಷ್ಯವನ್ನು ನಿರ್ಧರಿಸಲಿದೆ. ಒಂದು ವೇಳೆ ಮುಂಬೈ ಟಾಸ್ ಸೋತರೆ ಕೆಕೆಆರ್​ ಪ್ಲೇಆಫ್ ಆಡುವುದು ಅಧಿಕೃತವಾಗಲಿದೆ. ಕಳೆದ 13 ಸೀಸನ್​ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಟಾಸ್ ಪ್ರಕ್ರಿಯೆಯು ತಂಡವೊಂದರ ಪ್ಲೇಆಫ್ ಭವಿಷ್ಯವನ್ನು ನಿರ್ಧರಿಸುತ್ತಿರುವುದು ವಿಶೇಷ. ಹೀಗಾಗಿ ಮುಂಬೈ ಇಂಡಿಯನ್ಸ್​-ಸನ್​ರೈಸರ್ಸ್​ ಹೈದರಾಬಾದ್​ ಪಂದ್ಯವು ಟಾಸ್ ಕಾರಣದಿಂದ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಅದರಂತೆ ಶಾರ್ಜಾ ಮೈದಾನದಲ್ಲಿ ಯಾರು ಟಾಸ್ ಗೆಲ್ಲಲಿದ್ದಾರೆ? ಕಾದು ನೋಡಬೇಕಿದೆ.

ಇದನ್ನೂ ಓದಿ:  IPL 2021: ಮುಂದಿನ 2 ಪಂದ್ಯಗಳನ್ನು RCB ಗೆಲ್ಲಲೇಬೇಕು, ಏಕೆಂದರೆ…

ಇದನ್ನೂ ಓದಿ: David Warner: SRH ತಂಡದಲ್ಲಿಲ್ಲ ಸ್ಥಾನ: ಪ್ರೇಕ್ಷಕನಾಗಿ ಕಾಣಿಸಿಕೊಂಡ ಡೇವಿಡ್ ವಾರ್ನರ್

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಹರ್ಷಲ್ ಪಟೇಲ್

(first time a toss will decide a team’s fate for the playoffs spot)

Published On - 3:22 pm, Fri, 8 October 21

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು