AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಗೆದ್ದಾಗ ಕ್ರೆಡಿಟ್ ತಗೋಂಡಿದ್ದೀರಿ, ಸೋತಾಗಲೂ ನೀವೇ ಹೊಣೆ..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 43ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 154 ರನ್ ಕಲೆಹಾಕಿದರೆ, ಈ ಗುರಿಯನ್ನು ಸನ್​ರೈಸರ್ಸ್ ಹೈದರಾಬಾದ್ ತಂಡ 18.4 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಎಸ್​ಆರ್​​ಹೆಚ್ ತಂಡ 5 ವಿಕೆಟ್​ಗಳ ಗೆಲುವು ದಾಖಲಿಸಿದೆ. ಈ ಸೋಲಿನೊಂದಿಗೆ ಸಿಎಸ್​ಕೆ ತಂಡದ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಿದೆ.

IPL 2025: ಗೆದ್ದಾಗ ಕ್ರೆಡಿಟ್ ತಗೋಂಡಿದ್ದೀರಿ, ಸೋತಾಗಲೂ ನೀವೇ ಹೊಣೆ..!
Csk
ಝಾಹಿರ್ ಯೂಸುಫ್
|

Updated on: Apr 27, 2025 | 9:59 AM

Share

IPL 2025: ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಗೆದ್ದಾಗ ಸಂಪೂರ್ಣ ಕ್ರೆಡಿಟ್ ತಗೋಂಡಿದ್ದೀರಿ, ಇದೀಗ ಹೀನಾಯ ಪ್ರದರ್ಶನಕ್ಕೂ ಅವರೇ ಹೊಣೆ. ಹೀಗಂದಿದ್ದು ಮಾತ್ಯಾರೂ ಅಲ್ಲ. ಟೀಮ್ ಇಂಡಿಯಾದ ಮಾಜಿ ಆಟಗಾರ ಆಕಾಶ್ ಚೋಪ್ರಾ . ಇಂತಹದೊಂದು ಹೇಳಿಕೆ ನೀಡಲು ಮುಖ್ಯ ಕಾರಣ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅತ್ಯಂತ ಹೀನಾಯ ಪ್ರದರ್ಶನ.

ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಗೆಲುವು ಸಾಧಿಸಿದಾಗ ಸಂಪೂರ್ಣ ಶ್ರೇಯಸ್ಸು ನಾಯಕನಿಗೆ ಸಲ್ಲುತ್ತಿತ್ತು. ಇದೀಗ ತಂಡವು ಅತ್ಯಂತ ಹೀನಾಯ ಪ್ರದರ್ಶನ ನೀಡುತ್ತಿದೆ. ಈಗ ಅದರ ಹೊಣೆಯನ್ನು ನಾಯಕ ಎನಿಸಿಕೊಂಡವರು ವಹಿಸಿಕೊಳ್ಳಬೇಕು. ಏಕೆಂದರೆ ಗೆದ್ದಾಗ ಕ್ರೆಡಿಟ್ ತಗೋಂಡವರು, ಸೋತಾಗಲೂ ಜವಾಬ್ದಾರರು ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ತಮ್ಮ ಯುಟ್ಯೂಬ್​ ಚಾನೆಲ್​ನಲ್ಲಿ ಸಿಎಸ್​​​ಕೆ ಪ್ರದರ್ಶನದ ಬಗ್ಗೆ ಮಾತನಾಡಿದ ಆಕಾಶ್ ಚೋಪ್ರಾ, ನೀವು ಗೆದ್ದಾಗ ಯಾರಿಗಾದರೂ ಕ್ರೆಡಿಟ್ ನೀಡಿದರೆ, ಸೋತಾಗ ಬೆರಳುಗಳು ಅವರ ಕಡೆಗೆ ತೋರಿಸುತ್ತವೆ. ಸಿಎಸ್‌ಕೆ ಒಂದು ತಂಡವಲ್ಲ, ಅದು ಒಂದು ಫಿಲಾಸಫಿ. ಅವರು ಟಿ20 ಕ್ರಿಕೆಟ್ ಅನ್ನು ವಿಭಿನ್ನವಾಗಿ ಆಡಿ ಪ್ರಶಸ್ತಿಗಳನ್ನು ಗೆದ್ದವರು.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಡ್ಯಾಡ್ ಆರ್ಮಿಯು ಈ ಬಾರಿ ಬದಲಾಗಿದೆ. 43 ವರ್ಷದ ಆಟಗಾರರೊಬ್ಬರು ಶ್ರೀಮಂತ ಲೀಗ್‌ನಲ್ಲಿ ಎರವಲು ಪಡೆದ ಸಮಯದ ಮೇಲೆ ಬದುಕುತ್ತಿದ್ದಾರೆ. ಫಿಟ್‌ನೆಸ್ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ, ಅದನ್ನು ತೋರಿಸುತ್ತಿಲ್ಲ. ಅವರ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ಮೇಲೆ ಪರಿಣಾಮ ಬೀರಿದೆ. ಈ ಆಟಗಾರನು ತನ್ನ ಶೇ.100 ರಷ್ಟು ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. ಇವೆಲ್ಲವೂ ಸೋಲಿಗೆ ಕಾರಣ ಎಂದು ಆಕಾಶ್ ಚೋಪ್ರಾ ಮಹೇಂದ್ರ ಸಿಂಗ್ ಧೋನಿಯ ಹೆಸರನ್ನು ಪ್ರಸ್ತಾಪಿಸದೇ ದೂರಿದ್ದಾರೆ.

ಪ್ರತಿ ಬಾರಿಯೂ ಗೆದ್ದಾಗ ಸಂಪೂರ್ಣ ಕ್ರೆಡಿಟ್ ಪಡೆದುಕೊಳ್ಳುತ್ತಿದ್ದರು. ಆದರೆ ಈ ಬಾರಿ ತಂಡವು ಸೋತು ಸುಣ್ಣವಾಗಿದೆ. ಇದರ ಹೊಣೆ ಕೂಡ ಅವರಿಗೆ ಸಲ್ಲುತ್ತದೆ. ಏಕೆಂದರೆ ಗೆಲುವಿನ ಶ್ರೇಯಸ್ಸು ಪಡೆದವರೇ ಸೋಲಿನ ಹೊಣೆಗಾರರು ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: IPL 2025: ಅಣ್ಣಾ ಬಿಟ್ ಬಿಡಣ್ಣ… RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಈವರೆಗೆ 9 ಪಂದ್ಯಗಳನ್ನಾಡಿದೆ. ಈ ವೇಳೆ ಸಿಎಸ್​ಕೆ ಗೆದ್ದಿರುವುದು ಕೇವಲ 2 ಮ್ಯಾಚ್​ಗಳಲ್ಲಿ ಮಾತ್ರ. ಅದರಲ್ಲೂ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಕಣಕ್ಕಿಳಿದ ಕಳೆದ 4 ಪಂದ್ಯಗಳಲ್ಲಿ ಸಿಎಸ್​ಕೆ ಮೂರರಲ್ಲಿ ಸೋಲನುಭವಿಸಿದೆ. ಹೀಗಾಗಿ ಸೋಲಿನ ಹೊಣೆಯನ್ನು ಸಹ ಧೋನಿ ಹೊತ್ತುಕೊಳ್ಳಬೇಕೆಂದು ಆಕಾಶ್ ಚೋಪ್ರಾ ಹೇಳಿದ್ದಾರೆ.

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ