AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2025: ರಣಜಿ ಟೂರ್ನಿಯಲ್ಲಿ ಇತಿಹಾಸ ರಚಿಸಿದ ಮುಂಬೈ

Mumbai vs Jammu and Kashmir: ಜಮ್ಮು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮುಂಬೈ ತಂಡವು ರಣಜಿ ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ 7 ಟೀಮ್ ಇಂಡಿಯಾ ಆಟಗಾರರನ್ನು ಕಣಕ್ಕಿಳಿಸುವ ಮೂಲಕ ಎಂಬುದು ವಿಶೇಷ. ಅಂದರೆ ಈ ಬಾರಿ ಮುಂಬೈ ಪರ ಕಣಕ್ಕಿಳಿದ 11 ಆಟಗಾರರಲ್ಲಿ 7 ಮಂದಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ.

Ranji Trophy 2025: ರಣಜಿ ಟೂರ್ನಿಯಲ್ಲಿ ಇತಿಹಾಸ ರಚಿಸಿದ ಮುಂಬೈ
Team India - MumbaiImage Credit source: Gettyimage
ಝಾಹಿರ್ ಯೂಸುಫ್
|

Updated on: Jan 23, 2025 | 2:13 PM

Share

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಗ್ರೂಪ್-ಎ ಪಂದ್ಯದಲ್ಲಿ ಮುಂಬೈ ಮತ್ತು ಜಮ್ಮು-ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಪರ ಟೀಮ್ ಇಂಡಿಯಾದ 7 ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ. ಅಂದರೆ ಮುಂಬೈ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ 7 ಆಟಗಾರರು ಕಾಣಿಸಿಕೊಂಡಿದ್ದಾರೆ. ಇವರಲ್ಲಿ 6 ಆಟಗಾರರು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರೆ, ಓರ್ವ ಭಾರತ ತಂಡದ ಭಾಗವಾಗಿದ್ದರು.

ಈ ಮೂಲಕ ರಣಜಿ ಟೂರ್ನಿ ಇತಿಹಾಸದಲ್ಲೇ ಭಾರತ ತಂಡವನ್ನು ಪ್ರತಿನಿಧಿಸಿದ 7 ಆಟಗಾರರನ್ನು ಜೊತೆಯಾಗಿ ಕಣಕ್ಕಿಳಿಸಿದ ಕೀರ್ತಿಗೆ ಮುಂಬೈ ತಂಡ ಪಾತ್ರವಾಗಿದೆ.

ಮುಂಬೈ ತಂಡದಲ್ಲಿ ಕಾಣಿಸಿಕೊಂಡ ಟೀಮ್ ಇಂಡಿಯಾ ಆಟಗಾರರು:

  1. ರೋಹಿತ್ ಶರ್ಮಾ
  2. ಯಶಸ್ವಿ ಜೈಸ್ವಾಲ್
  3. ಅಜಿಂಕ್ಯ ರಹಾನೆ
  4. ಶ್ರೇಯಸ್ ಅಯ್ಯರ್
  5. ಶಿವಂ ದುಬೆ
  6. ಶಾರ್ದೂಲ್ ಠಾಕೂರ್
  7. ತನುಷ್ ಕೋಟ್ಯಾನ್.

ಈ ಏಳು ಆಟಗಾರರಲ್ಲಿ ತನುಷ್ ಕೋಟ್ಯಾನ್ ಭಾರತ ತಂಡದ ಪರ ಕಣಕ್ಕಿಳಿದಿಲ್ಲ. ಇದಾಗ್ಯೂ ಅವರು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾದ ಭಾರತ ತಂಡದ ಭಾಗವಾಗಿದ್ದರು. ಈ ಮೂಲಕ ಟೀಮ್ ಇಂಡಿಯಾದ ಏಳು ಆಟಗಾರರನ್ನು ಕಣಕ್ಕಿಳಿಸಿ ಮುಂಬೈ ರಣಜಿ ಟೂರ್ನಿಯಲ್ಲಿ ಹೊಸ ಇತಿಹಾಸ ಬರೆದಿದೆ.

ಮುಂಬೈ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ರೋಹಿತ್ ಶರ್ಮಾ , ಅಜಿಂಕ್ಯ ರಹಾನೆ (ನಾಯಕ) , ಶ್ರೇಯಸ್ ಅಯ್ಯರ್ , ಹಾರ್ದಿಕ್ ತಮೋರ್ ( ವಿಕೆಟ್ ಕೀಪರ್ ) , ಶಿವಂ ದುಬೆ , ಶಾರ್ದೂಲ್ ಠಾಕೂರ್ , ಶಮ್ಸ್ ಮುಲಾನಿ , ತನುಷ್ ಕೋಟ್ಯಾನ್ , ಮೋಹಿತ್ ಅವಸ್ತಿ , ಕರ್ಶ್ ಕೊಠಾರಿ.

ಮೊದಲ ಇನಿಂಗ್ಸ್​ನಲ್ಲಿ ಮುಗ್ಗರಿಸಿದ ಮುಂಬೈ:

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಜಮ್ಮು ಕಾಶ್ಮೀರ ಬೌಲರ್​​ಗಳ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ  47 ರನ್​ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು.

ಈ ಹಂತದಲ್ಲಿ ಕಣಕ್ಕಿಳಿದ ಶಾರ್ದೂಲ್ ಠಾಕೂರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. 57 ಎಸೆತಗಳನ್ನು ಎದುರಿಸಿದ ಶಾರ್ದೂಲ್ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 51 ರನ್ ಬಾರಿಸಿದ್ದಾರೆ. ಈ ಮೂಲಕ ಮುಂಬೈ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 120 ರನ್ ಬಾರಿಸಿ ಆಲೌಟ್ ಆಗಿದೆ.

ಇದನ್ನೂ ಓದಿ: ಟೀಮ್ ಇಂಡಿಯಾ ಆರ್ಭಟಕ್ಕೆ ಪಾಕಿಸ್ತಾನ್ ತಂಡದ ದಾಖಲೆ ಉಡೀಸ್

ಜಮ್ಮು ಕಾಶ್ಮೀರ ಪರ 11 ಓವರ್ ಎಸೆದ ಉಮರ್ ನಝೀರ್ 31 ರನ್ ನೀಡಿ 4 ವಿಕೆಟ್ ಪಡೆದರೆ, ಯುದುವೀರ್ ಸಿಂಗ್ 8.2 ಓವರ್​ಗಳಲ್ಲಿ 31 ರನ್​ ನೀಡಿ 4 ವಿಕೆಟ್ ಕಬಳಿಸಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ