ಭೀಕರ ಕಾರು ಅಪಘಾತ; ಇಂಗ್ಲೆಂಡ್‌ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಆಸ್ಪತ್ರೆಗೆ ದಾಖಲು

Andrew Flintoff: ಇಂಗ್ಲೆಂಡ್‌ನ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಭೀಕರ ಕಾರು ಅಪಘಾತಕ್ಕೆ ಒಳಗಾಗಿದ್ದು ಅವರನ್ನು ತಕ್ಷಣವೇ ವಿಮಾನದ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಭೀಕರ ಕಾರು ಅಪಘಾತ; ಇಂಗ್ಲೆಂಡ್‌ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಆಸ್ಪತ್ರೆಗೆ ದಾಖಲು
Andrew Flintoff
Follow us
TV9 Web
| Updated By: ಪೃಥ್ವಿಶಂಕರ

Updated on: Dec 14, 2022 | 9:13 AM

ಇಂಗ್ಲೆಂಡ್‌ನ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ (Andrew Flintoff) ಭೀಕರ ಕಾರು ಅಪಘಾತಕ್ಕೆ ಒಳಗಾಗಿದ್ದು ಅವರನ್ನು ತಕ್ಷಣವೇ ವಿಮಾನದ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಬಿಬಿಸಿಯ (BBC) “ಟಾಪ್ ಗೇರ್” ಕಾರ್ಯಕ್ರಮದ ಸಂಚಿಕೆಯ ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದೆ. ಆಂಡ್ರ್ಯೂ ಫ್ಲಿಂಟಾಫ್ ಅವರನ್ನು ತರಾತುರಿಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಪಘಾತದಿಂದ ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲವೆಂದು ಬಿಬಿಸಿ ತನ್ನ ಹೇಳಿಕೆಯಲ್ಲಿ ಧೃಡಪಡಿಸಿದೆ.

ಟಾಪ್ ಗೇರ್ ಕಾರ್ಯಕ್ರಮದ ಸಂಚಿಕೆಯ ಚಿತ್ರೀಕರಣದ ವೇಳೆ ಮುಂಜಾನೆಯಂದು ಫ್ಲಿಂಟಾಫ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ತಕ್ಷಣವೇ ಸೆಟ್‌ನಲ್ಲಿದ್ದ ವೈದ್ಯಕೀಯ ತಂಡ ಅವರಿಗೆ ಚಿಕಿತ್ಸೆ ನೀಡಿತು. ಅವರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವಿಮಾನದ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಶೀಘ್ರದಲ್ಲೇ ಅವರ ಆರೋಗ್ಯದ ಬಗ್ಗೆ ನಾವು ಹೆಚ್ಚಿನ ಮಾಹಿತಿಯನ್ನು ನೀಡುತ್ತೇವೆ ಎಂದು ಬಿಸಿಸಿ ಹೇಳಿಕೊಂಡಿದೆ.

ಎರಡನೇ ಬಾರಿಗೆ ಈ ಅವಘಡ

ವಾಸ್ತವವಾಗಿ, ಫ್ಲಿಂಟಾಫ್ ಕಾರು ಅಪಘಾತದಲ್ಲಿ ಗಾಯಗೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2019ರಲ್ಲಿ ಇಂತಹ ಅಪಘಾತಕ್ಕೆ ಫ್ಲಿಂಟಾಫ್ ತುತ್ತಾಗಿದ್ದರು. ತನ್ನ ಕಾರನ್ನು 124mph ವೇಗದಲ್ಲಿ ಚಾಲನೆ ಮಾಡುತ್ತಿದ್ದ ವೇಳೆ ನಿಯಂತ್ರಣವನ್ನು ಕಳೆದುಕೊಂಡಿದ್ದ ಫ್ಲಿಂಟಾಫ್ ಅಪಘಾತಕ್ಕೀಡಾಗಿದ್ದರು. ಅಲ್ಲೂ ಸಹ ಸಣ್ಣಪುಟ್ಟ ಗಾಯಗಳಿಂದ ಫ್ಲಿಂಟಾಫ್ ಬದುಕುಳಿದಿದ್ದರು.

2009ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

ಇಂಗ್ಲೆಂಡ್ ಪರ 79 ಟೆಸ್ಟ್ ಮತ್ತು 141 ಸೀಮಿತ ಓವರ್ ಪಂದ್ಯಗಳನ್ನು ಆಡಿರುವ ಆಂಡ್ರ್ಯೂ ಫ್ಲಿಂಟಾಫ್, 2009 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದರು. 2005 ರ ಆಶಸ್‌ ಸರಣಿಯಲ್ಲಿ ಇಂಗ್ಲೆಂಡ್ ಪರ ಅಮೋಘ ಪ್ರದರ್ಶನ ನೀಡಿದ್ದ ಈ ಆಲ್​ರೌಂಡರ್ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು