ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 14 (IPL 2021) ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಲೀಗ್ ಹಂತ ಕೊನೆಯ ದಿನ (ಅ.08) 2 ಪಂದ್ಯಗಳು ನಡೆಯಲಿದ್ದು, ಈ ಎರಡೂ ಪಂದ್ಯಗಳು ಏಕಕಾಲಕ್ಕೆ ನಡೆಯುತ್ತಿರುವುದು ವಿಶೇಷ. ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ (DC), ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಪ್ಲೇಆಫ್ ಪ್ರವೇಶಿಸಿದೆ. ಇದೀಗ 55ನೇ ಪಂದ್ಯದ ಮೂಲಕ ಪ್ಲೇಆಫ್ ಪ್ರವೇಶಿಸಲಿರುವ 4ನೇ ತಂಡ ಯಾವುದು ಎಂಬುದು ನಿರ್ಧಾರವಾಗಲಿದೆ. ಏಕೆಂದರೆ ಗುರುವಾರ ನಡೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು ರಾಜಸ್ಥಾನ್ ರಾಯಲ್ಸ್ (RR) ವಿರುದ್ದ ಭರ್ಜರಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇತ್ತ 5ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ಗೂ ಪ್ಲೇಆಫ್ ಪ್ರವೇಶಿಸುವ ಅವಕಾಶ ಇದೆ. ಆದರೆ ಅದು ಪವಾಡ ರೂಪದಲ್ಲಿ ಗೆಲುವು ದಾಖಲಿಸಿದರೆ ಮಾತ್ರ.
ಅಂದರೆ ಸನ್ರೈಸರ್ಸ್ ಹೈದರಾಬಾದ್ ವಿರುದ್ದದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 171 ರನ್ಗಳ ಬೃಹತ್ ಅಂತರದಿಂದ ಗೆದ್ದರೆ ನೆಟ್ ರನ್ ರೇಟ್ ಮೂಲಕ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲೇಬೇಕು. ಒಂದು ವೇಳೆ ಟಾಸ್ ಗೆದ್ದು ಸನ್ರೈಸರ್ಸ್ ಹೈದರಾಬಾದ್ ತಂಡವು ಬ್ಯಾಟಿಂಗ್ ಆಯ್ದುಕೊಂಡರೆ ಮುಂಬೈ ಪ್ಲೇಆಫ್ ರೇಸ್ನಿಂದ ಅಧಿಕೃತವಾಗಿ ಹೊರಬೀಳಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ಸನ್ರೈಸರ್ಸ್ ವಿರುದ್ದ ಚೇಸ್ ಮಾಡಿ ಗೆದ್ದರೂ ಕೆಕೆಆರ್ ತಂಡದ ನೆಟ್ ರನ್ ರೇಟ್ ಅನ್ನು ಹಿಂದಿಕ್ಕಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿ, ಬೃಹತ್ ಮೊತ್ತ ಪೇರಿಸಿ 171 ರನ್ಗಳ ಅಂತರದಿಂದ ರೋಹಿತ್ ಪಡೆ ಗೆಲ್ಲಲೇಬೇಕು.
ಇತ್ತ ಸನ್ರೈಸರ್ಸ್ ಹೈದರಾಬಾದ್ ತಂಡವು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡರೆ ಮುಂಬೈ ಇಂಡಿಯನ್ಸ್ ತಂಡದ ಪ್ಲೇಆಫ್ ಕನಸು ನುಚ್ಚು ನೂರಾಗಲಿದೆ. ಹೀಗಾಗಿ ಟಾಸ್ ಪ್ರಕ್ರಿಯೆ ಮುಂಬೈ ಇಂಡಿಯನ್ಸ್ ಪ್ಲೇಆಫ್ ಭವಿಷ್ಯವನ್ನು ನಿರ್ಧರಿಸಲಿದೆ. ಒಂದು ವೇಳೆ ಮುಂಬೈ ಟಾಸ್ ಸೋತರೆ ಕೆಕೆಆರ್ ಪ್ಲೇಆಫ್ ಆಡುವುದು ಅಧಿಕೃತವಾಗಲಿದೆ. ಕಳೆದ 13 ಸೀಸನ್ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಟಾಸ್ ಪ್ರಕ್ರಿಯೆಯು ತಂಡವೊಂದರ ಪ್ಲೇಆಫ್ ಭವಿಷ್ಯವನ್ನು ನಿರ್ಧರಿಸುತ್ತಿರುವುದು ವಿಶೇಷ. ಹೀಗಾಗಿ ಮುಂಬೈ ಇಂಡಿಯನ್ಸ್-ಸನ್ರೈಸರ್ಸ್ ಹೈದರಾಬಾದ್ ಪಂದ್ಯವು ಟಾಸ್ ಕಾರಣದಿಂದ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಅದರಂತೆ ಶಾರ್ಜಾ ಮೈದಾನದಲ್ಲಿ ಯಾರು ಟಾಸ್ ಗೆಲ್ಲಲಿದ್ದಾರೆ? ಕಾದು ನೋಡಬೇಕಿದೆ.
ಇದನ್ನೂ ಓದಿ: IPL 2021: ಮುಂದಿನ 2 ಪಂದ್ಯಗಳನ್ನು RCB ಗೆಲ್ಲಲೇಬೇಕು, ಏಕೆಂದರೆ…
ಇದನ್ನೂ ಓದಿ: David Warner: SRH ತಂಡದಲ್ಲಿಲ್ಲ ಸ್ಥಾನ: ಪ್ರೇಕ್ಷಕನಾಗಿ ಕಾಣಿಸಿಕೊಂಡ ಡೇವಿಡ್ ವಾರ್ನರ್
ಇದನ್ನೂ ಓದಿ: IPL 2021: ಐಪಿಎಲ್ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಹರ್ಷಲ್ ಪಟೇಲ್
(first time a toss will decide a team’s fate for the playoffs spot)
Published On - 3:22 pm, Fri, 8 October 21