AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs CSK, IPL 2022: ಹಿಂದೆಂದೂ ಹೀಗೆ ಆಗಿಲ್ಲ: ಐಪಿಎಲ್ ಇತಿಹಾಸದಲ್ಲೇ ಸಿಎಸ್​​ಕೆಗೆ ಭಾರೀ ಮುಖಭಂಗ

LSG vs Chennai: ಚೆನ್ನೈ ನೀಡಿದ್ದ 211 ರನ್​​ಗಳ ಟಾರ್ಗೆಟ್ ಅನ್ನು ಲಖನೌ ಭರ್ಜರಿ ಆಗಿ ಬೆನ್ನಟ್ಟಿತು. ರಾಹುಲ್-ಡಿಕಾಕ್ ಸ್ಫೋಟಕ ಆರಂಭ ಒದಗಿಸಿದರೆ, ಎವಿನ್ ಲೆವಿಸ್ (Evin Lewis) ಸ್ಫೋಟಕ ಬ್ಯಾಟಿಂಗ್​ ನೆರವಿನಿಂದ 6 ವಿಕೆಟ್​ಗಳ ಅಮೋಘ ಗೆಲುವು ಕಂಡಿತು.

LSG vs CSK, IPL 2022: ಹಿಂದೆಂದೂ ಹೀಗೆ ಆಗಿಲ್ಲ: ಐಪಿಎಲ್ ಇತಿಹಾಸದಲ್ಲೇ ಸಿಎಸ್​​ಕೆಗೆ ಭಾರೀ ಮುಖಭಂಗ
LSG vs CSK IPL 2022
TV9 Web
| Updated By: Vinay Bhat|

Updated on: Apr 01, 2022 | 7:30 AM

Share

ಮುಂಬೈನ ಬ್ರಬೌರ್ನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022ರ (IPL 2022) ಏಳನೇ ಪಂದ್ಯದಲ್ಲಿ ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ವಿರುದ್ಧ ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (LSG vs CSK) ತಂಡ ಸೋಲುಂಡಿದೆ. ಈ ಪಂದ್ಯದಲ್ಲಿ ರನ್ ಮಳೆಯೇ ಹರಿಯಿತು. ಚೆನ್ನೈ ನೀಡಿದ್ದ 211 ರನ್​​ಗಳ ಟಾರ್ಗೆಟ್ ಅನ್ನು ಲಖನೌ ಭರ್ಜರಿ ಆಗಿ ಬೆನ್ನಟ್ಟಿತು. ರಾಹುಲ್-ಡಿಕಾಕ್ ಸ್ಫೋಟಕ ಆರಂಭ ಒದಗಿಸಿದರೆ, ಎವಿನ್ ಲೆವಿಸ್ (Evin Lewis) ಸ್ಫೋಟಕ ಬ್ಯಾಟಿಂಗ್​ ನೆರವಿನಿಂದ 6 ವಿಕೆಟ್​ಗಳ ಅಮೋಘ ಗೆಲುವು ಕಂಡಿತು. ಈ ಮೂಲಕ ಮೊದಲ ಪಂದ್ಯದಲ್ಲಿ ಅನುಭವಿಸಿದ ಹೀನಾಯ ಸೋಲಿನಿಂದ ಲಖನೌ ಕಮ್​ಬ್ಯಾಕ್ ಮಾಡಿದೆ. ಇದು ಐಪಿಎಲ್‌ ಇತಿಹಾಸದ 4ನೇ ಅತ್ಯಧಿಕ ಮೊತ್ತದ ಯಶಸ್ವಿ ಚೇಸಿಂಗ್‌ ಆಗಿದೆ. ಇತ್ತ ಚೆನ್ನೈ ಸೂಪರ್ ಕಿಂಗ್ಸ್​ ಕೆಟ್ಟ ದಾಖಲೆಯೊಂದನ್ನು ಬರೆದಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಸಿಎಸ್​ಕೆ ತಂಡ ಇದೇ ಮೊದಲ ಬಾರಿಗೆ ಆರಂಭಿಕ ಎರಡು ಪಂದ್ಯಗಳನ್ನು ಸೋತು ಭಾರೀ ಮುಖಭಂಗಕ್ಕೆ ಒಳಗಾಯಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಇಳಿದ ಚೆನ್ನೈ ಉತ್ತಮ ಆರಂಭ ಪಡೆಯುವಲ್ಲಿ ವಿಫಲಗೊಂಡರೂ ಸಹ ರಾಬಿನ್ ಉತ್ತಪ್ಪ ಭರ್ಜರಿ ಬ್ಯಾಟಿಂಗ್ ನೆರವಿನಿಂದ ದೊಡ್ಡ ಮೊತ್ತಕ್ಕೆ ಅಡಿಪಾಯ ಹಾಕಿತು. ರುತುರಾಜ್ ಗಾಯಕ್ವಾಡ್ ಕೇವಲ 1 ರನ್‌ಗೆ ರನೌಟ್‌ ಆಗುವ ಮೂಲಕ ಬೇಗನೆ ಪೆವಿಲಿಯನ್ ಸೇರಿಕೊಂಡರು. ಆದರೆ, 2ನೇ ವಿಕೆಟ್‌ಗೆ ಜೊತೆಯಾದ ರಾಬಿನ್ ಉತ್ತಪ್ಪ ಮತ್ತು ಆಲ್‌ರೌಂಡರ್ ಮೊಯಿನ್‌ ಅಲಿ ಸ್ಫೋಟಕ ಆಟವಾಡಿದರು. ಅರ್ಧಶತಕದ ಜೊತೆಯಾಟವಾಡಿದ ಈ ಜೋಡಿ ಪವರ್‌ಪ್ಲೇ ಓವರ್‌ಗಳಲ್ಲಿ ಅಬ್ಬರಿಸಿತು. ರಾಬಿನ್ ಉತ್ತಪ್ಪ ಕೇವಲ 25 ಎಸೆತಗಳಲ್ಲಿ ಅರ್ಧಶತಕ ದಾಖಲಿಸುವ ಮೂಲಕ ಮಿಂಚಿನ ಆಟವಾಡಿದರು.ಇವರ ಇನ್ನಿಂಗ್ಸ್‌ನಲ್ಲಿ 8 ಬೌಂಡರಿ ಮತ್ತು 1 ಅಮೋಘ ಸಿಕ್ಸರ್ ಒಳಗೊಂಡಿತ್ತು.

ಅಲಿ 22 ಎಸೆತಗಳಲ್ಲಿ 35 ರನ್ ಸಿಡಿಸುವ ಮೂಲಕ ಅವೇಶ್‌ ಖಾನ್ ಬೌಲಿಂಗ್‌ನಲ್ಲಿ ಬೌಲ್ಡ್‌ ಆದರು. ಮೊಯಿನ್ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡಿತ್ತು. ಮಧ್ಯಮ ಕ್ರಮಾಂಕದಲ್ಲಿ ಅಂಬಟಿ ರಾಯುಡು ಹಾಗೂ ಶಿವಂ ದುಬೆ ಸಿಎಸ್‌ಕೆ ಅಬ್ಬರದ ಬ್ಯಾಟಿಂಗ್ ಮುಂದುವರಿಸಿದರು. ರಾಯುಡು 20 ಎಸೆತಗಳಲ್ಲಿ 27 ರನ್‌ ಸಿಡಿಸಿದರೆ ದುಬೆ 30 ಎಸೆತಗಳಲ್ಲಿ 49ರನ್ ಕಲೆಹಾಕಿ ಕೇವಲ 1 ರನ್‌ಗಳಿಂದ ಅರ್ಧಶತಕ ಮಿಸ್ ಮಾಡಿಕೊಂರು. ಕೊನೆಯಲ್ಲಿ ನಾಯಕ ರವೀಂದ್ರ ಜಡೇಜಾ 17, ಎಂಎಸ್ ಧೋನಿ ಅಜೇಯ 16 ರನ್‌ಗಳ ಕೊಡುಗೆಯಿಂದ ಸಿಎಸ್‌ಕೆ 7 ವಿಕೆಟ್ ನಷ್ಟಕ್ಕೆ 210 ಕಲೆಹಾಕಿತು.

ಕಠಿಣ ಟಾರ್ಗೆಟ್ ಬೆನ್ನಟ್ಟಿದ ಲಖನೌಗೆ ಕ್ವಿಂಟನ್‌ ಡಿ ಕಾಕ್‌ (61) ಮತ್ತು ನಾಯಕ ಕೆ.ಎಲ್‌. ರಾಹುಲ್‌ (40) ಮಿಂಚಿನ ಆರಂಭ ಒದಗಿಸಿದರು. 10.2 ಓವರ್‌ಗಳಲ್ಲಿ 99 ರನ್‌ ಪೇರಿಸಿದರು. ಆಗಲೇ ಈ ಪಂದ್ಯದಲ್ಲಿ ಲಕ್ನೋಗೆ ಗೆಲುವಿನ ಅದೃಷ್ಟ ಇರುವುದು ಖಾತ್ರಿಯಾಯಿತು. ಮನೀಷ್‌ ಪಾಂಡೆ ಬೇಗನೇ ಔಟಾದರೂ ತಂಡಕ್ಕೆ ಯಾವುದೇ ಹಿನ್ನಡೆಯಾಗಲಿಲ್ಲ. ಎವಿನ್‌ ಲೆವಿಸ್‌ ಕೇವಲ 23 ಎಸೆತಗಳಿಂದ ಅಜೇಯ 55 ರನ್‌ (6 ಬೌಂಡರಿ, 3 ಸಿಕ್ಸರ್‌) ಬಾರಿಸಿ ಲಖನೌವನ್ನು ದಡ ಮುಟ್ಟಿಸುವಲ್ಲಿ ಯಶಸ್ವಿಯಾದರು. ಇವರೊಂದಿಗೆ ಕಳೆದ ಪಂದ್ಯದ ಹೀರೋ ಆಯುಷ್‌ ಬದೋನಿ 9 ಎಸೆತಗಳಿಂದ 19 ರನ್‌ ಗಳಿಸಿ ಅಜೇಯರಾಗಿದ್ದರು. ಇನ್ನೂ 3 ಎಸೆತ ಬಾಕಿ ಇರುವಂತೆ ಲಖನೌ 211 ರನ್ ಸಿಡಿಸಿ ಗುರಿ ಮುಟ್ಟಿ ರೋಚಕ ಗೆಲುವು ಕಂಡಿತು.

IPL 2022: ಒಂದು ಸಿಕ್ಸ್, 2 ಫೋರ್​ ಬಾರಿಸಿ ದಾಖಲೆ ಬರೆದ ಧೋನಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ