ಬಾಂಗ್ಲಾದೇಶ್ ತಂಡದ ಮಾಜಿ ನಾಯಕನಿಗೆ ಹೃದಯಾಘಾತ!
Faruque Ahmed: 1988 ರಲ್ಲಿ ಪಾಕಿಸ್ತಾನ್ ವಿರುದ್ಧದ ಏಕದಿನ ಪಂದ್ಯದ ಮೂಲಕ ಫಾರೂಕ್ ಅಹ್ಮದ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. 1999 ರವರೆಗೆ ಬಾಂಗ್ಲಾದೇಶ್ ಪರ ಕಣಕ್ಕಿಳಿದಿದ್ದ ಅವರು ನಾಯಕನಾಗಿಯೂ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ನಿವೃತ್ತರಾದ ಬಳಿಕ ಎರಡು ಬಾರಿ ಬಾಂಗ್ಲಾದೇಶ ತಂಡದ ರಾಷ್ಟ್ರೀಯ ಆಯ್ಕೆದಾರರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಬಾಂಗ್ಲಾದೇಶ್ ಕ್ರಿಕೆಟ್ ತಂಡದ ಮಾಜಿ ನಾಯಕ ಫಾರೂಕ್ ಅಹ್ಮದ್ ಅವರಿಗೆ ಹೃದಯಾಘಾತವಾಗಿದೆ. ಭಾನುವಾರ ಮಧ್ಯಾಹ್ನ ಫಾರೂಕ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಢಾಕಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಸಿಬಿ ಅಧಿಕಾರಿಗಳನ್ನು ಉಲ್ಲೇಖಿಸಿ ಕ್ರಿಕ್‌ಬಝ್ ವರದಿ ಮಾಡಿದೆ. ಸದ್ಯ ಢಾಕಾದ ಆಸ್ಪತ್ರೆಯಲ್ಲಿರುವ ಫಾರೂಕ್ ಅವರನ್ನು
ವೈದ್ಯಕೀಯ ನಿಗಾದಲ್ಲಿ ಫಾರೂಕ್ ಅಹ್ಮದ್:
ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿಯ ಉಪಾಧ್ಯಕ್ಷರಾಗಿರುವ ಫಾರೂಕ್ ಅಹ್ಮದ್ ಅವರನ್ನು ಆಂಜಿಯೋಗ್ರಾಮ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ವೇಳೆ ಅವರ ಹೃದಯದಲ್ಲಿ ಅಡಚಣೆ ಕಂಡುಬಂದಿದೆ. ಹೀಗಾಗಿ ವೈದ್ಯರು ತಕ್ಷಣವೇ ಶಸ್ತ್ರಚಿಕಿತ್ಸೆ ನಡೆಸಿ ಹೃದಯದಲ್ಲಿ ಸ್ಟಂಟ್ ಅಳವಡಿಸಿದ್ದಾರೆ.
ಇದಾಗ್ಯೂ ಅವರ ಆರೋಗ್ಯದಲ್ಲಿ ಏರಿಳಿತವಾಗುತ್ತಿದ್ದು, ಹೀಗಾಗಿ ಅವರನ್ನು CCU ನಲ್ಲಿರಿಸಲಾಗಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಅಧಿಕಾರಿಗಳು ಡೈಲಿ ಸನ್‌ಗೆ ತಿಳಿಸಿದ್ದಾರೆ.
ಬಾಂಗ್ಲಾದೇಶ್ ತಂಡ ಮಾಜಿ ನಾಯಕ:
1988 ರಲ್ಲಿ ಪಾಕಿಸ್ತಾನ್ ವಿರುದ್ಧದ ಏಕದಿನ ಪಂದ್ಯದ ಮೂಲಕ ಫಾರೂಕ್ ಅಹ್ಮದ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. 1999 ರವರೆಗೆ ಬಾಂಗ್ಲಾದೇಶ್ ಪರ ಕಣಕ್ಕಿಳಿದಿದ್ದ ಅವರು ನಾಯಕನಾಗಿಯೂ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ನಿವೃತ್ತರಾದ ಬಳಿಕ ಎರಡು ಬಾರಿ ಬಾಂಗ್ಲಾದೇಶ ತಂಡದ ರಾಷ್ಟ್ರೀಯ ಆಯ್ಕೆದಾರರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಟೀಮ್ ಇಂಡಿಯಾ ವಿರುದ್ಧ ಮಿಂಚಿದ್ದ ಫಾರೂಕ್:
59 ವರ್ಷ ವಯಸ್ಸಿನ ಫಾರೂಕ್ ಅಹ್ಮದ್ ತಮ್ಮ ಒಂಬತ್ತು ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಕೇವಲ ಏಳು ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 105 ರನ್ ಮಾತ್ರ. ಇದರಲ್ಲಿ ಒಂದು ಅರ್ಧಶತಕ ಕೂಡ ಸೇರಿದೆ. 1990 ರಲ್ಲಿ ಚಂಡೀಗಢದಲ್ಲಿ ನಡೆದ ಭಾರತದ ವಿರುದ್ಧ ಏಕದಿನ ಪಂದ್ಯದಲ್ಲಿ ಅವರು 57 ರನ್ ಗಳಿಸಿ ಮಿಂಚಿದ್ದರು.
ಇದನ್ನೂ ಓದಿ: IPL 2026: ಇಬ್ಬರನ್ನು ನೀಡಿ ಸಂಜು ಸ್ಯಾಮ್ಸನ್ನ ಪಡೆಯಲಿರುವ CSK
1999 ರಲ್ಲಿ ನಿವೃತ್ತರಾದ ಫಾರೂಕ್ ಅಹ್ಮದ್ ಆಗಸ್ಟ್ 2024 ರಲ್ಲಿ ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿಯ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ಕಳೆದ ವರ್ಷದಿಂದ ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
