ಇದೇ ತಿಂಗಳ 22 ರಂದು ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ನಡೆಯಲ್ಲಿರುವ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ (Sachin Tendulkar) ಅವರಿಗೆ ಇಂದು ಆಹ್ವಾನ ನೀಡಲಾಗಿದೆ. ದೇವಾಲಯದ ಟ್ರಸ್ಟ್ ದೇಶಾದ್ಯಂತ ವಿವಿಧ ಕ್ಷೇತ್ರಗಳ ಸುಮಾರು 11,000 ಗಣ್ಯರಿಗೆ ಆಹ್ವಾನಗಳನ್ನು ನೀಡಿದೆ. ಕ್ರಿಕೆಟ್ ವಲಯದಲ್ಲಿ ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವಾರು ಕ್ರಿಕೆಟಿಗರು ಈಗಾಗಲೇ ರಾಮಮಂದಿರ ಉದ್ಘಾಟನೆಗೆ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಅವರಲ್ಲಿ ನೀರಜ್ ಚೋಪ್ರಾ, ಪಿಪಿ ಸಿಂಧು, ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ ಮತ್ತು ಇತರ ಖ್ಯಾತ ಕ್ರೀಡಾಪಟುಗಳು ಸೇರಿದ್ದಾರೆ. ಚಿತ್ರರಂಗದ ಸೆಲೆಬ್ರಿಟಿಗಳಾದ ಜಖಿ ಶ್ರಾಫ್, ರಜನಿಕಾಂತ್, ರಣಬೀರ್ ಕಪೂರ್ ಮತ್ತಿತರರಿಗೂ ಆಹ್ವಾನ ನೀಡಲಾಗಿದೆ.
ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸುತ್ತಿರುವ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹಲವು ಗಣ್ಯರಿಗೆ ಆಹ್ವಾನ ನೀಡುತ್ತಿದೆ. ಪ್ರಾಣ ಪ್ರತಿಷ್ಠಾಪನೆ ದಿನದಂದು ಆಯೋಧ್ಯೆಗೆ ಆಗಮಿಸುವ ಅತಿಥಿಗಳಿಗೆ ವಿಶೇಷ ‘ಲಡ್ಡು’ ವಿತರಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಜನವರಿ 22 ರಂದು ಅಯೋಧ್ಯೆಗೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆಯನ್ನು ದೇವಸ್ಥಾನದ ಟ್ರಸ್ಟ್ ಹೊಂದಿದೆ. ಈ ಅದ್ಧೂರಿ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಜನವರಿ 16ರಿಂದಲೇ ವಿವಿಧ ಕಾರ್ಯಕ್ರಮಗಳು ಆರಂಭವಾಗಲಿವೆ. 4 ಸಾವಿರ ಸಂತರು ಸೇರಿದಂತೆ 7 ಸಾವಿರ ಜನರ ಸಮ್ಮುಖದಲ್ಲಿ ಈ ಸಮಾರಂಭ ನಡೆಯಲಿದೆ.
Former Indian Cricketer Sachin Tendulkar receives an invitation to attend the ‘Pran Pratishtha’ ceremony of Ram Temple on January 22nd in Ayodhya, Uttar Pradesh. pic.twitter.com/W8bhR8lOMv
— ANI (@ANI) January 13, 2024
ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯರೊಬ್ಬರು ಮಾತನಾಡಿ, ಪ್ರಾಣಪ್ರತಿಷ್ಠಾಪನೆ ಸಮಾರಂಭದಲ್ಲಿ ಸುಮಾರು 11 ಸಾವಿರಕ್ಕೂ ಹೆಚ್ಚು ಅತಿಥಿಗಳು ಮತ್ತು ಆಹ್ವಾನಿತರಿಗೆ ನೆನಪಿನ ಕಾಣಿಕೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ. ಏತನ್ಮಧ್ಯೆ, 22 ಜನವರಿ 2024 ರಂದು ಅಯೋಧ್ಯೆಯ ಭವ್ಯ ದೇವಾಲಯದಲ್ಲಿ ರಾಮಲಾಲ ಸಿಂಹಾಸನಾರೋಹಣ ಮಾಡಲಾಗುವುದು ಎಂದಿದ್ದಾರೆ.
ಜನವರಿ 22ರಂದು ವಿವಿಧ ಕ್ಷೇತ್ರದ ಗಣ್ಯರು ಅಯೋಧ್ಯೆ ತಲುಪಲಿದ್ದಾರೆ. ಈ ಹಿನ್ನೆಲೆಯಲ್ಲಿ 22ರ ನಂತರ ದರ್ಶನಕ್ಕೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ಮನವಿ ಮಾಡಿದ್ದಾರೆ. ಜನವರಿ 22 ರ ನಂತರವೇ ಆಯಾ ಪ್ರದೇಶದ ಜನರು ರಾಮಲಲ್ಲಾ ಅವರನ್ನು ಕಣ್ತುಂಬಿಕೊಳ್ಳಲು ಆಯೋಧ್ಯೆಗೆ ಆಗಮನಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಜನವರಿ 22 ರಂದು ರಾಮಮಂದಿರ ಉದ್ಘಾಟನೆಯಾಗಲಿದ್ದು, ದೇಶದ ಆಯ್ದ ಗಣ್ಯರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಆ ಬಳಿಕ ಅಯೋಧ್ಯೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂತಹದೊಂದು ಮನವಿ ಮಾಡಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:59 pm, Sat, 13 January 24